× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಮೀಕನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೬ ೧೨೩೪೫೬೭1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬1 1 1 ಕನ್ನಡ ಬೈಬಲ್ (KNCL) 2016 ಮೀಕನ ೬ ಟಿಪ್ಪಣಿಗಳನ್ನು ಉಳಿಸಿ ೧ [1]ಸರ್ವೇಶ್ವರ ಹೇಳುವುದನ್ನು ಕೇಳಿರಿ: “ಎದ್ದೇಳು; ಬೆಟ್ಟಗಳ ಸಮ್ಮುಖದಲ್ಲಿ ನಿನ್ನ ವ್ಯಾಜ್ಯ ನಡೆಯಲಿ; ನಿನ್ನ ಧ್ವನಿ ಗುಡ್ಡಗಳಿಗೆ ಕೇಳಿಸಲಿ.೨ [2]“ಬೆಟ್ಟಗಳೇ, ಸರ್ವೇಶ್ವರಸ್ವಾಮಿಯ ಆಪಾದನೆಯನ್ನು ಕೇಳಿರಿ. ಭೂಮಿಯ ಸ್ಥಿರವಾದ ಅಸ್ತಿಭಾರಗಳೇ, ಕಿವಿಗೊಡಿ. ಆ ಸ್ವಾಮಿಗೆ ತನ್ನ ಪ್ರಜೆಯ ಮೇಲೆ ವ್ಯಾಜ್ಯವಿದೆ; ಅವರು ಇಸ್ರಯೇಲಿನ ವಿರುದ್ಧ ವಾದಿಸುವುದನ್ನು ಗಮನಿಸಿರಿ.”೩ [3]ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಪ್ರಜೆಯೇ, ನಾನು ನಿನಗೇನು ಮಾಡಿದೆ? ಯಾವ ವಿಷಯದಲ್ಲಿ ನಿನಗೆ ಬೇಸರವನ್ನುಂಟುಮಾಡಿದೆ? ಪ್ರಮಾಣವಾಗಿ ಹೇಳು.೪ [4]ಈಜಿಪ್ಟ್ ದೇಶದಿಂದ ನಾನು ನಿನ್ನನ್ನು ಕರೆತಂದೆ; ದಾಸತ್ವದ ಬಂಧನದಿಂದ ನಿನ್ನನ್ನು ಬಿಡುಗಡೆ ಮಾಡಿದೆ. ನಿನಗೆ ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ನಾಯಕರನ್ನಾಗಿ ಕಳುಹಿಸಿದೆ.೫ [5]ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನು ನೆನಪಿಗೆ ತಂದುಕೊಳ್ಳಿ. ಬೆಯೋರನ ಮಗನಾದ ಬಿಳಾಮನು ಕೊಟ್ಟ ಉತ್ತರವನ್ನು ಜ್ಞಾಪಿಸಿಕೊಳ್ಳಿ. ನೀವು ತಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದುದನೆಲ್ಲಾ ಸ್ಮರಿಸಿಕೊಳ್ಳಿ. ಆಗ ಸರ್ವೇಶ್ವರ ನಿಮ್ಮನ್ನು ರಕ್ಷಿಸಲು ಮಾಡಿದ ಮಹತ್ಕಾರ್ಯಗಳು ನಿಮಗೆ ಮನದಟ್ಟಾಗುವುವು.”೬ [6]ನಾನು ಸರ್ವೇಶ್ವರಸ್ವಾಮಿಯ ಸನ್ನಿಧಿಗೆ ಯಾವ ಕಾಣಿಕೆಯೊಂದಿಗೆ ಹೋಗಲಿ? ಮಹೋನ್ನತ ದೇವರಿಗೆ ಹೇಗೆ ಅಡ್ಡಬೀಳಲಿ? ಹೋಮಕ್ಕಾಗಿ, ಒಂದು ವರ್ಷದ ಎಳೆಕರುಗಳನ್ನು ತೆಗೆದುಕೊಂಡುಹೋಗಲೇ?೭ [7]ಸಾವಿರಾರು ಟಗರುಗಳನ್ನೂ ಧಾರಾಕಾರವಾಗಿ ಹರಿಯುವ ತೈಲಪ್ರವಾಹಗಳನ್ನು ನೋಡಿ ಸರ್ವೇಶ್ವರ ಮೆಚ್ಚುವುದುಂಟೆ? ನಾನು ಮಾಡಿದ ದ್ರೋಹಕ್ಕಾಗಿ ನನ್ನ ಚೊಚ್ಚಲುಮಗನನ್ನೇ ಅರ್ಪಿಸಲೇ? ನನ್ನ ಪಾಪಕ್ಕಾಗಿ ನನ್ನ ಕರುಳ ಕುಡಿಯನ್ನೇ ಬಲಿಕೊಡಲೇ?