× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ದಾನಿಯೇಲನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೦ ೧೨೩೪೫೬೭೮೯೧೦೧೧೧೨1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧1 1 1 ಕನ್ನಡ ಬೈಬಲ್ (KNCL) 2016 ದಾನಿಯೇಲನ ೧೦ ಟಿಪ್ಪಣಿಗಳನ್ನು ಉಳಿಸಿ ೧ [1]ಪರ್ಷಿಯದ ರಾಜನಾದ ಸೈರೆಷನ ಆಳ್ವಿಕೆಯ ಮೂರನೇ ವರ್ಷದಲ್ಲಿ ಬೇಲ್ತೆಶಚ್ಚೆರನೆಂಬ ದಾನಿಯೇಲನಿಗೆ ಒಂದು ಸಂಗತಿ ಪ್ರಕಟವಾಯಿತು. ಅದು ಮಹಾ ಹೋರಾಟದ ಸಂಗತಿ, ಸತ್ಯವಾದ ಸಂಗತಿ. ಅದರ ಅರ್ಥವನ್ನು ತಾನು ಕಂಡ ದರ್ಶನದಿಂದ ಮನದಟ್ಟು ಮಾಡಿಕೊಂಡನು.೨ [2]ಆ ದಿನಗಳಲ್ಲಿ ದಾನಿಯೇಲನಾದ ನಾನು ಮೂರು ವಾರ ಒಂದು ವ್ರತವನ್ನು ಕೈಗೊಂಡಿದ್ದೆ.೩ [3]ಆ ಮೂರು ವಾರ ಮುಗಿಯುವ ತನಕ ನಾನು ಯಾವ ರುಚಿಪದಾರ್ಥವನ್ನೂ ತಿನ್ನಲಿಲ್ಲ. ಮಾಂಸವನ್ನಾಗಲಿ, ದ್ರಾಕ್ಷಾರಸವನ್ನಾಗಲಿ ಬಾಯಲ್ಲಿ ಇಡಲಿಲ್ಲ. ಎಣ್ಣೆಯನ್ನೂ ಹಚ್ಚಿಕೊಳ್ಳಲಿಲ್ಲ.೪ [4]ಮೊದಲನೆಯ ತಿಂಗಳಿನ ಇಪ್ಪತ್ನಾಲ್ಕನೆಯ ದಿನದಲ್ಲಿ ನಾನು ಟೈಗ್ರಿಸ್ ಎಂಬ ಮಹಾನದಿಯ ದಡದ ಮೇಲೆ ನಿಂತಿದ್ದೆ.೫ [5]ಕಣ್ಣೆತ್ತಿ ನೋಡಲು, ನಾರುಬಟ್ಟೆಯನ್ನು ಹೊದ್ದುಕೊಂಡಿದ್ದ, ಊಫಜಿನ ಬಂಗಾರದ ಪಟ್ಟಿಯನ್ನು ಸೊಂಟಕ್ಕೆ ಬಿಗಿದುಕೊಂಡಿದ್ದ, ಒಬ್ಬ ವ್ಯಕ್ತಿ ನನಗೆ ಕಾಣಿಸಿದ.೬ [6]ಅವನ ಶರೀರ ಸುವರ್ಣರತ್ನದ ಹಾಗೆ ಕಂಗೊಳಿಸಿತು. ಅವನ ಮುಖ ಮಿಂಚಿನಂತೆ ಹೊಳೆಯಿತು. ಅವನ ಕಣ್ಣುಗಳು ಉರಿಯುವ ಪಂಜುಗಳೋಪಾದಿಯಲ್ಲಿ ಫಳಫಳಿಸಿದವು. ಅವನ ಕೈಕಾಲುಗಳು ಬೆಳಗಿದ ಕಂಚಿನ ಹಾಗೆ ಥಳಥಳಿಸಿದವು. ಅವನ ಮಾತಿನ ಶಬ್ದ ಜನಸಂದಣಿಯ ಕೋಲಾಹಲದಂತಿತ್ತು.೭ [7]ಆ ದರ್ಶನವನ್ನು ಕಂಡವನು ದಾನಿಯೇಲನಾದ ನಾನೊಬ್ಬನೇ. ನನ್ನೊಂದಿಗೆ ಇದ್ದವರು ಅದನ್ನು ಕಾಣಲಿಲ್ಲ. ಅವರು ಭಯಭ್ರಾಂತರಾಗಿ ಓಡಿಹೋಗಿ ಅವಿತುಕೊಂಡರು.