× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಹೊಶೇಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೭ ೧೨೩೪೫೬೭೮೯೧೦೧೧೧೨೧೩೧೪1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬1 1 1 ಕನ್ನಡ ಬೈಬಲ್ (KNCL) 2016 ಹೊಶೇಯನ ೭ ಟಿಪ್ಪಣಿಗಳನ್ನು ಉಳಿಸಿ ೧ [1]“ನಾನು ನನ್ನ ಜನರ ದುರವಸ್ಥೆಯನ್ನು ನೀಗಿಸಿ ಇಸ್ರಯೇಲನ್ನು ಸ್ವಸ್ಥಗೊಳಿಸಬೇಕೆಂದಿರುವಾಗ ಎಫ್ರಯಿಮಿನ ಅಕ್ರಮ ಮತ್ತು ಸಮಾರ್ಯದ ದುಷ್ಟತನ ಬಯಲಿಗೆ ಬರುತ್ತವೆ. ಅವರು ಒಬ್ಬರಿಗೊಬ್ಬರು ಮೋಸಮಾಡುತ್ತಾರೆ. ಕಳ್ಳರಂತೆ ನುಗ್ಗಿ ಕನ್ನಹಾಕುತ್ತಾರೆ. ದರೋಡೆಗಾರರಂತೆ ದಾರಿಯಲ್ಲೇ ಸುಲಿಗೆಮಾಡುತ್ತಾರೆ.೨ [2]ಆದರೆ ಅವರ ದುಷ್ಕೃತ್ಯಗಳೆಲ್ಲ ಸರ್ವೇಶ್ವರಸ್ವಾಮಿಯ ಜ್ಞಾಪಕದಲ್ಲಿ ಇರುತ್ತವೆ ಎಂಬುದನ್ನು ಅವರು ಮನದಟ್ಟುಮಾಡಿಕೊಂಡಿಲ್ಲ. ಅವರ ನೀಚಕೃತ್ಯಗಳು ಅವರನ್ನು ಆವರಿಸಿಕೊಂಡಿವೆ; ನನ್ನ ಕಣ್ಮುಂದೆಯೇ ಇವೆ.೩ [3]“ಅವರು ಅಧರ್ಮದಿಂದ ಅರಸನನ್ನು ಆನಂದಗೊಳಿಸುತ್ತಾರೆ; ಅಸತ್ಯದಿಂದ ಅಧಿಕಾರಿಗಳನ್ನು ಸಂತೋಷಪಡಿಸುತ್ತಾರೆ.೪ [4]ಅವರೆಲ್ಲರು ವ್ಯಭಿಚಾರಿಗಳೇ; ಅವರು ಉರಿಯುವ ಒಲೆಗೆ ಸಮಾನರು. ರೊಟ್ಟಿಸುಡುವವನು ನಾದಿದ ಹಿಟ್ಟು ಹುಳಿಯಾಗುವವರೆಗೂ ಬಿಟ್ಟಿರುವ ಬೂದಿ ಮುಚ್ಚಿದ ಕೆಂಡಕ್ಕೆ ಸಮಾನರು.೫ [5]ಅರಸನ ಹಬ್ಬದ ದಿನಗಳಲ್ಲಿ ಅಧಿಕಾರಿಗಳು ದ್ರಾಕ್ಷಾರಸವನ್ನು ಕುಡಿದು ಮತ್ತರಾಗುವಂತೆ ಮಾಡಿದರು. ಅರಸನು ಅಪಹಾಸ್ಯಮಾಡುವ ತುಂಟರ ಸಂಗಡ ಬೆರೆತುಕೊಂಡನು.೬ [6]ಒಳಸಂಚಿನಿಂದ ಕೂಡಿದ ಅವರ ಹೃದಯ ಒಲೆಯಂತೆ ಉರಿಯುತ್ತದೆ. ಅವರ ಕೋಪಾಗ್ನಿ ರಾತ್ರಿಯೆಲ್ಲ ಹೊತ್ತಿಕೊಂಡೇ ಇರುತ್ತದೆ. ಬೆಳಗಾದದ್ದೇ ಧಗಧಗನೆ ಭುಗಿಲೇರುತ್ತದೆ.೭ [7]“ಎಲ್ಲರು ಒಲೆಯಂತೆ ಉರಿಯುತ್ತ ತಮ್ಮ ಅಧಿಕಾರಿಗಳನ್ನೇ ನುಂಗಿಬಿಡುತ್ತಾರೆ. ಅವರ ಅರಸರೆಲ್ಲ ಸತ್ತುಬಿದ್ದಿದ್ದಾರೆ. ನನಗೆ ಮೊರೆಯಿಡುವವರು ಅವರಲ್ಲಿ ಯಾರೂ ಇಲ್ಲ.”೮ [8]“ಎಪ್ರಯಿಮ್ ಅನ್ಯರಾಷ್ಟ್ರಗಳೊಂದಿಗೆ ಬೆರೆತುಕೊಳ್ಳುತ್ತದೆ. ಅದು ತಿರುವಿಹಾಕಿದ ರೊಟ್ಟಿ.