× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಹೊಶೇಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨ ೧೨೩೪೫೬೭೮೯೧೦೧೧೧೨೧೩೧೪1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩1 1 1 ಕನ್ನಡ ಬೈಬಲ್ (KNCL) 2016 ಹೊಶೇಯನ ೨ ಟಿಪ್ಪಣಿಗಳನ್ನು ಉಳಿಸಿ ೧ [1]ನಿಮ್ಮ ಸಹೋದರರನ್ನು ‘ನಮ್ಮವರೇ' ಎಂದೂ ನಿಮ್ಮ ಸಹೋದರಿಯರನ್ನು’ಪ್ರೀತಿಪಾತ್ರರೇ’ ಎಂದೂ ಸಂಬೋಧಿಸಿರಿ.೨ [2]ಮಕ್ಕಳೇ, ವಾದಿಸಿರಿ; ನಿಮ್ಮ ತಾಯಿಯೊಡನೆ ವಾದಿಸಿರಿ. ಅವಳು ನನ್ನ ಪತ್ನಿಯಲ್ಲ, ನಾನು ಅವಳ ಪತಿಯಲ್ಲ. ತನ್ನ ಮುಖದಿಂದ ವೇಶ್ಯಾಚಾರದ ಸೋಗನ್ನೂ ಸ್ತನಮಧ್ಯದಿಂದ ವ್ಯಭಿಚಾರದ ಬೆಡಗನ್ನೂ ತ್ಯಜಿಸಲಿ.೩ [3]ಇಲ್ಲವಾದರೆ ಅವಳನ್ನು ನಗ್ನವಾಗಿಸಿ (ಹುಟ್ಟಿದಾಗ ಇದ್ದಂತೆ) ಬೆತ್ತಲೆಯಾಗಿ ನಿಲ್ಲಿಸುವೆನು. ಅವಳನ್ನು ಬೆಂಗಾಡನ್ನಾಗಿ ಮಾಡಿ, ಮರುಭೂಮಿಯಂತೆ ಮಾರ್ಪಡಿಸಿ, ನೀರಡಿಕೆಯಿಂದ ಸಾಯುವಂತೆ ಮಾಡುವೆನು.೪ [4]ಅವಳ ಮಕ್ಕಳಿಗೂ ಕರುಣೆಯನ್ನು ತೋರಿಸೆನು; ಅವರು ವ್ಯಭಿಚಾರದಿಂದ ಹುಟ್ಟಿದವರು.೫ [5]ಅವರ ತಾಯಿ ವೇಶ್ಯೆಯಾಗಿದ್ದಾಳೆ. ಲಜ್ಜೆಗೆಟ್ಟ ಹೆಂಗಸಾಗಿ ವರ್ತಿಸಿದ್ದಾಳೆ. ‘ನನಗೆ ಅನ್ನಪಾನ, ಉಣ್ಣೆ ಉಡಿಗೆ, ಎಣ್ಣೆತೈಲ, ಪಾಯಸಪಾನಕಗಳನ್ನು ಕೊಡುವಂಥ ನಲ್ಲರ ಹಿಂದೆ ಹೋಗುವೆನು’ ಎಂದುಕೊಂಡಿದ್ದಾಳೆ.೬ [6]ಆದುದರಿಂದ ನಾನು ಅವಳ ದಾರಿಗೆ ಮುಳ್ಳುಬೇಲಿಹಾಕುವೆನು. ಇಷ್ಟಬಂದ ದಾರಿಯನ್ನು ಹಿಡಿಯದಂತೆ ಅವಳ ಮುಂದೆ ಅಡ್ಡಗೋಡೆಯನ್ನು ಎಬ್ಬಿಸುವೆನು.೭ [7]ಅವಳು ತನ್ನ ನಲ್ಲರನ್ನು ಹಿಂದಟ್ಟಿ ಹೋದರೂ ಅವರನ್ನು ಸಂಧಿಸಲಾರಳು; ಅವರನ್ನು ಹುಡುಕಿದರೂ ಕಂಡುಹಿಡಿಯಲಾರಳು. ಆಗ ಅವಳು: ‘ನನ್ನನ್ನು ಮದುವೆಯಾದ ಪತಿಯ ಬಳಿಗೆ ಹಿಂತಿರುಗುವೆನು. ಈಗಿನ ಸ್ಥಿತಿಗಿಂತ ಆಗಿನ ಸ್ಥಿತಿಯೇ ಉತ್ತಮವಾಗಿತ್ತು’ ಎಂದುಕೊಳ್ಳುವಳು.