೮ [8]ನಾನು ಒಂಟಿಯಾಗಿ ಉಳಿದು ಆ ಅದ್ಭುತವನ್ನು ಕಂಡೆ. ನನ್ನ ಶಕ್ತಿಯೆಲ್ಲಾ ಕರಗಿಹೋಯಿತು. ನನ್ನ ಗಾಂಭೀರ್ಯ ಅಳಿಯಿತು. ನಾನು ನಿತ್ರಾಣನಾದೆ.೯ [9]ಆದರೂ ಅವನು ಮಾತಾಡುವ ಶಬ್ದ ಕೇಳಿಸಿತು. ಅದು ನನ್ನ ಕಿವಿಗೆ ಬಿದ್ದಾಗ ನಾನು ಮೈಮರೆತು ಅಧೋಮುಖವಾಗಿ ಅಡ್ಡಬಿದ್ದೆ.೧೦ [10]ಆಗ ಯಾರದೋ ಕೈ ನನ್ನನ್ನು ಮುಟ್ಟಿದಂತಾಯಿತು. ನಾನು ಗಡಗಡನೆ ನಡುಗುತ್ತಾ ಅಂಗೈಗಳನ್ನೂ ಮೊಣಕಾಲುಗಳನ್ನೂ ಊರಿ ನಿಲ್ಲುವಂತೆ ಮಾಡಿತು.೧೧ [11]ಆಗ ಅವನು ನನಗೆ, “ಅತಿಪ್ರಿಯ ದಾನಿಯೇಲನೇ, ನಾನು ನುಡಿಯುವ ಮಾತುಗಳನ್ನು ಗ್ರಹಿಸು. ಎದ್ದು ನಿಂತುಕೋ. ನಾನು ನಿನ್ನ ಬಳಿಗೆ ಕಳುಹಿಸಲ್ಪಟ್ಟವನು,” ಎಂದನು.೧೨ [12]ಆಮೇಲೆ ಅವನು ನನಗೆ, “ದಾನಿಯೇಲನೇ, ಭಯಪಡಬೇಡ! ಏಕೆಂದರೆ ನೀನು ನಿನ್ನ ದೇವರ ಮುಂದೆ ವಿನಮ್ರಪೂರ್ವಕವಾಗಿ (ದೈವಸಂಕಲ್ಪವನ್ನು) ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದ ಮೊದಲನೆಯ ದಿನದಲ್ಲೇ ನಿನ್ನ ಪ್ರಾರ್ಥನೆ ದೇವರಿಗೆ ಮುಟ್ಟಿತು. ಆ ಪ್ರಾರ್ಥನೆಯ ನಿಮಿತ್ತವೇ ನಾನು ಬಂದಿದ್ದೇನೆ.೧೩ [13]ಪರ್ಷಿಯ ರಾಜ್ಯದ ಕಾವಲುದೂತನು ಇಪ್ಪತ್ತೊಂದು ದಿನ ನನ್ನನ್ನು ಎದುರಿಸಿ ನಿಂತನು. ಆದರೆ ಪ್ರಧಾನ ದೂತರಲ್ಲಿ ಒಬ್ಬನಾದ ಮಿಕಾಯೇಲನು ನನ್ನ ಸಹಾಯಕ್ಕೆ ಬಂದನು. ಅಲ್ಲಿನ ಪರ್ಷಿಯ ರಾಜರ ಸಂಗಡ ಹೋರಾಡಲು ಅವನನ್ನು ಬಿಟ್ಟು ಬಂದಿದ್ದೇನೆ.೧೪ [14]ಅಂತ್ಯಕಾಲದಲ್ಲಿ ನಿನ್ನ ಜನರಿಗೆ ಬರಲಿರುವ ಗತಿಯನ್ನು ನಿನಗೆ ತಿಳಿಸುವುದಕ್ಕೋಸ್ಕರ ಬಂದೆ. ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವಿದೆ,” ಎಂದು ಹೇಳಿದನು.೧೫ [15]ಅವನು ಈ ಮಾತನ್ನು ನನಗೆ ಹೇಳಿದ ಕೂಡಲೆ ನಾನು ಮುಖವನ್ನು ತಗ್ಗಿಸಿಕೊಂಡು ನಿಶ್ಶಬ್ದನಾದೆ.