× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೆಜೆಕಿಯೇಲನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೪೩ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭1 1 1 ಕನ್ನಡ ಬೈಬಲ್ (KNCL) 2016 ಯೆಜೆಕಿಯೇಲನ ೪೩ ಟಿಪ್ಪಣಿಗಳನ್ನು ಉಳಿಸಿ ೧ [1]ಆಮೇಲೆ ಆ ಪುರುಷ ನನ್ನನ್ನು ಪೂರ್ವದ ಬಾಗಿಲಿಗೆ ಬರಮಾಡಿದನು.೨ [2]ಆಗ ಇಗೋ, ಇಸ್ರಯೇಲಿನ ದೇವರ ತೇಜಸ್ಸು ಪೂರ್ವಮಾರ್ಗವಾಗಿ ಬಂದಿತು. ಅವರ ಧ್ವನಿ ಜಲಪ್ರವಾಹದ ಘೋಷದಂತಿತ್ತು. ಅವರ ತೇಜಸ್ಸಿನಿಂದ ಭೂಮಿ ಬೆಳಗಿತು.೩ [3]ಮೊದಲು ನನಗೆ ಕಂಡುಬಂದ ತೇಜಸ್ಸಿನಂತೆ ಅದು ಕಾಣಿಸಿತು. ಪಟ್ಟಣವನ್ನು ಹಾಳುಮಾಡಲು ನಾನು ಬಂದಾಗ ಎಂಥದನ್ನು ಕಂಡೆನೋ ಅಂಥದನ್ನೇ ಕಂಡೆನು. ಕೆಬಾರ್ ನದಿಯ ಹತ್ತಿರ ನನಗಾದ ಅದ್ಭುತ ದರ್ಶನದಂಥ ದರ್ಶನ ಈಗಲೂ ನನಗಾಯಿತು; ಅದನ್ನು ನೋಡಿ ಅಡ್ಡಬಿದ್ದೆ.೪ [4]ಆಗ ಸರ್ವೇಶ್ವರನ ತೇಜಸ್ಸು ಪೂರ್ವಬಾಗಿಲ ಮಾರ್ಗವಾಗಿ ದೇವಸ್ಥಾನವನ್ನು ಪ್ರವೇಶಿಸಿತು.೫ [5]ದೇವರಾತ್ಮ ನನ್ನನ್ನು ಎತ್ತಿ ಒಳಗಿನ ಪ್ರಾಕಾರಕ್ಕೆ ತಂದಿತು. ಆಗ ಏನಾಶ್ಚರ್ಯ! ಸರ್ವೇಶ್ವರನ ತೇಜಸ್ಸು ದೇವಸ್ಥಾನವನ್ನು ತುಂಬಿಕೊಂಡಿತ್ತು.೬ [6]ದೇವಸ್ಥಾನದೊಳಗಿಂದ ನನ್ನನ್ನು ಸಂಬೋಧಿಸಿ ನುಡಿಯುವವನ ಶಬ್ದ ನನ್ನ ಕಿವಿಗೆ ಬಿದ್ದಿತು; ಆ ಪುರುಷ ನನ್ನ ಪಕ್ಕದಲ್ಲೇ ನಿಂತಿದ್ದನು.೭ [7]ನುಡಿಯುವಾತನು ನನಗೆ ಹೀಗೆ ಹೇಳಿದನು: “ನರಪುತ್ರನೇ, ಇದು ನನ್ನ ಸಿಂಹಾಸನಸ್ಥಾನ, ನನ್ನ ಪಾದಸನ್ನಿಧಿ. ಇಲ್ಲಿ ನಾನು ಇಸ್ರಯೇಲರ ಮಧ್ಯೆ ಸದಾ ವಾಸಿಸುವೆನು. ಇಸ್ರಯೇಲ್ ವಂಶದವರಾಗಲಿ ಅವರ ಅರಸರಾಗಲಿ, ತಮ್ಮ ದೇವದ್ರೋಹದಿಂದ, ಗತಿಸಿದ ಅರಸರ ಶವಗಳಿಂದ ಹಾಗು೮ [8]ನನ್ನ ಹೊಸ್ತಲನಿಲವುಗಳ ಪಕ್ಕದಲ್ಲಿ ತಮ್ಮ ಹೊಸ್ತಲುನಿಲವುಗಳನ್ನು ಹಾಕಿಕೊಂಡು, ನನ್ನ ಮನೆಗೂ ತಮ್ಮ ಮನೆಗೂ ಒಂದೇ ಗೋಡೆಯಾಗುವಂತೆ ಮಾಡಿಕೊಳ್ಳುವುದರಿಂದ ಇನ್ನು ನನ್ನ ಪವಿತ್ರನಾಮವನ್ನು ಅಶುದ್ಧಗೊಳಿಸರು. ಹೌದು, ಹಿಂದೆ ತಾವು ನಡೆಸಿದ ದುರಾಚಾರಗಳಿಂದ ನನ್ನ ಪವಿತ್ರನಾಮವನ್ನು ಹೊಲೆಗೆಡಿಸಿದರು; ಆದಕಾರಣ ನಾನು ಕೋಪಗೊಂಡು ಅವರನ್ನು ನಾಶಮಾಡಿದೆ.೯ [9]ಈಗಲಾದರೂ ತಮ್ಮ ದೇವದ್ರೋಹವನ್ನು ಮತ್ತು ಅರಸರ ಶವಗಳನ್ನು ನನಗೆ ದೂರಮಾಡಲಿ; ಆಗ ನಾನು ಅವರ ಮಧ್ಯೆ ಸದಾ ವಾಸಿಸುವೆನು.೧೦ [10]“ನರಪುತ್ರನೇ, ಇಸ್ರಯೇಲ್ ವಂಶದವರು ತಮ್ಮ ಅಪರಾಧಗಳ ನಿಮಿತ್ತ ನಾಚಿಕೆಪಡುವಂತೆ ದೇವಾಲಯವನ್ನು ಅವರಿಗೆ ತೋರಿಸು; ಅವರು ಅದನ್ನು ಅಳತೆಮಾಡಲಿ.೧೧ [11]ತಾವು ನಡೆಸಿದ ದುಷ್ಕೃತ್ಯಗಳಿಗೆಲ್ಲಾ ನಾಚಿಕೆಪಟ್ಟರೆ, ನೀನು ದೇವಸ್ಥಾನದ ರೂಪ, ಅದರ ವ್ಯವಸ್ಥೆ, ಗಮನಾಗಮನ ನಿಯಮಗಳು, ಸಕಲ ರಚನಾ ವಿಧಾನಗಳು, ಸಮಸ್ತ ವಿಧಿಗಳು, ಸರ್ವನಿರ್ಮಾಣ ರೀತಿಗಳು, ಎಲ್ಲ ಕಟ್ಟಳೆಗಳು ಇವೆಲ್ಲವನ್ನು ಅವರಿಗೆ ತಿಳಿಸಿ, ಅವರು ಅದರ ಪೂರ್ಣಕ್ರಮವನ್ನೂ ಎಲ್ಲ ವಿಧಿಗಳನ್ನೂ ಅನುಸರಿಸಿ ಕೈಗೊಳ್ಳುವಂತೆ ಅವರ ಕಣ್ಣೆದುರಿಗೆ ಬರೆ.೧೨ [12]ಇದೇ ದೇವಸ್ಥಾನದ ನಿಯಮ. ಪರ್ವತಾಗ್ರದಲ್ಲಿನ ಅದರ ಪ್ರದೇಶವೆಲ್ಲ ಸುತ್ತುಮುತ್ತಲು ಅತಿಪರಿಶುದ್ಧವಾಗಿರಬೇಕು. ಇಗೋ, ದೇವಸ್ಥಾನದ ನಿಯಮ ಇದೇ.”೧೩ [13]ಬಲಿಪೀಠವು ಮೀಟರ್ ಅಳತೆಯ ಪ್ರಕಾರ ಹೀಗಿರಬೇಕು. ಕೆಳಭಾಗದ ಎತ್ತರ ಐವತ್ತು ಸೆಂಟಿಮೀಟರ್, ಮೇಲಿನ ಬಿಡುವಿನ ಅಗಲವು ಸುತ್ತಲೂ ಐವತ್ತು ಸೆಂಟಿಮೀಟರ್, ಬಿಡುವಿನ ತುದಿಯಲ್ಲಿ ಸುತ್ತಣ ದಿಂಡಿನ ಅಗಲವು ಇಪ್ಪತ್ತೈದು ಸೆಂಟಿಮೀಟರ್; ಇದೇ ಬಲಿವೇದಿಕೆಯ ಪೀಠ.