× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಯೆಜೆಕಿಯೇಲನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೭ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭1 1 1 ಕನ್ನಡ ಬೈಬಲ್ (KNCL) 2016 ಯೆಜೆಕಿಯೇಲನ ೭ ಟಿಪ್ಪಣಿಗಳನ್ನು ಉಳಿಸಿ ೧ [1]ಇದಲ್ಲದೆ ಸರ್ವೇಶ್ವರ ಅನುಗ್ರಹಿಸಿದ ಈ ವಾಣಿ ನನಗೆ ಕೇಳಿಸಿತು:೨ [2]“ನರಪುತ್ರನೇ, ಸರ್ವೇಶ್ವರನಾದ ದೇವರು ಇಸ್ರಯೇಲ್ ನಾಡಿಗೆ ಹೀಗೆ ನುಡಿಯುತ್ತಾರೆ: ‘ಪ್ರಳಯ, ಪೂರ್ಣಪ್ರಳಯ ನಾಡಿನ ಚತುರ್ದಿಕ್ಕಿನಲ್ಲೂ ಸಂಭವಿಸಿದೆ.’೩ [3]“ಈಗಲೇ ನಿನಗೆ ಪ್ರಳಯ ಬಂದುಬಿಟ್ಟಿತು; ನಾನು ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡಿ, ನಿನ್ನ ನಡತೆಗೆ ತಕ್ಕಂತೆ ನ್ಯಾಯತೀರಿಸಿ, ನಿನ್ನ ಸಮಸ್ತ ಅಸಹ್ಯಕಾರ್ಯಗಳ ಫಲವನ್ನು ನಿನಗೆ ಉಣ್ಣಿಸುವೆನು.೪ [4]ನಿನ್ನನ್ನು ಕಟಾಕ್ಷಿಸೆನು, ಉಳಿಸೆನು; ನಿನ್ನ ದುರ್ಮಾರ್ಗದ ಫಲವನ್ನು ನಿನಗೆ ತಿನ್ನಿಸುವೆನು; ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವುವು; ಆಗ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು.”೫ [5]ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಅಯ್ಯೋ, ಕೇಡು, ಎಂದೂ ಕಾಣದ ಕೇಡು, ಇಗೋ ಬಂದಿತು;೬ [6]ಪ್ರಳಯ ಬಂದಿತು, ಪೂರ್ಣಪ್ರಳಯ ಬಂದಿತು, ನಿನ್ನನ್ನು ಚಚ್ಚುವುದಕ್ಕೆ ಚಚ್ಚರಗೊಂಡಿದೆ, ಇಗೋ ಬಂದೇ ಬಂತು;೭ [7]ದೇಶನಿವಾಸಿಯೇ, ನಿನ್ನ ಗತಿ ಮುಗಿಯಿತು, ಸಮಯ ಬಂದಿತು, ದಿನ ಸಮೀಪಿಸಿತು; ಬೆಟ್ಟಗಳ ಮೇಲೆ ಕೇಳಿಸುವ ಧ್ವನಿ ಉತ್ಸಾಹಧ್ವನಿಯಲ್ಲ, ಅದು ಬರೀ ಗೋಳೇ!೮ [8]“ಇನ್ನು ಸ್ವಲ್ಪಕಾಲದೊಳಗೆ ನಾನು ನಿನ್ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸುವೆನು, ನನ್ನ ಕೋಪವನ್ನು ತೀರಿಸಿಕೊಳ್ಳುವೆನು; ನಿನ್ನ ನಡತೆಗೆ ತಕ್ಕ ದಂಡನೆಯನ್ನು ವಿಧಿಸಿ, ನಿನ್ನ ಅಸಹ್ಯಕಾರ್ಯಗಳ ಫಲವನ್ನೆಲ್ಲಾ ನಿನಗೆ ತಿನ್ನಿಸುವೆನು.