× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೆಜೆಕಿಯೇಲನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೩ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭1 1 1 ಕನ್ನಡ ಬೈಬಲ್ (KNCL) 2016 ಯೆಜೆಕಿಯೇಲನ ೩ ಟಿಪ್ಪಣಿಗಳನ್ನು ಉಳಿಸಿ ೧ [1]ಬಳಿಕ ಸರ್ವೇಶ್ವರ ನನಗೆ, “ನರಪುತ್ರನೇ, ನಿನಗೆ ಕೊಟ್ಟ ಈ ಸುರುಳಿಯನ್ನು ತಿನ್ನು; ಅನಂತರ ಇಸ್ರಯೇಲ್ ವಂಶದವರಿಗೆ ಸಾರು, ಹೋಗು,” ಎಂದು ಆಜ್ಞಾಪಿಸಿದರು.೨ [2]ನಾನು ಬಾಯಿ ತೆರೆದೆ; ಅವರೇ ಆ ಸುರುಳಿಯನ್ನು ನನಗೆ ತಿನ್ನಿಸಿದರು.೩ [3]ತಿನ್ನಿಸುತ್ತಾ, “ನರಪುತ್ರನೇ, ನಾನು ಕೊಡುವ ಈ ಸುರುಳಿಯನ್ನು ತಿಂದು ಹೊಟ್ಟೆ ತುಂಬಿಸಿಕೋ,” ಎಂದರು. ನಾನು ಅದನ್ನು ತಿಂದುಬಿಟ್ಟೆ; ಅದು ನನ್ನ ಬಾಯಿಗೆ ಜೇನಿನಂತೆ ಸಿಹಿಯಾಗಿತ್ತು.೪ [4]ಆಮೇಲೆ ಸರ್ವೇಶ್ವರ ನನಗೆ ಹೀಗೆಂದರು: “ನರಪುತ್ರನೇ, ನೀನು ಇಸ್ರಯೇಲ್ ವಂಶದವರ ಬಳಿಗೆ ಹೋಗಿ ನಾನು ತಿಳಿಸುವ ಮಾತುಗಳನ್ನು ಅವರಿಗೆ ಹೇಳು.೫ [5]ನಾನು ನಿನ್ನನ್ನು ಇಸ್ರಯೇಲ್ ವಂಶದವರ ಬಳಿಗೆ ಕಳುಹಿಸುತ್ತೇನೆಯೇ ಹೊರತು ಕಷ್ಟಕರವಾದ ಅನ್ಯಭಾಷೆಯನ್ನಾಡುವ ಜನರ ಬಳಿಗೆ ಕಳುಹಿಸುತ್ತಿಲ್ಲ;೬ [6]ಹೌದು, ನಿನಗೆ ಅರ್ಥವಾಗದ ಕಷ್ಟಕರವಾದ ಅನ್ಯಭಾಷೆಯನ್ನಾಡುವ ನಾನಾ ಜನಾಂಗಗಳ ಕಡೆಗೆ ಕಳುಹಿಸುತ್ತಿಲ್ಲ. ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ ಪಕ್ಷದಲ್ಲಿ ಅವರಾದರೂ ನಿಶ್ಚಯವಾಗಿ ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು.೭ [7]ಇಸ್ರಯೇಲ್ ವಂಶದವರೋ ನಿನಗೆ ಕಿವಿಗೊಡಲು ಸಿದ್ಧರಿಲ್ಲ; ನನಗೂ ಕಿವಿಗೊಡಲು ಸಿದ್ಧರಿಲ್ಲ; ಅವರೆಲ್ಲರು ಗರ್ವಿಗಳು ಹಾಗೂ ಹಟಮಾರಿಗಳು.೮ [8]ಇಗೋ, ಅವರ ಕಠಿಣ ಹೃದಯಕ್ಕೆ ವಿರುದ್ಧ ನಿನ್ನ ಹೃದಯವನ್ನು ಕಠಿಣಪಡಿಸಿದ್ದೇನೆ; ಅವರ ಹಟಮಾರಿತನಕ್ಕೆ ಪ್ರತಿಯಾಗಿ ನಿನ್ನನ್ನು ಹಟವಾದಿಯನ್ನಾಗಿ ಮಾಡಿದ್ದೇನೆ.೯ [9]ನಿನ್ನ ನಿರ್ಧಾರವನ್ನು ಕಗ್ಗಲ್ಲಿಗಿಂತ ಕಠಿಣವಾದ ವಜ್ರದಷ್ಟು ಕಠಿಣಪಡಿಸಿದ್ದೇನೆ; ಅವರು ದ್ರೋಹಿ ವಂಶದವರು, ಅವರಿಗೆ ಭಯಪಡಬೇಡ; ಅವರ ಬಿರುನೋಟಕ್ಕೆ ಬೆಚ್ಚದಿರು.”