× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಹೊಶೇಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೦ ೧೨೩೪೫೬೭೮೯೧೦೧೧೧೨೧೩೧೪1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫1 1 1 ಕನ್ನಡ ಬೈಬಲ್ (KNCL) 2016 ಹೊಶೇಯನ ೧೦ ಟಿಪ್ಪಣಿಗಳನ್ನು ಉಳಿಸಿ ೧ [1]ಇಸ್ರಯೇಲ್ ಸೊಂಪಾಗಿ ಬೆಳೆದ ದ್ರಾಕ್ಷಾಲತೆ, ಫಲಭರಿತ ದ್ರಾಕ್ಷಾಬಳ್ಳಿ, ಅದರ ಫಲ ಹೆಚ್ಚಿದಂತೆಲ್ಲ ಬಲಿಪೀಠಗಳು ಹೆಚ್ಚಿಕೊಂಡಿವೆ. ಆ ನಾಡು ಅಭಿವೃದ್ಧಿಯಾದಂತೆಲ್ಲ, ಹೆಚ್ಚು ಸುಂದರವಾದ ವಿಗ್ರಹಸ್ತಂಭಗಳು ನಿರ್ಮಿತವಾಗಿವೆ.೨ [2]ಅವರದು ವಂಚನೆಯ ಮನಸ್ಸು. ಈಗ ಅವರು ತಮ್ಮ ಪಾಪಕ್ಕೆ ತಕ್ಕ ದಂಡನೆಯನ್ನು ಅನುಭವಿಸಲೇಬೇಕು. ಸರ್ವೇಶ್ವರಸ್ವಾಮಿ ಅವರ ಯಜ್ಞವೇದಿಗಳನ್ನು ಕೆಡವುವರು. ಅವರ ಪೂಜಾಸ್ತಂಭಗಳನ್ನು ಒಡೆದುಹಾಕುವರು.೩ [3]“ನಮಗೆ ರಾಜನೇ ಇಲ್ಲ. ನಾವು ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಲ್ಲ. ನಮಗೆ ರಾಜನಿದ್ದರೂ ಅವನು ನಮಗೆ ಏನು ತಾನೇ ಮಾಡಿಯಾನು?” ಎಂದು ಆ ಜನರು ಆಡಿಕೊಳ್ಳುತ್ತಾರೆ.೪ [4]ಅವರು ಹರಟೆಹೊಡೆಯುತ್ತಾರೆ; ಸುಳ್ಳಾಣೆ ಇಟ್ಟು ಸಂಧಾನಮಾಡಿಕೊಳ್ಳುತ್ತಾರೆ. ಉತ್ತಹೊಲದಲ್ಲಿ ಬೆಳೆಯುವ ವಿಷದ ಕಳೆಗಳಂತೆ ನ್ಯಾಯಸ್ಥಾನಕ್ಕೆ ಬರುವ ಅವರ ವಾದವಿವಾದಗಳು ಹೆಚ್ಚಿಕೊಳ್ಳುತ್ತವೆ.೫ [5]ಬೇತಾವೆನಿನ ಬಸವನಿಗೆ ಸಮಾರ್ಯದ ನಿವಾಸಿಗಳು ದಿಗಿಲುಗೊಳ್ಳುವರು; ಅದನ್ನು ಕಾಣದುದಕ್ಕಾಗಿ ಭಕ್ತಜನರು ಎದೆಬಡಿದುಕೊಳ್ಳುವರು. ಅದರ ಮಹಿಮೆ ನಂದಿಹೋಯಿತು ಎಂದು ಪೂಜಾರಿಗಳು ಗೋಳಾಡುವರು.೬ [6]ಆ ವಿಗ್ರಹವನ್ನು ಅಸ್ಸೀರಿಯದ ಜಗಳಗಂಟಿ ರಾಜನಿಗೆ ಕಾಣಿಕೆಯಾಗಿ ಕೊಡಲಾಗುವುದು. ಎಫ್ರಯಿಮಿಗೆ ಅವಮಾನವಾಗುವುದು. ಇಸ್ರಯೇಲ್ ತಾನು ಕೆತ್ತಿಸಿಕೊಂಡ ವಿಗ್ರಹಕ್ಕಾಗಿ ನಾಚಿಕೆಗೀಡಾಗುವುದು.೭ [7]ಸಮಾರ್ಯದ ರಾಜನು ಪ್ರವಾಹದಲ್ಲಿ ಕೊಚ್ಚಿಕೊಂಡುಹೋಗುವ ಕಡ್ಡಿಯಂತೆ ಕಣ್ಮರೆ ಆಗುವನು.೮ [8]ಇಸ್ರಯೇಲಿನ ಪಾಪಕ್ಕೆ ಆಸ್ಪದ ಆಗಿದ್ದ ಆವೆನಿನ ಪೂಜಾಸ್ಥಾನಗಳು ನಾಶವಾಗುವುವು. ಪಾಳುಬಿದ್ದ ಬಲಿಪೀಠಗಳ ಮೇಲೆ ಮುಳ್ಳುಕಳ್ಳಿಗಳು ಹುಟ್ಟಿಕೊಳ್ಳುವುವು. ಅಲ್ಲಿನ ಜನರು: ‘ಪರ್ವತವೇ, ನಮ್ಮನ್ನು ತುಳಿದುಬಿಡಿ; ಗುಡ್ಡಗಳೇ ನಮ್ಮನ್ನು ನುಂಗಿಬಿಡಿ’ ಎಂದು ಕೂಗಿಕೊಳ್ಳುವರು.”