೯ [9]ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಬರಮಾಡುವೆನು. ಆಗ ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವುವು; ಸರ್ವೇಶ್ವರನಾದ ನಾನು ದಂಡಿಸುವವನು ಎಂಬುದು ನಿನಗೆ ಚೆನ್ನಾಗಿ ಗೊತ್ತಾಗುವುದು.೧೦ [10]“ಇಗೋ, ದಂಡನೆಯ ದಿನ ಬಂದೆಬಿಟ್ಟಿತು; ನಿನಗೆ ದುರ್ಗತಿ ಅಂಕುರಿಸಿದೆ, ಕೋಲು ಹೂಬಿಟ್ಟಿದೆ, ಹೆಮ್ಮೆ ಚಿಗುರಿದೆ;೧೧ [11]ಹಿಂಸೆ ಬೆಳೆದು ಬೆಳೆದು ಕೆಡುಕಿನ ಕೋಲಾಗಿದೆ; ನಿನ್ನವರಲ್ಲಿ ಯಾರೂ ಉಳಿಯರು. ಆ ಜನಸಮೂಹದಲ್ಲೂ ಅವರ ಆಸ್ತಿಯಲ್ಲೂ ಶೇಷವೇನೂ ಇರದು; ಅವರಲ್ಲಿ ಯಾವ ಶ್ರೇಷ್ಠತೆಯೂ ನಿಲ್ಲದು.೧೨ [12]“ಸಮಯ ಬಂದಿದೆ, ದಿನ ಹತ್ತಿರವಾಗಿದೆ; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿ ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.೧೩ [13]ಮಾರಿದವನು ಎಷ್ಟು ವರ್ಷ ಬದುಕಿದರೂ ಮಾರಿದ ಸೊತ್ತು ಅವನ ವಶಕ್ಕೆ ತಿರುಗಿಬಾರದು; ಉಂಟಾದ ದಿವ್ಯದರ್ಶನ ಸಮಾಜದವರಿಗೆಲ್ಲಾ ಸಂಬಂಧಿಸಿದೆ, ಯಾರೂ ಹಿಂದಿರುಗರು, ಯಾರೂ ತಮ್ಮ ಅಧರ್ಮದಿಂದ ತಮ್ಮ ಜೀವವನ್ನು ಉಳಿಸಿಕೊಳ್ಳರು;೧೪ [14]ಅವರು ಕೊಂಬನ್ನೂದಿ ಸರ್ವಸನ್ನಾಹ ಮಾಡಿದರೂ ಯಾರು ಯುದ್ಧಕ್ಕೆ ಹೊರಡರು; ನನ್ನ ರೋಷಾಗ್ನಿ ಆ ಸಮಾಜದವರೆಲ್ಲರ ಮೇಲೆ ಹತ್ತಿದೆ.೧೫ [15]“ಊರ ಹೊರಗೆ ಖಡ್ಗಕ್ಕೆ, ಊರೊಳಗೆ ವ್ಯಾಧಿ ಕ್ಷಾಮಗಳಿಗೆ ತುತ್ತಾಗುವರು; ಹೊರಗಿರುವವರು ಖಡ್ಗದಿಂದ ಸಾಯುವರು.೧೬ [16]ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು, ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಿಡುತ್ತಿರುವರು.೧೭ [17]ಎಲ್ಲರ ಕೈಗಳು ಜೋಲು ಬಿದ್ದಿರುವುವು; ಎಲ್ಲರ ಮೊಣಕಾಲುಗಳು ನೀರಿನಂತೆ ಅದರುವುವು.೧೮ [18]ಅವರು ಗೋಣಿತಟ್ಟನ್ನು ಸುತ್ತಿಕೊಳ್ಳುವರು, ದಿಗಿಲು ಅವರನ್ನು ಆವರಿಸಿಬಿಡುವುದು; ಎಲ್ಲರ ಮುಖದಲ್ಲೂ ನಾಚಿಕೆ ತುಂಬಿರುವುದು, ಎಲ್ಲರು ತಲೆಬೋಳಿಸಿಕೊಂಡು ಇರುವರು.೧೯ [19]ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರ ಅಶುದ್ಧ ಪದಾರ್ಥದಂತಿರುವುದು; ಸರ್ವೇಶ್ವರ ರೋಷವನ್ನು ತೀರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರ ಅವರನ್ನು ರಕ್ಷಿಸಲಾರದು; ಅವರ ಇಷ್ಟಾರ್ಥ ನೆರವೇರದು, ಅವರ ಹೊಟ್ಟೆ ತುಂಬದು; ಏಕೆಂದರೆ ಅವರ ಆಸ್ತಿ ಅವರಿಗೆ ಪಾಪಕ್ಕೆ ಕಾರಣವಾಗಿತ್ತು.