೧೪ [14]ನೆಲದ ಮೇಲೆ ಅಂದರೆ, ಕೆಳಭಾಗದ ಮೇಲೆ ಕೆಳಗಣ ಅಂತಸ್ತಿನ ಎತ್ತರವು ಒಂದು ಮೀಟರ್, ಅದರ ಮೇಲಣ ಬಿಡುವಿನ ಅಗಲವು ಐವತ್ತು ಸೆಂಟಿಮೀಟರ್, ಆ ಚಿಕ್ಕ ಅಂತಸ್ತಿನ ಮೇಲೆ ದೊಡ್ಡ ಅಂತಸ್ತಿನ ಎತ್ತರವು ಎರಡು ಮೀಟರ್; ಮೇಲಿನ ಬಿಡುವಿನ ಅಗಲವು ಐವತ್ತು ಸೆಂಟಿಮೀಟರ್.೧೫ [15]ಹೋಮಕುಂಡದ ಅಂತಸ್ತಿನ ಎತ್ತರವು ಎರಡು ಮೀಟರ್; ಆ ಹೋಮಕುಂಡದ ಮೇಲ್ಗಡೆಯಲ್ಲಿ ನಾಲ್ಕು ಕೊಂಬುಗಳು ಇರಬೇಕು.೧೬ [16]ಹೋಮಕುಂಡವು ಆರು ಮೀಟರ್ ಉದ್ದ, ಆರು ಮೀಟರ್ ಅಗಲ ಚಚ್ಚೌಕವಾಗಿರಬೇಕು.೧೭ [17]ದೊಡ್ಡ ಅಂತಸ್ತು ಏಳು ಮೀಟರ್ ಉದ್ದವಾಗಿಯೂ ಏಳು ಮೀಟರ್ ಅಗಲವಾಗಿಯೂ ನಾಲ್ಕು ಪಾರ್ಶ್ವಗಳಲ್ಲಿ ಸಮವಾಗಿರಬೇಕು. ಸುತ್ತಣ ದಿಂಡಿನ ಅಗಲವು ಇಪ್ಪತ್ತೈದು ಸೆಂಟಿಮೀಟರ್; ಕೆಳಭಾಗದ ಸುತ್ತಣ ಅಂಚಿನ ಅಗಲವು ಐವತ್ತು ಸೆಂಟಿಮೀಟರ್; ಸೋಪಾನವು ಮೂಡಲಿಗೆ ಅಭಿಮುಖವಾಗಿರಬೇಕು.೧೮ [18]ಆಗ ಆ ಪುರುಷ ನನಗೆ ಹೀಗೆ ಹೇಳಿದನು: “ನರಪುತ್ರನೇ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ದಹನಬಲಿಗೂ, ರಕ್ತವೆರಚುವ ಸಂಸ್ಕಾರಕ್ಕೂ ಬಲಿಪೀಠವನ್ನು ನಿರ್ಮಿಸುವಾಗ ಈ ವಿಧಿಗಳನ್ನು ಕೈಗೊಳ್ಳಬೇಕು.೧೯ [19]ಲೇವಿಯರೂ, ಚಾದೋಕನ ಸಂತಾನದವರೂ ನನ್ನ ಸನ್ನಿಧಿಸೇವಕರೂ ಆದ ಯಾಜಕರಿಗೆ ನೀನು ಒಂದು ಹೋರಿಯನ್ನು ದೋಷಪರಿಹಾರಕ ಬಲಿಗಾಗಿ ಕೊಡು. ಇದು ಸರ್ವೇಶ್ವರನಾದ ದೇವರ ನುಡಿ.೨೦ [20]ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಬಲಿಪೀಠದ ನಾಲ್ಕು ಕೊಂಬುಗಳಿಗೆ, ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೆ ಹಾಗು ಸುತ್ತಣ ದಿಂಡಿಗೆ ಹಚ್ಚಿ ಬಲಿಪೀಠದ ದೋಷವನ್ನು ಪರಿಹರಿಸಿ, ಅದನ್ನು ಶುದ್ಧಿಮಾಡು.