× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಆಮೋಸನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೪ ೧೨೩೪೫೬೭೮೯1 1 1 : ೧ ೧೨೩೪೫೬೭೮೯೧೦೧೧೧೨೧೩1 1 1 ಕನ್ನಡ ಬೈಬಲ್ (KNCL) 2016 ಆಮೋಸನ ೪ ಟಿಪ್ಪಣಿಗಳನ್ನು ಉಳಿಸಿ ೧ [1]ಸಮಾರ್ಯದ ಗುಡ್ಡಗಳ ಮೇಲೆ ಮೇದು, ಬಾಷಾನಿನ ಕೊಬ್ಬಿನ ಕಾಮಧೇನುಗಳಂತಿರುವ ಮಹಿಳೆಯರೇ, ಕೇಳಿ: ಬಡವರನ್ನು ಹಿಂಸಿಸಿ, ದಿಕ್ಕಿಲ್ಲದವರನ್ನು ಶೋಷಿಸಿ, ನಿಮ್ಮ ಪತಿರಾಯರಿಗೆ, “ಮದ್ಯ ತರಿಸಿರಿ, ಕುಡಿಯೋಣ” ಎಂದು ಹೇಳುವವರೇ, ಇದನ್ನು ಕೇಳಿ:೨ [2]“ದಿನಗಳು ಬರುವುವು. ಆಗ ನಿಮ್ಮನ್ನು ಕೊಂಡಿಗಳಿಂದ ಎಳೆದುಕೊಂಡು ಹೋಗುವರು; ನಿಮ್ಮಲ್ಲಿ ಅಳಿದುಳಿದವರನ್ನು ಗಾಳಕ್ಕೆ ಸಿಕ್ಕಿದ ಮೀನಿನಂತೆ ಸೆಳೆದೊಯ್ಯುವರು.” ಒಡೆಯರಾದ ದೇವರು ಇದನ್ನು ಆಣೆಯಿಟ್ಟು ನುಡಿದಿದ್ದಾರೆ.೩ [3]“ನೀವು ಎಲ್ಲರು ಇದ್ದಕ್ಕಿದ್ದಂತೆ ಒಬ್ಬರ ಹಿಂದೆ ಒಬ್ಬರು ಗೋಡೆಯ ಬಿರುಕುಗಳ ಮೂಲಕ ಹೆರ್ಮೋನ್ ಕಡೆಗೆ ತಳ್ಳಲ್ಪಡುವಿರಿ,” ಇದು ಸರ್ವೇಶ್ವರಸ್ವಾಮಿಯ ನುಡಿ.೪ [4]ಸ್ವಾಮಿ ಸರ್ವೇಶ್ವರ ಇಂತೆನ್ನುತ್ತಾರೆ: “ಇಸ್ರಯೇಲಿನ ಜನರೇ, ಪಾಪ ಮಾಡಬೇಕಾದರೆ, ಬೇತೇಲಿಗೆ ಹೋಗಿ ಪಾಪಮಾಡಿರಿ. ಗಿಲ್ಗಾಲಿಗೆ ಹೋಗಿ ಯಥೇಚ್ಛವಾಗಿ ದ್ರೋಹಮಾಡಿರಿ. ಪ್ರತಿದಿನವೂ ಪ್ರಾತಃಕಾಲದ ಬಲಿಗಳನ್ನು ಅರ್ಪಿಸಿರಿ. ಮೂರು ದಿನಗಳಿಗೊಮ್ಮೆ ದಶಮಾಂಶವನ್ನು ಸಲ್ಲಿಸಿರಿ.೫ [5]ಹುಳಿಹಿಟ್ಟಿನ ರೊಟ್ಟಿಯನ್ನು ಹೋಮಮಾಡಿ ಉಪಕಾರಸ್ಮರಣೆ ಮಾಡಿಕೊಳ್ಳಿ. ಇಷ್ಟಬಂದಂತೆ ಕಾಣಿಕೆಗಳನ್ನು ಸಮರ್ಪಿಸಿ ಪ್ರಚಾರಮಾಡಿಕೊಳ್ಳಿ. ಹೀಗೆ ಮಾಡುವುದು ನಿಮಗೆ ಇಷ್ಟವಲ್ಲವೆ?” ಇದು ಸರ್ವೇಶ್ವರಸ್ವಾಮಿಯ ನುಡಿ.೬ [6]“ನಿಮ್ಮ ಪಟ್ಟಣಗಳಲ್ಲಿ ಹೊಟ್ಟೆಗೆ ಹಿಟ್ಟಿಲ್ಲದಂತೆ ಮಾಡಿದವನು ನಾನೇ. ನೀವು ಹೋದೆಡೆಗಳಲ್ಲೆಲ್ಲ ನಿಮಗೆ ರೊಟ್ಟಿ ಸಿಗದಂತೆ ಮಾಡಿದವನು ನಾನೇ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ.” ಇದು ಸರ್ವೇಶ್ವರಸ್ವಾಮಿಯ ನುಡಿ೭ [7]“ಸುಗ್ಗಿಗೆ ಮೂರು ತಿಂಗಳಿರುವಾಗಲೂ ಮಳೆಯನ್ನು ತಡೆದವನು ನಾನೇ. ಒಂದೂರಿಗೆ ಮಳೆಯಾಗುವಂತೆಯೂ ಮತ್ತೊಂದೂರಿಗೆ ಮಳೆಯಾಗದಂತೆಯೂ ಮಾಡಿದವನು ನಾನೇ. ಒಂದು ಹೊಲಕ್ಕೆ ಮಳೆಯಾಗುವಂತೆ, ಮತ್ತೊಂದು ಹೊಲ ಮಳೆಯಿಲ್ಲದೆ ಬಾಡಿಹೋಗುವಂತೆ ಮಾಡಿದವನು ನಾನೇ.