೧೬ [16]ಆಗ ನರರೂಪ ಹೊಂದಿದ್ದ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದ. ನಾನು ಬಾಯಿ ತೆರೆದು ನನ್ನ ಮುಂದೆ ನಿಂತಿದ್ದವನಿಗೆ, “ಎನ್ನೊಡೆಯಾ, ಈ ದರ್ಶನದಿಂದ ವೇದನೆಗಳು ನನ್ನನ್ನು ಆಕ್ರಮಿಸಿವೆ, ನಾನು ನಿತ್ರಾಣನಾಗಿದ್ದೇನೆ.೧೭ [17]ನನ್ನೊಡೆಯನ ದಾಸನಾದ ನನ್ನಂಥವನು ಎನ್ನೊಡೆಯರಾದ ತಮ್ಮಂಥವರ ಸಂಗಡ ಹೇಗೆ ಮಾತಾಡಬಹುದು? ಈಗ ಶಕ್ತಿಯನ್ನೆಲ್ಲಾ ಕಳೆದುಕೊಂಡಿದ್ದೇನೆ, ನನ್ನಲ್ಲಿ ಉಸಿರೇ ಇಲ್ಲವಾಗಿದೆ,” ಎಂದು ಹೇಳಿದೆ.೧೮ [18]ಮನುಷ್ಯರೂಪ ಹೊಂದಿದ್ದ ಆ ವ್ಯಕ್ತಿ ಪುನಃ ನನ್ನನ್ನು ಮುಟ್ಟಿ ಬಲಪಡಿಸಿದ.೧೯ [19]ಬಳಿಕ ಆ ವ್ಯಕ್ತಿ ನನಗೆ, “ಅತಿಪ್ರಿಯನೇ, ಭಯಪಡಬೇಡ. ನಿನಗೆ ಶಾಂತಿಸಮಾಧಾನವಿರಲಿ! ಧೈರ್ಯತಂದುಕೊ! ಧೈರ್ಯತಂದುಕೊ!” ಎಂದು ಹೇಳಿದ. ಅವನ ಈ ಮಾತನ್ನು ಕೇಳಿದ ಕೂಡಲೆ ನಾನು ಧೈರ್ಯದಿಂದ, “ಎನ್ನೊಡೆಯಾ, ಮಾತಾಡು. ನನಗೆ ಧೈರ್ಯತುಂಬಿರುವೆ,” ಎಂದು ಅರಿಕೆಮಾಡಿದೆ.೨೦ [20]ಅವನು ನನಗೆ ಹೀಗೆಂದು ಹೇಳಿದ: “ನಾನು ನಿನ್ನ ಬಳಿಗೆ ಏಕೆ ಬಂದೆನೆಂಬುದು ನಿನಗೆ ಗೊತ್ತಲ್ಲವೇ? ಈಗ ನಾನು ಪರ್ಷಿಯ ರಾಜ್ಯದ ಕಾವಲುದೂತನೊಂದಿಗೆ ಹೋರಾಡಲು ಹಿಂದಿರುಗಬೇಕು. ನಾನು ಆ ಹೋರಾಟವನ್ನು ತೀರಿಸಿದ ಕೂಡಲೆ ಗ್ರೀಕ್ ರಾಜ್ಯದ ಕಾವಲುದೂತನು ಎದುರುಬೀಳುವನು.೨೧ [21]ಸತ್ಯಗ್ರಂಥದಲ್ಲಿ ಲಿಖಿತವಾದುದನ್ನು ಈಗ ನಿನಗೆ ತಿಳಿಸುತ್ತೇನೆ. ಇವರಿಬ್ಬರೊಂದಿಗೆ ಹೋರಾಡುವಲ್ಲಿ ನಿಮ್ಮ ಕಾವಲುದೂತನಾದ ಮಿಕಾಯೇಲನ ಹೊರತು ನನಗೆ ಬೆಂಬಲಿಗರಾಗತಕ್ಕವರು ಇನ್ನಾರೂ ಇಲ್ಲ.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ದಾನಿಯೇಲನ ೧೦ 00:00:00 00:00:00 0.5x 2.0x https://beblia.bible:81/BibleAudio/kannadakncl/daniel/010.mp3 12 10