× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ದಾನಿಯೇಲನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೭ ೧೨೩೪೫೬೭೮೯೧೦೧೧೧೨1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮1 1 1 ಕನ್ನಡ ಬೈಬಲ್ (KNCL) 2016 ದಾನಿಯೇಲನ ೭ ಟಿಪ್ಪಣಿಗಳನ್ನು ಉಳಿಸಿ ೧ [1]ಬಾಬಿಲೋನಿನ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನು ಹಾಸಿಗೆಯ ಮೇಲೆ ಮಲಗಿದ್ದಾಗ ಒಂದು ಕನಸು ಕಂಡನು. ಅವನ ಮನಸ್ಸಿಗೆ ಒಂದು ದೃಶ್ಯ ಕಾಣಿಸಿತು. ಕೂಡಲೆ ಅವನು ಆ ಕನಸನ್ನೂ ಅದರ ಮುಖ್ಯಾಂಶಗಳನ್ನೂ ಬರೆದಿಟ್ಟನು.೨ [2]ಅದರ ಸಾರಾಂಶ ಇದು: ನಾನು ರಾತ್ರಿ ಕಂಡ ಕನಸಿನಲ್ಲಿ ನಾಲ್ಕು ದಿಕ್ಕುಗಳಿಂದಲೂ ಗಾಳಿ ಮಹಾಸಾಗರದ ಮೇಲೆ ರಭಸವಾಗಿ ಬೀಸಿ ಬಡಿಯುತ್ತಿತ್ತು.೩ [3]ವಿಲಕ್ಷಣವಾದ ನಾಲ್ಕು ದೊಡ್ಡ ಮೃಗಗಳು ಆ ಸಾಗರದಿಂದ ಹೊರಗೆ ಬಂದವು.೪ [4]ಮೊದಲು ಕಾಣಿಸಿದ ಮೃಗ ಸಿಂಹದ ಹಾಗಿತ್ತು. ಆದರೆ ಅದಕ್ಕೆ ಹದ್ದಿನಂಥ ರೆಕ್ಕೆಗಳಿದ್ದವು. ನಾನು ನೋಡುತ್ತಿರುವಾಗಲೆ ಆ ರೆಕ್ಕೆಗಳು ಕೀಳಲ್ಪಟ್ಟವು. ಆ ಮೃಗವನ್ನು ನೆಲದಿಂದ ಮೇಲಕ್ಕೆತ್ತಿ ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲಾಯಿತು. ಅದಕ್ಕೆ ಮನುಷ್ಯನ ಹೃದಯ ಕೊಡಲಾಯಿತು.೫ [5]ಬಳಿಕ ಎರಡನೆಯ ಇನ್ನೊಂದು ಮೃಗವನ್ನು ಕಂಡೆ. ಅದು ಕರಡಿಯ ಹಾಗಿತ್ತು. ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು. ತನ್ನ ಬಾಯಲ್ಲಿನ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು. “ನೀನೆದ್ದು ಬೇಕಾದಷ್ಟು ಮಾಂಸವನ್ನು ತಿನ್ನು,” ಎಂದು ಅದಕ್ಕೆ ಹೇಳಲಾಯಿತು.೬ [6]ಅನಂತರ ನಾನು ನೋಡುತ್ತಿರುವಾಗಲೆ ಚಿರತೆಯ ಹಾಗಿದ್ದ ಮತ್ತೊಂದು ಮೃಗ ಕಾಣಿಸಿತು. ಅದರ ಪಕ್ಕಗಳಲ್ಲಿ ಪಕ್ಷಿಯ ರೆಕ್ಕೆಗಳಂತಿರುವ ನಾಲ್ಕು ರೆಕ್ಕೆಗಳಿದ್ದವು. ಆ ಮೃಗಕ್ಕೆ ನಾಲ್ಕು ತಲೆಗಳಿದ್ದವು. ಅದಕ್ಕೆ ದೊರೆತನ ಕೊಡಲಾಯಿತು.