× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಯೆಜೆಕಿಯೇಲನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೪೭ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩1 1 1 ಕನ್ನಡ ಬೈಬಲ್ (KNCL) 2016 ಯೆಜೆಕಿಯೇಲನ ೪೭ ಟಿಪ್ಪಣಿಗಳನ್ನು ಉಳಿಸಿ ೧ [1]ಆಮೇಲೆ ಆ ಪುರುಷ ನನ್ನನ್ನು ದೇವಸ್ಥಾನದ ಬಾಗಿಲಿಗೆ ಪುನಃ ಕರೆದುತಂದನು; ಇಗೋ, ದೇವಸ್ಥಾನದ ಹೊಸ್ತಿಲ ಕೆಳಗಿನಿಂದ ನೀರು ಹೊರಟು ಪೂರ್ವದಕಡೆಗೆ ಹರಿಯುತ್ತಿತ್ತು. (ದೇವಸ್ಥಾನ ಪೂರ್ವಾಭಿಮುಖವಾಗಿತ್ತು). ಆ ನೀರು ದೇವಸ್ಥಾನದ ಬಲಗಡೆ ಕೆಳಗಿನಿಂದ ಹೊರಟು ಬಲಿಪೀಠದ ದಕ್ಷಿಣದಲ್ಲಿ ಹರಿಯುತ್ತಿತ್ತು.೨ [2]ಆಗ ಅವನು ನನ್ನನ್ನು ಉತ್ತರ ಹೆಬ್ಬಾಗಿಲಿನಿಂದ ದೇವಾಲಯದ ಹೊರಗಿನ ಮಾರ್ಗವಾಗಿ ಸುತ್ತಿಸಿಕೊಂಡು ಪೂರ್ವದ ಹೆಬ್ಬಾಗಿಲಿಗೆ ಕರೆದುತಂದನು. ಅಲ್ಲಿ ನೋಡಲು ಅದರ ಬಲಗಡೆ ಮೆಲ್ಲಮೆಲ್ಲನೆ ಹರಿಯುವ ನೀರು ಕಾಣಿಸಿತು.೩ [3]ಆ ಪುರುಷನು ಕೈಯಲ್ಲಿ ಹುರಿಯನ್ನು ಹಿಡಿದುಕೊಂಡು ಪೂರ್ವದಂಡೆಗೆ ಮುಂದುವರಿದು ಐನೂರು ಮೀಟರ್ ಅಳೆದು, ನನ್ನನ್ನು ನೀರಿನ ಆಚೆಗೆ ದಾಟಿಸುವಾಗ ಆ ನೀರು ಹೆಜ್ಜೆ ಮುಳುಗುವಷ್ಟಿತ್ತು.೪ [4]ಅವನು ಪುನಃ ಐನೂರು ಮೀಟರ್ ಅಳೆದು ದಾಟಿಸುವಾಗ ಆ ನೀರು ಮೊಣಕಾಲಿನವರೆಗೆ ಇತ್ತು. ಅವನು ಮತ್ತೆ ಐನೂರು ಮೀಟರ್ ಅಳೆದು ನನ್ನನ್ನು ನೀರಿನ ಆಚೆ ದಾಟಿಸುವಾಗ ಆ ನೀರು ಸೊಂಟದವರೆಗೆ ಇತ್ತು.೫ [5]ಅವನು ಮತ್ತೆ ಅಳೆದು ಐನೂರು ಮೀಟರ್ ಅಳೆದಾಗ ಅದು ನನ್ನಿಂದ ದಾಟಲಾಗದ ತೊರೆಯಾಗಿತ್ತು; ನೀರು ಏರಿ ಈಜಾಡುವಷ್ಟು ಪ್ರವಾಹವಾಗಿತ್ತು. ದಾಟಲಾಗದ ತೊರೆಯಾಗಿತ್ತು.೬ [6]ಆಗ ಅವನು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ?” ಎಂದು ಹೇಳಿ ನನ್ನನ್ನು ತೊರೆಯ ದಡಕ್ಕೆ ಹತ್ತಿಸಿ ಹಿಂದಿರುಗಿಸಿದನು.೭ [7]ನಾನು ಹಿಂದಿರುಗಲು, ಇಗೋ, ತೊರೆಯ ಎರಡು ದಡಗಳಲ್ಲಿಯೂ ಅನೇಕಾನೇಕ ವೃಕ್ಷಗಳು ಕಾಣಿಸಿದವು.