೧೦ [10]ಇದಲ್ಲದೆ ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ನಾನು ನಿನಗೆ ನುಡಿಯುವ, ಮಾತುಗಳನ್ನೆಲ್ಲಾ ಕಿವಿಯಿಂದ ಕೇಳಿ ಮನಸ್ಸಿನಲ್ಲಿಟ್ಟುಕೋ.೧೧ [11]ಸೆರೆಯಾಗಿರುವ ನಿನ್ನ ಸ್ವಜನರ ಬಳಿಗೆಹೋಗಿ ಅವರು ಕೇಳಲಿ ಅಥವಾ ಕೇಳದೆಹೋಗಲಿ ಅವರನ್ನು ಪ್ರಭೋಧಿಸು; ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ,’ ಎಂದು ಅವರಿಗೆ ಸಾರಿಹೇಳು.”೧೨ [12]ಆಮೇಲೆ ದೇವರಾತ್ಮ ನನ್ನನ್ನು ಎತ್ತಿಕೊಂಡುಹೋಯಿತು. “ಮಹಿಮಾಭರಿತ ಸರ್ವೇಶ್ವರ ಸ್ವಾಮಿಗೆ ಆತನಾಲಯದಲ್ಲಿ ಸ್ತೋತ್ರ; ಸ್ತೋತ್ರ;” ಎಂಬ ಮಹಾಶಬ್ದ ನನ್ನ ಹಿಂದೆ ಭರಭರನೆ ಕೇಳಿಸಿತು.೧೩ [13]ಆ ಜೀವಿಗಳ ರೆಕ್ಕೆಗಳು ಒಂದಕ್ಕೊಂದು ಬಡಿದಾಡುವ ಸಪ್ಪಳ, ಅವುಗಳ ಪಕ್ಕದಲ್ಲಿ ಗರಗರನೆ ತಿರುಗುವ ಚಕ್ರಗಳ ಸದ್ದು ಹೀಗೆ ಭೂಕಂಪದಂಥ ಮಹಾಶಬ್ದ ನನ್ನ ಕಿವಿಗೆ ಬಿತ್ತು.೧೪ [14]ದೇವರಾತ್ಮ ನನ್ನನ್ನು ಎತ್ತಿಕೊಂಡುಹೋಯಿತು. ಸರ್ವೇಶ್ವರನ ಹಸ್ತಸ್ಪರ್ಶದಿಂದ ನಾನು ಅತಿ ಪರವಶನಾಗಿದ್ದು ವ್ಯಥೆಗೊಳ್ಳುತ್ತಾ ಮನಸ್ತಾಪಪಡುತ್ತಾ ಮುನ್ನಡೆದೆ.೧೫ [15]ಅನಂತರ ಕೆಬಾರ್ ನದಿಯ ಹತ್ತಿರ ತೇಲ್ ಅಬೀಬ್ನಲ್ಲಿ ವಾಸವಾಗಿದ್ದ ಗಡೀಪಾರಾಗಿ ಸೆರೆಯಾಳುಗಳಾಗಿದ್ದವರ ಬಳಿಗೆ ಬಂದೆ. ಅವರು ಕೂತಿದ್ದ ಸ್ಥಳದಲ್ಲಿಯೇ ಕುಳಿತುಕೊಂಡೆ; ಏಳು ದಿವಸ ಅಲ್ಲೇ ಅವರ ಮಧ್ಯದಲ್ಲಿ ಸ್ತಬ್ದನಾಗಿ ಇದ್ದುಬಿಟ್ಟೆ.೧೬ [16]ಏಳು ದಿವಸಗಳಾದ ಮೇಲೆ ಸರ್ವೇಶ್ವರ ನನಗೆ ಅನುಗ್ರಹಿಸಿದ ವಾಣಿ ಇದು:೧೭ [17]“ನರಪುತ್ರನೇ, ನಾನು ನಿನ್ನನ್ನು ಇಸ್ರಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ ನನ್ನ ಪರವಾಗಿ ಅವರನ್ನು ಎಚ್ಚರಿಸು.೧೮ [18]ನಾನು ದುಷ್ಟನಿಗೆ, “ನೀನು ಖಂಡಿತವಾಗಿ ಸಾಯುವೆ,” ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆ ಹಾಗು ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆ ಇದ್ದರೆ, ಆ ದುಷ್ಟನು ತನ್ನ ಅಪರಾಧಕ್ಕಾಗಿ ಸಾಯಬೇಕಾಗುವುದು; ಅವನ ಮರಣಕ್ಕೆ ನೀನೆ ಹೊಣೆಯಾಗುವೆ.೧೯ [19]ನೀನು ಆ ದುಷ್ಟನನ್ನು ಎಚ್ಚರಿಸಿದರೂ ಅವನು ತನ್ನ ದುಷ್ಟತನವನ್ನೂ ದುರ್ಮಾರ್ಗವನ್ನೂ ಬಿಡದೆಹೋದರೆ ತನ್ನ ಅಪರಾಧಕ್ಕಾಗಿ ಸಾಯುವನು; ನೀನಾದರೋ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.