× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ನಹೂಮನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧೨೩1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫1 1 1 ಕನ್ನಡ ಬೈಬಲ್ (KNCL) 2016 ನಹೂಮನ ೧ ಟಿಪ್ಪಣಿಗಳನ್ನು ಉಳಿಸಿ ೧ [1]ನಿನೆವೆಯನ್ನು ಕುರಿತ ದೈವೋಕ್ತಿ. ಎಲ್ಕೋಷ್ ಊರಿನ ನಹೂಮ ಪ್ರವಾದಿಗೆ ಆದ ದೈವದರ್ಶನವಿದು:೨ [2]ಸರ್ವೇಶ್ವರ ಸ್ವಗೌರವವನು ಕಾಪಾಡಿಕೊಳ್ಳುವ ದೇವರು ಮುಯ್ಯಿತೀರಿಸುವ, ಹೌದು, ಕಡುಕೋಪದಿಂದ ಮುಯ್ಯಿತೀರಿಸುವ ದೇವರು. ಸರ್ವೇಶ್ವರ ಮುಯ್ಯಿತೀರಿಸುತ್ತಾರೆ ತನ್ನ ವಿರೋಧಿಗಳಿಗೆ ದೀರ್ಘರೋಷವಿಡುತ್ತಾರೆ, ತಮ್ಮ ಶತ್ರುಗಳ ಮೇಲೆ.೩ [3]ಸರ್ವೇಶ್ವರ ಶಾಂತಿಸ್ವರೂಪಿ; ಆದರೆ ಆತನ ಶಕ್ತಿ ಅಪಾರ, ಅಪರಾಧಿಗಳನ್ನು ಆತ ಶಿಕ್ಷಿಸದೆ ಬಿಡ; ಗಾಳಿಬಿರುಗಾಳಿಗಳ ನಡುವೆ ಆತನ ಹಾದಿ; ಮೋಡಗಳು ಆತನ ನಡೆಯಿಂದೇಳುವ ಧೂಳಿ.೪ [4]ಆತನ ಗದರಿಕೆಯೊಂದಕೆ ಬತ್ತಿಹೋಗುತ್ತದೆ ಸಮುದ್ರ; ನಂದಿಹೋಗುತ್ತವೆ ನದಿಸರೋವರ. ಕಂದುತ್ತವೆ ಕಾರ್ಮೆಲ್ ಗುಡ್ಡಗಳು ಬಾಡುತ್ತವೆ ಬಾಷಾನಿನ ಹೊಲಗಳು ಮುದುಡುತ್ತವೆ ಲೆಬನೋನಿನ ಚಿಗುರುಗಳು.೫ [5]ಆತನೆದುರು ಅದರುತ್ತವೆ ಬೆಟ್ಟಗಳು ಕರಗುತ್ತವೆ ಗುಡ್ಡಗಳು. ಆತನ ದರ್ಶನಕೆ ಕಂಪಿಸುತ್ತದೆ ಭೂಗೋಳವು ತಲ್ಲಣಿಸುತ್ತದೆ ಲೋಕ ಲೋಕನಿವಾಸಿಗಳೆಲ್ಲವು.೬ [6]ಯಾರು ತಡೆದಾರು ಆತನ ಸಿಟ್ಟಿಗೆ? ಯಾರು ನಿಂತಾರು ಆತನ ರೋಷಾಗ್ನಿಗೆ? ಆತನ ರೌದ್ರ ಜ್ವಾಲಾಪ್ರವಾಹದಂತೆ ಬಂಡೆಗಳು ಪುಡಿಪುಡಿ ಆತನ ಮುಂದೆ.೭ [7]ಒಳ್ಳೆಯವನು ಸರ್ವೇಶ್ವರ ಸಂಕಟದಲಿ ಆಶ್ರಯದುರ್ಗ ಮೊರೆಹೊಕ್ಕವರನು ಚೆನ್ನಾಗಿ ಬಲ್ಲನಾತ.೮ [8]ನಾಶಗೊಳಿಸುವನು ನಿನೆವೆಯನು ಮಹಾಜಲಪ್ರಳಯದಲ್ಲೋ ಎಂಬಂತೆ ಹಿಂದಟ್ಟಿ ತಳ್ಳುವನು ವಿರೋಧಿಗಳನು ಗಾಢಾಂಧಕಾರಕ್ಕೋ ಎಂಬಂತೆ.೯ [9]ಸರ್ವೇಶ್ವರನ ವಿರುದ್ಧ ಮಾಡಬಲ್ಲಿರಾ ನೀವು ಕುಯುಕ್ತಿ? ಮರಳಿ ತಲೆಯೆತ್ತದಂತೆ ನಾಶಮಾಡುವನು ನಿಮ್ಮನು ಪೂರ್ತಿಯಾಗಿ.