೮ [8]ಆಗ ಅವನು ನನಗೆ ಹೀಗೆ ಹೇಳಿದನು: “ಈ ಪ್ರವಾಹ ಪೂರ್ವಪ್ರಾಂತ್ಯಕ್ಕೆ ಹೊರಟು ಅರಬಾ ಎಂಬ ಕಣಿವೆಗೆ ಇಳಿದು ಲವಣ ಸಮುದ್ರದ ಕಡೆಗೆ ಹರಿಯುವುದು; ದೇವಸ್ಥಾನದಿಂದ ಹೊರಟ ಪ್ರವಾಹವು ಲವಣ ಸಮುದ್ರಕ್ಕೆ ಸೇರಲು ಅದರ ನೀರು ಸಿಹಿಯಾಗುವುದು.೯ [9]ಈ ತೊರೆ ಎಲ್ಲೆಲ್ಲಿ ಹರಿಯುತ್ತದೋ ಅಲ್ಲಲ್ಲಿ ಗುಂಪುಗುಂಪಾಗಿ ಚಲಿಸುವ ಸಕಲವಿಧ ಜಲಜಂತುಗಳು ಬದುಕಿ ಬಾಳುವುವು; ಮೀನುಗಳು ತಂಡೋಪ ತಂಡವಾಗಿರುವುವು. ಈ ನೀರು ಸಮುದ್ರಕ್ಕೆ ಬೀಳಲು ಆ ನೀರೂ ಸಿಹಿಯಾಗುವುದು; ಈ ತೊರೆ ಎಲ್ಲೆಲ್ಲಿ ಹರಿದರೂ ಅಲ್ಲಲ್ಲಿ ಜೀವವುಂಟಾಗುವುದು.೧೦ [10]ಆಗ ಆ ಸಮುದ್ರದ ತೀರದಲ್ಲಿ ಬೆಸ್ತರು ನಿಂತಿರುವರು; ಏನ್ಗೆದಿಯಿಂದ ಏನ್ಎಗ್ಲಯಿಮಿನವರೆಗೆ ದಡವೆಲ್ಲಾ ಬಲೆಹಾಸುವ ಸ್ಥಳವಾಗುವುದು; ಬಗೆಬಗೆಯ ಮೀನುಗಳು ಮಹಾಸಾಗರದ ಮೀನುಗಳಂತೆ ಅವರಿಗೆ ರಾಶಿರಾಶಿಯಾಗಿ ಸಿಕ್ಕುವುವು.೧೧ [11]ಆದರೆ ಅದರ ಸುತ್ತಣ ಜವುಗುನೆಲವೂ ಸವುಳುಹೊಂಡಗಳೂ ಸಿಹಿಯಾಗುವುದಿಲ್ಲ, ಅವು ಉಪ್ಪಿನ ಗಣಿಯಾಗುವುವು.೧೨ [12]ತೊರೆಯ ಎರಡು ದಡಗಳಲ್ಲಿಯೂ ಸಕಲ ಫಲವೃಕ್ಷಗಳು ಬೆಳೆಯುವುವು. ಅವುಗಳ ಎಲೆ ಬಾಡದು, ಹಣ್ಣು ತೀರದು. ತೊರೆಯ ನೀರು ಪವಿತ್ರಾಲಯದೊಳಗಿಂದ ಹೊರಟುಬರುವ ಕಾರಣ ಅವು ತಿಂಗಳು ತಿಂಗಳಲ್ಲಿಯೂ ಹೊಸ ಹೊಸ ಫಲವನ್ನು ಕೊಡುತ್ತಲಿರುವುವು; ಅವುಗಳ ಹಣ್ಣು ಆಹಾರಕ್ಕೂ, ಸೊಪ್ಪು ಔಷಧಕ್ಕೂ ಅನುಕೂಲಿಸುವುವು.”೧೩ [13]ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನೀವು ಇಸ್ರಯೇಲಿನ ಹನ್ನೆರಡು ಕುಲಗಳಿಗೆ ನಾಡನ್ನು ಬಾಧ್ಯವಾಗಿ ಹಂಚಿಕೊಡುವಾಗ ಮುಂದಿನ ಮೇರೆಗಳನ್ನು ಅನುಸರಿಸಬೇಕು. ಜೋಸೆಫಿಗೆ ಎರಡು ಪಾಲು ಸೇರಲಿ.೧೪ [14]ನಾನು ನಿಮ್ಮ ಪಿತೃಗಳಿಗೆ ಪ್ರಮಾಣವಾಗಿ ವಾಗ್ದಾನಮಾಡಿದ ಈ ನಾಡನ್ನು ನೀವೆಲ್ಲರೂ ಸರಿಸಮಾನವಾಗಿ ಅನುಭವಿಸಿರಿ; ಇದು ನಿಮಗೆ ಸೊತ್ತಾಗಿಯೇ ಇರುವುದು.