× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಯೆಜೆಕಿಯೇಲನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೩೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮1 1 1 ಕನ್ನಡ ಬೈಬಲ್ (KNCL) 2016 ಯೆಜೆಕಿಯೇಲನ ೩೧ ಟಿಪ್ಪಣಿಗಳನ್ನು ಉಳಿಸಿ ೧ [1]ಹನ್ನೊಂದನೆಯ ವರ್ಷದ ಮೂರನೆಯ ತಿಂಗಳಿನ ಮೊದಲನೆಯ ದಿನ ಸರ್ವೇಶ್ವರಸ್ವಾಮಿ ನನಗೆ ಅನುಗ್ರಹಿಸಿದ ವಾಣಿ ಇದು:೨ [2]“ನರಪುತ್ರನೇ, ನೀನು ಈಜಿಪ್ಟಿನ ಅರಸ ಫರೋಹನಿಗೂ ಅವನ ಅಸಂಖ್ಯಾತ ಪ್ರಜೆಗೂ ಹೀಗೆ ನುಡಿ:೩ [3]ದೊಡ್ಡಸ್ತಿಕೆಯಲ್ಲಿ ನಿನಗೆ ಸರಿಸಮಾನನಾರು? ಲೆಬನೋನಿನಲ್ಲಿ ದೇವದಾರು ವೃಕ್ಷವೊಂದಿತ್ತು; ಅದರ ರೆಂಬೆಗಳು ಅಂದ, ಅದರ ನೆರಳು ದಟ್ಟ ಅದರ ಎತ್ತರ ಬಹಳ, ಅದರ ತುದಿ ಮೇಘಚುಂಬಿತ.೪ [4]ಅದನ್ನು ಬೆಳೆಸಿದವು ಜಲಪ್ರವಾಹಗಳು ವೃದ್ಧಿಗೊಳಿಸಿತದನು ಮಹಾನದಿಯೊಂದು ಸುತ್ತಿಕೊಂಡಿದ್ದವು ಅಲ್ಲಿನ ಉದ್ಯಾನವನವನ್ನು ನದಿ ಶಾಖೆಗಳು ಮರಗಿಡಗಳಿಗೆ ನದಿ ನೀಡಿತ್ತು ತನ್ನ ಕಾಲುವೆಗಳನು.೫ [5]ಇಂತಿರಲು ವನವೃಕ್ಷಗಳಲೆಲ್ಲ ಆ ವೃಕ್ಷ ಅತ್ಯುನ್ನತವಾಗಿತ್ತು ಅದರ ರೆಂಬೆಗಳು ನಿಬಿಡವಾಗಿದ್ದವು, ಉದ್ದುದ್ದ ಚಾಚಿಕೊಂಡಿದ್ದವು.೬ [6]ಆ ರೆಂಬೆಗಳಲ್ಲಿ ಗೂಡುಮಾಡಿದ್ದವು ಆಕಾಶದ ಪಕ್ಷಿಗಳೆಲ್ಲವು ಅದರಡಿಯಲಿ ಮರಿಗಳನೀಯುತ್ತಿದ್ದವು ಭೂಜಂತುಗಳೆಲ್ಲವು ಅದರ ನೆರಳನಾಶ್ರಯಿಸುತ್ತಿದ್ದವು ಮಹಾಜನಾಂಗಗಳೆಲ್ಲವು.೭ [7]ಬೇರಿಗೆ ಬೇಕಾದ ಜಲಾಸರೆ ಪಡೆದಿದ್ದ ಆ ಮರವು ಎತ್ತರದಿಂದ, ನೀಳವಾದ ರೆಂಬೆಗಳಿಂದ ಕಂಗೊಳಿಸಿತು.೮ [8]ದೇವೋದ್ಯಾನದ ಇತರ ದೇವದಾರುಗಳಿಂದ ಅದನು ಮುಚ್ಚಲಾಗಲಿಲ್ಲ. ತುರಾಯಿ ಮರಗಳು ಅದರ ರೆಂಬೆಗಳಷ್ಟು ಉದ್ದವಾಗಿರಲಿಲ್ಲ. ಅತ್ತಿಮರಗಳು ಅದರ ಕೊಂಬೆಗಳಷ್ಟು ದಪ್ಪವಾಗಿರಲಿಲ್ಲ. ದೇವರವನದಲ್ಲಿನ ಯಾವ ಮರವೂ ಅದರಷ್ಟು ರಮಣೀಯವಿರಲಿಲ್ಲ.