× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ದಾನಿಯೇಲನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೯ ೧೨೩೪೫೬೭೮೯೧೦೧೧೧೨1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭1 1 1 ಕನ್ನಡ ಬೈಬಲ್ (KNCL) 2016 ದಾನಿಯೇಲನ ೯ ಟಿಪ್ಪಣಿಗಳನ್ನು ಉಳಿಸಿ ೧ [1]ಅದು, ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷ. ಈತನು ಅಹಷ್ವೇರೋಷನ ಮಗ, ಮೇದ್ಯ ವಂಶದವನು ಹಾಗು ಬಾಬಿಲೋನಿನ ರಾಜ್ಯದ ದೊರೆ.೨ [2]ದಾನಿಯೇಲನಾದ ನಾನು ಪವಿತ್ರಗ್ರಂಥಗಳನ್ನು ಪರೀಕ್ಷಿಸಿ, ಸರ್ವೇಶ್ವರಸ್ವಾಮಿ ಪ್ರವಾದಿ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ ಜೆರುಸಲೇಮ್ ಪಾಳುಬಿದ್ದಿರಬೇಕಾದ ಪೂರ್ಣಕಾಲಾವಧಿ ಎಪ್ಪತ್ತು ವರ್ಷಗಳೆಂದು ತಿಳಿದುಕೊಂಡೆ.೩ [3]ಉಪವಾಸವಿದ್ದು, ಗೋಣಿತಟ್ಟು ಸುತ್ತಿಕೊಂಡು, ಬೂದಿ ಬಳಿದುಕೊಂಡು, ಸರ್ವೇಶ್ವರನಾದ ದೇವರ ಕಡೆಗೆ ಮುಖವೆತ್ತಿ, ಪ್ರಾರ್ಥನೆ-ವಿಜ್ಞಾಪನೆಗಳಲ್ಲಿ ನಿತರನಾದೆ.೪ [4]ಪಾಪವನ್ನು ಅರಿಕೆಮಾಡಿ ನನ್ನ ದೇವರಾದ ಸರ್ವೇಶ್ವರನಿಗೆ ಹೀಗೆಂದು ಬಿನ್ನವಿಸಿದೆ: “ಹೇ ಸರ್ವೇಶ್ವರಾ, ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆದ ದೇವರೇ, ನಿಮ್ಮನ್ನು ಪ್ರೀತಿಸಿ, ನಿಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ನೀವು ಮಾಡಿದ ವಾಗ್ದಾನಗಳನ್ನು ಪ್ರೀತಿಯಿಂದ ನೆರವೇರಿಸುತ್ತೀರಿ.೫ [5]“ನಾವು ಪಾಪಾಪರಾಧಗಳನ್ನು ಮಾಡಿ, ಕೆಟ್ಟವರಾಗಿ ನಡೆದಿದ್ದೇವೆ; ನಿಮಗೆ ವಿರುದ್ಧ ತಿರುಗಿಬಿದ್ದು, ನಿಮ್ಮ ಆಜ್ಞಾವಿಧಿಗಳನ್ನು ತೊರೆದುಬಿಟ್ಟಿದ್ದೇವೆ.