× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಹೊಶೇಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೪ ೧೨೩೪೫೬೭೮೯೧೦೧೧೧೨೧೩೧೪1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯1 1 1 ಕನ್ನಡ ಬೈಬಲ್ (KNCL) 2016 ಹೊಶೇಯನ ೪ ಟಿಪ್ಪಣಿಗಳನ್ನು ಉಳಿಸಿ ೧ [1]ಇಸ್ರಯೇಲಿನವರೇ, ಸರ್ವೇಶ್ವರಸ್ವಾಮಿಯ ವಾಕ್ಯವನ್ನು ಆಲಿಸಿರಿ: “ಈ ದೇಶದಲ್ಲಿ ಸತ್ಯ, ಪ್ರೀತಿ, ಭಕ್ತಿ ಎಂಬುದೇ ಇಲ್ಲ. ಇಲ್ಲಿನ ನಿವಾಸಿಗಳ ಮೇಲೆ ಸರ್ವೇಶ್ವರ ಆಪಾದನೆ ಹೊರಿಸಿದ್ದಾರೆ.೨ [2]ಸುಳ್ಳುಸಾಕ್ಷಿ, ನರಹತ್ಯೆ, ಕಳ್ಳತನ, ವ್ಯಭಿಚಾರ ಇವೆಲ್ಲ ತುಂಬಿಕೊಂಡಿವೆ; ದೊಂಬಿದಾಂಧಲೆಗಳು ನಡೆಯುತ್ತಿವೆ, ನಾಡೆಲ್ಲ ರಕ್ತಮಯವಾಗಿದೆ.೩ [3]ಇದರಿಂದ ನಾಡು ಶೋಕಸಾಗರದಲ್ಲಿ ಮುಳುಗಿದೆ. ಅದರ ನಿವಾಸಿಗಳೆಲ್ಲ ನರಳುತ್ತಿದ್ದಾರೆ. ನೆಲದ ಮೇಲಿನ ಜಂತುಗಳು, ಆಕಾಶದ ಪಕ್ಷಿಗಳು ಬಳಲುತ್ತಿವೆ. ಜಲಜಂತುಗಳು ಸಹ ನಶಿಸಿಹೋಗುತ್ತಿವೆ.೪ [4]“ಯಾರೂ ಪ್ರತಿಭಟಿಸದಿರಲಿ, ಯಾರೂ ಜನರನ್ನು ಖಂಡಿಸದಿರಲಿ. ನನ್ನ ಆಪಾದನೆ ಇರುವುದು, ಎಲೈ ಯಾಜಕರೇ, ನಿಮ್ಮ ಮೇಲೆಯೇ.೫ [5]ಹಗಲಿನಲ್ಲೇ ನೀವು ಮುಗ್ಗರಿಸುತ್ತೀರಿ. ರಾತ್ರಿಯಲ್ಲಿ ಪ್ರವಾದಿಗಳು ಸಹ ನಿಮ್ಮೊಂದಿಗೆ ಮುಗ್ಗರಿಸುತ್ತಾರೆ. ನಿಮ್ಮ ವಂಶವೃಕ್ಷವನ್ನೇ ನಾನು ನಿರ್ಮೂಲಮಾಡುವೆನು.೬ [6]ಜನರು ಜ್ಞಾನಹೀನರಾಗಿ ಅಳಿದುಹೋಗುತ್ತಿದ್ದಾರೆ. “ನೀವು ದೈವಜ್ಞಾನವನ್ನು ತಿರಸ್ಕರಿಸಿದ್ದೀರಿ; ನಾನು ಸಹ ಯಾಜಕವರ್ಗದಿಂದ ನಿಮ್ಮನ್ನು ವರ್ಜಿಸಿಬಿಡುತ್ತೇನೆ. ನೀವು ದೇವರ ಧರ್ಮೋಪದೇಶವನ್ನು ಮರೆತುಬಿಟ್ಟಿದ್ದೀರಿ; ನಾನು ನಿಮ್ಮ ಮಕ್ಕಳನ್ನು ಮರೆತುಬಿಡುತ್ತೇನೆ.