೮ [8]ಅವಳಿಗೆ ದವಸಧಾನ್ಯ, ದ್ರಾಕ್ಷಾರಸ, ತೈಲಗಳನ್ನು ಕೊಟ್ಟವನು ನಾನೇ ಎಂಬುದನ್ನು ಅರಿತುಕೊಳ್ಳದೆಹೋದಳು. ನಾನು ಧಾರಾಳವಾಗಿ ಕೊಟ್ಟ ಬೆಳ್ಳಿಬಂಗಾರಗಳನ್ನು ಬಾಳನ ಪೂಜೆಗೆ ಉಪಯೋಗಿಸಿದಳು.೯ [9]ಆದಕಾರಣ ನಾನು ದವಸಧಾನ್ಯ, ದ್ರಾಕ್ಷಾರಸಗಳನ್ನು ಆಯಾ ಕಾಲದಲ್ಲಿ ಹಿಂದಕ್ಕೆ ತೆಗೆದುಕೊಳ್ಳುವೆನು. ಅವಳ ಮಾನವನ್ನು ಮುಚ್ಚುತ್ತಿದ್ದ ಉಣ್ಣೆಉಡಿಗೆಗಳನ್ನು ಹಿಂತೆಗೆದುಕೊಳ್ಳುವೆನು.೧೦ [10]ಅವಳ ನಲ್ಲರ ಕಣ್ಣೆದುರಿಗೆ ಅವಳ ಲಜ್ಜೆಗೇಡಿತನವನ್ನು ಬಯಲುಮಾಡುವೆನು. ಅವಳನ್ನು ನನ್ನ ಕೈಯಿಂದ ಯಾರೂ ಬಿಡಿಸರು.೧೧ [11]ಅವಳ ಸಂಭ್ರಮಗಳನ್ನು - ಹಬ್ಬ, ಹುಣ್ಣಿಮೆ, ಸಬ್ಬತ್ ಆಚರಣೆ, ಸಭೆಸಮಾರಂಭಗಳು - ಇವೆಲ್ಲವನ್ನೂ ನಿಲ್ಲಿಸಿಬಿಡುವೆನು.೧೨ [12]‘ನನ್ನ ನಲ್ಲರು ನನಗೆ ಉಡುಗೊರೆಯಾಗಿ ಕೊಟ್ಟವುಗಳು’ ಎಂದು ಅವಳು ಹೇಳಿಕೊಳ್ಳುವ ದ್ರಾಕ್ಷಾಲತೆಗಳನ್ನೂ ಅಂಜೂರದ ವೃಕ್ಷಗಳನ್ನೂ ನಾಶಪಡಿಸುವೆನು. ಅವುಗಳನ್ನು ಕಾಡುಪೊದೆಗಳನ್ನಾಗಿ ಮಾರ್ಪಡಿಸುವೆನು. ಕಾಡುಮೃಗಗಳು ಅವುಗಳನ್ನು ಕಬಳಿಸುವುವು.೧೩ [13]ಅವಳು ನನ್ನನ್ನು ಮರೆತುಬಿಟ್ಟಿದ್ದಾಳೆ; ಬಂಗಾರದ ಮೂಗುತಿ ಮುಂತಾದ ಒಡವೆಗಳಿಂದ ಶೃಂಗರಿಸಿಕೊಂಡು ನಲ್ಲರನ್ನು ವರಿಸುತ್ತಾ ಹೋಗಿದ್ದಾಳೆ. ಅಷ್ಟೇ ಅಲ್ಲ, ಬಾಳ್ ದೇವತೆಗಳ ಹಬ್ಬದಲ್ಲಿ ಧೂಪಾರತಿಯನ್ನು ಬೆಳಗಿದ್ದಾಳೆ. ಈ ಕಾರಣ ನಾನು ಅವಳನ್ನು ದಂಡಿಸುವೆನು. ಇದು ಸರ್ವೇಶ್ವರಸ್ವಾಮಿಯ ನುಡಿ.೧೪ [14]ಆದುದರಿಂದ ಇಗೋ, ನಾನು ಅವಳನ್ನು ಪುನಃ ಬೆಂಗಾಡಿಗೆ ಕರೆದೊಯ್ಯುವೆನು. ಹೃದಯಂಗಮವಾಗಿ ಅವಳನ್ನು ಒಲಿಸಿಕೊಂಡು ಮಾತಾಡುವೆನು.೧೫ [15]ಅವಳ ದ್ರಾಕ್ಷಾತೋಟಗಳನ್ನು ಅಲ್ಲಿಯೇ ಅವಳಿಗೆ ಹಿಂದಿರುಗಿಕೊಡುವೆನು. ಆಕೋರಿನ ಕಣಿವೆಯನ್ನು ಅವಳ ಆಶಾದ್ವಾರವನ್ನಾಗಿ ಮಾಡುವೆನು. ಅವಳು ತನ್ನ ಯೌವನದ ದಿನಗಳಲ್ಲಿಯೂ ಈಜಿಪ್ಟಿನಿಂದ ಬಿಡುಗಡೆಯಾಗಿ ಬಂದ ಸಮಯದಲ್ಲಿಯೂ ಇದ್ದಂತೆ ಅಲ್ಲಿ ಒಲುಮೆಯಿಂದಿರುವಳು.