× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಆಮೋಸನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೫ ೧೨೩೪೫೬೭೮೯1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭1 1 1 ಕನ್ನಡ ಬೈಬಲ್ (KNCL) 2016 ಆಮೋಸನ ೫ ಟಿಪ್ಪಣಿಗಳನ್ನು ಉಳಿಸಿ ೧ [1]ಇಸ್ರಯೇಲಿನ ಜನರೇ, ನಿಮ್ಮನ್ನು ಕುರಿತು ನಾನು ಹಾಡುವ ಈ ಶೋಕಗೀತೆಯನ್ನು ಕೇಳಿ:೨ [2]“ಕನ್ಯೆ ಇಸ್ರಯೇಲಳು ಬಿದ್ದಿಹಳು ಕೆಳಗೆ ಅಶಕ್ತಳು ಆಕೆ ಮರಳಿ ಏಳಲು ಮೇಲಕೆ ದಿಕ್ಕಿಲ್ಲದೆ ಒರಗಿಹಳು ಧರೆಯ ಮೇಲೆ ಮೇಲೆತ್ತಲು ಯಾರೂ ಗತಿಯಿಲ್ಲದ ಅಬಲೆ.”೩ [3]ಒಡೆಯರಾದ ಸರ್ವೇಶ್ವರ ಇಂತೆನ್ನುತ್ತಾರೆ: “ಯುದ್ಧಕ್ಕೆ ಹೊರಟ ಸಾವಿರ ಮಂದಿ ಸೈನಿಕರಲ್ಲಿ ಪಟ್ಟಣಕ್ಕೆ ಮರಳಿದವರು ನೂರೇ ಮಂದಿ: ರಣರಂಗಕ್ಕೆ ಹೊರಟ ನೂರು ಮಂದಿ ಯೋಧರಲ್ಲಿ ಇಸ್ರಯೇಲಿಗೆ ಮರಳಿದವರು ಹತ್ತೇ ಮಂದಿ.”೪ [4]ಇಸ್ರಯೇಲ್ ಮನೆತನಕ್ಕೆ ಸರ್ವೇಶ್ವರ ಹೇಳುವುದೇನೆಂದರೆ: “ನನ್ನನ್ನು ಅರಸಿರಿ, ನೀವು ಬದುಕುವಿರಿ.೫ [5]ಬೇತೇಲಿಗೆ ಹೋಗಬೇಡಿ, ಗಿಲ್ಗಾಲಿಗೆ ಸೇರಬೇಡಿ. ಬೆರ್ಷೆಬಾಗೆ ಯಾತ್ರೆ ಹೋಗಬೇಡಿ. ಗಿಲ್ಗಾಲ್ ಗಡೀಪಾರಾಗುವುದು. ಬೇತೇಲ್ ಬಯಲಾಗುವುದು.”೬ [6]ಸರ್ವೇಶ್ವರಸ್ವಾಮಿಗೆ ಅಭಿಮುಖರಾಗಿರಿ, ನೀವು ಬದುಕುವಿರಿ. ಇಲ್ಲವಾದರೆ ಅವರು ಬೆಂಕಿಯೋಪಾದಿ ಜೋಸೆಫನ ಮನೆತನದ ಮೇಲೆ ಎರಗಿಯಾರು. ಬೇತೇಲಿನ ಜನರನ್ನು ಭಸ್ಮಮಾಡಿಯಾರು. ಆ ಬೆಂಕಿಯನ್ನು ಯಾರೂ ಆರಿಸರು.೭ [7]ನ್ಯಾಯವನ್ನು ಕಹಿಯಾಗಿಸುವವರೇ, ಧರ್ಮವನ್ನು ಕಸವಾಗಿಸುವವರೇ, ನಿಮಗೆ ಧಿಕ್ಕಾರ!೮ [8]ಕೃತ್ತಿಕೆ, ಮೃಗಶಿರ, ನಕ್ಷತ್ರಪುಂಜಗಳನು ಸೃಜಿಸಿದಾತನು ಕತ್ತಲನು ಬೆಳಕಾಗಿ, ಹಗಲನು ಇರುಳಾಗಿ ಮಾಡುವವನು, ಕಡಲಿನ ಜಲವನು ಮೇಲೆತ್ತಿ, ಧರೆಗೆ ಮಳೆಗರೆವಾತನು,೯ [9]ಬಲಾಢ್ಯರನ್ನು ತಟ್ಟನೆ ಬಡಿದು ಕೋಟೆಗಳ ಕೆಡವುವಾತನು ಆತನೇ, ಸರ್ವೇಶ್ವರಸ್ವಾಮಿ ಎಂಬುದೇ ಆತನ ನಾಮಧೇಯ.