೭ [7]“ಅವರ ಸಂತಾನ ಹೆಚ್ಚಿದ ಹಾಗೆಲ್ಲ ಅವರು ನನ್ನ ವಿರುದ್ಧ ಪಾಪಮಾಡುತ್ತಾ ಬಂದಿದ್ದಾರೆ. ಅವರ ಮಾನವನ್ನು ಅವಮಾನವನ್ನಾಗಿ ಮಾರ್ಪಡಿಸುತ್ತೇನೆ.೮ [8]ನನ್ನ ಜನರ ಪಾಪವೇ ಅವರಿಗೆ ಜೀವನಾಧಾರ. ಎಂತಲೇ ಅವರು ಪಾಪಕೃತ್ಯಗಳನ್ನೇ ಅಧಿಕವಾಗಿ ಬಯಸುತ್ತಾರೆ.೯ [9]ಪ್ರಜೆಗಳಂತೆಯೇ ಯಾಜಕ, ನಿಮ್ಮ ದುಷ್ಕೃತ್ಯಗಳಿಗೆ ತಕ್ಕ ದಂಡನೆಯನ್ನು ವಿಧಿಸುತ್ತೇನೆ. ಅವುಗಳ ಪ್ರತಿಫಲವನ್ನು ನೀವೇ ಅನುಭವಿಸುವಂತೆ ಮಾಡುತ್ತೇನೆ.೧೦ [10]ಎಷ್ಟು ತಿಂದರೂ ನಿಮಗೆ ತೃಪ್ತಿಯಾಗದು. ಎಷ್ಟು ವ್ಯಭಿಚಾರಗೈದರೂ ನಿಮಗೆ ಸಂತಾನ ಪ್ರಾಪ್ತಿಯಾಗದು. ಕಾರಣ, ನೀವು ವೇಶ್ಯಾಚಾರಕ್ಕಾಗಿ ಸರ್ವೇಶ್ವರನನ್ನೇ ತಿರಸ್ಕರಿಸಿದ್ದೀರಿ.೧೧ [11]“ಮದ್ಯಪಾನ, ದ್ರಾಕ್ಷಾರಸ - ಇವು ಜನರನ್ನು ಬುದ್ಧಿಹೀನರನ್ನಾಗಿ ಮಾಡುತ್ತವೆ.೧೨ [12]ನನ್ನ ಜನರು ಮರದ ತುಂಡನ್ನು ಹಿಡಿದು ಕಣಿ ಕೇಳುತ್ತಾರೆ; ಕೈಯಲ್ಲಿ ಹಿಡಿದ ದೊಣ್ಣೆಯಿಂದ ವಿವೇಕವಾಣಿಯನ್ನು ಪಡೆಯಲೆತ್ನಿಸುತ್ತಾರೆ. ವ್ಯಭಿಚಾರಗುಣ ಅವರನ್ನು ತಪ್ಪುದಾರಿಗೆ ಎಳೆದಿದೆ. ದೇವರ ಸದ್ಭಕ್ತಿಯನ್ನು ತೊರೆದು ಅವರು ಧರ್ಮಭ್ರಷ್ಠರಾಗಿದ್ದಾರೆ.೧೩ [13]ಅವರು ಗಿರಿಶಿಖರಗಳ ಮೇಲೆ ಬಲಿಯನರ್ಪಿಸುತ್ತಾರೆ. ಬೆಟ್ಟಗುಡ್ಡಗಳ ಮೇಲೆ ಧೂಪಹಾಕುತ್ತಾರೆ. ದಟ್ಟ ನೆರಳಿನ ಅಲ್ಲೋನ್, ಲಿಬ್ನೆ, ಏಲಾ ವೃಕ್ಷಗಳ ಅಡಿಯಲ್ಲಿ ಇಂತಹುದನ್ನೆಲ್ಲ ಮಾಡುತ್ತಾರೆ. ಹೀಗಿರಲು ನಿಮ್ಮ ಪುತ್ರಿಯರು ಸೂಳೆಯರಾಗುವರು. ನಿಮ್ಮ ಸೊಸೆಗಳು ವ್ಯಭಿಚಾರಿಣಿಗಳಾಗುವರು. ಇದರಲ್ಲಿ ಆಶ್ಚರ್ಯವೇನಿಲ್ಲ.