× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೆಜೆಕಿಯೇಲನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೬ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧1 1 1 ಕನ್ನಡ ಬೈಬಲ್ (KNCL) 2016 ಯೆಜೆಕಿಯೇಲನ ೨೬ ಟಿಪ್ಪಣಿಗಳನ್ನು ಉಳಿಸಿ ೧ [1]ಹನ್ನೊಂದನೆಯ ವರ್ಷದ ಒಂದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸರ್ವೇಶ್ವರ ಈ ವಾಣಿಯನ್ನು ದಯಪಾಲಿಸಿದರು:೨ [2]“ನರಪುತ್ರನೇ, ಜೆರುಸಲೇಮಿನ ವಿಷಯವಾಗಿ ಟೈರ್ ನಗರವು ‘ಅಹಹ, ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ, ನನ್ನ ಕಡೆಗೆ ತೆರೆದುಬಿದ್ದಿದೆ; ಜೆರುಸಲೇಮ್ ಹಾಳಾದ ಕಾರಣ ನಾನು ವೃದ್ಧಿಗೊಳ್ಳುವೆನು’ ಎಂದುಕೊಂಡಿತು.”೩ [3]ಆದುದರಿಂದ ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಟೈರೇ, ಇಗೋ ನಿನಗೆ ವಿರುದ್ಧವಾಗಿದ್ದೇನೆ; ಸಮುದ್ರವು ತೆರೆಗಳನ್ನು ಎಬ್ಬಿಸುವಂತೆ ನಾನು ಬಹುಜನಾಂಗಗಳನ್ನು ನಿನ್ನ ವಿರುದ್ಧ ಎಬ್ಬಿಸುವೆನು.೪ [4]ಅವು ಟೈರಿನ ಪೌಳಿಗೋಡೆಯನ್ನು ಉರುಳಿಸಿ, ಅದರ ಕೊತ್ತಲಗಳನ್ನು ಕೆಡವಿಹಾಕುವುವು; ನಾನು ಅದರ ಮಣ್ಣನ್ನು ಕೆರೆದು, ಅದನ್ನು ಬೋಳುಬಂಡೆಯಾಗಿ ಮಾಡುವೆನು;೫ [5]ಅದು ಸಮುದ್ರದ ನಡುವೆ ಬಲೆಗಳಿಗೆ ಹಾಸುಬಂಡೆಯಾಗುವುದು; ನಾನೇ ಇದನ್ನು ನುಡಿದಿದ್ದೇನೆ, ಎಂದು ಸರ್ವೇಶ್ವರನಾದ ದೇವರು ಎನ್ನುತ್ತಾರೆ; ಅದು ಜನಾಂಗಗಳಿಗೆ ಸೂರೆಯಾಗುವುದು;೬ [6]ಬಯಲು ಭೂಮಿಯಲ್ಲಿನ ಅವರ ಕುವರಿಯರು ಖಡ್ಗದಿಂದ ಹತರಾಗುವರು; ನಾನೇ ಸರ್ವೇಶ್ವರ ಎಂದು ಎಲ್ಲರಿಗೂ ಗೊತ್ತಾಗುವುದು.”೭ [7]ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಇಗೋ, ರಾಜಾಧಿರಾಜನೂ ಬಾಬಿಲೋನಿನ ಅರಸನೂ ಆದ ನೆಬೂಕದ್ನೆಚ್ಚರನನ್ನು, ಅಶ್ವ, ರಥ, ರಾಹುತ, ಬಹುಸೈನ್ಯ ಪರಿವಾರ ಇವುಗಳಿಂದ ಕೂಡಿದವನಾಗಿ, ನಾನು ಉತ್ತರದಿಂದ ಟೈರಿನ ಮೇಲೆ ಬರಮಾಡುವೆನು.