× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ದಾನಿಯೇಲನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೩ ೧೨೩೪೫೬೭೮೯೧೦೧೧೧೨1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦1 1 1 ಕನ್ನಡ ಬೈಬಲ್ (KNCL) 2016 ದಾನಿಯೇಲನ ೩ ಟಿಪ್ಪಣಿಗಳನ್ನು ಉಳಿಸಿ ೧ [1]ರಾಜ ನೆಬೂಕದ್ನೆಚ್ಚರನು 27 ಮೀಟರ್ ಎತ್ತರದ 3 ಮೀಟರ್ ಅಗಲದ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ ಬಾಬಿಲೋನ್ ಸಂಸ್ಥಾನದ ‘ದೂರಾ’ ಎಂಬ ಬಯಲಿನಲ್ಲಿ ನಿಲ್ಲಿಸಿದನು.೨ [2]ಬಳಿಕ ರಾಜ ನೆಬೂಕದ್ನೆಚ್ಚರನು ತಾನು ನಿಲ್ಲಿಸಿದ್ದ ಆ ಪ್ರತಿಮೆಯ ಪ್ರತಿಷ್ಠಾಪನಾ ಸಮಾರಂಭವನ್ನು ಏರ್ಪಡಿಸಿ, ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಇವರನ್ನೂ, ಸಮಸ್ತ ಸಂಸ್ಥಾನಾಧಿಕಾರಿಗಳನ್ನೂ ಸಭೆ ಸೇರಿಸುವಂತೆ ದೂತರನ್ನು ಕಳುಹಿಸಿದನು.೩ [3]ಆ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಇವರೂ ಸಮಸ್ತ ಸಂಸ್ಥಾನಾಧಿಕಾರಿಗಳೂ ರಾಜ ನೆಬೂಕದ್ನೆಚ್ಚರನು ನಿಲ್ಲಿಸಿದ್ದ ಪ್ರತಿಮೆಯ ಪ್ರತಿಷ್ಠಾಪನಾ ಸಮಾರಂಭಕ್ಕೆ ನೆರೆದುಬಂದು ಆ ಪ್ರತಿಮೆಯ ಮುಂದೆ ನಿಂತುಕೊಂಡರು.೪ [4]ಆಗ, ಸಾರುವವರು ಗಟ್ಟಿಯಾಗಿ ಕೂಗಿ, “ವಿವಿಧ ಜನಾಂಗ-ಕುಲ-ಭಾಷೆಗಳವರೇ, ನಿಮಗೆ ಹೀಗೆಂದು ರಾಜಾಜ್ಞೆಯಾಗಿದೆ:೫ [5]ನೀವು ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ಓಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು ರಾಜ ನೆಬೂಕದ್ನೆಚ್ಚರರು ನಿಲ್ಲಿಸಿರುವ ಈ ಬಂಗಾರದ ಪ್ರತಿಮೆಯನ್ನು ಆರಾಧಿಸಬೇಕು.೬ [6]ಯಾರು ಅಡ್ಡಬಿದ್ದು ಆರಾಧಿಸುವುದಿಲ್ಲವೋ ಅಂಥವರನ್ನು ತಕ್ಷಣವೇ ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲಾಗುವುದು,” ಎಂದು ಸಾರಿದನು.೭ [7]ಅಂತೆಯೇ ಸಮಸ್ತ ಜನಾಂಗ-ಕುಲ-ಭಾಷೆಗಳವರು ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಎಲ್ಲರು ಅದೇ ಸಮಯದಲ್ಲಿ ಅಡ್ಡಬಿದ್ದು ರಾಜ ನೆಬೂಕದ್ನೆಚ್ಚರನು ನಿಲ್ಲಿಸಿದ್ದ ಆ ಬಂಗಾರದ ಪ್ರತಿಮೆಯನ್ನು ಆರಾಧಿಸಿದರು.