× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೆಜೆಕಿಯೇಲನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೫ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭1 1 1 ಕನ್ನಡ ಬೈಬಲ್ (KNCL) 2016 ಯೆಜೆಕಿಯೇಲನ ೫ ಟಿಪ್ಪಣಿಗಳನ್ನು ಉಳಿಸಿ ೧ [1]“ನರಪುತ್ರನೇ, ಹರಿತವಾದ ಖಡ್ಗವನ್ನು ತೆಗೆದುಕೊಂಡು, ಕ್ಷೌರಿಕನ ಕತ್ತಿಯನ್ನಾಗಿ ಉಪಯೋಗಿಸಿ ನಿನ್ನ ತಲೆಯನ್ನೂ ಗಡ್ಡವನ್ನೂ ಬೋಳಿಸಿಬಿಡು; ತಕ್ಕಡಿಯನ್ನು ತಂದು ತೂಗಿ ಆ ಕೂದಲನ್ನು ಸರಿಯಾಗಿ ಮೂರು ಭಾಗಮಾಡು.೨ [2]ಮುತ್ತಿಗೆಯ ದಿನಗಳು ಮುಗಿದ ಕೂಡಲೆ ಕೂದಲಿನ ಒಂದು ಭಾಗವನ್ನು ಪಟ್ಟಣದ ಮಧ್ಯೆ ಬೆಂಕಿಯಲ್ಲಿ ಸುಡು; ಇನ್ನೊಂದು ಭಾಗವನ್ನು ತೆಗೆದುಕೊಂಡು ಪಟ್ಟಣದ ಸುತ್ತಲು ಖಡ್ಗದಿಂದ ಕಡಿ; ಮತ್ತೊಂದು ಭಾಗವನ್ನು ಗಾಳಿಗೆ ತೂರಿಬಿಡು; (ಈ ಪ್ರಕಾರ ನಾನು ನನ್ನ ಜನರ ಹಿಂದೆ ಕತ್ತಿಯನ್ನು ಬೀಸುವೆನು).೩ [3]ಈ ಕಡೆಯ ಭಾಗದಲ್ಲಿ ಉಳಿಸಿಕೊಂಡ ಕೆಲವು ಕೂದಲನ್ನು ನಿನ್ನ ಮೇಲಂಗಿಯ ಅಂಚಿನಲ್ಲಿ ಕಟ್ಟು;೪ [4]ಆಮೇಲೆ ಇವುಗಳಲ್ಲಿ ಕೆಲವನ್ನು ಆರಿಸಿ ಬೆಂಕಿಯಲ್ಲಿ ಹಾಕಿ ಸುಡು; ಅವುಗಳಿಂದ ಬೆಂಕಿ ಹೊರಟು ಇಸ್ರಯೇಲ್ ವಂಶವನ್ನೆಲ್ಲಾ ವ್ಯಾಪಿಸುವುದು.”೫ [5]ಸರ್ವೇಶ್ವರನಾದ ದೇವರು ಹೀಗೆಂದರು: “ನಾನಾ ದೇಶಗಳ ನಡುವೆ, ನಾನಾ ಜನಾಂಗಗಳ ಮಧ್ಯೆ ನಾನು ಸ್ಥಾಪಿಸಿದ ಜೆರುಸಲೇಮ್ ಪಟ್ಟಣ ಈ ಮನೆ.೬ [6]ಅದು ನನ್ನ ನಿಯಮನಿಷ್ಠೆಗಳಿಗೆ ಒಳಪಡದೆ ಇತರ ಜನಾಂಗಗಳಿಗಿಂತಲೂ ಸುತ್ತಲಿನ ದೇಶಗಳಿಗಿಂತಲೂ ಹೆಚ್ಚು ಅಧರ್ಮವನ್ನು ನಡೆಸಿದೆ; ಅದರ ನಿವಾಸಿಗಳು ನನ್ನ ನಿಯಮವನ್ನು ಅನುಸರಿಸದೆ ನನ್ನ ವಿಧಿಗಳನ್ನು ನಿರಾಕರಿಸಿದ್ದಾರೆ.೭ [7]ಹೀಗಿರಲು ಸರ್ವೇಶ್ವರ ಸ್ವಾಮಿಯಾದ ನಾನು ಹೇಳುವುದಿದು: ‘ನೀವು ನನ್ನ ನಿಯಮಗಳನ್ನು ಅನುಸರಿಸದೆ, ನನ್ನ ವಿಧಿಗಳನ್ನು ಕೈಗೊಳ್ಳದೆ, ನಿಮ್ಮ ಸುತ್ತಲಿನ ಜನಾಂಗಗಳ ಧರ್ಮವಿಧಿಗಳನ್ನು ಆಚರಿಸಿ, ಆ ಜನಾಂಗಗಳಿಗಿಂತ ಹೆಚ್ಚು ದಂಗೆಕೋರರಾಗಿ ವರ್ತಿಸಿದ್ದೀರಿ.೮ [8]ಆದುದರಿಂದ ಜೆರುಸಲೇಮೇ, ಇಗೋ, ನಾನೇ ನಿನಗೆ ವಿರುದ್ಧವಾಗಿದ್ದೇನೆ. ಜನಾಂಗಗಳ ಕಣ್ಣೆದುರಿಗೆ ನಿನ್ನ ಜನರನ್ನು ದಂಡಿಸುವೆನು; ಇದು ಸರ್ವೇಶ್ವರನಾದ ನನ್ನ ನುಡಿ.