× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಯಾಜಕಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೫ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩1 1 1 ಕನ್ನಡ ಬೈಬಲ್ (KNCL) 2016 ಯಾಜಕಕಾಂಡ ೧೫ ಟಿಪ್ಪಣಿಗಳನ್ನು ಉಳಿಸಿ ೧ [1]ಸರ್ವೇಶ್ವರ ಸ್ವಾಮಿ ಮೋಶೆ ಮತ್ತು ಆರೋನರಿಗೆ ಹೀಗೆಂದರು:೨ [2]“ನೀವು ಇಸ್ರಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ - ಒಬ್ಬ ವ್ಯಕ್ತಿಯ ಜನನೇಂದ್ರಿಯದಿಂದ ಮೇಹಸ್ರಾವವಾದರೆ ಆ ಕಾರಣ ಆ ವ್ಯಕ್ತಿ ಅಶುದ್ಧನು.೩ [3]ಆ ಸ್ರಾವವು ಹರಿಯುತ್ತಿದ್ದರೂ ನಿಂತುಹೋಗಿದ್ದರೂ ಆ ದೇಹಸ್ಥಿತಿಯಿಂದ ಅವನು ಅಶುದ್ಧನು.೪ [4]ಅಂಥವನು ಮಲಗಿರುವ ಪ್ರತಿಯೊಂದು ಹಾಸಿಗೆಯೂ ಕೂತಿರುವ ಪ್ರತಿಯೊಂದು ಆಸನವೂ ಅಶುದ್ಧ.೫ [5]ಅವನ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ದಿನದ ಸಂಜೆಯವರೆಗೆ ಅಶುದ್ಧನು.೬ [6]ಸ್ರಾವವುಳ್ಳವನು ಕುಳಿತಿದ್ದ ಆಸನದ ಮೇಲೆ ಕುಳಿತುಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ಸಂಜೆಯವರೆಗೆ ಅಶುದ್ಧನಾಗಿರುವನು.೭ [7]ಅವನ ಶರೀರವನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಬೇಕು; ಅವನು ಆ ಸಂಜೆಯವರೆಗೆ ಅಶುದ್ಧನಾಗಿರುವನು.೮ [8]ಶುದ್ಧನಾಗಿರುವವನ ಮೇಲೆ ಸ್ರಾವವುಳ್ಳವನು ಉಗುಳಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ಸಂಜೆಯವರೆಗೆ ಅಶುದ್ಧನಾಗಿರುವನು.೯ [9]ಸ್ರಾವವುಳ್ಳವನು ಕುಳಿತಿದ್ದ ತಡಿಯು ಅಶುದ್ಧ.೧೦ [10]ಅವನ ಕೆಳಗಿದ್ದ ಯಾವ ವಸ್ತುವನ್ನಾದರೂ ಮುಟ್ಟಿದವನು ಆ ಸಂಜೆಯವರೆಗೆ ಅಶುದ್ಧನಾಗಿರುವನು. ಅಂಥ ವಸ್ತುವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಅವನು ಆ ಸಂಜೆಯವರೆಗೆ ಅಶುದ್ಧನಾಗಿರುವನು.೧೧ [11]ಸ್ರಾವವುಳ್ಳವನು ಕೈಗಳನ್ನು ತೊಳೆದುಕೊಳ್ಳದೆ ಯಾರನ್ನು ಮುಟ್ಟಿದರೂ ಆ ಮನುಷ್ಯನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ಸಂಜೆಯವರೆಗೆ ಅಶುದ್ಧನಾಗಿರುವನು.೧೨ [12]ಸ್ರಾವವುಳ್ಳವನು ಮುಟ್ಟಿದ ಮಣ್ಣಿನ ಪಾತ್ರೆಯನ್ನು ಒಡೆದುಬಿಡಬೇಕು. ಅವನು ಮರದ ಪಾತ್ರೆಯನ್ನು ಮುಟ್ಟಿದರೆ ಅದನ್ನು ನೀರಿನಿಂದ ತೊಳೆಯಬೇಕು.