× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಯಾಜಕಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭1 1 1 ಕನ್ನಡ ಬೈಬಲ್ (KNCL) 2016 ಯಾಜಕಕಾಂಡ ೧ ಟಿಪ್ಪಣಿಗಳನ್ನು ಉಳಿಸಿ ೧ [1]ಸರ್ವೇಶ್ವರ ಸ್ವಾಮಿ ಮೋಶೆಯನ್ನು ಕರೆದು, ದೇವದರ್ಶನದ ಗುಡಾರದಿಂದ ಅವನ ಸಂಗಡ ಮಾತಾಡಿ, ಇಸ್ರಯೇಲರಿಗೆ ಹೀಗೆ ಆಜ್ಞಾಪಿಸಬೇಕೆಂದು ತಿಳಿಸಿದರು.೨ [2]“ನಿಮ್ಮಲ್ಲಿ ಯಾರಾದರೂ ಸರ್ವೇಶ್ವರನಿಗೆ ಒಂದು ಪ್ರಾಣಿಯನ್ನು ಸಮರ್ಪಿಸಲು ಆಶಿಸಿದರೆ, ಅದನ್ನು ದನಕರುಗಳಿಂದಾಗಲಿ ಆಡುಕುರಿಗಳಿಂದಾಗಲಿ ಆಯ್ದುಕೊಂಡು ಸಮರ್ಪಿಸಲಿ.೩ [3]ಅಂಥವನು ದನಕರುಗಳನ್ನು ದಹನಬಲಿಯನ್ನಾಗಿ ಸಮರ್ಪಿಸುವುದಾದರೆ ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು. ಸರ್ವೇಶ್ವರನಿಗೆ ಒಪ್ಪಿಗೆಯಾಗುವಂತೆ ಅದನ್ನು ದೇವದರ್ಶನದ ಗುಡಾರದ ಬಳಿಗೆ ತರಬೇಕು.೪ [4]ಅರ್ಪಿಸುವವನು ಆ ಪ್ರಾಣಿಯ ತಲೆಯ ಮೇಲೆ ಕೈಯಿಡಬೇಕು. ಆಗ ಅದು ಅವನ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಅಂಗೀಕೃತವಾಗುವುದು.೫ [5]ಅವನು ಅದನ್ನು ಸರ್ವೇಶ್ವರನ ಎದುರಿನಲ್ಲಿ ವಧಿಸಬೇಕು. ಆರೋನನ ವಂಶಜರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಬಲಿಪೀಠದ ಸುತ್ತಲೂ ಚಿಮುಕಿಸಬೇಕು.೬ [6]ಅದೂ ಅಲ್ಲದೆ ಅರ್ಪಿಸುವವನು ಆ ಪ್ರಾಣಿಯ ಚರ್ಮವನ್ನು ಸುಲಿದು ಅದರ ದೇಹವನ್ನು ತುಂಡುತುಂಡಾಗಿ ಕಡಿಯಬೇಕು.೭ [7]ಆರೋನನ ವಂಶಜರಾದ ಯಾಜಕರು ಬಲಿಪೀಠದ ಮೇಲೆ ಬೆಂಕಿಯನ್ನಿಟ್ಟು೮ [8]ಅದರ ಮೇಲೆ ಕಟ್ಟಿಗೆಯನ್ನು ಪೇರಿಸಬೇಕು. ಪ್ರಾಣಿಯ ಆ ತುಂಡುಗಳನ್ನೂ, ತಲೆಯನ್ನೂ, ಕೊಬ್ಬನ್ನೂ ಅದರ ಮೇಲೆ ಕ್ರಮವಾಗಿ ಇಡಬೇಕು.೯ [9]ಅದರ ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದ ನಂತರ ಯಾಜಕನು ಅದನ್ನು ಪೂರ್ತಿಯಾಗಿ ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ದಹನಬಲಿ. ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿ.