× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಯೆಜೆಕಿಯೇಲನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೪೪ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧1 1 1 ಕನ್ನಡ ಬೈಬಲ್ (KNCL) 2016 ಯೆಜೆಕಿಯೇಲನ ೪೪ ಟಿಪ್ಪಣಿಗಳನ್ನು ಉಳಿಸಿ ೧ [1]ತರುವಾಯ ಈ ಪುರುಷನು ನನ್ನನ್ನು ಪವಿತ್ರಾಲಯದ ಪೂರ್ವದಿಕ್ಕಿನ ಹೊರಗಿನ ಹೆಬ್ಬಾಗಿಲಿಗೆ ಪುನಃ ಕರೆದುತಂದನು; ಅದು ಮುಚ್ಚಿತ್ತು.೨ [2]ಆಗ ಸರ್ವೇಶ್ವರ ನನಗೆ, “ಈ ಬಾಗಿಲು ಮುಚ್ಚಿರಬೇಕು, ಇದನ್ನು ತೆರೆಯಕೂಡದು. ಇದರಿಂದ ಯಾರೂ ಪ್ರವೇಶಿಸದಿರಲಿ; ಇಸ್ರಯೇಲಿನ ದೇವರಾದ ಸರ್ವೇಶ್ವರ ಇದರಿಂದ ಪ್ರವೇಶಿಸಿದ್ದಾರೆ; ಇದು ಮುಚ್ಚೇ ಇರಬೇಕು.೩ [3]ರಾಜರು ಸರ್ವೇಶ್ವರನ ಸನ್ನಿಧಿಯಲ್ಲಿ ಹವಿರ್ಭೋಜನ ಮಾಡುವುದಕ್ಕೆ ಇಲ್ಲಿ ಕುಳಿತುಕೊಳ್ಳಬಹುದು; ಅವನು ಹೆಬ್ಬಾಗಿಲ ಕೈಸಾಲೆಯ ಮಾರ್ಗವಾಗಿ ಬಂದು ಅದೇ ಮಾರ್ಗವಾಗಿ ಹೊರಡಬೇಕು,” ಎಂದು ಹೇಳಿದರು.೪ [4]ಬಳಿಕ ಆ ಪುರಷನು ಉತ್ತರ ಹೆಬ್ಬಾಗಿಲ ಮಾರ್ಗವಾಗಿ ನನ್ನನ್ನು ದೇವಸ್ಥಾನದ ಮುಂದುಗಡೆಗೆ ಕರೆದುತಂದನು; ಏನಾಶ್ಚರ್ಯ! ನಾನು ನೋಡುತ್ತಿದ್ದಂತೆ ಸರ್ವೇಶ್ವರನ ತೇಜಸ್ಸು ದೇವಾಲಯವನ್ನು ತುಂಬಿಕೊಂಡಿತ್ತು; ಅದನ್ನು ನೋಡಿ ಅಡ್ಡಬಿದ್ದೆ.೫ [5]ಆಗ ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ಸರ್ವೇಶ್ವರನ ಆಲಯದ ಸಕಲ ನಿಯಮ ನಿಷ್ಠೆಗಳ ವಿಷಯವಾಗಿ ನಾನು ನಿನಗೆ ಹೇಳುವುದನ್ನೆಲ್ಲಾ ನೀನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು, ಮನದಟ್ಟು ಮಾಡಿಕೋ; ಮತ್ತು ಪವಿತ್ರಾಲಯದ ಗಮನಾಗಮನವಿಧಿಗಳನ್ನು ಗಮನಿಸು.೬ [6]“ಇದಲ್ಲದೆ, ನೀನು ಆ ದ್ರೋಹಿಗಳಿಗೆ ಅಂದರೆ, ಇಸ್ರಯೇಲ್ ವಂಶದವರಿಗೆ ಹೀಗೆ ನುಡಿ: ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ:೭ [7]ಇಸ್ರಯೇಲ್ ವಂಶದವರೇ, ನೀವು ನನ್ನ ಆಹಾರವಾದ ರಕ್ತಮೇದಸ್ಸುಗಳನ್ನು ಅರ್ಪಿಸುವಾಗ, ತನುಮನಗಳಲ್ಲಿ ಸುನ್ನತಿಹೀನರಾದ ಮ್ಲೇಚ್ಛರನ್ನು, ನನ್ನ ಪವಿತ್ರಾಲಯದೊಳಗೆ ಬರಮಾಡಿ ನನ್ನ ಮಂದಿರವನ್ನು ಅಶುದ್ಧಗೊಳಿಸಿದ್ದೀರಿ. ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿ ನಿಮ್ಮ ಅಮಿತ ದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ.೮ [8]ನೀವು ನನ್ನ ಪರಿಶುದ್ಧ ವಸ್ತುಗಳ ಪಾರುಪತ್ಯ ಮಾಡಲಿಲ್ಲ; ಈ ಮ್ಲೇಚ್ಛರನ್ನು ನನ್ನ ಪವಿತ್ರಾಲಯದಲ್ಲಿ ನನ್ನ ವಸ್ತುಗಳ ಮೇಲೆ ಪಾರುಪತ್ಯಗಾರರನ್ನಾಗಿ ನೇಮಿಸಿಕೊಂಡಿರಿ; ನಿಮ್ಮ ಅಪಾರ ದುರಾಚಾರಗಳು ಇನ್ನು ಸಾಕು.೯ [9]“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಇಸ್ರಯೇಲರಲ್ಲಿ ಸೇರಿಕೊಂಡಿರುವ ಮ್ಲೇಚ್ಛರೊಳಗೆ ತನುಮನಗಳಲ್ಲಿ ಸುನ್ನತಿಹೀನನಾದ ಯಾವನೂ ನನ್ನ ಪವಿತ್ರಾಲಯವನ್ನು ಪ್ರವೇಶಿಸಕೂಡದು.”೧೦ [10]“ಇಸ್ರಯೇಲರು ನನ್ನನ್ನು ತೊರೆದಾಗ, ನನ್ನಿಂದಗಲಿ ತಮ್ಮ ವಿಗ್ರಹಗಳ ಕಡೆಗೆ ತಿರುಗಿಕೊಂಡು, ನನಗೆ ದೂರವಾಗಿಹೋದ ಲೇವಿಯರು ತಮ್ಮ ದೋಷಫಲವನ್ನು ಅನುಭವಿಸುವರು.೧೧ [11]ಅವರು ನನ್ನ ಪವಿತ್ರಾಲಯದಲ್ಲಿ ಪರಿಚಾರಕರೂ ಮಂದಿರ ದ್ವಾರಪಾಲಕರೂ ಆಗಿ ಮಂದಿರದಲ್ಲಿ ಸೇವೆಮಾಡಬೇಕು; ಜನರ ಪರವಾಗಿ ದಹನ ಬಲಿಪಶುವನ್ನೂ ಶಾಂತಿಸಮಾಧಾನ ಬಲಿಪಶುವನ್ನೂ ವಧಿಸಿ ಅವರಿಗೆ ಸೇವೆಮಾಡಲು ಸಿದ್ಧರಾಗಿರಬೇಕು.೧೨ [12]ಅವರು ತಮ್ಮ ವಿಗ್ರಹಗಳ ಮುಂದೆ ಜನರಿಗಾಗಿ ಸೇವೆಮಾಡಿ, ಇಸ್ರಯೇಲ್ ವಂಶದವರಿಗೆ ಪಾಪಕಾರಿವಿಘ್ನವಾದುದರಿಂದ, ನಾನು ಅವರ ಮೇಲೆ ಕೈಯೆತ್ತಿದ್ದೇನೆ. ಅವರು ತಮ್ಮ ದೋಷಫಲವನ್ನು ಅನುಭವಿಸಿಯೇ ತೀರಬೇಕು; ಇದು ಸರ್ವೇಶ್ವರನಾದ ದೇವರ ನುಡಿ.೧೩ [13]ನನಗೆ ಯಾಜಕ ಸೇವೆಮಾಡುವುದಕ್ಕೆ ಅವರು ನನ್ನ ಸನ್ನಿಧಿಗೆ ಬರಕೂಡದು. ನನ್ನ ಅತಿಪವಿತ್ರವಾದ ಪರಿಶುದ್ಧವಸ್ತುಗಳಲ್ಲಿ ಯಾವುದನ್ನೂ ಸಮೀಪಿಸಬಾರದು. ತಮಗಾದ ಅವಮಾನವನ್ನೂ ತಾವು ನಡೆಸಿದ ದುರಾಚಾರಗಳ ಫಲವನ್ನೂ ಅನುಭವಿಸುವರು.೧೪ [14]ದೇವಾಲಯದ ಸಕಲ ಸೇವೆಯಲ್ಲೂ ಅಲ್ಲಿ ನಡೆಯುವ ಸಮಸ್ತ ಕಾರ್ಯಗಳಲ್ಲಿಯೂ ಸೇವಕ ವೃತ್ತಿಯನ್ನೇ ಅವರಿಗೆ ಕೊಡುವೆನು.