೯ [9]ನಾನದನು ಅಷ್ಟೊಂದು ಸುಂದರಗೊಳಿಸಿದ್ದೆ ಶಾಖೋಪಶಾಖೆಗಳಿಂದ ಅಸೂಯೆಪಡುತ್ತಿದ್ದವು ಏದೇನಿನ ದೇವೋದ್ಯಾನದ ವೃಕ್ಷಗಳೆಲ್ಲ.೧೦ [10]“ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆ ವೃಕ್ಷವು ಬಹಳ ಎತ್ತರವಾಗಿ ಬೆಳೆದು ತನ್ನ ತುದಿ ಮೋಡಕ್ಕೆ ಮುಟ್ಟುವಷ್ಟು ನೀಳವಾಗಿದ್ದುದರ ಬಗ್ಗೆ ಗರ್ವಪಟ್ಟಿತು.೧೧ [11]ಅದುದರಿಂದ ನಾನು ಅದನ್ನು ರಾಷ್ಟ್ರಗಳಲ್ಲಿ ಮಹಾಬಲಿಷ್ಠನಾದವನ ಕೈಗೆ ಕೊಟ್ಟುಬಿಟ್ಟಿದ್ದೇನೆ. ಅವನು ಅದರ ಕೆಟ್ಟತನಕ್ಕೆ ತಕ್ಕಂತೆ ಅದನ್ನು ದಂಡಿಸೇ ತೀರುವನು; ನಾನು ಅದನ್ನು ತಳ್ಳಿಹಾಕಿದ್ದೆ.೧೨ [12]ಅತಿಭಯಂಕರ ರಾಷ್ಟ್ರದವರಾದ ಮ್ಲೇಚ್ಛರು ಅದನ್ನು ಕಡಿದುಹಾಕಿ ಹೋಗಿಬಿಟ್ಟಿದ್ದಾರೆ; ಅದರ ರೆಂಬೆಗಳು ಗುಡ್ಡಗಳಲ್ಲೂ ಎಲ್ಲ ಹಳ್ಳಕೊಳ್ಳಗಳಲ್ಲೂ ಬಿದ್ದಿವೆ; ಅದರ ಕೊಂಬೆಗಳು ದೇಶದ ಎಲ್ಲ ತೊರೆಗಳ ಹತ್ತಿರ ಮುರಿದುಬಿದ್ದಿವೆ; ಲೋಕದ ಸಮಸ್ತ ಜನಾಂಗಗಳು ಅದರ ನೆರಳಿನಿಂದ ತೊಲಗಿಹೋಗಿವೆ.೧೩ [13]“ಬಿದ್ದ ಆ ಬುಡದ ಮೇಲೆ ಎಲ್ಲ ಆಕಾಶ ಪಕ್ಷಿಗಳು ಎರಗುವುವು; ಅದರ ರೆಂಬೆಗಳನ್ನು ಸಮಸ್ತ ಭೂಜಂತುಗಳು ತುಳಿದಾಡುವುವು.೧೪ [14]ನೀರಾವರಿಯ ಯಾವ ಮರವು ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು ತನ್ನ ತುದಿಯಿಂದ ಮೋಡ ಮುಟ್ಟದಿರಲೆಂದು ಹಾಗೂ ನೀರನ್ನು ಹೀರುತ್ತಲೇ ಇರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ಚಿಗುರಿಕೊಳ್ಳದಿರಲೆಂದು ಹೀಗಾಯಿತು; ಆದರೆ ಎಲ್ಲ ಮರಗಳು ಮರಣದ ಪಾಲಾಗುವುವು. ಅಧೋಲೋಕವೇ ಅವುಗಳ ಗತಿ; ಪಾತಾಳಕ್ಕೆ ಇಳಿದುಹೋದವರ ಬಳಿಗೆ, ನರಜನ್ಮದವರೊಂದಿಗೆ ಒಂದೇ ಗುಂಪಾಗಿ ಸೇರುವುವು.”