× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೆಜೆಕಿಯೇಲನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೩೦ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬1 1 1 ಕನ್ನಡ ಬೈಬಲ್ (KNCL) 2016 ಯೆಜೆಕಿಯೇಲನ ೩೦ ಟಿಪ್ಪಣಿಗಳನ್ನು ಉಳಿಸಿ ೧ [1]ಸರ್ವೇಶ್ವರ ಇನ್ನೊಂದು ವಾಣಿಯನ್ನು ನನಗೆ ದಯಪಾಲಿಸಿದರು -೨ [2]“ನರಪುತ್ರನೇ, ನೀನು ಈ ದೈವೋಕ್ತಿಯನ್ನು ಪ್ರಕಟಿಸು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅರಚಿಕೊಳ್ಳಿರಿ, ಅಯ್ಯೋ ದುರ್ದಿನವೇ! ಆ ದಿನ ಹತ್ತಿರವಾಯಿತು:೩ [3]ಹೌದು, ಸಮೀಪಿಸಿತು ಸರ್ವೇಶ್ವರನ ದಿನ, ಕಾರ್ಮುಗಿಲ ದಿನ ಅದು ರಾಷ್ಟ್ರಗಳಿಗೆ ನ್ಯಾಯತೀರಿಸತಕ್ಕ ಕಾಲ.೪ [4]ಖಡ್ಗವು ಈಜಿಪ್ಟಿನ ಮೇಲೆ ಬೀಳುವುದು; ಅಲ್ಲಿ ಪ್ರಜೆಗಳು ಹತರಾಗಲು ಸುಡಾನಿನಲ್ಲಿಯೂ ಸಂಕಟವಾಗುವುದು; ಈಜಿಪ್ಟಿನಲ್ಲಿ ಹಲವರು ಸತ್ತುಬೀಳುವರು, ಅದರ ಅಸ್ತಿಭಾರ ಹಾಳಾಗುವುದು.೫ [5]“ಸುಡಾನರು, ಲೀಡಿಯರು, ಲೂದ್ಯರು, ಬಗೆಬಗೆಯ ಸಕಲವಿದೇಶೀಯರು, ಕೂಬ್ಯರು, ಮಿತ್ರರಾಜ್ಯದವರು ಇವರೆಲ್ಲ ಈಜಿಪ್ಟಿನವರೊಂದಿಗೆ ಖಡ್ಗದಿಂದ ಹತರಾಗುವರು.”೬ [6]ಸರ್ವೇಶ್ವರ ಇಂತೆನ್ನುತ್ತಾರೆ - “ಈಜಿಪ್ಟಿಗೆ ಆಧಾರವಾದವರು ಬೀಳುವರು, ಅದರ ಶಕ್ತಿ ಮದವು ಇಳಿದುಹೋಗುವುದು; ಅಲ್ಲಿನ ಜನರು ಮಿಗ್ದೋಲಿನಿಂದ ಸೆವೇನೆಯವರೆಗೆ ಖಡ್ಗದಿಂದ ಹತರಾಗುವರು. ಇದು ಸರ್ವೇಶ್ವರನಾದ ದೇವರ ನುಡಿ.೭ [7]ಹಾಳಾದ ದೇಶಗಳಲ್ಲಿ ಈ ದೇಶವೂ ಹಾಳಾಗುವುದು. ಪಾಳುಬಿದ್ದಿರುವ ಪಟ್ಟಣಗಳಲ್ಲಿ ಅದರ ಪಟ್ಟಣಗಳೂ ಪಾಳುಬಿದ್ದಿರುವುವು.೮ [8]ನಾನು ಈಜಿಪ್ಟಿಗೆ ಬೆಂಕಿಹಚ್ಚಿ, ಅದರ ಸಹಾಯಕರನ್ನೆಲ್ಲ ನಾಶಮಾಡಿದ ಮೇಲೆ ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”೯ [9]“ಆ ದಿನಗಳಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು, ಹಡಗುಗಳಲ್ಲಿ ಪ್ರಯಾಣಮಾಡಿ, ನಿಶ್ಚಿಂತರಾದ ಸುಡಾನರನ್ನು ಹೆದರಿಸುವರು; ಈಜಿಪ್ಟಿನ ವಿನಾಶ ದಿನದಲ್ಲಿ ಸುಡಾನರಿಗೂ ಸಂಕಟವಾಗುವುದು; ಇಗೋ, ಆ ದಿನ ಬಂದಿತು!”