೮ [8]ಆಗ ಕೆಲವು ಮಂದಿ ಬಾಬಿಲೋನಿಯರು ಯೆಹೂದ್ಯರ ಮೇಲೆ ದೂರು ಹೊರಿಸಲು ರಾಜ ನೆಬೂಕದ್ನೆಚ್ಚರನ ಬಳಿಗೆ ಬಂದರು.೯ [9]“ಅರಸರೇ, ನೀವು ಚಿರಂಜೀವಿಯಾಗಿರಿ!”೧೦ [10]ಪ್ರಭುವೇ, ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ಓಲಗ ಮುಂತಾದ ಸಕಲ ವಾದ್ಯಗಳ ಧ್ವನಿ ಕೇಳಿದ ಪ್ರತಿಯೊಬ್ಬನೂ ಅಡ್ಡಬಿದ್ದು ಬಂಗಾರದ ಪ್ರತಿಮೆಯನ್ನು ಆರಾಧಿಸಲಿ;೧೧ [11]ಯಾವನು ಅಡ್ಡಬಿದ್ದು ಆರಾಧಿಸುವುದಿಲ್ಲವೋ ಅಂಥವನು ಧಗಧಗಿಸುವ ಆವಿಗೆಯೊಳಗೆ ಹಾಕಲ್ಪಡಲಿ ಎಂದು ತಾವು ಆಜ್ಞೆ ಮಾಡಿದಿರಲ್ಲವೆ?೧೨ [12]ತಾವು ಬಾಬಿಲೋನಿನ ಸಂಸ್ಥಾನಾಧಿಕಾರತ್ವವನ್ನು ವಹಿಸಿಕೊಟ್ಟ ಶದ್ರಕ್, ಮೇಶಕ್ ಹಾಗೂ ಅಬೇದ್ನೆಗೋ ಎಂಬ ಕೆಲವು ಮಂದಿ ಯೆಹೂದ್ಯರು ಇದ್ದಾರೆ. ರಾಜರೇ ಅವರು ನಿಮ್ಮನ್ನು ಲಕ್ಷಿಸುವುದಿಲ್ಲ. ನಿಮ್ಮ ದೇವರುಗಳಿಗೆ ಸೇವೆಮಾಡುವುದಿಲ್ಲ, ನೀವು ಸ್ಥಾಪಿಸಿದ ಬಂಗಾರದ ಪ್ರತಿಮೆಯನ್ನು ಆರಾಧಿಸುವುದಿಲ್ಲ,” ಎಂದು ಆಪಾದಿಸಿದರು.೧೩ [13]ನೆಬೂಕದ್ನೆಚ್ಚರನು ಉಗ್ರಕೋಪಗೊಂಡು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬವರನ್ನು ಹಿಡಿದುತರಲು ಆಜ್ಞಾಪಿಸಿದನು.೧೪ [14]ಅದರಂತೆಯೇ ಅವರನ್ನು ಹಿಡಿದುತರಲಾಯಿತು. ನೆಬೂಕದ್ನೆಚ್ಚರನು ಅವರಿಗೆ, “ಶದ್ರಕ್, ಮೇಶಕ್, ಹಾಗು ಅಬೇದ್ನೆಗೋ ಎಂಬವರೇ, ನೀವು ಬೇಕುಬೇಕೆಂದು, ನನ್ನ ದೇವರಿಗೆ ಸೇವೆಮಾಡದೆ, ನಾನು ಸ್ಥಾಪಿಸಿದ ಬಂಗಾರದ ಪ್ರತಿಮೆಯನ್ನು ಆರಾಧಿಸದೆ ಇರುವಿರೋ?೧೫ [15]ಈಗಲಾದರು ನೀವು ಸಿದ್ಧರಾಗಿದ್ದು ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ಓಲಗ ಮುಂತಾದ ಸಕಲ ವಾದ್ಯಗಳ ಧ್ವನಿ ಕೇಳಿದ ಕೂಡಲೆ ಅಡ್ಡಬಿದ್ದು ನಾನು ಸ್ಥಾಪಿಸಿದ ಪ್ರತಿಮೆಯನ್ನು ಆರಾಧಿಸಿದರೆ ಸರಿ, ಇಲ್ಲವಾದರೆ ಈ ಗಳಿಗೆಯಲ್ಲೆ ನಿಮ್ಮನ್ನು ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲಾಗುವುದು. ನಿಮ್ಮನ್ನು ನನ್ನ ಕೈಯಿಂದ ಬಿಡಿಸಬಲ್ಲ ದೇವರು ಯಾರಿದ್ದಾನೆ?” ಎಂದು ಹೇಳಿದನು.