೧೦ [10]“ಒಬ್ಬನು ಆಡನ್ನಾಗಲಿ, ಕುರಿಯನ್ನಾಗಲಿ ದಹನಬಲಿದಾನ ಮಾಡಬೇಕೆಂದಿದ್ದರೆ ಅಂಥವನು ಕಳಂಕರಹಿತವಾದ ಗಂಡನ್ನು ತರಲಿ.೧೧ [11]ಅದನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಬಲಿಪೀಠದ ಉತ್ತರದ ಕಡೆ ವಧಿಸಲಿ. ತರುವಾಯ ಆರೋನನ ವಂಶಜರಾದ ಯಾಜಕರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಲಿ.೧೨ [12]ಅರ್ಪಿಸುವವನು ಆ ಪ್ರಾಣಿಯ ದೇಹವನ್ನು ತುಂಡುತುಂಡಾಗಿ ಕಡಿದ ಮೇಲೆ ಯಾಜಕನು ಆ ತುಂಡುಗಳನ್ನೂ ತಲೆಯನ್ನೂ, ಕೊಬ್ಬನ್ನೂ ಬಲಿಪೀಠದ ಮೇಲಿನ ಬೆಂಕಿಯಲ್ಲಿ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು.೧೩ [13]ಅದರ ಕರುಳುಗಳನ್ನೂ, ಕಾಲುಗಳನ್ನೂ ನೀರಿನಲ್ಲಿ ತೊಳೆಸಿದ ನಂತರ ಯಾಜಕನು ಅದನ್ನು ಪೂರ್ತಿಯಾಗಿ ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ದಹನಬಲಿ, ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿ.೧೪ [14]ಸರ್ವೇಶ್ವರನಿಗೆ ದಹನಬಲಿಯಾಗಿ ಸಮರ್ಪಿಸುವಂಥದ್ದು ಪಕ್ಷಿ ಜಾತಿಯಾಗಿದ್ದರೆ ಅದು ಬೆಳವಕ್ಕಿಯಾಗಿರಲಿ, ಅಥವಾ ಮರಿ ಪಾರಿವಾಳ ಆಗಿರಲಿ.೧೫ [15]ಯಾಜಕನು ಅದನ್ನು ಬಲಿಪೀಠದ ಬಳಿಗೆ ತಂದು ಕುತ್ತಿಗೆ ಮುರಿದು ಬಲಿಪೀಠದ ಮೇಲೆ ಹೋಮಮಾಡಲಿ; ಅದರ ರಕ್ತವನ್ನು ಬಲಿಪೀಠದ ಪಕ್ಕದಲ್ಲಿ ಹಿಂಡಲಿ.೧೬ [16]ಅದರ ಕರುಳುಗಳನ್ನೂ, ಗರಿಗಳನ್ನೂ ತೆಗೆದುಬಿಟ್ಟು ಬಲಿಪೀಠದ ಪೂರ್ವದಿಕ್ಕಿನಲ್ಲಿರುವ ಬೂದಿಯ ಎಡೆಯಲ್ಲಿ ಬಿಸಾಡಲಿ.೧೭ [17]ಯಾಜಕನು ಆ ಹಕ್ಕಿಯ ದೇಹವನ್ನು ಇಬ್ಭಾಗವಾಗಿ ಸೀಳಲಿ; ಒಂದೊಂದು ಭಾಗದಲ್ಲಿ ಒಂದು ರೆಕ್ಕೆ ಇರುವಂತೆ ಸೀಳಲಿ. ಅನಂತರ ಅದನ್ನು ಬಲಿಪೀಠದ ಮೇಲಿನ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಹೋಮಮಾಡಲಿ. ಅದು ದಹನಬಲಿ, ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿ.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಯಾಜಕಕಾಂಡ ೧ 00:00:00 00:00:00 0.5x 2.0x https://beblia.bible:81/BibleAudio/kannadakncl/leviticus/001.mp3 27 1