೮ [8]ಅವನು ಬಯಲು ಭೂಮಿಯಲ್ಲಿ ನಿನ್ನ ಕುವರಿಯರನ್ನು ಖಡ್ಗದಿಂದ ಹತಿಸಿ, ನಿನಗೆ ವಿರುದ್ಧ ಒಡ್ಡುಕಟ್ಟಿ, ದಿಬ್ಬಹಾಕಿ, ಗುರಾಣಿಯೆತ್ತಿರುವವರನ್ನು ಕಳುಹಿಸಿ,೯ [9]ತನ್ನ ಭಿತ್ತಿಭೇದಕಯಂತ್ರಗಳಿಂದ ನಿನ್ನ ಪೌಳಿಗೋಡೆಯನ್ನು ಹೊಡೆಯಿಸಿ, ತನ್ನ ಆಯುಧಗಳಿಂದ ನಿನ್ನ ಕೊತ್ತಲಗಳನ್ನು ಒಡೆದುಬಿಡುವನು.೧೦ [10]ಅವನ ಲೆಕ್ಕವಿಲ್ಲದ ಕುದುರೆಗಳಿಂದೆದ್ದ ಧೂಳು ನಿನ್ನನ್ನು ಮುಸುಕುವುದು; ಒಡಕು ಬಿದ್ದ ಕೋಟೆಯೊಳಗೆ ಶತ್ರು ನುಗ್ಗುವ ಪ್ರಕಾರ ಅವನು ನಿನ್ನ ಬಾಗಿಲುಗಳೊಳಗೆ ನುಗ್ಗುವಾಗ ರಾಹುತ, ಸರಕುಗಾಡಿ, ರಥ, ಇವುಗಳ ಶಬ್ದಕ್ಕೆ ನಿನ್ನ ಗೋಡೆಗಳು ಅದರುವುವು.೧೧ [11]ಅವನು ತನ್ನ ಕುದುರೆಗಳ ಗೊರಸುಗಳಿಂದ ನಿನ್ನ ಬೀದಿಗಳನ್ನು ತುಳಿಸಿ, ಖಡ್ಗದಿಂದ ನಿನ್ನ ಜನರನ್ನು ಸಂಹರಿಸಿ, ನಿನ್ನ ಬಲವಾದ ಕಲ್ಲುಕಂಬಗಳನ್ನು ಕೆಡಹುವನು.೧೨ [12]ಅವನ ಸೈನಿಕರು ನಿನ್ನ ಆಸ್ತಿಯನ್ನು ಸುಲಿದುಕೊಂಡು, ನಿನ್ನ ಸರಕುಗಳನ್ನು ಕೊಳ್ಳೆಹೊಡೆದು, ನಿನ್ನ ಗೋಡೆಗಳನ್ನು ಉರುಳಿಸಿ, ನಿನ್ನ ವಿನೋದಭವನಗಳನ್ನು ಕೆಡವಿ, ನಿನ್ನ ಕಲ್ಲುಮರಮಣ್ಣುಗಳನ್ನು ಸಮುದ್ರದ ಪಾಲುಮಾಡುವರು.೧೩ [13]ನಾನು ನಿನ್ನ ಸಂಗೀತಗಳ ಧ್ವನಿಯನ್ನು ನಿಲ್ಲಿಸಿಬಿಡುವೆನು; ನಿನ್ನ ಕಿನ್ನರಿಗಳ ನುಡಿ ಇನ್ನು ಕೇಳಿಸದು.೧೪ [14]ನಾನು ನಿನ್ನನ್ನು ಬೋಳುಬಂಡೆಮಾಡುವೆನು; ನೀನು ಬಲೆಗಳಿಗೆ ಹಾಸುಬಂಡೆಯಾಗುವೆ; ಇನ್ನು ನೀನು ಪುನಃ ನಿರ್ಮಾಣ ಹೊಂದಲಾರೆ; ಸರ್ವೇಶ್ವರನಾದ ನಾನು ಅಪ್ಪಣೆಕೊಟ್ಟಿದ್ದೇನೆ; ಇದು ಸರ್ವೇಶ್ವರನಾದ ದೇವರ ನುಡಿ.”೧೫ [15]ಸರ್ವೇಶ್ವರನಾದ ದೇವರು ಟೈರ್ ನಗರಕ್ಕೆ ಹೀಗೆ ಹೇಳುತ್ತಾರೆ - “ನಿನ್ನ ಮಧ್ಯದಲ್ಲಿ ಕಗ್ಗೊಲೆಯುಂಟಾಗಿ, ಗಾಯಗೊಂಡವರು ನರಳುತ್ತಿರಲು, ನೀನು ಧಡಮ್ಮನೆ ಬೀಳುವ ಶಬ್ದಕ್ಕೆ ದ್ವೀಪಗಳು ಅದರುವವಲ್ಲವೆ?