೧೬ [16]ಇದನ್ನು ಕೇಳಿದ ಶದ್ರಕ್, ಮೇಶಕ್ ಮತ್ತು ಅಬೇದ್ನೆಗೋ ಎಂಬುವರು ರಾಜನಿಗೆ: “ನೆಬೂಕದ್ನೆಚ್ಚರ ಅರಸರೇ, ಈ ವಿಷಯದಲ್ಲಿ ನಾವು ನಿಮಗೆ ಏನನ್ನೂ ಹೇಳಬೇಕಾಗಿಲ್ಲ.೧೭ [17]ನಾವು ಸೇವೆಮಾಡುವ ದೇವರಿಗೆ ಚಿತ್ತವಿದ್ದರೆ ಅವರೇ ಧಗಧಗನೆ ಉರಿಯುವ ಆವಿಗೆಯೊಳಗಿಂದಲೂ ನಮ್ಮನ್ನು ಕಾಪಾಡಬಲ್ಲರು. ಅವರೇ ನಮ್ಮನ್ನು ನಿಮ್ಮ ಕೈಯಿಂದಲೂ ಬಿಡಿಸಬಲ್ಲರು.೧೮ [18]ಒಂದು ವೇಳೆ ಬಿಡಿಸದಿದ್ದರೂ ರಾಜರೇ, ಇದು ನಿಮಗೆ ತಿಳಿದಿರಲಿ: ನಾವು ನಿಮ್ಮ ದೇವರುಗಳಿಗೆ ಸೇವೆಮಾಡುವುದಿಲ್ಲ. ನೀವು ಸ್ಥಾಪಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವುದಿಲ್ಲ,” ಎಂದು ಉತ್ತರಕೊಟ್ಟರು.೧೯ [19]ಆಗ ನೆಬೂಕದ್ನೆಚ್ಚರನು ಕೋಪೋದ್ರೇಕಗೊಂಡನು. ಶದ್ರಕ್, ಮೇಶಕ್ ಮತ್ತು ಅಬೇದ್ನೆಗೋ ಅವರ ಬಗ್ಗೆ ಅವನ ಮುಖಚರ್ಯೆ ಬದಲಾಯಿತು. ಆವಿಗೆಯನ್ನು ವಾಡಿಕೆಗಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕೆಂದು ಆಜ್ಞಾಪಿಸಿದನು.೨೦ [20]ಇದಲ್ಲದೆ ತನ್ನ ಸೈನ್ಯದ ಕೆಲವುಮಂದಿ ಶೂರರಿಗೆ ಶದ್ರಕ್, ಮೇಶಕ್, ಅಬೇದ್ನೆಗೋ ಅವರನ್ನು ಕಟ್ಟಿ ಧಗಧಗನೆ ಉರಿಯುವ ಆವಿಗೆಯೊಳಗೆ ಎತ್ತಿಹಾಕಬೇಕೆಂದು ಅಪ್ಪಣೆಕೊಟ್ಟನು.೨೧ [21]ಅದರಂತೆಯೇ ಉಡಿಗೆತೊಡಿಗೆ, ಪೇಟ ಮುಂತಾದ ಬಟ್ಟೆಬರೆಗಳನ್ನು ಧರಿಸಿಕೊಂಡಿದ್ದ ಹಾಗೆಯೇ ಅವರನ್ನು ಕಟ್ಟಿ ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಿಬಿಟ್ಟರು.೨೨ [22]ರಾಜಾಜ್ಞೆಯು ಖಡಾಖಂಡಿತವಾಗಿದ್ದರಿಂದಲೂ ಆವಿಗೆಯ ಕಾವು ಅತಿ ತೀಕ್ಷ್ಣವಾಗಿದ್ದರಿಂದಲೂ ಅಗ್ನಿಕುಂಡವು ಶದ್ರಕ್, ಮೇಶಕ್ ಮತ್ತು ಅಬೇದ್ನೆಗೋ ಎಂಬುವರನ್ನು ಎತ್ತಿ ತಂದವರನ್ನೇ ಭಸ್ಮಮಾಡಿಬಿಟ್ಟಿತು.೨೩ [23]ಅತ್ತ ಶದ್ರಕ್, ಮೇಶಕ್, ಅಬೇದ್ನೆಗೋ ಈ ಮೂವರು ಕಟ್ಟಿನೊಂದಿಗೆ ಧಗಧಗನೆ ಉರಿಯುವ ಆವಿಗೆಯ ನಡುವೆ ಬಿದ್ದರು.೨೪ [24]ಇತ್ತ ರಾಜ ನೆಬೂಕದ್ನೆಚ್ಚರನು ಬೆಚ್ಚಿಬಿದ್ದು, ತಟ್ಟನೆ ಎದ್ದು ತನ್ನ ಮಂತ್ರಿಗಳನ್ನು ಕರೆಸಿ, “ನಾವು ಮೂವರನ್ನು ಕಟ್ಟಿ ಬೆಂಕಿಯಲ್ಲಿ ಹಾಕಿಸಿದೆವಲ್ಲವೆ?” ಎಂದು ಕೇಳಿದನು. ಅವರು ರಾಜನಿಗೆ, “ಹೌದು ಪ್ರಭೂ, ಅದು ಸತ್ಯ,” ಎಂದು ಉತ್ತರಕೊಟ್ಟರು.