೭ [7]ಇದಾದ ಬಳಿಕ ಆ ರಾತ್ರಿ ಕನಸಿನಲ್ಲಿ ಕಾಣಿಸಿಕೊಂಡ ನಾಲ್ಕನೇ ಮೃಗ ಭಯಂಕರವಾಗಿತ್ತು. ಹೆದರಿಸುವಂಥದಾಗಿತ್ತು. ಅಧಿಕ ಬಲವುಳ್ಳದ್ದಾಗಿತ್ತು. ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ತನ್ನ ಬಲಿಯನ್ನು ತುಂಡುತುಂಡಾಗಿಸಿ ಕಬಳಿಸುತ್ತಿತ್ತು. ಮಿಕ್ಕದ್ದನ್ನು ಕಾಲುಗಳಿಂದ ತುಳಿಯುತ್ತಾ ಇತ್ತು. ಅದು ಮುಂಚಿನ ಮೃಗಗಳಿಗಿಂತ ವಿಲಕ್ಷಣವಾಗಿತ್ತು. ಅದಕ್ಕೆ ಹತ್ತು ಕೊಂಬುಗಳಿದ್ದವು.೮ [8]ನಾನು ಆ ಕೊಂಬುಗಳನ್ನು ಗಮನಿಸುತ್ತಿರುವಾಗಲೆ ಅವುಗಳ ನಡುವೆ ಇಗೋ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು. ಅದಕ್ಕೆ ಎಡೆಮಾಡಿಕೊಡಲು ಮುಂಚಿನ ಕೊಂಬುಗಳಲ್ಲಿ ಮೂರನ್ನು ಬೇರುಸಹಿತ ಕೀಳಲಾಯಿತು. ಆಶ್ಚರ್ಯವೆಂದರೆ, ಆ ಕೊಂಬಿನಲ್ಲಿ ಮನುಷ್ಯನ ಕಣ್ಣುಗಳಂತಿರುವ ಕಣ್ಣುಗಳಿದ್ದವು. ಬಡಾಯಿ ಕೊಚ್ಚಿಕೊಳ್ಳುವ ಬಾಯೂ ಇತ್ತು.೯ [9]ನಾನು ನೋಡುತ್ತಿದ್ದ ಹಾಗೆ: ಸಿಂಹಾಸನಗಳನ್ನು ಹಾಕಲಾಯಿತು. ಮಹಾವೃದ್ಧನೊಬ್ಬನು ಆಸೀನನಾದನು. ಆತನ ಉಡುಪು ಬೆಳ್ಳಗಿತ್ತು ಹಿಮದಂತೆ. ಆತನ ತಲೆಗೂದಲಿತ್ತು ನಿರ್ಮಲವಾದ ಬಿಳಿಯ ಉಣ್ಣೆಯಂತೆ. ಆತನ ಸಿಂಹಾಸನ ಅಗ್ನಿಜ್ವಾಲೆಗಳು. ಧಗಧಗಿಸುವ ಬೆಂಕಿ ಅದರ ಚಕ್ರಗಳು.೧೦ [10]ಆ ಸಿಂಹಾಸನದ ಸಮ್ಮುಖದಿಂದ ಪ್ರಜ್ವಲ ಪ್ರವಾಹವೊಂದು ಉಕ್ಕಿ ಹರಿದುಬಂದಿತು. ಲಕ್ಷೋಪಲಕ್ಷ ದೂತರು ಆತನಿಗೆ ಸೇವೆಸಲ್ಲಿಸುತ್ತಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ತೀರ್ಪುನೀಡಲು ಕುಳಿತುಕೊಂಡರು. ಪಟ್ಟಿಪುಸ್ತಕಗಳನ್ನು ತೆರೆಯಲಾಯಿತು.೧೧ [11]ನಾನು ನೋಡುತ್ತಾ ಇದ್ದೆ: ಆ ಕಿರುಕೊಂಬು ಬಡಾಯಿಕೊಚ್ಚಿಕೊಂಡ ನಿಮಿತ್ತ ಆ ಕೊಂಬಿನ ಮೃಗವನ್ನು ಕೊಂದು ಅದರ ಹೆಣವನ್ನು ಉರಿಯುವ ಬೆಂಕಿಗೆ ಹಾಕಿ ನಾಶಮಾಡಿದರು.೧೨ [12]ಮಿಕ್ಕ ಮೃಗಗಳ ದೊರೆತನವನ್ನು ತೆಗೆದುಬಿಟ್ಟರು. ಆದರೆ ಕೆಲವು ಕಾಲದ ಮಟ್ಟಿಗೆ, ತಕ್ಕ ಸಮಯ ಬರುವ ತನಕ, ಅವುಗಳ ಜೀವಾವಧಿಯನ್ನು ಉಳಿಸಿದರು.