× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಓಬದ್ಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧1 1 1 ಓಬದ್ಯನ ೧ ಟಿಪ್ಪಣಿಗಳನ್ನು ಉಳಿಸಿ ೧ [1]ಓಬದ್ಯನು ಕಂಡ ದೈವದರ್ಶನ: ಎದೋಮ್ ನಾಡಿನ ವಿಷಯವಾಗಿ ಸ್ವಾಮಿ ಸರ್ವೇಶ್ವರ ಇಂತೆನ್ನುತ್ತಾರೆ: “ಹೊರಡಿರಿ, ಎದೋಮಿನ ಮೇಲೆ ಯುದ್ಧಮಾಡಲು ತೆರಳೋಣ” ಹೀಗೆಂದು ತಮ್ಮ ದೂತನ ಮುಖಾಂತರ ಸರ್ವೇಶ್ವರ ರಾಷ್ಟ್ರಗಳಿಗೆ ಹೇಳಿಕಳುಹಿಸಿದ್ದಾರೆ. ಅವರಿಂದ ಬಂದ ಈ ಸಮಾಚಾರವನ್ನು ನಾವು ಕೇಳಿದ್ದೇವೆ.೨ [2]“ಎದೋಮೇ, ಇಗೋ, ರಾಷ್ಟ್ರಗಳಲ್ಲಿ ನಿನ್ನನ್ನು ಅತ್ಯಲ್ಪಳನ್ನಾಗಿ ಮಾಡುತ್ತೇನೆ. ನೀನು ಬಹು ತಾತ್ಸಾರಕ್ಕೆ ಗುರಿಯಾಗುವೆ.೩ [3]ನಿನ್ನ ದುರಹಂಕಾರ ನಿನ್ನನ್ನು ವಂಚಿಸಿದೆ.” ‘ಉನ್ನತಸ್ಥಾನದಲ್ಲಿ ವಾಸವಾಗಿದ್ದೇನೆ; ಬಂಡೆಗಳ ಬಿರುಕುಗಳಲ್ಲಿ ಭದ್ರವಾಗಿದ್ದೇನೆ; ನನ್ನನ್ನು ನೆಲಕ್ಕೆ ಇಳಿಸಬಲ್ಲವರು ಯಾರು?’ ಎನ್ನುತ್ತಿರುವೆ.೪ [4]ಅದಕ್ಕೆ ಸರ್ವೇಶ್ವರ: “ನೀನು ಹದ್ದಿನ ಮಟ್ಟದಲ್ಲಿ ಹಾರಾಡುತ್ತಿದ್ದರೂ ನಕ್ಷತ್ರಮಂಡಲದಲ್ಲಿ ನೆಲೆಗೊಂಡಿದ್ದರೂ ಅಲ್ಲಿಂದಲೂ ನಿನ್ನನ್ನು ಇಳಿಸಿಬಿಡುತ್ತೇನೆ,” ಎನ್ನುತ್ತಾರೆ.೫ [5]ನಿನ್ನಲ್ಲಿಗೆ ಕಳ್ಳರಾಗಲಿ, ರಾತ್ರಿಯಲ್ಲಿ ಪಂಜುಗಳ್ಳರಾಗಲಿ ಬಂದರೆ ಅವರು ತಮಗೆ ಬೇಕಾದಷ್ಟನ್ನು ಮಾತ್ರ ದೋಚಿಕೊಂಡು ಹೋಗುತ್ತಿದ್ದರಲ್ಲವೆ?೬ [6]ಆದರೆ ಏಸಾವಿನ ಆಸ್ತಿಪಾಸ್ತಿ ಸಂಪೂರ್ಣವಾಗಿ ಸೂರೆಯಾಗಿದೆ.೭ [7]ನನ್ನ ಮಿತ್ರಮಂಡಲಿಯವರೇ ನಿನ್ನನ್ನು ಬೆನ್ನಟ್ಟಿಬಂದಿದ್ದಾರೆ. ನಿನ್ನನ್ನು ಗಡಿಯಾಚೆ ತಳ್ಳಿಬಿಟ್ಟಿದ್ದಾರೆ. ನಿನ್ನ ಆಪ್ತರೇ ನಿನ್ನನ್ನು ವಂಚಿಸಿ ಸೋಲಿಸಿದ್ದಾರೆ. ನಿನ್ನ ಅನ್ನ ತಿಂದವರೇ ತಿಳಿಗೇಡಿಯಾದ ನಿನಗೆ ಉರುಲೊಡ್ಡಿದ್ದಾರೆ೮ [8]ಸರ್ವೇಶ್ವರ ಇಂತೆನ್ನುತ್ತಾರೆ: “ಆ ದಿನದಲ್ಲಿ ಎದೋಮಿನ ಜ್ಞಾನಿಗಳನ್ನೂ ಏಸಾವಿನ ಪರ್ವತದ ಬುದ್ಧಿಜೀವಿಗಳನ್ನೂ ನಾನು ಅಳಿಸದೆ ಬಿಡುವೆನೋ?