೯ [9]“ಇಸ್ರಯೇಲ್, ನೀನು ಗಿಬ್ಯದಲ್ಲಿದ್ದ ಕಾಲದಿಂದ ನನಗೆ ವಿರುದ್ಧ ಪಾಪಮಾಡುತ್ತಲೇ ಬಂದಿರುವೆ. ನಿನ್ನ ಜನರು ಪಾಪದಲ್ಲಿಯೇ ಮುಂದುವರಿಯುತ್ತಿದ್ದಾರೆ. ಗಿಬ್ಯದ ನಿವಾಸಿಗಳು ಯುದ್ಧಕ್ಕೆ ತುತ್ತಾಗಲಿದ್ದಾರೆ.೧೦ [10]ಸಕಾಲದಲ್ಲಿ ನಾನು ಅವರನ್ನು ದಂಡಿಸುವೆನು; ಅವರ ಇಮ್ಮಡಿ ಅಪರಾಧಕ್ಕೆ ತಕ್ಕ ಶಾಸ್ತಿ ಆಗುವುದು; ಆಗ ಇತರ ರಾಷ್ಟ್ರಗಳು ಅವರಿಗೆ ವಿರುದ್ಧವಾಗಿ ಒಂದುಗೂಡುವುವು.೧೧ [11]“ಎಫ್ರಯಿಮ್ ತೆನೆಹುಲ್ಲನ್ನು ತುಳಿಯುವುದರಲ್ಲಿ ಪಳಗಿರುವ ಹೋರಿಕರು. ಅದರ ಅಂದವಾದ ಹೆಗಲಮೇಲೆ ನೇಗಿಲನ್ನು ಇಟ್ಟಿರಲಿಲ್ಲ. ಜುದೇಯವು ಉಳುವಂತೆ ಮಾಡಿದೆನು. ಯಕೋಬ್ ಕುಂಟೆ ಎಳೆಯುವಂತೆ ಮಾಡಿದೆನು. ಈಗ ಎಫ್ರಯಿಮನ್ನು ನೊಗಕ್ಕೆ ಹೂಡುವೆನು.೧೨ [12]ನಾನು ಇಂತೆಂದೆ: “ಪಾಳುಬಿದ್ದ ನೆಲವನ್ನು ಉತ್ತು ಹದಮಾಡಿರಿ; ನೀತಿಯ ಬೀಜವನ್ನು ಬಿತ್ತಿರಿ; ಪ್ರೀತಿಯ ಫಲವನ್ನು ಕೊಯ್ಯಿರಿ. ಸಮಯವು ಸನ್ನಿಹಿತವಾಗಿದೆ. ಸರ್ವೇಶ್ವರ ಆಗಮಿಸಿ ನಿಮ್ಮ ಮೇಲೆ ನೀತಿಯನ್ನು ಮಳೆಗರೆಯುವಂತೆ ಅವರಿಗೆ ಶರಣುಹೋಗಬೇಕು.೧೩ [13]ಇದಕ್ಕೆ ಬದಲಾಗಿ ನೀನು ಅಧರ್ಮದ ಬೀಜವನ್ನು ಬಿತ್ತಿರುವೆ, ಅನ್ಯಾಯದ ಬೆಳೆಯನ್ನು ಕೊಯ್ದಿರುವೆ. ಅಸತ್ಯದ ಫಲವನ್ನು ಉಂಡಿರುವೆ. ನಿನ್ನ ಭುಜಬಲದಲ್ಲೂ ಸಮರಶೂರರಲ್ಲೂ ಭರವಸೆಯಿಟ್ಟೆ.೧೪ [14]ಎಂತಲೇ ನಿನ್ನ ಜಾತಿಜನಾಂಗಗಳ ವಿರುದ್ಧ ಯುದ್ಧ ಘೋಷಣೆ ಮೊಳಗುವುದು. ಕಾಳಗದ ದಿನದಲ್ಲಿ ಕೋಟೆಕೊತ್ತಲಗಳು ಸೂರೆಯಾಗುವುವು. ಶಲ್ಮಾನ ರಾಜನು ಬೇತ್ಅರ್ಬೇಲ್ ಪಟ್ಟಣವನ್ನು ನೆಲಸಮಮಾಡಿದಂತೆ ಆಗುವುದು. ತಾಯಿ ಮಕ್ಕಳನ್ನು ಬಂಡೆಗೆ ಅಪ್ಪಳಿಸಿ ಸಾಯಿಸಿದಂತೆ ಇದೆಲ್ಲ ನಡೆಯುವುದು.೧೫ [15]ಬೇತೇಲಿನ ಜನರೇ, ನಿಮಗೂ ಇಂಥ ದುರ್ಗತಿಯೇ ಸಂಭವಿಸಲಿರುವುದು. ಬೆಳಗಾಗುವುದರೊಳಗೆ ಇಸ್ರಯೇಲಿನ ರಾಜನು ಹತನಾಗುವನು. ಕಾರಣ, ನಿಮ್ಮ ಅಕ್ರಮವು ಘೋರವಾದುದು!”Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಹೊಶೇಯನ ೧೦ 00:00:00 00:00:00 0.5x 2.0x https://beblia.bible:81/BibleAudio/kannadakncl/hosea/010.mp3 14 10