೧೩ [13]ನಾನು ಕಂಡ ರಾತ್ರಿಯ ಕನಸಿನಲ್ಲಿ ನರಪುತ್ರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಸನ್ನಿಧಿಗೆ ತಂದರು.೧೪ [14]ಸಕಲ ರಾಷ್ಟ್ರ-ಕುಲ-ಭಾಷೆಗಳವರು ಅವನಿಗೆ ಸೇವೆ ಸಲ್ಲಿಸಲೆಂದು ಅವನಿಗೆ ದೊರೆತನ, ಘನತೆ, ರಾಜ್ಯತ್ವ ಇವುಗಳನ್ನು ಕೊಡಲಾಯಿತು. ಅವನ ಆಳ್ವಿಕೆಗೆ ಅಂತ್ಯವಿಲ್ಲ, ಅದು ಶಾಶ್ವತವಾದುದು, ಅವನ ರಾಜ್ಯ ಎಂದಿಗೂ ಅಳಿಯದು!೧೫ [15]ದಾನಿಯೇಲನಾದ ನನ್ನ ಮನ ಒಳಗೇ ವ್ಯಥೆಗೊಂಡಿತು. ನನ್ನ ಮನಸ್ಸಿನಲ್ಲಿ ತೋಚಿದ ದರ್ಶನಗಳು ನನ್ನನ್ನು ಕಳವಳಪಡಿಸಿದವು.೧೬ [16]ಹತ್ತಿರದಲ್ಲೆ ನಿಂತಿದ್ದವರಲ್ಲಿ ಒಬ್ಬನ ಬಳಿಗೆ ಹೋಗಿ ಇವುಗಳ ಸರಿಯಾದ ಅರ್ಥ ಏನೆಂದು ವಿಚಾರಿಸಿದೆ.೧೭ [17]ಅವನು ನನಗೆ: “ಆ ನಾಲ್ಕು ದೊಡ್ಡ ಮೃಗಗಳು ಲೋಕಸಾಗರಗಳಿಂದ ಏರತಕ್ಕ ನಾಲ್ಕು ರಾಜ್ಯಗಳು.೧೮ [18]ಆದರೆ ರಾಜ್ಯಾಧಿಕಾರ ಲಭಿಸುವುದು ಮಹೋನ್ನತರ ಪವಿತ್ರ ಪ್ರಜೆಗೆ. ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವವರು ಅವರೇ,” ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು.೧೯ [19]ಅದಾದ ಮೇಲೆ ಇತರ ಮೃಗಗಳಿಗಿಂತ ವಿಲಕ್ಷಣವಾಗಿಯೂ ಅತಿಭಯಂಕರವಾಗಿಯೂ ಕಬ್ಬಿಣದ ಹಲ್ಲು, ಕಂಚಿನ ಉಗುರು ಉಳ್ಳದ್ದಾಗಿಯೂ ತನ್ನ ಬಲಿಯನ್ನು ತುಂಡುತುಂಡಾಗಿಸಿ ಕಬಳಿಸುತ್ತಿದ್ದ ಹಾಗು ಮಿಕ್ಕದ್ದನ್ನು ಕಾಲಿನಿಂದ ತುಳಿಯುತ್ತಿದ್ದ ಆ ನಾಲ್ಕನೆಯ ಮೃಗದ ವಿಷಯವನ್ನು ತಿಳಿದುಕೊಳ್ಳಲು ಬಯಸಿದೆ.೨೦ [20]ಅದರ ತಲೆಯ ಮೇಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ,೨೧ [21]ನಾನು ನೋಡುತ್ತಿದ್ದ ಹಾಗೆ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ, ತನ್ನಲ್ಲೆ ಕಣ್ಣುಳ್ಳದ್ದಾಗಿ ಬಡಾಯಿ ಕೊಚ್ಚಿಕೊಳ್ಳುವ ಬಾಯುಳ್ಳದ್ದಾಗಿ, ಮಿಕ್ಕ ಕೊಂಬುಗಳಿಗಿಂತ ಭಯಂಕರವಾಗಿ ಕಾಣಿಸುತ್ತಾ ಇತ್ತೋ, ಆ ಕೊಂಬಿನ ವಿಷಯವಾಗಿ ಸತ್ಯಾರ್ಥವನ್ನೂ ತಿಳಿದುಕೊಳ್ಳಬೇಕೆಂದು ವಿಚಾರಿಸಿದೆ.