೬ [6]ಅರಸರಿಗೆ, ಒಡೆಯರಿಗೆ, ಹಿರಿಯರಿಗೆ ಹಾಗು ಜನಸಾಮಾನ್ಯರಿಗೆ ನಿಮ್ಮ ದಾಸರಾದ ಪ್ರವಾದಿಗಳು ನಿಮ್ಮ ಹೆಸರಿನಲ್ಲಿ ನುಡಿದ ಮಾತುಗಳಿಗೆ ನಾವು ಕಿವಿಗೊಡಲೇ ಇಲ್ಲ.೭ [7]ಸರ್ವೇಶ್ವರಾ, ನೀವು ಸತ್ಯಸ್ವರೂಪಿ. ನಾವೋ ಲಜ್ಜೆಗೆಟ್ಟವರು. ಹೌದು, ಯೆಹೂದ್ಯರು ಹಾಗು ಜೆರುಸಲೇಮಿನ ನಿವಾಸಿಗಳು ಈಗಾಗಲೆ ನಿಮಗೆ ವಿರುದ್ಧ ಮಾಡಿದ ದ್ರೋಹದ ನಿಮಿತ್ತ ನಿಮ್ಮಿಂದ ದೇಶವಿದೇಶಗಳಿಗೆ ತಳ್ಳಲ್ಪಟ್ಟಿದ್ದಾರೆ. ದೂರದ ದೇಶಗಳಿಗೂ ಹತ್ತಿರದ ನಾಡುಗಳಿಗೂ ಚದರಿಹೋಗಿರುವ ಎಲ್ಲ ಇಸ್ರಯೇಲರು ನಾಚಿಕೆಗೆ ಈಡಾಗಿದ್ದಾರೆ.೮ [8]ಸ್ವಾಮೀ, ನಿಮಗೆ ವಿರುದ್ಧ ಪಾಪಮಾಡಿದ್ದರಿಂದ ನಾವೂ ನಮ್ಮ ಅರಸರೂ ಒಡೆಯರೂ ಹಿರಿಯರೂ ನಾಚಿಕೆಗೆ ಗುರಿಯಾಗಿದ್ದೇವೆ.೯ [9]ನಮ್ಮ ದೇವರಾದ ಸರ್ವೇಶ್ವರ, ನಮ್ಮನ್ನು ಕರುಣಿಸುವವರೂ ಕ್ಷಮಿಸುವವರೂ ಆಗಿದ್ದಾರೆ. ಆದರೆ ನಾವು ಅವರಿಗೆ ವಿರುದ್ಧ ತಿರುಗಿಬಿದ್ದೆವು.೧೦ [10]ನಮ್ಮ ದೇವರಾದ ಸರ್ವೇಶ್ವರನ ಮಾತನ್ನು ಕೇಳಲಿಲ್ಲ. ಅವರ ದಾಸರಾದ ಪ್ರವಾದಿಗಳ ಮುಖಾಂತರ ನಮಗೆ ಗೊತ್ತುಮಾಡಿದ ಸನ್ಮಾರ್ಗದಲ್ಲಿ ನಾವು ನಡೆಯಲಿಲ್ಲ.೧೧ [11]ಇಸ್ರಯೇಲರೆಲ್ಲರು ನಿಮ್ಮ ಧರ್ಮಶಾಸ್ತ್ರವನ್ನು ಮೀರಿ ನಿಮ್ಮ ಮಾತನ್ನು ಕೇಳಲೊಲ್ಲದೆ ಓರೆಯಾಗಿ ಹೋದರು. ಆದಕಾರಣ ನಿಮ್ಮ ಶಾಪದ ಕೇಡುಗಳನ್ನೂ ದೇವರ ದಾಸನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ನೀವು ಆಣೆಯಿಟ್ಟು ಪ್ರಕಟಿಸಿದ ವಿಪತ್ತುಗಳನ್ನೂ ನಮ್ಮ ಮೇಲೆ ಸುರಿಯಲಾಗಿದೆ. ನಾವು ದ್ರೋಹಿಗಳೇ ಸರಿ.೧೨ [12]ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿದ್ದಾರೆ. ನಮ್ಮನ್ನೂ ನಮ್ಮನ್ನಾಳುವ ಅಧಿಪತಿಗಳನ್ನೂ ಖಂಡಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾರೆ. ಜೆರುಸಲೇಮಿಗೆ ಆದಂಥ ಕೇಡು ವಿಶ್ವದಲ್ಲಿ ಎಂದೂ ಆಗಲಿಲ್ಲ.