೧೬ [16]ಸರ್ವೇಶ್ವರ ಇಂತೆನ್ನುತ್ತಾರೆ: ಆ ದಿನಗಳಲ್ಲಿ ನೀನು ನನ್ನನ್ನು ‘ಬಾಳ್ದೇವತೆ’ ಎಂದು ಕರೆಯದೆ ‘ನನ್ನ ಪತಿ’ ಎಂದು ಕರೆಯುವೆ.೧೭ [17]ಬಾಳ್ದೇವತೆಗಳ ಹೆಸರುಗಳನ್ನು ನಿನ್ನ ಬಾಯಿಂದ ತೊಲಗಿಸುವೆನು; ಇನ್ನೆಂದಿಗೂ ಅವುಗಳನ್ನು ನೀನು ಉಚ್ಛರಿಸದಂತೆ ಮಾಡುವೆನು.೧೮ [18]ಆ ದಿನಗಳಲ್ಲಿ ನನ್ನ ಜನರಿಗೆ ಹಾನಿಮಾಡದಂತೆ ಕಾಡಿನ ಮೃಗಗಳೊಂದಿಗೂ, ಆಕಾಶದ ಪಕ್ಷಿಗಳೊಂದಿಗೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೊಂದಿಗೂ ಒಪ್ಪಂದಮಾಡಿಕೊಳ್ಳುವೆನು. ಬಿಲ್ಲುಬಾಣ, ಕತ್ತಿಕಠಾರಿಗಳು ಅವರ ನಾಡಿನಲ್ಲಿ ಇಲ್ಲದಂತೆ ಮಾಡುವೆನು; ನನ್ನ ಜನರು ಸುರಕ್ಷಿತವಾಗಿ ನೆಲಸುವಂತೆ ಮಾಡುವೆನು.೧೯ [19]ನನ್ನವಳನ್ನಾಗಿ ಮಾಡಿಕೊಳ್ಳುವೆನು ನಿನ್ನನ್ನು ಅನವರತ ನಿನ್ನ ವರಿಸುವೆನು ಕರುಣೆಯಿಂದ, ನೀತಿನ್ಯಾಯದಿಂದ, ನಿಶ್ಚಲ ಪ್ರೀತಿಯಿಂದ.೨೦ [20]ನಂಬಿಕೆಯಿಂದ ಸ್ವೀಕರಿಸುವೆನು ನಿನ್ನನು ಆಗ ನೀ ಅರಿತುಕೊಳ್ಳುವೆ ಸರ್ವೇಶ್ವರನಾದ ನನ್ನನು.೨೧ [21]ಸರ್ವೇಶ್ವರ ಇಂತೆನ್ನುತ್ತಾರೆ: ಆ ದಿನದಂದು ಪ್ರೀತಿಸುವೆನು ನಿನ್ನನು; ಆಲಿಸುವೆನು ಆಗಸದ ಮೊರೆಯನು.೨೨ [22]ಆಗಸವು ಆಲಿಸುವುದು ಭೂಮಿಯ ಮೊರೆಯನು ಇವು ಆಲಿಸುವುವು ಇಸ್ರಯೇಲಿನ ಮೊರೆಯನು.೨೩ [23]ನನ್ನ ನಾಮದ ಪ್ರಯುಕ್ತವೇ, ಮಾಡುವೆನು ಇಸ್ರಯೇಲ್ ಏಳಿಗೆಯಾಗುವಂತೆ ಜಗದೊಳಗೆ ತೋರಿಸುವೆನು ಪ್ರೀತಿವಾತ್ಸಲ್ಯವನ್ನು ಲೋರುಹಾಮಳಿಗೆ ಹೇಳುವೆನು ‘ನೀನು ನನ್ನ ಪ್ರಜೆ’ಯೆಂದು ಲೋಅಮ್ಮಿಗೆ ಭಜಿಸುವರವರು ‘ನೀವೇ ನಮ್ಮ ದೇವರು’ ಎಂದು ನನಗೆ.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಹೊಶೇಯನ ೨ 00:00:00 00:00:00 0.5x 2.0x https://beblia.bible:81/BibleAudio/kannadakncl/hosea/002.mp3 14 2