೨೦ [20]ಇದಲ್ಲದೆ, ಸಜ್ಜನನೊಬ್ಬನು ತನ್ನ ಸನ್ನಡತೆಯನ್ನು ಬಿಟ್ಟು ಅಧರ್ಮಮಾಡುವಲ್ಲಿ, ನಾನು ಅವನ ಮುಂದೆ ಒಡ್ಡುವ ಆತಂಕವನ್ನು ಎಡವಿ ಅವನು ಸತ್ತೇ ಸಾಯುವನು; ನೀನು ಅವನನ್ನು ಎಚ್ಚರಿಸದೆಹೋದ ಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಸುಕೃತ್ಯಗಳು ಲೆಕ್ಕಕ್ಕೆಬಾರವು; ಅವನ ಮರಣಕ್ಕೆ ನೀನೆ ಹೊಣೆಯಾಗುವೆ.೨೧ [21]ನೀನು ಆ ಸಜ್ಜನನನ್ನು ಪಾಪಮಾಡದಂತೆ ಎಚ್ಚರಿಸಿದ ಮೇಲೆ ಅವನು ಪಾಪಮಾಡದೆ ಎಚ್ಚರಗೊಂಡರೆ ಈ ಕಾರಣ ಜೀವದಿಂದ ಉಳಿಯುವನು; ನೀನೂ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.”೨೨ [22]ಅದೇ ಸ್ಥಳದಲ್ಲಿ ನಾನು ಸರ್ವೇಶ್ವರನ ಹಸ್ತಸ್ಪರ್ಶದಿಂದ ಪರವಶನಾದೆ. ಆಗ ಅವರು ನನಗೆ, “ನೀನೆದ್ದು ಬಯಲುಪ್ರದೇಶಕ್ಕೆ ಹೊರಡು, ಅಲ್ಲಿ ನಾನು ನಿನ್ನೊಂದಿಗೆ ಮಾತಾಡುವೆನು,” ಎಂದು ಹೇಳಿದರು.೨೩ [23]ನಾನೆದ್ದು ಬಯಲು ಪ್ರದೇಶಕ್ಕೆ ಹೊರಟುಬಂದಾಗ, ಕೆಬಾರ್ ನದಿಯ ಹತ್ತಿರ ನನಗೆ ಮಹಿಮಾದ್ಭುತ ದರ್ಶನವು ಆದಂತೆ, ಇಗೋ ಅಲ್ಲಿಯೂ ಸರ್ವೇಶ್ವರನ ಮಹಿಮೆ ಪ್ರತ್ಯಕ್ಷವಾಯಿತು. ಅದನ್ನು ನೋಡಿ ಅಡ್ಡಬಿದ್ದೆ.೨೪ [24]ದೇವರಾತ್ಮ ನನ್ನೊಳಗೆ ಹೊಕ್ಕು ನಾನು ಎದ್ದು ನಿಂತುಕೊಳ್ಳುವಂತೆ ಮಾಡಿತು. ಆಮೇಲೆ ಅವರು ನನಗೆ ಹೀಗೆ ಹೇಳಿದರು: ನೀನು ಹೋಗಿ ನಿನ್ನ ಮನೆಯೊಳಗೆ ಅಡಗಿಕೋ.೨೫ [25]ನರಪುತ್ರನೇ, ಇಗೋ, ನಿನ್ನ ಸ್ವಜನರೇ ನಿನ್ನನ್ನು ಕಟ್ಟಿ ಬಂಧಿಸುವರು. ನೀನು ಅವರ ಮಧ್ಯೆ ಅತ್ತಿತ್ತ ಸಂಚರಿಸದಿರುವೆ.೨೬ [26]ಇದಲ್ಲದೆ, ನಿನ್ನ ನಾಲಿಗೆ ಸೇದಿಹೋಗಿ ನೀನು ಮೂಕನಾಗಿರುವಂತೆ ಮಾಡುವೆನು; ದ್ರೋಹಿವಂಶದವರಾದ ಅವರನ್ನು ನೀನು ಖಂಡಿಸಲು ಸಾಧ್ಯವಾಗದು.೨೭ [27]ನಾನು ನಿನ್ನೊಡನೆ ಮತ್ತೆ ಮಾತಾಡುವಾಗ ನಿನ್ನ ಬಾಯನ್ನು ಬಿಚ್ಚುವೆನು; ಆಗ ನೀನು ಅವರಿಗೆ, ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ’ ಎಂದು ನುಡಿಯಬೇಕು; ಕೇಳುವವನು ಕೇಳಲಿ, ಕೇಳದವನು ಬಿಡಲಿ; ಏಕೆಂದರೆ ಅವರು ದ್ರೋಹಿವಂಶದವರೇ.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಯೆಜೆಕಿಯೇಲನ ೩ 00:00:00 00:00:00 0.5x 2.0x https://beblia.bible:81/BibleAudio/kannadakncl/ezekiel/003.mp3 48 3