೯ [9]ಅನ್ಯಜನರು ಅದರ ಶಕ್ತಿಯನ್ನು ಹೀರಿಕೊಂಡರೂ ಅದಕ್ಕೆ ಅರಿವಿಲ್ಲ. ಅದರ ತಲೆಗೂದಲು ನೆರೆತುಹೋದರೂ ಅದಕ್ಕೆ ಪ್ರಜ್ಞೆ ಇಲ್ಲ.೧೦ [10]ಇಸ್ರಯೇಲಿನ ಅಹಂಕಾರವೇ ಅದರ ವಿರುದ್ಧ ಸಾಕ್ಷಿ ನುಡಿಯುತ್ತದೆ. ಇಷ್ಟೆಲ್ಲ ಸಂಭವಿಸಿದರೂ ಅದು ತನ್ನ ದೇವರಾದ ಸರ್ವೇಶ್ವರಸ್ವಾಮಿಯ ಬಳಿಗೆ ಹಿಂದಿರುಗುವುದಿಲ್ಲ; ಅವರನ್ನು ಆಶ್ರಯಿಸುವುದಿಲ್ಲ.೧೧ [11]ಎಫ್ರಯಿಮ್ ಬುದ್ಧಿವಿವೇಕವಿಲ್ಲದ ಪಾರಿವಾಳದಂತೆ; ಅದರ ಜನರು ಈಜಿಪ್ಟನ್ನು ಸಹಾಯಕ್ಕೆ ಕರೆಯುತ್ತಾರೆ. ಅಸ್ಸೀರಿಯದ ಆಶ್ರಯಕ್ಕೆ ಓಡುತ್ತಾರೆ.೧೨ [12]ಅವರು ಹೋಗುವಾಗ ನನ್ನ ಬಲೆಯನ್ನು ಅವರ ಮೇಲೆ ಬೀಸುವೆನು. ಆಕಾಶದ ಪಕ್ಷಿಗಳಂತೆ ಅವರನ್ನು ಕೆಳಕ್ಕೆ ಎಳೆದುಬಿಡುವೆನು. ಅವರ ದುಷ್ಕೃತ್ಯಗಳಿಗನುಸಾರ ಅವರನ್ನು ದಂಡಿಸುವೆನು.೧೩ [13]“ನನ್ನನ್ನು ತೊರೆದುಬಿಟ್ಟದ್ದರಿಂದ ಅವರು ಹಾಳಾಗಲಿ, ನನಗೆ ದ್ರೋಹವೆಸಗಿದ್ದರಿಂದ ಅವರು ನಾಶವಾಗಲಿ! ನಾನು ಅವರನ್ನು ಉದ್ಧರಿಸಬೇಕೆಂದಿದ್ದರೂ ಅವರು ನನಗೆ ತಪ್ಪಾಗಿ ನಡೆದುಕೊಂಡಿದ್ದಾರೆ.೧೪ [14]ಅವರು ಹೃದಯಪೂರ್ವಕವಾಗಿ ನನಗೆ ಪ್ರಾರ್ಥನೆಮಾಡುವುದಿಲ್ಲ. ಬದಲಿಗೆ ಅವರ ಹಾಸಿಗೆಗಳ ಮೇಲೆ ಬಿದ್ದು ಅರಚುತ್ತಾರೆ. ಧಾನ್ಯದ್ರಾಕ್ಷಾರಸಗಳಿಗಾಗಿ ಕಿರಿಚಿಕೊಳ್ಳುತ್ತಾರೆ. ನನಗೆ ವಿರುದ್ಧವಾಗಿ ಪ್ರತಿಭಟಿಸುತ್ತಾ ತಮ್ಮ ದೇಹಗಳನ್ನು ಪರಚಿಕೊಳ್ಳುತ್ತಾರೆ.೧೫ [15]ನಾನೇ ಅವರಿಗೆ ಯುದ್ಧಾಭ್ಯಾಸ ಮಾಡಿಸಿ, ಅವರ ಭುಜಬಲವನ್ನು ಬೆಳೆಸಿದರೂ ನನ್ನ ವಿರುದ್ಧ ಕೇಡನ್ನು ಕಲ್ಪಿಸುತ್ತಾರೆ.೧೬ [16]ಅವರು ಅತ್ತಿತ್ತ ತಿರುಗಿಕೊಳ್ಳುತ್ತಾರೆ. ದೇವರ ಕಡೆ ತಿರುಗಿಕೊಳ್ಳುವುದಿಲ್ಲ. ಅವರು ಮೋಸದ ಬಿಲ್ಲಿಗೆ ಸಮಾನರು. ಸೊಕ್ಕಿನ ನಾಲಿಗೆಯ ನಿಮಿತ್ತ ಅವರ ಮುಖಂಡರು ಹತರಾಗುವರು. ಅವರ ಪತನ ಈಜಿಪ್ಟಿಗೆ ಹಾಸ್ಯಾಸ್ಪದವಾಗುವುದು.”Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಹೊಶೇಯನ ೭ 00:00:00 00:00:00 0.5x 2.0x https://beblia.bible:81/BibleAudio/kannadakncl/hosea/007.mp3 14 7