೧೫ [15]“ನಿಮ್ಮ ನಾಡಿನ ಮೇರೆಗಳು ಹೀಗಿರಬೇಕು: ಉತ್ತರದ ಮೇಲೆ ದೊಡ್ಡ ಸಮುದ್ರದಿಂದ ಆರಂಭವಾಗಿ ಚೆದಾದಿನ ದಾರಿಯಲ್ಲಿನ೧೬ [16]ಹೆತ್ಲೋನಿನ ಮಾರ್ಗವಾಗಿ ಬಂದು ಹಮಾತ್, ಬೇರೋತ, ದಮಸ್ಕದ ಎಲ್ಲೆಗೂ ಹಮಾತಿನ ಎಲ್ಲೆಗೂ ನಡುವಣ ಸಿಬ್ರಯಿಮ್ ಎಂಬ ಊರುಗಳ ಮೇಲೆ ಹವ್ರಾನಿನ ಸರಹದ್ದಿಗೆ ಹತ್ತಿರವಾದ ಹಾಚೇರ್ ಹತ್ತೀಕೋನಿನ ಬಳಿಯಲ್ಲಿ ಮುಗಿಯಬೇಕು.೧೭ [17]ಹೀಗೆ ಉತ್ತರದ ಮೇರೆಯು ಸಮುದ್ರದಿಂದ, ದಮಸ್ಕದ ಸರಹದ್ದಿನಲ್ಲಿರುವ ಹಚರ್ ಐನೋನಿನವರೆಗೆ ಹಬ್ಬುವುದು; ಅದರ ಉತ್ತರದಲ್ಲಿ ಹಮಾತಿನ ಪ್ರಾಂತ್ಯವಿರುವುದು. ಇದು ಉತ್ತರ ಮೇರೆ.೧೮ [18]“ಪೂರ್ವದಲ್ಲಿ ಹವ್ರಾನ್, ದಮಸ್ಕ, ಗಿಲ್ಯಾದ್ ಇವುಗಳಿಗೂ ಇಸ್ರಯೇಲ್ ನಾಡಿಗೂ ಮಧ್ಯೆ ಜೋರ್ಡನ್ ಹೊಳೆ ಎಲ್ಲೆಯಾಗಿರುವುದು; ಉತ್ತರದ ಮೇರೆಯಿಂದ ಪೂರ್ವದ ಸಮುದ್ರದವರೆಗೆ ನೀವು ಗುರುತುಹಾಕಿಕೊಳ್ಳಬೇಕು. ಇದು ಪೂರ್ವದಿಕ್ಕಿನ ಮೇರೆ.೧೯ [19]“ದಕ್ಷಿಣದ ಮೇರೆ ತಾಮಾರಿನಿಂದ ಹೊರಟು ಮೆರೀಬೋತ್ಕಾದೇಶಿನ ಹಳ್ಳದ ಮೇಲೆ, ಈಜಿಪ್ಟಿನ ಮುಂದಿರುವ, ತೊರೆಯ ಮಾರ್ಗವಾಗಿ ದೊಡ್ಡ ಸಮುದ್ರಕ್ಕೆ ಮುಟ್ಟಬೇಕು. ಇದು ದಕ್ಷಿಣದ ಮೇರೆ.೨೦ [20]“ಪಶ್ಚಿಮದಲ್ಲಿ ಉತ್ತರದ ಮೇರೆಯಿಂದ ಹಮಾತಿನ ದಾರಿಗೆ ಎದುರಿನ ಕರಾವಳಿಯ ತನಕ ದೊಡ್ಡ ಸಮುದ್ರವು ಎಲ್ಲೆಯಾಗಿರುವುದು. ಇದು ಪಶ್ಚಿಮದ ಮೇರೆ.೨೧ [21]“ಈ ನಾಡನ್ನು, ನೀವು ಇಸ್ರಯೇಲಿನ ಕುಲಕುಲಕ್ಕೂ ಹಂಚಿಕೊಳ್ಳಬೇಕು.೨೨ [22]ನಿಮಗೂ ನಿಮ್ಮ ಮಧ್ಯೆ ಪ್ರವಾಸಮಾಡುತ್ತಾ ಮಕ್ಕಳನ್ನು ಪಡೆದಿರುವ ವಿದೇಶಿಗಳಿಗೂ ನಾಡನ್ನು ಬಾಧ್ಯವಾಗಿ ಹಂಚಬೇಕು; ಅವರು ಇಸ್ರಯೇಲರ ಮಧ್ಯೆ ನಿಮಗೆ ಸ್ವದೇಶಿಗಳಂತೆಯೇ ಇರತಕ್ಕದ್ದು; ಇಸ್ರಯೇಲಿನ ಕುಲಗಳೊಳಗೆ ನಿಮ್ಮೊಂದಿಗೆ ಅವರಿಗೆ ಸೊತ್ತಿರಲಿ.೨೩ [23]ಯಾವ ಕುಲದಲ್ಲಿ ವಿದೇಶಿಯು ನೆಲೆಯಾಗಿರುತ್ತಾನೋ ಅಲ್ಲಿ ಅವನಿಗೆ ಸೊತ್ತನ್ನು ಕೊಡಬೇಕು; ಇದು ಸರ್ವೇಶ್ವರನಾದ ದೇವರ ನುಡಿ.”Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಯೆಜೆಕಿಯೇಲನ ೪೭ 00:00:00 00:00:00 0.5x 2.0x https://beblia.bible:81/BibleAudio/kannadakncl/ezekiel/047.mp3 48 47