೧೫ [15]ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಆ ವೃಕ್ಷ ಪಾತಾಳಕ್ಕೆ ಇಳಿದುಹೋದ ದಿನದಲ್ಲಿ ನಾನು ದುಃಖದ ಚಿಹ್ನೆಗಳನ್ನು ಏರ್ಪಡಿಸಿದೆ; ಅದರ ವಿಯೋಗಕ್ಕಾಗಿ ನಾನು ಮಹಾನದಿಯನ್ನು ಮರೆಮಾಡಿ, ನದಿಯ ಶಾಖೆಗಳನ್ನು ತಡೆದುಬಿಟ್ಟೆ; ಜಲಪ್ರವಾಹವು ನಿಂತುಹೋಯಿತು; ಅದಕ್ಕಾಗಿ ಲೆಬನೋನು ಗೋಳಿಡುವಂತೆ ಮಾಡಿದೆ. ಭೂಮಿಯ ಸಕಲ ವೃಕ್ಷಗಳು ಆ ದುಃಖಕ್ಕೆ ಮೂರ್ಛೆಹೋದವು.೧೬ [16]ನಾನು ಅದನ್ನು ಪ್ರೇತಗಳ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ, ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು; ಮತ್ತು ಪೂರ್ವಕಾಲದಲ್ಲಿ ಅಧೋಲೋಕದ ಪಾಲಾದ ಏದೆನಿನ ಎಲ್ಲ ಮರಗಳು, ಲೆಬನೋನಿನ ಉತ್ತಮೋತ್ತಮ ವೃಕ್ಷಗಳು, ಅಂತು ನೀರಾವರಿಯ ಸಕಲ ಸಸ್ಯಗಳೂ ಅಲ್ಲಿ ಸಂತೈಸಿಕೊಂಡವು.೧೭ [17]ಇದಲ್ಲದೆ, ಅದಕ್ಕೆ ತೋಳಬಲವಾಗಿ ಜನಾಂಗಗಳ ಮಧ್ಯೆ ಅದರ ನೆರಳನ್ನು ಆಶ್ರಯಿಸಿದವರು, ಅದರೊಂದಿಗೆ ಪಾತಾಳಕ್ಕಿಳಿದು, ಖಡ್ಗಹತರ ಜೊತೆಗೆ ಸೇರಿದರು.೧೮ [18]ಇಂಥಾ ವೈಭವದಿಂದ ಹಾಗೂ ಮಹಿಮೆಯಿಂದ ಕೂಡಿದ ನೀನು, ಏದೆನಿನ ವೃಕ್ಷಗಳಲ್ಲಿ ಯಾವುದಕ್ಕಿಂತ ಕಡಿಮೆ? ಆದರೂ ನೀನು ಏದೆನಿನ ವೃಕ್ಷಗಳೊಂದಿಗೆ ಅಧೋಲೋಕಕ್ಕೆ ದೂಡಿದವನಾಗಿ ಸುನ್ನತಿಹೀನರ ನಡುವೆ ಖಡ್ಗಹತರ ಸಂಗಡ ಒರಗಿಹೋಗುವೆ. ಫರೋಹನೂ ಅವನ ಎಲ್ಲಾ ಪ್ರಜೆಗಳೂ ಇದೇ ಗತಿಯನ್ನು ಹೊಂದುವರು. ಇದು ಸರ್ವೇಶ್ವರನಾದ ದೇವರ ನುಡಿ.”Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಯೆಜೆಕಿಯೇಲನ ೩೧ 00:00:00 00:00:00 0.5x 2.0x https://beblia.bible:81/BibleAudio/kannadakncl/ezekiel/031.mp3 48 31