× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೆಜೆಕಿಯೇಲನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೮ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮1 1 1 ಕನ್ನಡ ಬೈಬಲ್ (KNCL) 2016 ಯೆಜೆಕಿಯೇಲನ ೮ ಟಿಪ್ಪಣಿಗಳನ್ನು ಉಳಿಸಿ ೧ [1]ಅದು ಆರನೆಯ ವರ್ಷದ ಆರನೆಯ ತಿಂಗಳಿನ ಐದನೆಯ ದಿನ. ನಾನೂ ಯೆಹೂದದ ಹಿರಿಯರೂ ನನ್ನ ಮನೆಯೊಳಗೆ ಎದುರುಬದುರಾಗಿ ಕುಳಿತಿದ್ದೆವು. ಸರ್ವೇಶ್ವರನಾದ ದೇವರ ಹಸ್ತಸ್ಪರ್ಶದಿಂದ ನಾನು ಪರವಶನಾದೆ.೨ [2]ಇಗೋ, ನಾನು ನೋಡುತ್ತಿದ್ದಂತೆ ಬೆಂಕಿ ಉರಿಯುತ್ತದೋ ಎಂಬಂತೆ ಮನುಷ್ಯಾಕೃತಿಯೊಂದು ನನಗೆ ಕಾಣಿಸಿತು; ಸೊಂಟದ ಹಾಗೆ ತೋರುವ ಅದರ ಮಧ್ಯಭಾಗದಿಂದ ಕೆಳಗಡೆ ಬೆಂಕಿ ಉರಿಯುತ್ತಿತ್ತು; ಅದರ ಮಧ್ಯಭಾಗದಿಂದ ಮೇಲ್ಗಡೆ ಸುವರ್ಣವು ಥಳಥಳಿಸುತ್ತದೋ ಎಂಬಂತೆ ಅದ್ಭುತ ಕಾಂತಿಯೊಂದು ಹೊಳೆಯಿತು.೩ [3]ಆಗ ಆ ಮನುಷ್ಯಾಕೃತಿ ಮಾನವನ ಹಸ್ತದಂಥ ಹಸ್ತವನ್ನು ಚಾಚಿ ನನ್ನ ಚಂಡಿಕೆಯನ್ನು ಹಿಡಿಯಿತು. ದೇವರಾತ್ಮ ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಜೆರುಸಲೇಮಿನವರೆಗೆ ಒಯ್ದಿತು. ಅಲ್ಲಿನ ದೇವಾಲಯದ ಒಳಗಣ ಪ್ರಾಕಾರದ ಉತ್ತರ ಬಾಗಿಲ ಮುಂದೆ, ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ಆ ದೇವದರ್ಶನದಲ್ಲಿ ನನಗೆ ಕಂಡುಬಂದಿತು.೪ [4]ಆಗ ಇಗೋ, ಇಸ್ರಯೇಲಿನ ದೇವರ ಮಹಿಮಾದ್ಭುತ ದರ್ಶನವು ಬಯಲುಸೀಮೆಯಲ್ಲಿ ಆದಂತೆ ಇಲ್ಲಿಯೂ ನನಗಾಯಿತು.೫ [5]ಆಗ ಅವರು ನನಗೆ, “ನರಪುತ್ರನೇ, ಉತ್ತರಕ್ಕೆ ಕಣ್ಣೆತ್ತಿ ನೋಡು,” ಎಂದು ಹೇಳಿದರು; ಅಂತೆಯೇ ನಾನು ಉತ್ತರಕ್ಕೆ ಕಣ್ಣೆತ್ತಿ ನೋಡಿದೆ. ಇಗೋ ದೇವರನ್ನು ರೋಷಗೊಳಿಸುವ ಅದೇ ವಿಗ್ರಹವು ಬಲಿಪೀಠದ ಬಾಗಿಲ ಉತ್ತರದಲ್ಲಿ ಪ್ರವೇಶದ್ವಾರದ ಮುಂದೆ ನಿಂತಿತ್ತು.