೮ [8]ಹಲವಾರು ಊರಿನವರು ಕುಡಿಯುವ ನೀರಿಗಾಗಿ ಪರದಾಡುತ್ತಾ ಪಕ್ಕದ ಪಟ್ಟಣಕ್ಕೆ ಹೋದರೂ ಅವರ ದಾಹವು ಇಂಗಲಿಲ್ಲ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರ.೯ [9]“ಬಿಸಿಗಾಳಿಯನ್ನು ಕಳುಹಿಸಿ ನಿಮ್ಮ ಪೈರು ಒಣಗುವಂತೆ ಮಾಡಿದೆ. ನಿಮ್ಮ ಬೆಳೆ ಬೂಷ್ಟು ಹಿಡಿದು ನಾಶವಾಗುವಂತೆ ಮಾಡಿದೆ. ನಿಮ್ಮ ವನವೃಕ್ಷಗಳನ್ನೂ ದ್ರಾಕ್ಷಾತೋಟಗಳನ್ನೂ ಹಾಳುಮಾಡಿದೆ. ನಿಮ್ಮ ಅಂಜೂರದ ಗಿಡಗಳನ್ನೂ ಎಣ್ಣೆಮರಗಳನ್ನೂ ಮಿಡತೆಗಳು ತಿಂದುಬಿಡುವಂತೆ ಮಾಡಿದೆ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವಶಕ್ತ ಸರ್ವೇಶ್ವರ.೧೦ [10]“ಹಿಂದೊಮ್ಮೆ ಈಜಿಪ್ಟಿಗೆ ನಾನು ಮಾಡಿದಂತೆ ನಿಮ್ಮನ್ನು ವ್ಯಾಧಿಯಿಂದ ಬಾಧಿಸಿದೆ. ನಿಮ್ಮ ಯುವಜನರು ಖಡ್ಗಕ್ಕೆ ತುತ್ತಾಗುವಂತೆ ಮಾಡಿದೆ. ನಿಮ್ಮ ಕುದುರೆಗಳು ಸೂರೆಯಾಗುವಂತೆ ಮಾಡಿದೆ. ನಿಮ್ಮ ದಂಡಿನವರ ಹೆಣಗಳು ಕೊಳೆತು ನಾರುವ ದುರ್ವಾಸನೆ ನಿಮ್ಮ ಮೂಗಿಗೆ ಬಡಿಯುವಂತೆ ಮಾಡಿದೆ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರಸ್ವಾಮಿ.೧೧ [11]“ಒಮ್ಮೆ ಸೊದೋಮ್ ಮತ್ತು ಗೊಮೋರಾ ಪಟ್ಟಣಗಳನ್ನು ಕೆಡವಿದಂತೆ ನಾನು ನಿಮ್ಮ ಪಟ್ಟಣಪಾಳೆಯಗಳನ್ನು ಕೆಡವಿದೆನು, ಉರಿಯುವ ಬೆಂಕಿಯಿಂದ ಎಳೆದ ಕೊಳ್ಳಿಯಂತೆ ನೀವು ಇದ್ದೀರಿ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರ.೧೨ [12]ಆದುದರಿಂದ ಇಸ್ರಯೇಲಿನ ಜನರೇ, ನಿಮ್ಮನ್ನು ದಂಡಿಸಿಯೇ ತೀರುವೆನು. ಓ ಇಸ್ರಯೇಲರೇ, ನ್ಯಾಯತೀರ್ಪನ್ನು ಕೊಡಲು ಬರಲಿರುವ ನಿಮ್ಮ ದೇವರನ್ನು ಎದುರಗೊಳ್ಳಲು ಸಿದ್ಧಮಾಡಿಕೊಳ್ಳಿ:೧೩ [13]ಬೆಟ್ಟಗುಡ್ಡಗಳನ್ನು ರೂಪಿಸಿದಾತ ದೇವನೇ ಗಾಳಿಬಿರುಗಾಳಿಯನು ಸೃಜಿಸಿದಾತ ಆತನೇ ತನ್ನಾಲೋಚನೆಯನ್ನು ನರರಿಗರುಹಿಸಿದವ ದೇವನೇ ಹಗಲನ್ನು ಇರುಳನ್ನಾಗಿಸುವವನು ಆತನೇ ಪೊಡವಿಯ ಉನ್ನತ ಸ್ಥಾನದಲ್ಲಿ ನಡೆದಾಡುವವನಾತನೇ ಆತನ ನಾಮಧೇಯ - ಸೇನಾಧೀಶ್ವರ ದೇವರಾದ ಸರ್ವೇಶ್ವರನೇ.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಆಮೋಸನ ೪ 00:00:00 00:00:00 0.5x 2.0x https://beblia.bible:81/BibleAudio/kannadakncl/amos/004.mp3 9 4