೧೩ [13]ಸ್ರಾವವುಳ್ಳವನ ಸ್ರಾವವು ನಿಂತು ವಾಸಿಯಾದಾಗ ಅವನು ಶುದ್ಧ ಮಾಡಿಸಿಕೊಳ್ಳುವುದಕ್ಕೆ ಆಗಿನಿಂದ ಏಳು ದಿನಗಳನ್ನು ಎಣಿಸಿಕೊಂಡು ತನ್ನ ಬಟ್ಟೆಗಳನ್ನು ಒಗೆದುಕೊಂಡು ಒರತೆ ನೀರಿನಿಂದ ತನ್ನ ಶರೀರವನ್ನು ತೊಳೆದುಕೊಂಡು ಶುದ್ಧನಾಗುವನು.೧೪ [14]ಎಂಟನೆಯ ದಿನ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಮರಿ ಪಾರಿವಾಳಗಳನ್ನಾಗಲಿ ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಸರ್ವೇಶ್ವರನ ಸನ್ನಿಧಿಗೆ ಬಂದು ಯಾಜಕನಿಗೆ ಒಪ್ಪಿಸಬೇಕು.೧೫ [15]ಯಾಜಕನು ದೋಷಪರಿಹಾರಕ ಬಲಿಗಾಗಿ ಒಂದನ್ನೂ ದಹನಬಲಿಯಾಗಿ ಇನ್ನೊಂದನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಅವನ ಸ್ರಾವದ ವಿಷಯದಲ್ಲಿ ಸರ್ವೇಶ್ವರನ ಸನ್ನಿಧಿಯಲ್ಲಿ ಅವನ ಪರವಾಗಿ ದೋಷಪರಿಹಾರ ಮಾಡುವನು.೧೬ [16]“ಒಬ್ಬನಿಗೆ ವೀರ್ಯಸ್ಖಲನವಾದರೆ ಅವನು ಸರ್ವಾಂಗಸ್ನಾನ ಮಾಡಬೇಕು; ಅವನು ಆ ಸಾಯಂಕಾಲದವರೆಗೆ ಅಶುದ್ಧನಾಗಿರುವನು.೧೭ [17]ಯಾವ ಬಟ್ಟೆಯ ಮೇಲಾಗಲಿ ತೊಗಲಿನ ಮೇಲಾಗಲಿ ವೀರ್ಯವು ಬಿದ್ದರೆ ಅದನ್ನು ನೀರಿನಿಂದ ತೊಳೆಯಬೇಕು, ಅದು ಸಾಯಂಕಾಲದವರೆಗೆ ಅಶುದ್ಧವಾಗಿರುವುದು.೧೮ [18]ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ ಅವರಿಬ್ಬರೂ ಸ್ನಾನಮಾಡಿಕೊಳ್ಳಬೇಕು; ಅವರು ಸಂಜೆಯವರೆಗೆ ಅಶುದ್ಧರಾಗಿರುವರು.೧೯ [19]“ಮಹಿಳೆಗೆ ರಕ್ತಸ್ರಾವವಾದರೆ ಅವಳು ಏಳು ದಿನಗಳ ತನಕ ಪ್ರತ್ಯೇಕವಾಗಿರಬೇಕು. ಅವಳನ್ನು ಮುಟ್ಟಿದವರು ಆ ದಿನದ ಸಂಜೆಯವರೆಗೆ ಅಶುದ್ಧರಾಗುವರು.೨೦ [20]ಅವಳು ಮುಟ್ಟಾಗಿರುವಾಗ ಯಾವುದರ ಮೇಲೆ ಮಲಗಿದರೂ ಕುಳಿತುಕೊಂಡರೂ ಅದು ಅಶುದ್ಧವಾಗಿರುವುದು.೨೧ [21]ಅವಳ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಅವನು ಸಂಜೆಯವರೆಗೆ ಅಶುದ್ಧನಾಗಿರುವನು.೨೨ [22]ಅವಳು ಯಾವುದರ ಮೇಲೆ ಕುಳಿತಿದ್ದಳೋ ಅದನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಅವನು ಸಂಜೆಯವರೆಗೆ ಅಶುದ್ಧನಾಗಿರುವನು.೨೩ [23]ಅವಳು ಮಲಗಿದ್ದ ಹಾಸಿಗೆಯ ಮೇಲಾಗಲಿ, ಕುಳಿತಿದ್ದ ಸ್ಥಳದ ಮೇಲಾಗಲಿ ಇದ್ದ ಯಾವುದನ್ನಾದರೂ ಮುಟ್ಟಿದವನು ಸಂಜೆಯವರೆಗೆ ಅಶುದ್ಧನಾಗಿರುವನು.೨೪ [24]ಪುರುಷನು ಒಂದು ವೇಳೆ ಅಂಥವಳೊಡನೆ ಸಂಗಮಿಸಿ ಅವಳ ರಜಸ್ಸು ಅವನಿಗೆ ತಗಲಿದರೆ ಅವನು ಏಳು ದಿನಗಳ ತನಕ ಅಶುದ್ಧನಾಗಿರುವನು. ಅಷ್ಟರಲ್ಲಿ ಅವನು ಯಾವ ಹಾಸಿಗೆಯ ಮೇಲೆ ಮಲಗಿಕೊಂಡರೂ ಅದು ಅಶುದ್ಧವಾಗಿರುವುದು.