೧೪ [14]ಸೂಳೆಯರಾಗಿ ನಡೆಯುವ ಪುತ್ರಿಯರನ್ನು ನಾನು ದಂಡಿಸುವುದಿಲ್ಲ, ವ್ಯಭಿಚಾರ ಮಾಡುವ ಸೊಸೆಗಳನ್ನು ನಾನು ಶಿಕ್ಷಿಸುವುದಿಲ್ಲ. ಕಾರಣ, ನೀವೇ ಸೂಳೆಯರನ್ನು ಸೇರಿಕೊಂಡು ಅಡ್ಡದಾರಿ ಹಿಡಿಯುತ್ತೀರಿ. ದೇವದಾಸಿಯರೊಂದಿಗೆ ಸೇರಿ ಬಲಿಯನ್ನು ಅರ್ಪಿಸುತ್ತೀರಿ. ‘ಮತಿಹೀನರು ಗತಿಸಿಹೋಗುವರು’ ಎಂಬ ಹೇಳಿಕೆ ಖಂಡಿತವಾಗಿ ನಿಮಗೆ ಅನ್ವಯಿಸುತ್ತದೆ.೧೫ [15]“ಓ ಇಸ್ರಯೇಲ್ ನೀನು ವೇಶ್ಯೆಯಾಗಿ ನಡೆದರೂ ಜುದೇಯ ನಾಡು ಆ ದೋಷಕ್ಕೆ ಒಳಗಾಗದಿರಲಿ. ಯೆಹೂದ್ಯರೇ, ಗಿಲ್ಗಾಲಿಗೆ ಬರಬೇಡಿ. ಬೇತಾವೆನಿಗೆ ಯಾತ್ರೆ ಹೋಗಬೇಡಿ. ‘ಜೀವಸ್ವರೂಪನಾದ ಸರ್ವೇಶ್ವರನಾಣೆ’ ಎಂದು ಪ್ರಮಾಣಮಾಡಬೇಡಿ.೧೬ [16]ಇಸ್ರಯೇಲಿನವರು ಹತೋಟಿಗೆ ಬಾರದ ಹೋರಿಯಂತೆ ಮೊಂಡಾಗಿದ್ದಾರೆ. ಸರ್ವೇಶ್ವರ ಅವರನ್ನು ಈಗ ವಿಶಾಲವಾದ ಹುಲ್ಲುಗಾವಲುಗಳಲ್ಲಿ ಕುರಿಗಳಂತೆ ಮೇಯಿಸಲು ಸಾಧ್ಯವೇ?೧೭ [17]ಎಫ್ರಯಿಮ್ ವಿಗ್ರಹಗಳ ಪ್ರಭಾವಕ್ಕೆ ಒಳಗಾಗಿದೆ. ಅದನ್ನು ಅದರಷ್ಟಕ್ಕೆ ಬಿಟ್ಟುಬಿಡಿ.೧೮ [18]ಅವರು ಮದ್ಯಪಾನವನ್ನು ಮಾಡಿದ ನಂತರ ವ್ಯಭಿಚಾರಕ್ಕೆ ಇಳಿಯುತ್ತಾರೆ. ಮಾನಕ್ಕಿಂತ ಅವಮಾನವೇ ಅವರಿಗೆ ಅತಿ ಪ್ರಿಯ.೧೯ [19]ಬಿರುಗಾಳಿ ಅವರನ್ನು ಬಡಿದೆತ್ತಿಕೊಂಡು ಹೋಗುವುದು. ಅವರು ವಿಗ್ರಹಗಳಿಗೆ ಅರ್ಪಿಸುತ್ತಿದ್ದ ಬಲಿಗಳಿಗಾಗಿ ನಾಚಿಕೆಪಡುವರು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಹೊಶೇಯನ ೪ 00:00:00 00:00:00 0.5x 2.0x https://beblia.bible:81/BibleAudio/kannadakncl/hosea/004.mp3 14 4