೬ [6]ಆಗ ಅವರು ನನಗೆ, “ನರಪುತ್ರನೇ, ಇವರು ಮಾಡುವುದನ್ನು ನೋಡಿದೆಯಾ? ಇಸ್ರಯೇಲ್ ವಂಶದವರು ಇಲ್ಲಿ ನಡೆಸುವ ಅಧಿಕ ದುರಾಚಾರಗಳನ್ನೆಲ್ಲ ಕಂಡೆಯಾ? ಇದರಿಂದ ನಾನು ನನ್ನ ಪವಿತ್ರಾಲಯವನ್ನು ಬಿಟ್ಟು ದೂರಹೋಗಬೇಕಾಯಿತು. ಬಾ, ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವೆ,” ಎಂದು ಹೇಳಿದರು.೭ [7]ಆಮೇಲೆ ದೇವರು ನನ್ನನ್ನು ಪ್ರಾಕಾರದ ಬಾಗಿಲಿಗೆ ಬರಮಾಡಿದರು; ಇಗೋ, ಆ ಗೋಡೆಯಲ್ಲಿ ಒಂದು ರಂಧ್ರವು ನನಗೆ ಕಾಣಿಸಿತು.೮ [8]ಆಗ ಅವರು ನನಗೆ, “ನರಪುತ್ರನೇ, ಗೋಡೆಯನ್ನು ತೋಡು,” ಎಂದು ಹೇಳಿದರು. ನಾನು ಗೋಡೆಯನ್ನು ತೋಡಿದೆ. ಆಗ ಇಗೋ, ಒಂದು ಬಾಗಿಲು ಕಾಣಿಸಿತು.೯ [9]ದೇವರು ನನಗೆ, “ನೀನು ಒಳಹೊಕ್ಕು ಜನರು ಇಲ್ಲಿ ನಡೆಸುವ ಅಸಹ್ಯ ದುಷ್ಕಾರ್ಯಗಳನ್ನು ನೋಡು,” ಎಂದು ಹೇಳಿದರು. ನಾನು ಹೊಕ್ಕು ನೋಡಿದೆ;೧೦ [10]ಅಕಟಾ, ಎಲ್ಲಾ ಜಾತಿಯ ಕ್ರಿಮಿಕೀಟಗಳು, ಅಸಹ್ಯ ಮೃಗಗಳು ಹಾಗು ಇಸ್ರಯೇಲ್ ವಂಶದವರು ಪೂಜಿಸುವ ಸಕಲ ಮೂರ್ತಿಗಳು ಆ ಗೋಡೆಯ ಸುತ್ತಲೂ ಚಿತ್ರಿತವಾಗಿದ್ದವು.೧೧ [11]ಇಸ್ರಯೇಲ್ ವಂಶದ ಎಪ್ಪತ್ತು ಮಂದಿ ಹಿರಿಯರೂ ಅವರ ಮಧ್ಯದಲ್ಲಿ ಶಾಫಾನನ ಮಗ ಯಾಜನ್ಯನೂ ತಮ್ಮ ತಮ್ಮ ಕೈಗಳಲ್ಲಿ ಧೂಪಾರತಿಗಳನ್ನು ಹಿಡಿದುಕೊಂಡು ಆ ಚಿತ್ರಗಳ ಮುಂದೆ ನಿಂತಿದ್ದರು: ಧೂಪದ ಸುವಾಸನೆಯ ಧೂಮವು ಮೇಘವಾಗಿ ಏರುತ್ತಿತ್ತು.೧೨ [12]ಆಗ ದೇವರು ನನಗೆ, “ನರಪುತ್ರನೇ, ಇಸ್ರಯೇಲ್ ವಂಶದ ಹಿರಿಯರೆಲ್ಲರು ನಾನಾ ರೂಪಗಳಿಂದ ಚಿತ್ರಿತವಾದ ತಮ್ಮ ತಮ್ಮ ಕೊಠಡಿಗಳೊಳಗೆ, ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? ‘ಸರ್ವೇಶ್ವರ ನಮ್ಮನ್ನು ನೋಡನು, ಸರ್ವೇಶ್ವರ ನಾಡನ್ನು ತೊರೆದುಬಿಟ್ಟಿದ್ದಾನೆ,’ ಎಂದು ಮಾತಾಡಿಕೊಳ್ಳುತ್ತಾರಷ್ಟೆ,” ಎಂಬುದಾಗಿ ಹೇಳಿದರು.