೧೩ [13]ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆಯೇ ಈ ವಿಪತ್ತೆಲ್ಲಾ ನಮ್ಮ ಮೇಲೆ ಬಂದಿದೆ. ಆದರೂ ನಾವು ನಮ್ಮ ಧರ್ಮಮಾರ್ಗಗಳನ್ನು ತೊರೆದುಬಿಟ್ಟಿದ್ದೇವೆ. ನಿಮ್ಮ ಸತ್ಯೋಪದೇಶವನ್ನು ಗ್ರಹಿಸಿ ನಡೆಯುವಂತೆ ನಮ್ಮ ದೇವರಾದ ಸರ್ವೇಶ್ವರನೆಂಬ ನಿಮ್ಮ ದಯೆಯನ್ನು ಬೇಡಿಕೊಳ್ಳಲಿಲ್ಲ.೧೪ [14]ಆದಕಾರಣ ಸರ್ವೇಶ್ವರ ಈ ಕೇಡನ್ನು ಸಕಾಲಕ್ಕೆ ನಮ್ಮ ಮೇಲೆ ಬರಮಾಡಿದ್ದಾರೆ. ನಮ್ಮ ದೇವರಾದ ಸರ್ವೇಶ್ವರ ತಾವು ಮಾಡುವ ಸಕಲ ಕಾರ್ಯಗಳಲ್ಲೂ ನ್ಯಾಯಸ್ವರೂಪರು. ನಾವೋ ಅವರ ಮಾತನ್ನು ಕೇಳಲಿಲ್ಲ.೧೫ [15]“ಸರ್ವೇಶ್ವರಾ, ನಮ್ಮ ದೇವರೇ, ನೀವು ನಿಮ್ಮ ಭುಜಪರಾಕ್ರಮವನ್ನು ತೋರಿಸಿ, ನಿಮ್ಮ ಜನರನ್ನು ಈಜಿಪ್ಟಿನಿಂದ ಪಾರುಮಾಡಿ, ಇಂದಿನವರೆಗೂ ಸುಪ್ರಸಿದ್ಧವಾದ ಹೆಸರನ್ನು ಪಡೆದುಕೊಂಡವರಾಗಿದ್ದೀರಿ. ಈಗ ಚಿತ್ತೈಸಿ. ನಾವು ಪಾಪಮಾಡಿ ಕೆಟ್ಟವರಾಗಿ ನಡೆದಿದ್ದೇವೆ.೧೬ [16]ಸರ್ವೇಶ್ವರಾ, ನಿಮ್ಮ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿಮ್ಮ ನಗರವೂ ನಿಮ್ಮ ಪವಿತ್ರ ಪರ್ವತವೂ ಆದ ಜೆರುಸಲೇಮ್ ಮೇಲೆ ನಿಮಗಿರುವ ಕೋಪವನ್ನೂ ರೋಷಾಗ್ನಿಯನ್ನೂ ದಯಮಾಡಿ ತೊಲಗಿಸಿಬಿಡಿ. ನಮ್ಮ ಮತ್ತು ನಮ್ಮ ಪೂರ್ವಜರ ಪಾಪಾಪರಾಧಗಳ ನಿಮಿತ್ತ ಜೆರುಸಲೇಮ್ ಮತ್ತು ನಿಮ್ಮ ಜನತೆ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆ.೧೭ [17]ಓ ನಮ್ಮ ದೇವರೇ, ನಿಮ್ಮ ದಾಸನ ಪ್ರಾರ್ಥನೆ ವಿಜ್ಞಾಪನೆಗಳನ್ನು ಈಗ ಆಲಿಸಿರಿ. ಹಾಳಾಗಿರುವ ನಿಮ್ಮ ಪವಿತ್ರಾಲಯವನ್ನು ಸರ್ವೇಶ್ವರ ಎಂಬ ನಿಮ್ಮ ಹೆಸರಿನ ನಿಮಿತ್ತವೇ ಪ್ರಸನ್ನ ಮುಖದಿಂದ ನೋಡಿ.