೧೫ [15]“ಆದರೆ ಇಸ್ರಯೇಲರು ನನ್ನನ್ನು ತೊರೆದಾಗ ಲೇವಿಯರೂ ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದರು. ಆದ್ದರಿಂದ ಅವರು ನನ್ನ ಸೇವೆಮಾಡಲು ನನ್ನ ಸನ್ನಿಧಿಗೆ ಬರುವರು, ನನಗೆ ರಕ್ತಮೇದಸ್ಸುಗಳನ್ನು ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು; ಇದು ಸರ್ವೇಶ್ವರನಾದ ದೇವರ ನುಡಿ.೧೬ [16]ಅವರು ನನ್ನ ಪವಿತ್ರಾಲಯವನ್ನು ಪ್ರವೇಶಿಸಿ, ನನ್ನ ಸೇವೆ ಮಾಡುವುದಕ್ಕೆ ನನ್ನ ವೇದಿಕೆಯನ್ನು ಸಮೀಪಿಸಿ, ನನ್ನ ಆಲಯದ ಪಾರುಪತ್ಯವನ್ನು ವಹಿಸುವರು.೧೭ [17]ಅವರು ಒಳಗಿನ ಪ್ರಾಕಾರದ ಬಾಗಿಲುಗಳನ್ನು ಪ್ರವೇಶಿಸುವಾಗ ನಾರುಮಡಿಗಳನ್ನು ಧರಿಸಿರಬೇಕು; ಒಳಗಿನ ಪ್ರಾಕಾರದ ಬಾಗಿಲುಗಳಲ್ಲೂ ದೇವಸ್ಥಾನದಲ್ಲೂ ಸೇವೆಮಾಡುತ್ತಿರುವಾಗ, ಯಾವ ಉಣ್ಣೆಯ ಉಡುಪೂ ಅವರ ಮೇಲೆ ಇರಕೂಡದು.೧೮ [18]ಅವರು ತಲೆಗೆ ನಾರುಪೇಟವನ್ನು, ಸೊಂಟಕ್ಕೆ ನಾರುಚಡ್ಡಿಯನ್ನು ಹಾಕಿಕೊಂಡಿರಲಿ; ಬೆವರುವ ಯಾವ ಉಡುಪನ್ನೂ ಉಟ್ಟುಕೊಳ್ಳಬಾರದು.೧೯ [19]ಅವರು ಹೊರಗಿನ ಪ್ರಾಕಾರಕ್ಕೆ ಅಂದರೆ, ಅಲ್ಲಿನ ಜನರ ಬಳಿಗೆ ಹೊರಡುವಾಗ, ತಮ್ಮ ದೀಕ್ಷಾವಸ್ತ್ರಗಳನ್ನು ಅವರಿಗೆ ತಗಲಿಸಿ ಅವರನ್ನು ಪರಿಶುದ್ಧರಾಗ ಮಾಡದಂತೆ ಕೊಠಡಿಗಳಲ್ಲಿ ಇಟ್ಟು ಬೇರೆ ವಸ್ತ್ರಗಳನ್ನು ಧರಿಸಿಕೊಳ್ಳಲಿ.೨೦ [20]“ಅವರು ತಲೆ ಬೋಳಿಸಬಾರದು; ಕೂದಲನ್ನು ಬೆಳೆಸಬಾರದು, ಕತ್ತರಿಸಿಕೊಂಡಿರಬೇಕು.೨೧ [21]ಒಳಗಿನ ಪ್ರಾಕಾರವನ್ನು ಪ್ರವೇಶಿಸುವಾಗ ಯಾವ ಯಾಜಕನೂ ದ್ರಾಕ್ಷಾರಸವನ್ನು ಕುಡಿದಿರಬಾರದು.೨೨ [22]ಯಾಜಕರು ವಿಧವೆಯನ್ನಾಗಲಿ ಗಂಡನಿಂದ ಬಿಡಲಾದವಳನ್ನಾಗಲಿ ಮದುವೆಯಾಗಬಾರದು; ಆದರೆ ಇಸ್ರಯೇಲ್ ವಂಶದ ಕನ್ಯೆಯನ್ನಾಗಲಿ, ಯಾಜಕನ ವಿಧವೆಯನ್ನಾಗಲಿ ಮದುವೆಮಾಡಿಕೊಳ್ಳಲಿ.೨೩ [23]“ಮೀಸಲಾಗಿದದ್ದಕ್ಕೂ ಮೀಸಲಲ್ಲದ್ದಕ್ಕೂ ಇರುವ ಭೇದವನ್ನು ನನ್ನ ಜನರಿಗೆ ತೋರಿಸಿ, ಶುದ್ಧಾಶುದ್ಧ ವಿವೇಚನೆಯನ್ನು ಅವರಿಗೆ ಬೋಧಿಸಲಿ.