೨೦ [20]“ಅವರ ಆಭರಣಗಳ ಚಂದವು ಅವರಿಗೆ ಗರ್ವಕ್ಕೆ ಆಸ್ಪದವಾಯಿತು. ಇದಲ್ಲದೆ ಹೇಯವೂ ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು.೨೧ [21]ಆದಕಾರಣ ಅದನ್ನು ಅವರಿಗೆ ಅಶುದ್ಧ ಪದಾರ್ಥವನ್ನಾಗಿ ಮಾಡುವೆನು. ಅನ್ಯರ ಕೈಯಿಂದ ಕೊಳ್ಳೆ ಹೊಡೆಯಿಸಿ ಲೋಕಕುಖ್ಯಾತ ದುಷ್ಟರಿಂದ ಸೂರೆಮಾಡಿಸುವೆನು; ಅವರು ಅದನ್ನು ಹೊಲೆಗೊಳಿಸುವರು.೨೨ [22]ನಾನು ಅವರ ಕಡೆಯಿಂದ ನನ್ನ ಮುಖವನ್ನು ತಿರುಗಿಸಿಕೊಳ್ಳುವೆನು; ಅವರು ನನ್ನ ಪ್ರಿಯ ಮಂದಿರವನ್ನು ಅಪವಿತ್ರಗೊಳಿಸುವರು. ಕಳ್ಳರು ಅದರಲ್ಲಿ ನುಗ್ಗಿ ಅದನ್ನು ಹೊಲೆಗೆಡಿಸುವರು.೨೩ [23]“ಒಂದು ಸರಪಣಿಯನ್ನು ಮಾಡು; ಏಕೆಂದರೆ ನಾಡು ನರಹತ್ಯಪೂರಿತವಾಗಿದೆ. ಪಟ್ಟಣವು ಹಿಂಸಾಕೃತ್ಯಗಳಿಂದ ತುಂಬಿಹೋಗಿದೆ.೨೪ [24]ಹೀಗಿರಲು ನಾನು ಅತಿ ದುಷ್ಟಜನಾಂಗಗಳನ್ನು ಬರಮಾಡುವೆನು; ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವುವು; ನಾನು ಬಲಿಷ್ಠರ ಸೊಕ್ಕನ್ನು ಅಡಗಿಸುವೆನು, ಅವರ ಪವಿತ್ರಸ್ಥಾನಗಳು ಹೊಲೆಗೆಡುವುವು;೨೫ [25]ಸಂಕಟ ಸಂಭವಿಸುವುದು; ಅಲ್ಪಸ್ವಲ್ಪ ಸಮಾಧಾನವನ್ನು ಹುಡುಕಿದರೂ ಸಿಕ್ಕದು.೨೬ [26]ಉಪದ್ರವದ ಮೇಲೆ ಉಪದ್ರವ, ಸುದ್ದಿಯ ಮೇಲೆ ಸುದ್ದಿ ಹರಡುವುವು; ‘ದಿವ್ಯದರ್ಶನವಾಯಿತೆ’ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶ ಅಡಗಿಹೋಗುವುದು, ಹಿರಿಯರಲ್ಲಿ ಸಲಹೆ ಸಮಾಲೋಚನೆ ಇಲ್ಲವಾಗುವುದು.೨೭ [27]ರಾಜನು ದುಃಖಿಸುವನು, ದಿಗಿಲು ಒಡೆಯನನ್ನು ಮುಸುಕುವುದು, ಜನಸಾಮಾನ್ಯರ ಕೈಗಳು ತತ್ತರಿಸುವುವು; ನಾನು ಅವರ ದುರ್ನಡತೆಗೆ ತಕ್ಕ ಪ್ರತೀಕಾರವನ್ನು ಮಾಡಿ ಅವರ ದುಷ್ಕರ್ಮಗಳಿಗೆ ಸರಿಯಾದ ದಂಡನೆಯನ್ನು ವಿಧಿಸುವೆನು; ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಯೆಜೆಕಿಯೇಲನ ೭ 00:00:00 00:00:00 0.5x 2.0x https://beblia.bible:81/BibleAudio/kannadakncl/ezekiel/007.mp3 48 7