೯ [9]ತೇಮಾನ್ ನಾಡೇ, ನಿನ್ನ ಶೂರರು ದಿಗ್ಭ್ರಾಂತರಾಗುವರು; ಏಸಾವಿನ ಪ್ರಾಂತ್ಯದಲ್ಲಿ ಎಲ್ಲರೂ ಹತರಾಗುವರು.೧೦ [10]“ನಿನ್ನ ತಮ್ಮನಾದ ಯಕೋಬನ ವಿರುದ್ಧ ನಡೆಸಿದ ಹಿಂಸಾಕೃತ್ಯಗಳಿಗಾಗಿ ನೀನು ಅವಮಾನಕ್ಕೊಳಗಾಗುವೆ. ನಿತ್ಯನಾಶನಕ್ಕೆ ಈಡಾಗುವೆ.೧೧ [11]ನಿನ್ನ ತಮ್ಮನ ಆಸ್ತಿಯನ್ನು ಕೊಳ್ಳೆಹೊಡೆದ ದಿನದಲ್ಲಿ ನೀನು ತಟಸ್ಥನಾಗಿ ನೋಡುತ್ತಾ ನಿಂತಿದ್ದೆ. ಪರಕೀಯರು ಆತನ ಪುರದ್ವಾರಗಳನ್ನು ಪ್ರವೇಶಿಸಿ ಜೆರುಸಲೇಮಿನ ಸೊತ್ತಿಗಾಗಿ ಚೀಟುಹಾಕಿದ ದಿನದಂದು ನೀನೂ ಅವರಂತೆ ಇದ್ದೆ.೧೨ [12]ನಿನ್ನ ತಮ್ಮನ ದುರ್ದಿನದಲ್ಲಿ, ಅವರ ಅಪಾಯಕಾಲದಲ್ಲಿ ನೀನು ಸುಮ್ಮನೆ ನೋಡುತ್ತಾ ನಿಂತಿರಬಾರದಿತ್ತು. ಯೆಹೂದ್ಯರ ವಿನಾಶದಿನದಲ್ಲಿ ಸಂತೋಷಪಡಬಾರದಿತ್ತು. ಅವರ ಸಂಕಟಕಾಲದಲ್ಲಿ ನೀನು ಹಿಗ್ಗಬಾರದಿತ್ತು.೧೩ [13]ನನ್ನ ಜನರ ಆಪತ್ಕಾಲದಲ್ಲಿ ನೀನು ಅವರ ಪುರದ್ವಾರದೊಳಗೆ ಪ್ರವೇಶಿಸಬಾರದಿತ್ತು. ಅವರ ಸೊತ್ತಿಗೆ ನೀನು ಕೈಹಾಕಬಾರದಿತ್ತು.೧೪ [14]ತಪ್ಪಿಸಿಕೊಂಡು ಓಡಿಹೋಗುತ್ತಿದ್ದ ಅವರನ್ನು ಕೊಲ್ಲುವುದಕ್ಕಾಗಿ ಕೂಡುದಾರಿಗಳಲ್ಲಿ ನಿಲ್ಲಬಾರದಿತ್ತು. ತುರ್ತುಪರಿಸ್ಥಿತಿಯಲ್ಲಿ ತಪ್ಪಿಸಿಕೊಂಡವರನ್ನು ಶತ್ರುವಿನ ಕೈಗೆ ಒಪ್ಪಿಸಬಾರದಿತ್ತು.೧೫ [15]“ಸಮಸ್ತ ರಾಷ್ಟ್ರಗಳಿಗೂ ಸರ್ವೇಶ್ವರನ ದಿನ ಸಮೀಪಿಸಿದೆ. ನೀನು ಮಾಡಿದ್ದನ್ನೆ ನಿನಗೂ ಮಾಡಲಾಗುವುದು. ನಿನ್ನ ದುಷ್ಕೃತ್ಯವು ನಿನ್ನ ತಲೆಗೇ ಬರುವುದು.