× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಯಾಜಕಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೫ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯1 1 1 ಕನ್ನಡ ಬೈಬಲ್ (KNCL) 2016 ಯಾಜಕಕಾಂಡ ೫ ಟಿಪ್ಪಣಿಗಳನ್ನು ಉಳಿಸಿ ೧ [1]“ಈ ಕೆಳಕಂಡ ಸಂದರ್ಭಗಳಲ್ಲಿ ಪಾಪಪರಿಹಾರಕ ಬಲಿಗಳನ್ನು ಒಪ್ಪಿಸಬೇಕಾಗುತ್ತದೆ: ಒಬ್ಬನು ತಾನು ಕಂಡು ಕೇಳಿದ್ದಕ್ಕೆ ನ್ಯಾಯಸ್ಥಾನದಲ್ಲಿ ಸಾಕ್ಷಿಹೇಳಬೇಕೆಂದು ಅಧಿಕೃತವಾದ ಕರೆಯಿದ್ದರೂ ಸಾಕ್ಷಿ ಹೇಳದೆಹೋದರೆ ಅವನು ಪಾಪಕ್ಕೆ ಗುರಿಯಾಗುವನು.೨ [2]“ಒಬ್ಬನಿಗೆ ಅಶುದ್ಧವಾದ ಕಾಡುಮೃಗ, ಪಶು, ಜಂತು ಇವುಗಳ ಹೆಣವಾಗಲಿ, ಬೇರೆ ಯಾವ ಅಶುದ್ಧ ವಸ್ತುವಾಗಲಿ ತಗಲಿದರೆ, ಅವನಿಗೆ ತಿಳಿಯದೆ ಹೋದರೂ, ಅವನು ಅಶುದ್ಧನೂ ದೋಷಿಯೂ ಆಗುತ್ತಾನೆ.೩ [3]“ಮನುಷ್ಯ ದೇಹದಿಂದುಂಟಾದ ಯಾವುದಾದರು ಒಂದು ಅಶುದ್ಧ ವಸ್ತು ತಗುಲಿದ್ದು, ಅವನಿಗೆ ತಿಳಿಯದೆ ಹೋದರೂ, ತಿಳಿದು ಬಂದಾಗ ಅವನು ದೋಷಿಯಾಗುತ್ತಾನೆ.೪ [4]“ಯಾರಾದರು ಆಲೋಚಿಸದೆ ಒಳಿತಿಗಾಗಲಿ, ಕೇಡಿಗಾಗಲಿ ಏನಾದರು ಆಣೆಯಿಟ್ಟುಕೊಂಡರೆ, ಅದು ಅವನಿಗೆ ತಿಳಿಯದೆಹೋದರೂ, ತಿಳಿದು ಬಂದಾಗ ಅವನು ಇದರಿಂದಲೂ ದೋಷಿಯಾಗುತ್ತಾನೆ.೫ [5]“ಈ ವಿಷಯಗಳಲ್ಲಿ ಯಾರಾದರು ದೋಷಿಯಾದಾಗ ತಾನು ಮಾಡಿದ ತಪ್ಪನ್ನು ಒಪ್ಪಿಕೊಳ್ಳಬೇಕು.೬ [6]ಇಂಥ ದೋಷದ ಪ್ರಾಯಶ್ಚಿತ್ತಕ್ಕಾಗಿ ಒಂದು ಹೆಣ್ಣು ಕುರಿಯನ್ನಾಗಲಿ, ಒಂದು ಮೇಕೆಯನ್ನಾಗಲಿ ಸರ್ವೇಶ್ವರನಿಗೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು.೭ [7]“ಆಡು ಕುರಿಯನ್ನು ಕೊಡಲು ಅವನಿಂದ ಆಗದಿದ್ದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಮರಿ ಪಾರಿವಾಳಗಳನ್ನಾಗಲಿ ತೆಗೆದುಕೊಂಡು ಬಂದು ದಹನ ಬಲಿಯಾಗಿ ಒಂದನ್ನೂ ದೋಷಪರಿಹಾರಕ ಬಲಿಯಾಗಿ ಮತ್ತೊಂದನ್ನು ಸರ್ವೇಶ್ವರನಿಗೆ ಸಮರ್ಪಿಸಲಿ.೮ [8]ಅವನು ಅವುಗಳನ್ನು ಯಾಜಕನ ಬಳಿಗೆ ತಂದಾಗ ಯಾಜಕನು ಮೊದಲು ದೋಷಪರಿಹಾರಾರ್ಥಕವಾದದ್ದನ್ನು ಸಮರ್ಪಿಸಬೇಕು. ಅವನು ಅದರ ಕುತ್ತಿಗೆ ಮುರಿಯಬೇಕು. ಅದರ ತಲೆಯನ್ನು ಪೂರಾ ತೆಗೆದುಬಿಡಬಾರದು.೯ [9]ಬಳಿಕ ದೋಷಪರಿಹಾರಾರ್ಥಕವಾದ ಆ ಹಕ್ಕಿಯ ರಕ್ತದಲ್ಲಿ ಸ್ವಲ್ಪವನ್ನು ಬಲಿಪೀಠದ ಬುಡದಲ್ಲಿ ಹಿಂಡಬೇಕು. ಅದು ದೋಷಪರಿಹಾರ ಬಲಿ.೧೦ [10]ಮತ್ತೊಂದನ್ನು ವಿಧಿಯಾನುಸಾರ ದಹನಬಲಿ ಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮೆ ದೊರಕುವುದು.೧೧ [11]“ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಮರಿ ಪಾರಿವಾಳಗಳನ್ನಾಗಲಿ ಕೊಡಲು ಅವನಿಂದ ಆಗದೆ ಹೋದಲ್ಲಿ ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿ ಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾದ್ದರಿಂದ ಅದರ ಮೇಲೆ ಎಣ್ಣೆ ಹೊಯ್ಯಕೂಡದು, ಸಾಂಬ್ರಾಣಿಯನ್ನು ಇಡಕೂಡದು.