೧೦ [10]ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನಾನು ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಕೈಯಿಂದ ಈಜಿಪ್ಟಿನ ಅಸಂಖ್ಯಾತ ಪ್ರಜೆಯನ್ನು ಕೊನೆಗಾಣಿಸುವೆನು.೧೧ [11]ಆ ದೇಶವನ್ನು ನಾಶಪಡಿಸಲು ಅವನನ್ನು ಅತಿಭಯಂಕರ ಜನಾಂಗದವರಾದ ಅವನ ಸೈನಿಕರೊಡನೆ ಬರಮಾಡುವೆನು; ಅವರು ಈಜಿಪ್ಟಿನ ಮೇಲೆ ಕತ್ತಿ ಹಿರಿದು ದೇಶವನ್ನು ಹತರಾದವರಿಂದ ತುಂಬಿಸುವರು.೧೨ [12]ನಾನು ನದೀ ಶಾಖೆಗಳನ್ನು ಬತ್ತಿಸಿ, ದೇಶವನ್ನು ದುಷ್ಟರ ಕೈಗೆ ವಶಮಾಡಿಬಿಡುವೆನು; ಹೌದು, ದೇಶವನ್ನೂ ಅದರಲ್ಲಿನ ಸಮಸ್ತವನ್ನೂ ಅನ್ಯರ ಕೈಯಿಂದ ಹಾಳುಮಾಡಿಸುವೆನು; ಸರ್ವೇಶ್ವರನಾದ ನಾನೇ ನುಡಿದಿದ್ದೇನೆ.”೧೩ [13]ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನಾನು ಮೆಂಫೀಸ್ನ ವಿಗ್ರಹಗಳನ್ನೆಲ್ಲ ಒಡೆದು, ಕೊನೆಗಾಣಿಸುವೆನು; ಈಜಿಪ್ಟ್ ದೇಶದಲ್ಲಿ ಇನ್ನು ಯಾವ ಪ್ರಭುವೂ ಇರನು; ನಾನು ಆ ದೇಶಕ್ಕೆ ಭಯವನ್ನೊಡ್ಡುವೆನು.೧೪ [14]ನಾನು ದಕ್ಷಿಣ ಈಜಿಪ್ಟನ್ನು ಹಾಳುಮಾಡಿ, ಚೋವನಿಗೆ ಬೆಂಕಿಯಿಕ್ಕಿ, ತೆಬೆಸಿನ ರಾಜಧಾನಿಯನ್ನು ದಂಡಿಸಿ,೧೫ [15]ಈಜಿಪ್ಟಿಗೆ ರಕ್ಷಣಾ ಕೋಟೆಯಾದ ಪೆಲೂಸಿಯಮ್ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ತೆಬೆಸಿನ ನಿವಾಸಿಗಳನ್ನೆಲ್ಲಾ ಕತ್ತರಿಸಿಬಿಡುವೆನು.೧೬ [16]ನಾನು ಈಜಿಪ್ಟಿಗೆ ಕಿಚ್ಚನ್ನು ಹತ್ತಿಸಲು ಪೆಲೂಸಿಯಮ್ ಪ್ರಾಣಸಂಕಟ ಪಡುವುದು; ತೆಬೆಸ್ ಭಂಗಕ್ಕೆ ಈಡಾಗುವುದು; ಮೆಂಫೀಸ್ ಮೇಲೆ ವೈರಿಗಳು ಮಧ್ಯಾಹ್ನದಲ್ಲೇ ಬೀಳುವರು.೧೭ [17]ಓನಿನ ಮತ್ತು ಪೀಬೆತಿನ ಯುವಕರು ಖಡ್ಗದಿಂದ ಹತರಾಗುವರು; ಅಲ್ಲಿನ ನಿವಾಸಿಗಳು ಸೆರೆಯಾಗಿ ಹೋಗುವರು.೧೮ [18]ಈಜಿಪ್ಟ್ ಹೊರಿಸಿದ ನೊಗಗಳನ್ನು ನಾನು ತಹಪನೇಸಿನಲ್ಲಿ ಮುರಿಯುವಾಗ, ಅಲ್ಲಿ ಹೊತ್ತು ಮೂಡದು, ಅದರ ಶಕ್ತಿಮದವು ಅಡಗಿಹೋಗುವುದು. ಕಾರ್ಮುಗಿಲು ಅದನ್ನು ಆವರಿಸುವುದು. ಅದರ ಯುವತಿಯರು ಸೆರೆಗೆ ಒಯ್ಯಲ್ಪಡುವರು.