೧೬ [16]ಜನರೇ, ಪವಿತ್ರಪರ್ವತದ ಮೇಲೆ ನನ್ನ ದಂಡನೆಯ ಕಹಿಪಾನಮಾಡಿದಿರಿ. ಅಂತೆಯೇ ಸಕಲ ರಾಷ್ಟ್ರಗಳೂ ಕಹಿಪಾನ ಮಾಡುವುವು. ಹೌದು, ಪದೇಪದೇ ಪಾನಮಾಡಿ ತೂರಾಡುವುವು. ಅಂತ್ಯದಲ್ಲಿ ಇಲ್ಲದಂತಾಗುವುವು.೧೭ [17]“ಆದರೆ ತಪ್ಪಿಸಿಕೊಂಡವರು ಸಿಯೋನ್ ಪರ್ವತದ ಮೇಲೆ ಇರುವರು. ಅದು ಪುಣ್ಯಕ್ಷೇತ್ರ ಎನಿಸಿಕೊಳ್ಳುವುದು; ಯಕೋಬನ ವಂಶಜರು ತಮ್ಮ ಸ್ವತ್ತನ್ನು ಮರಳಿ ಅನುಭವಿಸುವರು.೧೮ [18]ಯಕೋಬವಂಶ ಅಗ್ನಿಯಂತೆ; ಜೋಸೆಫನ ವಂಶ ಜ್ವಾಲೆಯಂತೆ. ಇವೆರಡೂ ಸೇರಿ ಕೂಳೆಯಂತೆ ಇರುವ ಏಸಾವಿನ ವಂಶವನ್ನು ಧಗಧಗನೆ ದಹಿಸಿ ಭಸ್ಮಮಾಡುವುವು. ಏಸಾವಿನ ವಶದಲ್ಲಿ ಯಾರೂ ಉಳಿಯುವುದಿಲ್ಲ.” ಇದು ಸರ್ವೇಶ್ವರಸ್ವಾಮಿಯ ನುಡಿ.೧೯ [19]ಆಗ ದಕ್ಷಿಣವಲಯದವರು ಏಸಾವಿನ ಪರ್ವತವನ್ನು ಸ್ವಾಧೀನಪಡಿಸಿಕೊಳ್ಳುವರು. ಪಶ್ಚಿಮದ ಬಯಲು ಸೀಮೆಯವರು ಫಿಲಿಷ್ಟಿಯವನ್ನೂ ಎಫ್ರಯಿಮ್ ಮತ್ತು ಸಮಾರ್ಯದ ಭೂಮಿಯನ್ನೂ ವಶಪಡಿಸಿಕೊಳ್ಳುವರು. ಬೆನ್ಯಾಮಿನ ವಂಶಜರು ಗಿಲ್ಯಾದನ್ನು ಸ್ವತಂತ್ರಿಸಿಕೊಳ್ಳುವರು.೨೦ [20]ಸೆರೆಹೋಗಿರುವ ಇಸ್ರಯೇಲಿನ ಸೈನಿಕರು ಕಾನಾನ್ ನಾಡನ್ನು ಚಾರೆಪತಿನವರೆಗೆ ವಶಪಡಿಸಿಕೊಳ್ಳುವರು. ಸೆಪಾರದ ಎಂಬಲ್ಲಿ ಸೆರೆಯಾಗಿರುವ ಜೆರುಸಲೇಮಿನವರು ದಕ್ಷಿಣ ಪ್ರಾಂತ್ಯದ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.೨೧ [21]ಉದ್ಧಾರಕನು ಏಸಾವಿನ ಪರ್ವತವನ್ನು ಆಳಲು ಸಿಯೋನ್ ಪರ್ವತವನ್ನು ಏರುವನು. ಆಗ ರಾಜ್ಯಭಾರವು ಸರ್ವೇಶ್ವರಸ್ವಾಮಿಯದಾಗಿರುವುದು.”Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಓಬದ್ಯನ ೧ 00:00:00 00:00:00 0.5x 2.0x https://beblia.bible:81/BibleAudio/kannadakncl/obadiah/001.mp3 1 1