೨೧ [21]ದೋಷಪರಿಹಾರಕ ಬಲಿಗಾಗಿ ವಧಿತವಾದ ಹೋರಿಯನ್ನು ಒಪ್ಪಿಸಿದಾಗ ಪವಿತ್ರಾಲಯದ ಹೊರಗೆ, ದೇವಸ್ಥಾನಕ್ಕೆ ಸಂಬಂಧಪಟ್ಟ ಗೊತ್ತಾದ ಸ್ಥಳದಲ್ಲಿ, ಅದನ್ನು ಸುಡಬೇಕು.೨೨ [22]ಎರಡನೆಯ ದಿನದಲ್ಲಿ, ಕಳಂಕರಹಿತವಾದ ಹೋತವನ್ನು ದೋಷಪರಿಹಾರಕ ಬಲಿಗಾಗಿ ಅರ್ಪಿಸು; ಹೋರಿಯಿಂದ ಬಲಿಪೀಠವನ್ನು ಶುದ್ಧಿಮಾಡಿದಂತೆ ಹೋತದಿಂದಲೂ ಶುದ್ಧಿಮಾಡತಕ್ಕದ್ದು.೨೩ [23]ನೀನು ಬಲಿಪೀಠದ ಶುದ್ಧೀಕಾರ್ಯವನ್ನು ಪೂರೈಸಿದ ಮೇಲೆ ಕಳಂಕರಹಿತವಾದ ಹೋರಿಯನ್ನೂ ಹಿಂಡಿನಿಂದ ತಂದ ಕಳಂಕರಹಿತ ಟಗರನ್ನೂ ಅರ್ಪಿಸು.೨೪ [24]ನೀನು ಅವುಗಳನ್ನು ಸರ್ವೇಶ್ವರನಿಗೆ ಸಮರ್ಪಿಸಿದಾಗ ಯಾಜಕರು ಅವುಗಳ ಮೇಲೆ ಉಪ್ಪನ್ನು ಚೆಲ್ಲಿ, ಸರ್ವೇಶ್ವರನಿಗಾಗಿ ದಹನಬಲಿ ಒಪ್ಪಿಸಬೇಕು.೨೫ [25]ಏಳು ದಿವಸ ನೀನು ದಿನದಿನವೂ ದೋಷಪರಿಹಾರಕ್ಕಾಗಿ ಒಂದೊಂದು ಹೋತವನ್ನು ಅರ್ಪಿಸು; ಯಾಜಕರು ಸಹ ಕಳಂಕರಹಿತವಾದ ಹೋರಿಯನ್ನೂ ಹಿಂಡಿನಿಂದ ತಂದ ಕಳಂಕರಹಿತವಾದ ಟಗರನ್ನೂ ಅರ್ಪಿಸಲಿ;೨೬ [26]ಹೀಗೆ ಏಳು ದಿವಸ ಬಲಿಪೀಠದ ದೋಷವನ್ನು ಪರಿಹರಿಸುತ್ತಾ, ಅದನ್ನು ಶುದ್ಧಿಮಾಡಿ ಪ್ರತಿಷ್ಠಿಸಬೇಕು.೨೭ [27]ಏಳು ದಿನಗಳ ಕಾರ್ಯವನ್ನು ಮುಗಿಸಿದ ಬಳಿಕ, ಎಂಟನೆಯ ದಿನದಲ್ಲಿಯೂ ಮುಂದೆಯೂ ಯಾಜಕರು ಬಲಿಪೀಠದ ಮೇಲೆ ನಿಮ್ಮ ಪರವಾಗಿ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಅರ್ಪಿಸಬೇಕು; ಆಗ ನಾನು ನಿಮಗೆ ಪ್ರಸನ್ನನಾಗುವೆನು; ಇದು ಸರ್ವೇಶ್ವರನಾದ ದೇವರ ನುಡಿ.”Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಯೆಜೆಕಿಯೇಲನ ೪೩ 00:00:00 00:00:00 0.5x 2.0x https://beblia.bible:81/BibleAudio/kannadakncl/ezekiel/043.mp3 48 43