೧೦ [10]ಕಂಡ ದೋಷವನ್ನು ಮಂಟಪದಲ್ಲಿ ಖಂಡಿಸುವವನನ್ನು ನೀವು ಹಗೆಮಾಡುತ್ತೀರಿ; ನ್ಯಾಯವಾದಿಗಳ ಮೇಲೆ ದ್ವೇಷ ಸಾಧಿಸುತ್ತೀರಿ.೧೧ [11]ಬಡಬಗ್ಗರನ್ನು ತುಳಿಯುತ್ತೀರಿ; ಅವರ ದವಸಧಾನ್ಯಗಳನ್ನು ಕಸಿದುಕೊಳ್ಳುತ್ತೀರಿ. ಆದ್ದರಿಂದ ನೀವು ಕಟ್ಟಿರುವ ಕೆತ್ತನೆಯ ಕಲ್ಲುಮನೆಗಳಲ್ಲಿ ವಾಸಮಾಡಲಾರಿರಿ. ನೀವು ನೆಟ್ಟಿರುವ ಫಲಭರಿತ ದ್ರಾಕ್ಷಾಬಳ್ಳಿಗಳಿಂದ ರಸವನ್ನು ಕುಡಿಯಲಾರಿರಿ.೧೨ [12]ಸಜ್ಜನರನ್ನು ಹಿಂಸಿಸಿ, ಲಂಚಕ್ಕೆ ಕೈ ಒಡ್ಡುವವರೇ, ನ್ಯಾಯಮಂಟಪದಲ್ಲಿ ಬಡವರಿಗೆ ನ್ಯಾಯದೊರಕಿಸದಿರುವವರೇ, ನಿಮ್ಮ ಪಾಪಗಳು ಅಪಾರ! ನಿಮ್ಮ ದ್ರೋಹಗಳು ಬಹಳ! ಇದು ನನಗೆ ಗೊತ್ತು.೧೩ [13]ಕಾಲವು ಕೆಟ್ಟದ್ದಾಗಿ ಇರುವುದರಿಂದ ವಿವೇಕಿಯಾದವನು ಸುಮ್ಮನಿರುವುದು ಲೇಸು.೧೪ [14]ಕೆಟ್ಟದ್ದನ್ನು ಬಿಟ್ಟುಬಿಡಿ. ಒಳ್ಳೆಯದನ್ನು ಆಸಕ್ತಿಯಿಂದ ಮಾಡಿ; ನೀವು ಬಾಳುವಿರಿ. ಆಗ ನೀವು ಹೇಳಿಕೊಳ್ಳುವಂತೆ, ಸೇನಾಧೀಶ್ವರ ದೇವರಾದ ಸರ್ವೇಶ್ವರ ನಿಮ್ಮೊಡನೆ ಇರುವರು.೧೫ [15]ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ. ನ್ಯಾಯಮಂಟಪದಲ್ಲಿ ಸತ್ಯಕ್ಕೆ ಜಯವಾಗುವಂತೆ ನೋಡಿಕೊಳ್ಳಿರಿ. ಆಗ ಬಹುಶಃ ಸೇನಾಧೀಶ್ವರ ದೇವರಾದ ಸರ್ವೇಶ್ವರ ಅಳಿದುಳಿದ ಜೋಸೆಫನ ವಂಶಕ್ಕೆ ಕರುಣೆ ತೋರಿಯಾರು.೧೬ [16]ಸೇನಾಧೀಶ್ವರ ದೇವರಾದ ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಬೀದಿ ಚೌಕಗಳಲ್ಲೆಲ್ಲ ಗೋಳಾಟ ಇರುವುದು. ಹಾದಿಬೀದಿಗಳಲ್ಲೆಲ್ಲ ‘ಅಯ್ಯಯ್ಯೋ’ ಎಂದು ಜನರು ಪ್ರಲಾಪಿಸುವರು. ರೈತರನ್ನು ಕಣ್ಣೀರಿಡುವುದಕ್ಕೂ ಶೋಕವೃತ್ತಿಯವರನ್ನು ಗೋಳಾಡುವುದಕ್ಕೂ ಕರೆಯಲಾಗುವುದು.೧೭ [17]ಪ್ರತಿಯೊಂದು ದ್ರಾಕ್ಷಾತೋಟದಲ್ಲಿ ಜನರು ರೋದಿಸುವರು. ಏಕೆಂದರೆ ನಿಮ್ಮನ್ನು ದಂಡಿಸಲು ನಿಮ್ಮ ಮಧ್ಯೆ ಹಾದುಹೋಗಲಿದ್ದೇನೆ, ಇದು ಸರ್ವೇಶ್ವರಸ್ವಾಮಿಯ ನುಡಿ.”೧೮ [18]ಸ್ವಾಮಿಯ ಆ ದಿನಕ್ಕಾಗಿ ಕಾತುರದಿಂದ ಕಾದಿರುವರೇ, ಅಯ್ಯೋ ನಿಮಗೆ ಕೇಡು; ಆ ದಿನ ಏನಾಗುತ್ತದೆಂದು ನಿಮಗೆ ಗೊತ್ತೆ? ಸ್ವಾಮಿಯ ಆ ದಿನ ನಿಮಗೆ ಬೆಳಕಾಗಿರದು, ಕತ್ತಲೆಯ ದಿನವಾಗಿರುವುದು.