೧೬ [16]ಆಗ ಸಮುದ್ರದ ಸುತ್ತುಮುತ್ತಲಿನ ಎಲ್ಲ ಒಡೆಯರು ತಮ್ಮ ಸಿಂಹಾಸನಗಳಿಂದಿಳಿದು, ನಿಲುವಂಗಿಗಳನ್ನು ತೆಗೆದುಹಾಕಿ, ಕಸೂತಿ ವಸ್ತ್ರಗಳನ್ನು ಕಿತ್ತೆಸೆದು, ತತ್ತರವನ್ನೇ ಹೊದ್ದುಕೊಂಡು, ನೆಲದ ಮೇಲೆ ಕುಕ್ಕರಿಸಿ, ಕ್ಷಣಕ್ಷಣವೂ ನಡುಗುತ್ತಾ ನಿನಗೆ ಬೆಚ್ಚಿಬೆರಗಾಗುವರು.೧೭ [17]“ಇವರು ನಿನ್ನ ಕುರಿತು, ‘ನಾವಿಕರ ನಿವಾಸವೇ, ಹೆಸರುವಾಸಿಯ ನಗರಿಯೇ, ಸಮುದ್ರದಿಂದ ಬಲಗೊಂಡ ಪಟ್ಟಣವೇ, ನೀನು ತೀರಾ ಹಾಳಾಗಿರುವೆ. ಸಮುದ್ರಸಂಚಾರಿಗಳಿಗೆಲ್ಲಾ ಭಯಾಸ್ಪದರಾಗಿದ್ದ ನಿನ್ನ ನಿವಾಸಿಗಳು ತೀರಾ ಹಾಳಾದರು.೧೮ [18]ಈ ನಿನ್ನ ಪತನ ದಿನದಲ್ಲಿ ಕರಾವಳಿಯು ನಡುಗುತ್ತದೆ; ನೀನು ಅಳಿದುಹೋದುದಕ್ಕೆ ಸಮುದ್ರದ್ವೀಪಗಳು ತತ್ತರಿಸುತ್ತವೆ.’ ಎಂಬ ಶೋಕಗೀತೆಯನ್ನೆತ್ತುವರು.”೧೯ [19]ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: - “ನಾನು ನಿನ್ನನ್ನು ಹಾಳೂರು ಮಾಡಿ ನಿರ್ಜನ ಪಟ್ಟಣಗಳ ಗತಿಗೆ ತಂದು, ನೀನು ಜಲರಾಶಿಯಲ್ಲಿ ಮುಣುಗಿಹೋಗುವಂತೆ ನಿನ್ನ ಮೇಲೆ ಮಹಾಸಾಗರವನ್ನು ಉಕ್ಕಿಸುವೆನು.೨೦ [20]ಆಗ ಪುರಾತನ ಕಾಲದಲ್ಲಿ ಹಾಳಾದ ಪಟ್ಟಣಗಳಂತೆ, ನಿನ್ನನ್ನು ಅಧೋಲೋಕಕ್ಕೆ ತಳ್ಳಿ, ಪಾತಾಳಕ್ಕೆ ಇಳಿದ ಪೂರ್ವಕಾಲದವರೊಂದಿಗೆ ವಾಸಿಸಮಾಡುವೆನು; ಹೌದು, ನೀನು ನಿನ್ನ ಮಹಿಮೆಯನ್ನು ಜೀವಲೋಕದಲ್ಲಿ ನೆಲೆಗೊಳಿಸದೆ, ನಿರ್ನಿವಾಸಿಯಾಗುವಂತೆ, ನಿನ್ನನ್ನು ಪಾತಾಳಕ್ಕೆ ಇಳಿದವರ ಸಹವಾಸದಲ್ಲೇ ಸೇರಿಸುವೆನು.೨೧ [21]ನಿನ್ನನ್ನು ಪೂರ್ತಿಯಾಗಿ ಧ್ವಂಸಮಾಡುವೆನು; ನೀನು ಇಲ್ಲವಾಗುವೆ; ಎಷ್ಟು ಹುಡುಕಿದರೂ ನೀನು ಎಂದಿಗೂ ಸಿಕ್ಕುವುದಿಲ್ಲ; ಇದು ಸರ್ವೇಶ್ವರನಾದ ದೇವರ ನುಡಿ.”Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಯೆಜೆಕಿಯೇಲನ ೨೬ 00:00:00 00:00:00 0.5x 2.0x https://beblia.bible:81/BibleAudio/kannadakncl/ezekiel/026.mp3 48 26