೨೪ [24]ವ್ಯಾಜ್ಯವಾಗುವಾಗ ಅದನ್ನು ತೀರಿಸಲು ನಿಂತು, ನನ್ನ ನ್ಯಾಯವಿಧಿಗಳಿಗೆ ಅನುಸಾರವಾಗಿ ತೀರಿಸಲಿ; ನಾನು ಏರ್ಪಡಿಸಿದ ಹಬ್ಬಗಳಲ್ಲಿ ನನ್ನ ನಿಯಮನಿಷ್ಠೆಗಳನ್ನು ಕೈಕೊಂಡು ನನ್ನ ಸಬ್ಬತ್ಗಳನ್ನು ಜನರು ಆಚರಿಸುವಂತೆ ನೋಡಿಕೊಳ್ಳಲಿ.೨೫ [25]“ಸತ್ತವರ ಹೆಣವನ್ನು ಸಮೀಪಿಸಿ ತಮ್ಮನ್ನೇ ಅಶುದ್ಧಮಾಡಿಕೊಳ್ಳಬಾರದು; ಆದರೆ ಸತ್ತ ತಂದೆ, ತಾಯಿ, ಮಗನು, ಮಗಳು, ತಮ್ಮ, ಮದುವೆಯಿಲ್ಲದ ತಂಗಿ, ಇವರಿಗಾಗಿ ಒಬ್ಬನು ತನ್ನನ್ನೇ ಅಶುದ್ಧಮಾಡಿಕೊಳ್ಳಬಹುದು.೨೬ [26]ಅಂಥವನನ್ನು ಶುದ್ಧನಾದ ಮೇಲೂ, ಏಳು ದಿವಸ ಪ್ರತ್ಯೇಕಿಸಬೇಕು.೨೭ [27]ಅವನು ಸೇವೆಮಾಡಲು ಪವಿತ್ರಾಲಯವನ್ನು ಪ್ರವೇಶಿಸಿ ಒಳಗಿನ ಪ್ರಾಕಾರಕ್ಕೆ ಬರುವ ದಿನದಲ್ಲಿ ತನ್ನ ದೋಷಪರಿಹಾರಕ್ಕಾಗಿ ಬಲಿಯನ್ನು ಅರ್ಪಿಸಬೇಕು; ಇದು ಸರ್ವೇಶ್ವರನಾದ ದೇವರ ನುಡಿ.೨೮ [28]“ಯಾಜಕರಿಗೆ ಇರುವ ಒಂದು ಸೊತ್ತು ಎಂದರೆ ನಾನೇ. ಇಸ್ರಯೇಲಿನಲ್ಲಿ ಅವರಿಗೆ ಯಾವ ಆಸ್ತಿಯನ್ನೂ ಕೊಡಬಾರದು. ನಾನೇ ಅವರಿಗೆ ಆಸ್ತಿ.೨೯ [29]ಅವರು ಧಾನ್ಯ ನೈವೇದ್ಯವನ್ನೂ ದೋಷಪರಿಹಾರಕ ಬಲಿದ್ರವ್ಯವನ್ನೂ ಪ್ರಾಯಶ್ಚಿತ್ತ ಬಲಿದ್ರವ್ಯವನ್ನೂ ಅನುಭವಿಸಲಿ. ಸರ್ವೇಶ್ವರನದಾಗಿಯೇ ಇರಲೆಂದು ಇಸ್ರಯೇಲರು ಹರಕೆಮಾಡಿಕೊಡುವುದೆಲ್ಲವೂ ಅವರಿಗೆ ಸಲ್ಲಬೇಕು.೩೦ [30]ಎಲ್ಲ ಪ್ರಥಮಫಲಗಳಲ್ಲಿ ಉತ್ಕೃಷ್ಟವಾದದ್ದು ಹಾಗು ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸುವ ಎಲ್ಲ ಪದಾರ್ಥಗಳು ಅವರದಾಗಬೇಕು. ನಿಮ್ಮ ಮನೆ ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ಯಾಜಕರಿಗೆ ಕೊಡತಕ್ಕದ್ದು.೩೧ [31]ಯಾಜಕರು ತಾನಾಗಿ ಸತ್ತುಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲಾದ ಪಕ್ಷಿಯನ್ನಾಗಲಿ, ಪ್ರಾಣಿಯನ್ನಾಗಲಿ ತಿನ್ನಬಾರದು.”Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಯೆಜೆಕಿಯೇಲನ ೪೪ 00:00:00 00:00:00 0.5x 2.0x https://beblia.bible:81/BibleAudio/kannadakncl/ezekiel/044.mp3 48 44