೯ [9]ನೀನು ಬಹಳ ಅಸಹ್ಯಕೃತ್ಯಗಳಲ್ಲಿ ತೊಡಗಿದ್ದರಿಂದ ನಾನು ಈವರೆಗೂ ಇನ್ನು ಮುಂದಕ್ಕೂ ಮಾಡದಂಥ ದಂಡನೆಯನ್ನು ಈಗ ನಿನಗೆ ಮಾಡುವೆನು.೧೦ [10]ನಿನ್ನಲ್ಲಿ ತಂದೆಗಳು ಮಕ್ಕಳನ್ನು, ಮಕ್ಕಳು ತಂದೆಗಳನ್ನು ತಿನ್ನುವರು; ನಾನು ನಿನ್ನನ್ನು ದಂಡಿಸಿ ನಿನ್ನಲ್ಲಿ ಉಳಿದ ಸಮಸ್ತರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು.’೧೧ [11]“ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ ಅಸಹ್ಯವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ಸಹಿಸೆನು, ಕಟಾಕ್ಷಿಸೆನು, ಕ್ಷಮಿಸೆನು.೧೨ [12]ನಿನ್ನಲ್ಲಿನ ಮೂರನೆಯ ಒಂದು ಭಾಗದ ಜನರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲೆ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲು ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.೧೩ [13]“ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಕಾರಿ ಶಾಂತನಾಗುವೆನು; ಆಗ್ರಹದಿಂದ ಮಾತಾಡಿದವನು ಸರ್ವೇಶ್ವರನಾದ ನಾನೇ ಎಂಬುದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವುದು.೧೪ [14]ಹಾದುಹೋಗುವವರೆಲ್ಲರ ಕಣ್ಣೆದುರಿಗೆ ನಾನು ನಿನ್ನನ್ನು ಹಾಳುಮಾಡಿ ಸುತ್ತಲಿನ ಜನಾಂಗಗಳ ನಿಂದೆಗೆ ಗುರಿಮಾಡುವೆನು.೧೫ [15]“ನಾನು ಕೋಪದಿಂದ, ರೋಷದಿಂದ ಹಾಗು ತೀವ್ರ ಖಂಡನೆಯಿಂದ ನಿನಗೆ ಮಾಡುವ ದಂಡನೆಗಳು ಸುತ್ತಲಿನ ಜನಾಂಗಗಳ ದೂಷಣೆಗೂ ಪರಿಹಾಸ್ಯಗಳಿಗೂ ಬೆರಗು ಬುದ್ಧಿವಾದಗಳಿಗೂ ಆಸ್ಪದವಾಗುವುವು; ಇದು ಸರ್ವೇಶ್ವರನಾದ ನನ್ನ ನುಡಿ.೧೬ [16]ಆಗ ನಾನು ನಿನ್ನನ್ನು ಹಾಳುಮಾಡಲು ಕ್ಷಾಮವೆಂಬ ವಿನಾಶಕರವಾದ ತೀಕ್ಷ್ಣಬಾಣಗಳನ್ನು ನಿನ್ನ ಮೇಲೆ ಬಿಡುವನು. ನಿನ್ನನ್ನು ಬರದಿಂದ ಬಹಳವಾಗಿ ಬಾಧಿಸಿ ನಿನ್ನ ಆಹಾರ ಸರಬರಾಜನ್ನು ನಿಲ್ಲಿಸುವೆನು.೧೭ [17]ನಾನು ಕಳುಹಿಸುವ ಕ್ಷಾಮದಿಂದ, ದುಷ್ಟಮೃಗಗಳಿಂದ ನಿನಗೆ ಪುತ್ರಶೋಕ ಪ್ರಾಪ್ತಿಯಾಗುವುದು; ವ್ಯಾಧಿಯೂ ರಕ್ತಪ್ರವಾಹವೂ ನಿನ್ನನ್ನು ಪೀಡಿಸುವುದು; ನಿನ್ನನ್ನು ಖಡ್ಗಕ್ಕೆ ತುತ್ತುಮಾಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಯೆಜೆಕಿಯೇಲನ ೫ 00:00:00 00:00:00 0.5x 2.0x https://beblia.bible:81/BibleAudio/kannadakncl/ezekiel/005.mp3 48 5