೧೯ [19]ಹೀಗೆ ನಾನು ಈಜಿಪ್ಟರಿಗೆ ದಂಡನೆಗಳನ್ನು ವಿಧಿಸಿ ತೀರಿಸುವಾಗ ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”೨೦ [20]ಹನ್ನೊಂದನೆಯ ವರ್ಷದ ಮೊದಲನೆಯ ತಿಂಗಳಿನ ಏಳನೆಯ ದಿವಸದಲ್ಲಿ ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು.೨೧ [21]“ನರಪುತ್ರನೇ, ನಾನು ಈಜಿಪ್ಟಿನ ಅರಸ ಫರೋಹನ ಕೈಯನ್ನು ಮುರಿದುಬಿಟ್ಟಿದ್ದೇನೆ; ಇಗೋ, ಅದನ್ನು ಯಾರೂ ಕಟ್ಟಲಿಲ್ಲ, ಔಷಧ ಹಚ್ಚಲಿಲ್ಲ. ಅದು ಖಡ್ಗ ಹಿಡಿಯುವಷ್ಟು ಬಲಗೊಳ್ಳುವಂತೆ ಯಾರೂ ಬಟ್ಟೆ ಸುತ್ತಿ ಅದನ್ನು ಬಿಗಿಸಲಿಲ್ಲ.೨೨ [22]ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾನು ಈಜಿಪ್ಟಿನ ಅರಸ ಫರೋಹನಿಗೆ ವಿರುದ್ಧನಾಗಿ ಅವನ ಕೈಗಳನ್ನು, ಅಂದರೆ ಸರಿಯಾಗಿ ಇರುವುದನ್ನೂ, ಮುರಿದದ್ದನ್ನೂ ಪೂರ್ತಿಯಾಗಿ ಮುರಿದುಬಿಟ್ಟು, ಖಡ್ಗವು ಅವನ ಕೈಯೊಳಗಿನಿಂದ ಬೀಳುವಂತೆ ಮಾಡುವೆನು.೨೩ [23]ಈಜಿಪ್ಟರನ್ನು ಜನಾಂಗಗಳಲ್ಲಿ ಚದರಿಸಿ ದೇಶದೇಶಗಳಿಗೆ ತೂರಿಬಿಡುವೆನು.೨೪ [24]ನಾನು ಬಾಬಿಲೋನಿನ ಅರಸನ ಕೈಗಳನ್ನು ಬಲಪಡಿಸಿ, ನನ್ನ ಖಡ್ಗವನ್ನು ಅವನ ಕೈಗೆ ಕೊಟ್ಟು, ಫರೋಹನ ಕೈಗಳನ್ನು ಮುರಿಸುವಾಗ ಗಾಯದಿಂದ ಪ್ರಾಣಸಂಕಟ ಪಡುವವನಂತೆ ಫರೋಹನು ಆ ಅರಸನ ಮುಂದೆ ನರಳಾಡುವನು.೨೫ [25]ನಾನು ಬಾಬಿಲೋನಿನ ಅರಸನ ಕೈಗಳನ್ನು ಬಲಪಡಿಸುವೆನು; ಫರೋಹನ ಕೈಗಳಾದರೋ ಜೋಲುಬೀಳುವುವು; ನಾನು ನನ್ನ ಖಡ್ಗವನ್ನು ಬಾಬಿಲೋನಿನ ಅರಸನಿಗೆ ಎತ್ತುವೆನು. ಅವನು ಅದನ್ನು ಈಜಿಪ್ಟ್ ದೇಶದ ಮೇಲೆ ಎತ್ತುವನು. ಆಗ ನಾನೇ ಸರ್ವೇಶ್ವರ ಎಂದು ಎಲ್ಲರಿಗೆ ಗೊತ್ತಾಗುವುದು.೨೬ [26]ನಾನು ಈಜಿಪ್ಟರನ್ನು ಜನಾಂಗಗಳಲ್ಲಿ ಚದರಿಸಿ ದೇಶವಿದೇಶಗಳಿಗೆ ತೂರಿಬಿಡುವಾಗ ನಾನೇ ಸರ್ವೇಶ್ವರ ಎಂದು ಅವರಿಗೆ ತಿಳಿದುಬರುವುದು.”Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಯೆಜೆಕಿಯೇಲನ ೩೦ 00:00:00 00:00:00 0.5x 2.0x https://beblia.bible:81/BibleAudio/kannadakncl/ezekiel/030.mp3 48 30