೨೫ [25]“ಮಹಿಳೆಗೆ ಮುಟ್ಟಿನ ಕಾಲದಲ್ಲಿ ಮಾತ್ರವಲ್ಲದೆ ಬೇರೆ ದಿನಗಳಲ್ಲೂ ರಕ್ತಸ್ರಾವವಾದರೆ, ಇಲ್ಲವೆ ಮುಟ್ಟಿನ ಕಾಲದಲ್ಲಿ ತಕ್ಕದ್ದಕ್ಕಿಂತ ಹೆಚ್ಚು ದಿನಗಳು ರಕ್ತಸ್ರಾವವಾದರೆ, ಅವಳು ತಿಂಗಳಿನ ಮುಟ್ಟಿನಿಂದ ಹೇಗೆ ಅಶುದ್ದಳೋ ಹಾಗೆಯೇ ಆ ಸ್ರಾವವಾಗುವ ದಿನಗಳೆಲ್ಲಾ ಅಶುದ್ಧಳಾಗಿರುವಳು.೨೬ [26]ಆ ಸ್ರಾವವಿರುವ ತನಕ ಅವಳು ಯಾವ ಹಾಸಿಗೆಯ ಮೇಲೆ ಮಲಗಿದರೂ, ಅದು ಮುಟ್ಟಿನ ಕಾಲದಲ್ಲಿ ಮಲಗಿದ ಹಾಸಿಗೆಯಂತೆಯೇ, ಅಶುದ್ಧವಾಗುವುದು. ಅವಳು ಯಾವುದರ ಮೇಲೆ ಕುಳಿತುಕೊಂಡರೂ ಅದು ಮುಟ್ಟಿನ ಕಾಲದಲ್ಲಿ ಕುಳಿತುಕೊಂಡ ವಸ್ತುವಿನಂತೆ ಅಶುದ್ಧವಾಗಿರುವುದು.೨೭ [27]ಆ ವಸ್ತುಗಳನ್ನು ಮುಟ್ಟಿದವನು ಅಶುದ್ಧನಾದುದರಿಂದ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಂಜೆಯವರೆಗೆ ಅಶುದ್ಧನಾಗಿರುವನು.೨೮ [28]ಅವಳಿಗೆ ರಕ್ತಸ್ರಾವ ನಿಂತ ದಿನದಿಂದ ಅವಳು ಏಳು ದಿನಗಳನ್ನು ಲೆಕ್ಕಿಸಿಕೊಂಡು ತರುವಾಯ ಶುದ್ಧಳಾಗುವಳು.೨೯ [29]ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ, ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತರಬೇಕು.೩೦ [30]ಯಾಜಕನು ದೋಷಪರಿಹಾರಕ ಬಲಿಗಾಗಿ ಒಂದನ್ನೂ ದಹನಬಲಿಗಾಗಿ ಇನ್ನೊಂದನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಅವಳ ಸ್ರಾವದಿಂದುಂಟಾದ ಅಪರಿಶುದ್ಧತೆಯ ವಿಷಯವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಅವಳ ಪರವಾಗಿ ದೋಷಪರಿಹಾರ ಮಾಡುವನು.೩೧ [31]“ಇಸ್ರಯೇಲರು ಅಶುದ್ಧತೆಗೆ ದೂರವಾಗಿರುವಂತೆ ನೀವು ಅವರನ್ನು ಈ ರೀತಿಯಾಗಿ ಕಾಪಾಡಬೇಕು. ಅವರು ಅಪವಿತ್ರರಾಗಿದ್ದು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡಿದರೆ ನಾಶವಾದಾರು.೩೨ [32]ಮೇಹಸ್ರಾವವುಳ್ಳವನು, ವೀರ್ಯಸ್ಖಲನದಿಂದ ಅಶುದ್ಧನಾದವನು,೩೩ [33]ಮುಟ್ಟಾದ ಮಹಿಳೆ ಸ್ರಾವವುಂಟಾಗುವ ಸ್ತ್ರೀ ಪುರುಷರು ಹಾಗು ಅಶುದ್ಧಳಾದ ಮಹಿಳೆಯನ್ನು ಸಂಗಮಿಸಿದವನು ಇವರ ವಿಷಯವಾದ ನಿಯಮಗಳು ಇವು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಯಾಜಕಕಾಂಡ ೧೫ 00:00:00 00:00:00 0.5x 2.0x https://beblia.bible:81/BibleAudio/kannadakncl/leviticus/015.mp3 27 15