೨೫ [25]ಅದಕ್ಕೆ ಅವರು, “ಆದರೆ, ಇಗೋ ಕಟ್ಟಿಲ್ಲದ ನಾಲ್ವರನ್ನು ನಾನು ನೋಡುತ್ತಿದ್ದೇನೆ. ಬೆಂಕಿಯಲ್ಲಿ ತಿರುಗಾಡುತ್ತಿದ್ದಾರೆ; ಅವರಿಗೆ ಯಾವ ಹಾನಿಯೂ ಆಗುತ್ತಿಲ್ಲ.೨೬ [26]ನಾಲ್ಕನೆಯವನ ರೂಪ ದೇವಪುತ್ರನ ರೂಪದಂತಿದೆ!” ಎಂದು ಹೇಳಿ ಧಗಧಗನೆ ಉರಿಯುತ್ತಿದ್ದ ಆವಿಗೆಯ ಬಾಯಿಯ ಬಳಿಗೆಹೋಗಿ, “ಪರಾತ್ಪರ ದೇವರ ದಾಸರಾದ ಶದ್ರಕ್, ಮೇಶಕ್ ಮತ್ತು ಅಬೇದ್ನೆಗೋ ಎಂಬುವರೇ, ಬನ್ನಿ, ಹೊರಗೆ ಬನ್ನಿ,” ಎಂದು ಕೂಗಿಕೊಂಡನು. ಅಂತೆಯೇ ಶದ್ರಕ್, ಮೇಶಕ್ ಹಾಗು ಅಬೇದ್ನೆಗೋ ಅವರು ಬೆಂಕಿಯಿಂದ ಹೊರಟುಬಂದರು.೨೭ [27]ಅವರನ್ನು ನೋಡಲು ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ ಇವರೆಲ್ಲರು ಕೂಡಿಬಂದರು. ಅವರಿಗೆ ಬೆಂಕಿಯ ತಾಪವೂ ತಟ್ಟಿಲ್ಲ. ತಲೆಗೂದಲೂ ಸುಟ್ಟಿಲ್ಲ, ಅವರ ಬಟ್ಟೆಬರೆಗೆ ಏನೂ ಆಗಿಲ್ಲ, ಬೆಂಕಿಯ ವಾಸನೆಯೂ ಇಲ್ಲ, ಎಂದು ತಿಳಿದುಕೊಂಡರು.೨೮ [28]ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್ ಹಾಗು ಅಬೇದ್ನೆಗೋ ಎಂಬುವರ ದೇವರಿಗೆ ಸ್ತೋತ್ರವಾಗಲಿ! ಆತ ತನ್ನ ದೂತರನ್ನು ಕಳಿಸಿ ತನ್ನಲ್ಲಿ ವಿಶ್ವಾಸವಿಟ್ಟ ಇವರನ್ನು ರಕ್ಷಿಸಿದ್ದಾನೆ. ಇವರೋ ರಾಜಾಜ್ಞೆಯನ್ನೂ ಮೀರಿ ತಮ್ಮ ದೇವರನ್ನೇ ಹೊರತು ಇನ್ನಾವ ದೇವರನ್ನೂ ಪೂಜಿಸಿ ಆರಾಧಿಸಬಾರದೆಂದು ಸ್ವಂತ ದೇಹಗಳನ್ನೇ ಸಾವಿಗೊಪ್ಪಿಸಿದಂಥ ಭಕ್ತರು!೨೯ [29]ಸಕಲ ದೇಶ-ಕುಲ-ಭಾಷೆಗಳವರಲ್ಲಿ ಯಾರಾದರು ಶದ್ರಕ್, ಮೇಶಕ್ ಹಾಗು ಅಬೇದ್ನೆಗೋ ಎಂಬುವರ ದೇವರ ವಿಷಯದಲ್ಲಿ ಅಲ್ಲಸಲ್ಲದ ಮಾತನಾಡಿದರೆ ಅಂಥವರನ್ನು ತುಂಡುತುಂಡಾಗಿ ಕತ್ತರಿಸಿ ಅವರ ಮನೆಗಳನ್ನು ತಿಪ್ಪೆಗುಂಡಿಯನ್ನಾಗಿಸಬೇಕೆಂದು ಆಜ್ಞೆ ವಿಧಿಸುತ್ತೇನೆ. ಹೀಗೆ ರಕ್ಷಿಸಲು ಸಮರ್ಥನಾದ ಇನ್ನಾವ ದೇವರೂ ಇಲ್ಲವೇ ಇಲ್ಲ,” ಎಂದು ಹೇಳಿದನು.೩೦ [30]ಇದಾದ ಬಳಿಕ ರಾಜನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವರನ್ನು ಸಂಸ್ಥಾನದಲ್ಲಿ ಉನ್ನತಪದವಿಗೆ ಏರಿಸಿದನು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ದಾನಿಯೇಲನ ೩ 00:00:00 00:00:00 0.5x 2.0x https://beblia.bible:81/BibleAudio/kannadakncl/daniel/003.mp3 12 3