× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ನಹೂಮನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೩ ೧೨೩1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯1 1 1 ಕನ್ನಡ ಬೈಬಲ್ (KNCL) 2016 ನಹೂಮನ ೩ ಟಿಪ್ಪಣಿಗಳನ್ನು ಉಳಿಸಿ ೧ [1]ಧಿಕ್ಕಾರ ರಕ್ತಮಯವಾದ ನಗರಕೆ! ತುಂಬಿದೆ ಅದರಲಿ ಸುಳ್ಳು ಮತ್ತು ಸುಲಿಗೆ ನಿಲ್ಲದೆ ನಡೆಯುತ್ತಿದೆ ಅದರಲಿ ಕೊಳ್ಳೆ.೨ [2]ಕೇಳಿ, ಚಕ್ರಗಳ ಚೀತ್ಕಾರ, ಚಾಟಿಗಳ ಚಟಪಟ; ಕುದುರೆಗಳ ಭರದೌಡು, ರಥಗಳ ಹಾರಾಟ.೩ [3]ರಾಹುತರ ರಭಸ, ಕತ್ತಿಯ ಥಳಥಳಿಪು, ಈಟಿಯ ಝಳಿಪು; ಹತರಾದವರು ಅಗಣಿತ, ಸತ್ತವರು ಅಸಂಖ್ಯಾತ, ಶವಗಳ ರಾಶಿ ವಿಪರೀತ; ನುಗ್ಗುವವರು ಎಡವುತಿಹರು ಹೆಣಗಳನು ದಾಟಿಹೋಗುತ.೪ [4]ಇದೆಲ್ಲ ಆಗುವುದು ಅಮಿತ ಹಾದರದ ನಿಮಿತ್ತ ರಾಷ್ಟ್ರಗಳನು ತನ್ನ ಬೆಡಗು ಬಿನ್ನಾಣಗಳಿಂದ ಜಾರತನಕ್ಕೂ ಗುಲಾಮತನಕ್ಕೂ ಆಕೆ ತಂದುದರಿಂದ.೫ [5]ಇಂತೆನ್ನುತ್ತಾರೆ ಸರ್ವಶಕ್ತ ಸರ್ವೇಶ್ವರ: “ನಿನೆವೆ, ನಿನಗೆ ನಾ ವಿರೋಧಿಯಾಗಿರುವೆನು ಬಿಚ್ಚಿ ಮುಖದ ಮೇಲೆತ್ತುವೆನು ನಿನ್ನ ನೆರಿಗೆಗಳನು ಜನಾಂಗಗಳಿಗೆ ತೋರಿಸುವೆನು ನಿನ್ನ ಬೆತ್ತಲೆತನವನು ರಾಜ್ಯಗಳಿಗೆ ಕಾಣಿಸುವೆನು ನಿನ್ನ ಅವಮಾನವನು.೬ [6]ಎಸೆಯುವೆನು ನಿನ್ನ ಮೇಲೆ ಹೊಲಸನು ಕಳೆಯುವೆನು ನಿನ್ನ ಮಾನವನು ಪರಿಹಾಸ್ಯಕ್ಕೀಡುಮಾಡುವೆನು ನಿನ್ನನು.೭ [7]ನಿನ್ನ ನೋಡುವವರು ನಿನ್ನಿಂದ ದೂರ ಓಡುವರು “ನಿನೆವೆ ಹಾಳುಬಿದ್ದಿದೆ, ಅದಕ್ಕೆ ಗೋಳಿಡುವರಾರು? ಅದನ್ನು ಸಂತೈಸುವವರು ನಮಗೆಲ್ಲಿ ಸಿಕ್ಕಿಯಾರು?, ಎಂದುಕೊಳ್ಳುವರು.”