೨೨ [22]ಆ ಕೊಂಬು ಪವಿತ್ರ ಪ್ರಜೆಯೊಂದಿಗೆ ಯುದ್ಧಮಾಡುತ್ತಿತ್ತು. ಮಹಾವೃದ್ಧನು ಬಂದು ಮಹೋನ್ನತರ ಆ ಪವಿತ್ರ ಪ್ರಜೆಗೆ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದಿತ್ತು.೨೩ [23]ಆಗ ಅವನು ನನಗೆ ಕೊಟ್ಟ ವಿವರ ಇದು: “ಆ ನಾಲ್ಕನೆಯ ಮೃಗ ಲೋಕದಲ್ಲಿ ತಲೆಯೆತ್ತುವ ನಾಲ್ಕನೆಯ ರಾಜ್ಯ. ಅದು ಮಿಕ್ಕ ರಾಜ್ಯಗಳಿಗಿಂತ ವಿಲಕ್ಷಣವಾದುದು. ಲೋಕವನ್ನೇ ಕಾಲಿನಿಂದ ತುಳಿದು ಚೂರುಚೂರು ಮಾಡಿ ಕಬಳಿಸುವುದು.೨೪ [24]ಆ ಹತ್ತು ಕೊಂಬುಗಳು ಅದೇ ರಾಜ್ಯವನ್ನು ಆಳುವ ಹತ್ತುಮಂದಿ ಅರಸರು. ಅವರ ತರುವಾಯ ಮತ್ತೊಬ್ಬನು ತಲೆದೋರುವನು. ಅವನು ಮುಂಚಿನ ಅರಸರಿಗಿಂತ ವಿಲಕ್ಷಣವಾಗಿರುವನು, ಆ ಮೂವರು ಅರಸರನ್ನು ಸದೆಬಡಿದುಬಿಡುವನು.೨೫ [25]ಅವನು ಮಹೋನ್ನತ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಳ್ಳುವನು. ಮಹೋನ್ನತರ ಪವಿತ್ರ ಪ್ರಜೆಯನ್ನು (ಸಂತರನ್ನು) ಶೋಷಣೆಗೆ ಗುರಿಮಾಡುವನು. ಆ ಪ್ರಜೆ ಅವನಿಗೆ ಮೂರುವರೆ ವರ್ಷ ಅಧೀನರಾಗಿರುವರು.೨೬ [26]ಆದರೆ (ದೇವರ) ನ್ಯಾಯಸಭೆ ತೀರ್ಪಿತ್ತು, ಅವನ ದೊರೆತನವನ್ನು ಕಿತ್ತು, ವಿನಾಶಮಾಡಿ, ಕೊನೆಗಾಣಿಸಿಬಿಡುವುದು.೨೭ [27]ರಾಜ್ಯಭಾರವೂ ದೊರೆತನವೂ ಸಮಸ್ತ ಲೋಕದಲ್ಲಿನ ರಾಜ್ಯಗಳ ಮಹಿಮೆಯೂ ಮಹೋನ್ನತರ ಭಕ್ತಜನರಿಗೆ ಕೊಡಲಾಗುವುದು. ಅವರ ರಾಜ್ಯ ಶಾಶ್ವತರಾಜ್ಯ. ಎಲ್ಲ ದೇಶಾಧಿಪತಿಗಳೂ ಅವರಿಗೆ ಅಧೀನರಾಗಿ ಸೇವೆಮಾಡುವರು,” ಎಂದು ಹೇಳಿದನು.೨೮ [28]ಇಲ್ಲಿಗೆ ಆ ಕನಸಿನ ವಿವರ ಮುಗಿಯಿತು. ದಾನಿಯೇಲನಾದ ನಾನು ನನ್ನ ಆಲೋಚನೆಗಳಿಂದ ಬಹಳ ಕಳವಳಗೊಂಡೆ. ನನ್ನ ಮುಖ ಬಾಡಿತು. ಆದರೂ ನಡೆದ ಸಂಗತಿಯನ್ನು ಮನಸ್ಸಿನಲ್ಲೇ ಇಟ್ಟುಕೊಂಡೆ.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ದಾನಿಯೇಲನ ೭ 00:00:00 00:00:00 0.5x 2.0x https://beblia.bible:81/BibleAudio/kannadakncl/daniel/007.mp3 12 7