೧೯ [19]ಅದು ಹೇಗೆಂದರೆ: “ಸಿಂಹದ ಬಾಯಿಯಿಂದ ತಪ್ಪಿಸಿಕೊಂಡು ಓಡುತ್ತಿರುವವನು ಕರಡಿಯನ್ನು ಎದುರುಗೊಳ್ಳುವಂತೆ ಆಗುವುದು ಅಥವಾ ಅವನು ಅಲ್ಲಿಂದ ಮನೆಗೆ ಓಡಿಬಂದು ಗೋಡೆಯ ಮೇಲೆ ಕೈಯೂರಲು ಅವನಿಗೆ ಹಾವು ಕಚ್ಚಿದಂತೆ ಆಗುವುದು.೨೦ [20]ಖಂಡಿತವಾಗಿ ಸ್ವಾಮಿಯ ದಿನ ಬೆಳಕಾಗಿರದು, ಕತ್ತಲೆಯಾಗಿರುತ್ತದೆ, ಒಂದು ಚುಕ್ಕೆಯೂ ಇಲ್ಲದ ಕಾರಿರುಳಂತಿರುತ್ತದೆ.೨೧ [21]“ನಿಮ್ಮ ಹಬ್ಬಹುಣ್ಣಿಮೆಗಳನ್ನು ಹಗೆಮಾಡುತ್ತೇನೆ, ತುಚ್ಛೀಕರಿಸುತ್ತೇನೆ. ನಿಮ್ಮ ಉತ್ಸವಗಳ ವಾಸನೆಯೂ ನನಗೆ ಬೇಡ.೨೨ [22]ನೀವು ನನಗೆ ದಹನಬಲಿದಾನಗಳನ್ನು, ಧಾನ್ಯನೈವೇದ್ಯಗಳನ್ನು ಅರ್ಪಿಸುವುದಕ್ಕೆ ಬಂದರೂ ನಾನು ಅವುಗಳನ್ನು ಸ್ವೀಕರಿಸುವುದಿಲ್ಲ. ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸುವ ಕೊಬ್ಬಿದ ಪಶುಗಳನ್ನು ನಾನು ಕಟಾಕ್ಷಿಸೆನು.೨೩ [23]ನಿಮ್ಮ ಭಜನೆ ನಿಂತುಹೋಗಲಿ; ನಿಮ್ಮ ವೀಣಾವಾದ್ಯಗಳು ತೊಲಗಲಿ.೨೪ [24]ನ್ಯಾಯನೀತಿ ಹೊಳೆಯಂತೆ ಹರಿಯಲಿ; ಸದ್ಧರ್ಮ ಮಹಾನದಿಯಂತೆ ಪ್ರವಹಿಸಲಿ.೨೫ [25]“ಇಸ್ರಯೇಲಿನ ವಂಶದವರೇ, ನಲವತ್ತು ವರ್ಷಗಳ ಕಾಲ ನೀವು ಮರಳುಗಾಡಿನಲ್ಲಿದ್ದಾಗ, ಬಲಿಪ್ರಾಣಿಗಳನ್ನಾಗಲೀ, ಧಾನ್ಯನೈವೇದ್ಯಗಳನ್ನಾಗಲಿ ನೀವು ಅರ್ಪಿಸಬೇಕೆಂದು ನಾನು ಕೇಳಿದ್ದುಂಟೋ?೨೬ [26]ಆದರೆ ಈಗ ನೀವು ನಿರ್ಮಿಸಿಕೊಂಡಿರುವ ಮೂರ್ತಿಗಳಾದ ಸಿಕ್ಕುತ್ ರಾಜೇಶ್ವರನನ್ನೂ ಕಿಯೂನ್ ಎಂಬ ನಕ್ಷತ್ರ ದೇವತೆಯನ್ನೂ ನೀವೇ ಹೊತ್ತುಕೊಂಡು ಹೋಗಬೇಕಾಗುವುದು.೨೭ [27]ಏಕೆಂದರೆ ನಾನು ನಿಮ್ಮನ್ನು ದಮಸ್ಕದಿಂದ ಆಚೆ ತಳ್ಳಿ, ಸೆರೆಯಾಳುಗಳನ್ನಾಗಿ ಕಳುಹಿಸುವೆನು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಆಮೋಸನ ೫ 00:00:00 00:00:00 0.5x 2.0x https://beblia.bible:81/BibleAudio/kannadakncl/amos/005.mp3 9 5