೧೦ [10]ಆತನ ವೈರಿಗಳು ಹೆಣೆದುಕೊಂಡಿದ್ದರೂ ಮುಳ್ಳುಗಳಂತೆ ಕುಡಿದು ಮತ್ತರಾಗಿ ಮುಳುಗಿದ್ದರೂ ಮದ್ಯದಲ್ಲೆ ತುತ್ತಾಗುವರು ಬೆಂಕಿಗೆ ತೀರ ಒಣಗಿದ ಕೂಳೆಯಂತೆ.೧೧ [11]ನಿನೆವೆಯೇ, ಸರ್ವೇಶ್ವರಸ್ವಾಮಿಗೆ ವಿರುದ್ಧವಾಗಿ ಕುಯುಕ್ತಿಯನ್ನು ಕಲ್ಪಿಸುವವನು ನಿನ್ನಿಂದಲೆ ಹೊರಟಿದ್ದಾನೆ.೧೨ [12]ಆ ಸ್ವಾಮಿ ಇಂತೆನ್ನುತ್ತಾನೆ: “ನಿನ್ನ ಶತ್ರುಗಳು ಎಷ್ಟು ಬಲಾಢ್ಯರಾಗಿದ್ದರೂ ಎಷ್ಟು ಅಧಿಕ ಸಂಖ್ಯೆಯಲ್ಲಿದ್ದರೂ ಅವರು ನಾಶಕ್ಕೊಳಗಾಗುವರು; ಆ ದುರಾಲೋಚಕನು ಇಲ್ಲವಾಗುವನು. ನನ್ನ ಜನರೇ, ನಾನು ನಿಮ್ಮನ್ನು ಬಾಧಿಸಿದ್ದುಂಟು, ಆದರೆ ಇನ್ನು ಮುಂದೆ ಬಾಧಿಸುವುದಿಲ್ಲ.೧೩ [13]ಆ ಶತ್ರು ನಿಮ್ಮ ಮೇಲೆ ಹೇರಿದ ನೊಗವನ್ನು ಈಗ ನಿಮ್ಮಿಂದ ತೆಗೆದು ಮುರಿದುಬಿಡುವೆನು. ನಿಮ್ಮ ಸಂಕೋಲೆಗಳನ್ನು ಕಿತ್ತುಹಾಕುವೆನು.”೧೪ [14]ಅಸ್ಸೀರಿಯವೇ, ಸರ್ವೇಶ್ವರನಾದ ನಾನು ನಿನ್ನ ಬಗ್ಗೆ ಹೊರಡಿಸಿದ ಆಜ್ಞೆ ಏನೆಂದರೆ: ಹೆಸರೆತ್ತಲು ನಿನಗೆ ಸಂತಾನವೇ ಇಲ್ಲದಂತಾಗುವುದು. ನಿನ್ನ ದೇವರುಗಳ ಗುಡಿಗಳಲ್ಲಿರುವ ಕೆತ್ತನೆಯ ವಿಗ್ರಹವನ್ನೂ ಎರಕದ ಬೊಂಬೆಯನ್ನೂ ಒಡೆದುಹಾಕುವೆನು. ನಿನಗೆ ಸಮಾಧಿಯೊಂದನ್ನು ಸಿದ್ಧಗೊಳಿಸುವೆನು; ಏಕೆಂದರೆ ನೀನು ಕೆಡುಕ.”೧೫ [15]ಇಗೋ, ಶುಭಸಂದೇಶವನ್ನು ಸಾರಲು ದೂತನೊಬ್ಬನು ಪರ್ವತದಿಂದ ಇಳಿದು ಬರುತ್ತಿದ್ದಾನೆ! ಶಾಂತಿ ಸಮಾಧಾನವನ್ನು ಘೋಷಿಸಲು ತ್ವರೆಪಡುತ್ತಿದ್ದಾನೆ! ಜುದೇಯ ನಾಡೇ, ನಿನ್ನ ಹಬ್ಬಗಳನ್ನು ಆಚರಿಸು. ನಿನ್ನ ಹರಕೆಗಳನ್ನು ಸಲ್ಲಿಸು. ಆ ದುಷ್ಟ ಶತ್ರು ಇನ್ನೆಂದಿಗೂ ನಿನಗೆ ಮುತ್ತಿಗೆಹಾಕಲಾರನು. ಅವನು ಸಂಪೂರ್ಣವಾಗಿ ನಾಶವಾಗಿದ್ದಾನೆ!Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ನಹೂಮನ ೧ 00:00:00 00:00:00 0.5x 2.0x https://beblia.bible:81/BibleAudio/kannadakncl/nahum/001.mp3 3 1