೧೮ [18]ನನ್ನ ದೇವರೇ, ಕಿವಿಗೊಟ್ಟು ಕೇಳಿ, ಕಣ್ಣು ತೆರೆದು ನಮ್ಮ ಹಾಳು ಪ್ರದೇಶಗಳನ್ನೂ ನಿಮ್ಮ ಹೆಸರುಗೊಂಡಿರುವ ನಗರವನ್ನೂ ನೋಡಿ. ನಾವು ಸದ್ಧರ್ಮಿಗಳೇನೂ ಅಲ್ಲ. ನಿಮ್ಮ ಮಹಾಕೃಪೆಯನ್ನೇ ನಂಬಿಕೊಂಡು ಈ ಬಿನ್ನಹಗಳನ್ನು ನಿಮ್ಮ ಮುಂದೆ ಅರಿಕೆಮಾಡುತ್ತಿದ್ದೇವೆ.೧೯ [19]ಸ್ವಾಮೀ, ಕೇಳಿ; ಸ್ವಾಮೀ, ಕ್ಷಮಿಸಿ; ಸ್ವಾಮೀ, ಆಲಿಸಿ ಕಾರ್ಯವನ್ನು ಸಾಧಿಸಿ. ತಡಮಾಡಬೇಡಿ. ನನ್ನ ದೇವರೇ, ನಿಮ್ಮ ಜನತೆ ಹಾಗು ನಿಮ್ಮ ನಗರ ನಿಮ್ಮ ಹೆಸರಿನವುಗಳು. ಆದಕಾರಣ, ನಿಮ್ಮ ಹೆಸರನ್ನು ಕಾಪಾಡಿಕೊಳ್ಳಿ.”೨೦ [20]ನಾನು ಬಾಯಿಬಿಟ್ಟು ಬೇಡಿಕೊಂಡೆ. ನನ್ನ ಮತ್ತು ನನ್ನ ಜನರಾದ ಇಸ್ರಯೇಲರ ಪಾಪವನ್ನು ಅರಿಕೆಮಾಡುತ್ತಾ ನನ್ನ ದೇವರ ಪವಿತ್ರ ಪರ್ವತದ ವಿಷಯವಾಗಿ ದೇವರಾದ ಸರ್ವೇಶ್ವರನಿಗೆ ಬಿನ್ನವಿಸಿದೆ.೨೧ [21]ಹೀಗೆ ಪ್ರಾರ್ಥನೆ ಮಾಡುತ್ತಿರುವಾಗಲೇ, ಮೊದಲು ನನ್ನ ಕನಸಿನಲ್ಲಿ ಕಂಡ ಗಬ್ರಿಯೇಲೆಂಬ ವ್ಯಕ್ತಿ ಅಸುರುಸುರಾಗಿ ಹಾರಿಬಂದು, ಸಂಧ್ಯಾನೈವೇದ್ಯ ಸಮಯದಲ್ಲಿ ನನ್ನನ್ನು ಸೇರಿ, ನನ್ನೊಂದಿಗೆ ಮಾತಾಡಿ, ಹೀಗೆಂದು ಉಪದೇಶ ಮಾಡಿದನು:೨೨ [22]“ದಾನಿಯೇಲನೇ, ನಿನಗೆ ಜ್ಞಾನಬೋಧೆ ಮಾಡಲು ಈಗ ಬಂದಿದ್ದೇನೆ;೨೩ [23]ನಿನ್ನ ವಿಜ್ಞಾಪನೆಯ ಆರಂಭದಲ್ಲೇ ದೇವರ ಅಪ್ಪಣೆಯಾಯಿತು. ಅದನ್ನು ನಿನಗೆ ತಿಳಿಸಲು ಇಲ್ಲಿಗೆ ಬಂದಿದ್ದೇನೆ. ನೀನು ದೇವರಿಗೆ ಅತಿ ಪ್ರಿಯನು. ಈ ದೈವೋಕ್ತಿಯನ್ನು ಆಲೋಚಿಸು; ಈ ದರ್ಶನವನ್ನು ಗ್ರಹಿಸಿಕೊ:೨೪ [24]“ಅಧರ್ಮವನ್ನು ಕೊನೆಗಾಣಿಸುವುದಕ್ಕೆ ಪಾಪಗಳನ್ನು ತೀರಿಸುವುದಕ್ಕೆ, ಅಪರಾಧವನ್ನು ನಿವಾರಿಸುವುದಕ್ಕೆ, ಸನಾತನ ಧರ್ಮವನ್ನು ಸ್ಥಾಪಿಸುವುದಕ್ಕೆ, ದರ್ಶನವನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥ ಮಾಡುವುದಕ್ಕೆ, ಅತಿಪರಿಶುದ್ಧವಾದುದನ್ನು ಅಭಿಷೇಕಿಸುವುದಕ್ಕೆ ನಿನ್ನ ಜನಕ್ಕೂ ನಿನ್ನ ಪವಿತ್ರನಗರಕ್ಕೂ ಏಳೆಪ್ಪತ್ತು ವರ್ಷಗಳು ಕಳೆಯಬೇಕೆಂದು ನಿಷ್ಕರ್ಷೆಯಾಗಿದೆ.