೮ [8]ಇಲ್ಲ ಮನುಜಾ, ನಿನಗೆ ಯಾವುದು ಒಳಿತೆಂದು ಸರ್ವೇಶ್ವರ ಈಗಾಗಲೇ ಸ್ಪಷ್ಟಪಡಿಸಿದ್ದಾರೆ: ನ್ಯಾಯನೀತಿಯ ನಡವಳಿಕೆ, ಕರುಣೆಯಲ್ಲಿ ಅಚಲ ಆಸಕ್ತಿ, ದೇವರ ಮುಂದೆ ನಮ್ರತೆ, ಇಷ್ಟನ್ನೇ ಆ ಸ್ವಾಮಿ ನಿನ್ನಿಂದ ಅಪೇಕ್ಷಿಸುವುದು.೯ [9]ಸರ್ವೇಶ್ವರಸ್ವಾಮಿಯಲ್ಲಿ ಭಯಭಕ್ತಿಯಿಂದಿರುವುದು ಸುಜ್ಞಾನ. ಇದು ಆ ಸ್ವಾಮಿಯ ವಾಣಿ; ಪಟ್ಟಣಕ್ಕೆ ನೀಡುವ ಎಚ್ಚರಿಕೆಯ ಕರೆ:೧೦ [10]“ನಗರದ ಸಭಿಕರೇ, ಕೇಳಿ! ಅಕ್ರಮವಾಗಿ ಗಳಿಸಿದ ಆಸ್ತಿ ದುರುಳರ ಮನೆಯಲ್ಲಿರುವುದು ನನಗೆ ಗೊತ್ತಿಲ್ಲವೆ? ಅವರ ಮೋಸದ ಅಳತೆಗಳನ್ನು ನಾನು ಒಪ್ಪುವುದು ಸಾಧ್ಯವೆ?೧೧ [11]ಕಳ್ಳ ತಕ್ಕಡಿಗಳಿಂದ ಮೋಸದ ಬಟ್ಟುಗಳಿಂದ ಅಳೆದುಹಾಕುವವನು ನಿರ್ದೋಷಿಯೆಂದು ತೀರ್ಮಾನಿಸಲೆ?೧೨ [12]ನಿಮ್ಮ ಧನಿಕರು ಹಿಂಸಾತ್ಮಕರು; ನಿಮ್ಮ ನಿವಾಸಿಗಳು ಸುಳ್ಳುಗಾರರು! ಅವರ ಬಾಯಿಮಾತು ಕಪಟ.೧೩ [13]ಆದಕಾರಣ ನಿಮ್ಮನ್ನು ಕಠಿಣವಾಗಿ ದಂಡಿಸುವೆನು. ನಿಮ್ಮ ಪಾಪದ ನಿಮಿತ್ತ ನಾಶವಾಗುವಿರಿ.೧೪ [14]ಎಷ್ಟು ತಿಂದರೂ ನಿಮಗೆ ತೃಪ್ತಿಯಾಗದು; ನಿಮ್ಮಲ್ಲಿ ಹಸಿವು ಇದ್ದೇ ಇರುತ್ತದೆ. ನೀವು ಎಷ್ಟು ಕೂಡಿಸಿಟ್ಟರೂ ಅದು ನಿಮಗೆ ಉಳಿಯುವುದಿಲ್ಲ; ಏಕೆಂದರೆ ಉಳಿದುದ್ದನ್ನು ಕದನದಲ್ಲಿ ಹಾಳಾಗಿಸುವೆನು.೧೫ [15]ನೀವು ಬೀಜವನ್ನು ಬಿತ್ತಿದರೂ ಬೆಳೆಯನ್ನು ಕೊಯ್ಯಲಾರಿರಿ. ಕಾಳನ್ನು ಗಾಣಕ್ಕೆ ಸುರಿದರೂ ಎಣ್ಣೆಯನ್ನು ತೆಗೆಯಲಾರಿರಿ. ದ್ರಾಕ್ಷಿಯನ್ನು ಆಲೆಮನೆಗೆ ಹಾಕಿದರೂ ದ್ರಾಕ್ಷಾರಸವನ್ನು ಕುಡಿಯಲಾರಿರಿ.೧೬ [16]“ಒಮ್ರಿ ಅರಸನ ಆಜ್ಞೆಗಳನ್ನೂ ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದಕಾರಣ ನಿಮ್ಮನ್ನು ವಿನಾಶಗೊಳಿಸುವೆನು; ನಿಮ್ಮ ಜನರನ್ನು ಅಪಹಾಸ್ಯಕ್ಕೆ ಈಡುಮಾಡುವೆನು. ನೀವು ಜನಾಂಗಗಳ ನಿಂದೆಗೆ ಗುರಿಯಾಗುವಿರಿ.”Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಮೀಕನ ೬ 00:00:00 00:00:00 0.5x 2.0x https://beblia.bible:81/BibleAudio/kannadakncl/micah/006.mp3 7 6