೧೩ [13]ಆಮೇಲೆ ದೇವರು ನನಗೆ, “ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವೆ,” ಎಂದು ಹೇಳಿ೧೪ [14]ನನ್ನನ್ನು ಸರ್ವೇಶ್ವರನ ಆಲಯದ ಉತ್ತರ ಬಾಗಿಲ ಮುಂದಕ್ಕೆ ಕರೆತಂದರು; ಇಗೋ, ಅಲ್ಲಿ ಹೆಂಗಸರು ‘ತಮ್ಮೂಜ್’ ದೇವತೆಗಾಗಿ ಅಳುತ್ತಾ ಕುಳಿತಿದ್ದರು.೧೫ [15]ಇದಾದ ಮೇಲೆ ದೇವರು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ? ಇವುಗಳಿಗಿಂತ ಮತ್ತೂ ಹೆಚ್ಚಾದ ದುರಾಚಾರಗಳನ್ನು ನೋಡುವೆ,” ಎಂದು ಹೇಳಿ೧೬ [16]ಸರ್ವೇಶ್ವರನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರೆದುತಂದರು; ಇಗೋ, ಆ ಆಲಯದ ಬಾಗಿಲ ಮುಂದೆ, ಮಂಟಪಕ್ಕೂ ಬಲಿಪೀಠಕ್ಕೂ ನಡುವೆ ಸುಮಾರು ಇಪ್ಪತ್ತೈದು ಜನರು ಸರ್ವೇಶ್ವರನ ಆಲಯಕ್ಕೆ ಬೆನ್ನುಮಾಡಿ ಪೂರ್ವದ ಕಡೆಗೆ ಮುಖಮಾಡಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು.೧೭ [17]ಆಗ ದೇವರು ನನಗೆ, “ನರಪುತ್ರನೇ, ನೋಡಿದೆಯಾ? ಯೆಹೂದವಂಶದವರು ತಾವು ಇಲ್ಲಿ ನಡೆಸುವ ಅಸಹ್ಯಕಾರ್ಯಗಳು ಅಲ್ಪವೆಂದು ಭಾವಿಸಿದ್ದಾರೋ? ನಾಡನ್ನು ಹಿಂಸಾಕೃತ್ಯಗಳಿಂದ ತುಂಬಿಸಿದ್ದಲ್ಲದೆ ನನ್ನನ್ನು ಕೆಣಕಬೇಕೆಂದೇ ಮತ್ತೆ ಯತ್ನಿಸುತ್ತಿದ್ದಾರೆ; ನೋಡು, ಪತ್ರೆಯನ್ನು ಮೂಗಿಗೆ ಒತ್ತಿಕೊಳ್ಳುತ್ತಾರೆ.೧೮ [18]ಆದಕಾರಣ ನಾನೂ ಕೋಪೋದ್ರೇಕದಿಂದ ವರ್ತಿಸುವೆನು. ಅವರನ್ನು ಕಟಾಕ್ಷಿಸೆನು, ಉಳಿಸೆನು; ಅವರು ನನ್ನ ಕಿವಿಯಲ್ಲಿ ಎಷ್ಟು ಗಟ್ಟಿಯಾಗಿ ಕೂಗಿಕೊಂಡರೂ ನಾನು ಆಲಿಸೆನು.”Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಯೆಜೆಕಿಯೇಲನ ೮ 00:00:00 00:00:00 0.5x 2.0x https://beblia.bible:81/BibleAudio/kannadakncl/ezekiel/008.mp3 48 8