೨೫ [25]ಇದನ್ನು ತಿಳಿದು ಮನದಟ್ಟು ಮಾಡಿಕೊ, ‘ಹಿಂದಿರುಗಿ ಜೆರುಸಲೇಮನ್ನು ಪುನರ್ ನಿರ್ಮಿಸಿ’ ಎಂಬ ದೈವೋಕ್ತಿ ಹೊರಡುವಂದಿನಿಂದ ಪ್ರಭುವಾಗಿ ಅಭಿಷಿಕ್ತನಾದವನು ಬರುವುದರೊಳಗೆ ಏಳು ಸಾರಿ ಏಳು ವರ್ಷಗಳು ಕಳೆಯಬೇಕು. ಅದು ಪುನಃ ಬೀದಿ ಚೌಕಗಳಿಂದಲೂ ಕೋಟೆಕೊತ್ತಲುಗಳಿಂದಲೂ ಕಟ್ಟಲ್ಪಟ್ಟು ಏಳು ಸಾರಿ ಅರವತ್ತೆರಡು ವರ್ಷಗಳು ಇರುವುದು. ಆ ಕಾಲವು ಬಹು ಕಷ್ಟಕರವಾದ ಕಾಲವಾಗಿರುವುದು.೨೬ [26]ಆ ಏಳುಸಾರಿ ಅರವತ್ತೆರಡು ವರ್ಷಗಳು ಮುಗಿದ ಮೇಲೆ ಅಭಿಷಿಕ್ತನನ್ನು ಅನ್ಯಾಯವಾಗಿ ಕೊಲ್ಲುವರು. ದಂಡೆತ್ತಿಬರುವ ರಾಜನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು. ಪ್ರಳಯದಿಂದಲೋ ಎಂಬಂತೆ ನಗರವು ನಾಶವಾಗುವುದು. ಅಂತ್ಯದವರೆಗೆ ಯುದ್ಧವೂ ನಿಶ್ಚಿತ ವಿನಾಶವೂ ಸಂಭವಿಸುವುವು.೨೭ [27]ಆ ರಾಜನು ಏಳು ವರ್ಷ ಗಳ ಮಟ್ಟಿಗೆ ಬಹುಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ಈ ಅವಧಿಯ ಅರ್ಧಭಾಗದಲ್ಲಿ ಬಲಿನೈವೇದ್ಯಗಳನ್ನು ನಿಲ್ಲಿಸಿಬಿಡುವನು. ದೇವಾಲಯದ ರೆಕ್ಕೆಯ ಮೇಲೆ ಅಸಹ್ಯವಾದುದನ್ನು ಸ್ಥಾಪಿಸಲಾಗುವುದು. ಅವನ್ನು ಅಲ್ಲಿ ಇಟ್ಟು ಅಶುದ್ಧಗೊಳಿಸಿದ ಘಾತುಕನು ನಿಶ್ಚಿತ ಪ್ರಳಯದಲ್ಲಿ ಮುಳುಗುವ ತನಕ ಅವು ಅಲ್ಲೇ ಇರುವುವು.”Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ದಾನಿಯೇಲನ ೯ 00:00:00 00:00:00 0.5x 2.0x https://beblia.bible:81/BibleAudio/kannadakncl/daniel/009.mp3 12 9