೧೨ [12]ಅವನು ಯಾಜಕನ ಬಳಿಗೆ ಅದನ್ನು ತಂದ ನಂತರ ಅದು ದೇವಾರ್ಪಿತವೆಂದು ಸೂಚಿಸುವುದಕ್ಕಾಗಿ ಯಾಜಕನು ಅದರಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಸರ್ವೇಶ್ವರನಿಗೆ ಸಮರ್ಪಿಸಿದ ಹೋಮದ್ರವ್ಯಗಳ ಮೇಲೆ ಬಲಿಪೀಠದಲ್ಲಿ ಹೋಮಮಾಡಬೇಕು. ಅದು ದೋಷಪರಿಹಾರಕ ಬಲಿ.೧೩ [13]ಮೇಲೆ ಕಂಡ ವಿಷಯಗಳಲ್ಲಿ ಯಾವ ವಿಧವಾಗಿ ಅವನು ದೋಷಿಯಾದರೂ ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರವನ್ನು ಮಾಡಿದ ನಂತರ ಅವನಿಗೆ ಕ್ಷಮೆ ದೊರಕುವುದು. ನೈವೇದ್ಯ ದ್ರವ್ಯಗಳಲ್ಲಿ ಮಿಕ್ಕದ್ದು ಹೇಗೆ ಯಾಜಕನಿಗೆ ಸೇರತಕ್ಕದ್ದೋ ಹಾಗೆಯೆ ಇದರಲ್ಲಿಯೂ ಮಿಕ್ಕದ್ದು ಯಾಜಕನಿಗೆ ಸೇರತಕ್ಕದ್ದು.”೧೪ [14]ಮೋಶೆಗೆ ಸರ್ವೇಶ್ವರ ಹೀಗೆಂದರು:೧೫ [15]“ಯಾರಾದರು ಸರ್ವೇಶ್ವರನಿಗೆ ಸಲ್ಲಿಸಬೇಕಾದ ಪವಿತ್ರವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ, ಅಂಥವರು ಆ ಅಪರಾಧಕ್ಕೆ ಪರಿಹಾರ ಮಾಡಬೇಕು; ದೇವರ ಸೇವೆಗೆ ನೇಮಕವಾದ ನಾಣ್ಯದ ಮೇರೆಗೆ ಎರಡು ಅಥವಾ ಹೆಚ್ಚು ನಾಣ್ಯ ಬೆಲೆ ಬಾಳುವುದೆಂದು ತೋರುವ ಕಳಂಕರಹಿತವಾದ ಒಂದು ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಸರ್ವೇಶ್ವರನಿಗೆ ಸಮರ್ಪಿಸಬೇಕು.೧೬ [16]ತಾವು ಅನ್ಯಾಯವಾಗಿ ಇಟ್ಟುಕೊಂಡಿರುವ ದೇವವಸ್ತುಗಳನ್ನು ಮಾತ್ರವಲ್ಲದೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಯಾಜಕನಿಗೆ ತಂದುಕೊಡಬೇಕು. ಅವನು ಪರಿಹಾರಾರ್ಥವಾಗಿ ತಂದ ಟಗರಿನಿಂದ ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದಾಗ ಅವರಿಗೆ ಕ್ಷಮೆ ದೊರಕುವುದು.೧೭ [17]“ನಿಮ್ಮಲ್ಲಿ ಯಾರಾದರು ಸರ್ವೇಶ್ವರನು ವಿಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರು ಮಾಡಿ ದೋಷಕ್ಕೆ ಒಳಗಾದರೆ, ಅದು ಅವರಿಗೆ ತಿಳಿಯದೆ ಹೋದರೂ, ಅವರು ಅದರಿಂದ ಅಪರಾಧಿಯಾಗಿ ತಮ್ಮ ಪಾಪಫಲವನ್ನು ಅನುಭವಿಸಬೇಕು.೧೮ [18]ಅಂಥವರು ಪರಿಹಾರಕ್ಕಾಗಿ ಹಿಂಡಿನಿಂದ ಕಳಂಕರಹಿತವಾದ ಟಗರೊಂದನ್ನು ಅಥವಾ ಅದಕ್ಕೆ ಸರಿಸಮಾನವಾದುದನ್ನು ಯಾಜಕನ ಬಳಿಗೆ ತೆಗೆದುಕೊಂಡು ಬರಬೇಕು. ಅವರು ತಿಳಿಯದೆ ಮಾಡಿದ ತಪ್ಪನ್ನು ಪರಿಹರಿಸುವುದಕ್ಕಾಗಿ ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಬೇಕು. ಆಗ ಅವರಿಗೆ ಕ್ಷಮೆ ದೊರಕುವುದು.೧೯ [19]ಅವರು ಅಪರಾಧಿಗಳಾದುದರಿಂದ ಸರ್ವೇಶ್ವರನ ಸನ್ನಿಧಿಯಲ್ಲಿ ಈ ಪರಿಹಾರ ಬಲಿಯನ್ನು ಅರ್ಪಿಸಬೇಕು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಯಾಜಕಕಾಂಡ ೫ 00:00:00 00:00:00 0.5x 2.0x https://beblia.bible:81/BibleAudio/kannadakncl/leviticus/005.mp3 27 5