೮ [8]“ನೀನು ತೇಬೆಸ್ಸಿಗಿಂತ ಸುಭದ್ರಳೋ? ಅದು ನೈಲಿನ ಪ್ರವಾಹಗಳಲ್ಲಿ ನೆಲೆಯಾಗಿತ್ತು. ನೀರು ಅದನ್ನು ಸುತ್ತಿಕೊಂಡಿತ್ತು. ಮಹಾನದಿ ಅದಕ್ಕೆ ಕೋಟೆಯಾಗಿತ್ತು. ಜಲಾಶಯವು ಅದರ ದುರ್ಗವಾಗಿತ್ತು.೯ [9]ಸುಡಾನ್ ಮತ್ತು ಈಜಿಪ್ಟ್ ಅದಕ್ಕೆ ಬೆಂಬಲವಾಗಿದ್ದವು. ಪೂಟ್ ಮತ್ತು ಲಿಬ್ನ ಅದಕ್ಕೆ ಮಿತ್ರನಾಡುಗಳಾಗಿದ್ದವು೧೦ [10]ಆದರೂ ತೇಬೆಸ್ ನಗರವು ಗಡೀಪಾರಾಗಿ ಸೆರೆಹೋಯಿತು. ಅದರ ಮಕ್ಕಳನ್ನು ಬೀದಿಬೀದಿಯ ಮೂಲೆಗಳಲ್ಲಿ ಬಂಡೆಗಳಿಗೆ ಅಪ್ಪಳಿಸಲಾಯಿತು. ಅದರ ಪ್ರಮುಖರನ್ನು ಬಂಧಿಸಿ ಕೊಂಡೊಯ್ದು, ಚೀಟುಹಾಕಿ ಹಂಚಿಕೊಳ್ಳಲಾಯಿತು.೧೧ [11]“ನಿನೆವೆಯೇ, ನೀನು ಸಹ ಮತ್ತಳಾಗಿ ತತ್ತರಿಸುವೆ. ಶತ್ರುಗಳಿಂದ ಆಶ್ರಯ ಕೋರುವೆ.೧೨ [12]ನಿನ್ನ ಕೋಟೆಗಳೆಲ್ಲ ಮೊತ್ತಮೊದಲು ಮಾಗಿದ ಹಣ್ಣುಗಳುಳ್ಳ ಅಂಜೂರದ ಮರಗಳಂತಿವೆ. ಆ ಮರಗಳನ್ನು ಅಲ್ಲಾಡಿಸಿದ್ದೇ ಆದರೆ ಹಣ್ಣುಗಳು ಬೀಳುವುವು. ತಿನ್ನುವವರ ಬಾಯಿಗೆ,೧೩ [13]ನಿನ್ನ ಯೋಧರನ್ನು ನೋಡು; ಅವರೆಲ್ಲ ಹೆಣ್ಣಿಗರು. ನಿನ್ನ ದೇಶದ ದ್ವಾರಗಳು ಶತ್ರುಗಳಿಗೆ ತೆರೆದ ಬಾಗಿಲುಗಳು. ಅದರ ಕಬ್ಬಿಣದ ಅಗುಳಿಗಳು ಬೆಂಕಿಯಿಂದ ಭಸ್ಮವಾದವು.೧೪ [14]ಮುತ್ತಿಗೆಯ ಕಾಲಕ್ಕೆ ನೀರನ್ನು ಸೇದಿ ಶೇಖರಿಸಿಡು. ನಿನ್ನ ಕೋಟೆಯನ್ನು ಭದ್ರಪಡಿಸು. ಮಣ್ಣಿಗೆ ಇಳಿ; ಜೇಡಿಯನ್ನು ತುಳಿ; ಇಟ್ಟಿಗೆಯ ಅಚ್ಚನ್ನು ಹಿಡಿ.೧೫ [15]ನೀನು ಇದ್ದಲ್ಲಿಯೇ ಬೆಂಕಿ ನಿನ್ನನ್ನು ಕಬಳಿಸುವುದು. ಕತ್ತಿಯು ನಿನ್ನನ್ನು ಕಡಿದುಬಿಡುವುದು. ಮಿಡತೆಗಳು ಬೆಳೆಯನ್ನು ನುಂಗುವಂತೆ ಶತ್ರುಗಳು ನಿನ್ನನ್ನು ನುಂಗಿಬಿಡುವರು. “ನಿನ್ನ ಜನರು ಮಿಡತೆಗಳಂತೆ ಅಸಂಖ್ಯಾತರಾಗಲಿ! ಗುಂಪುಮಿಡತೆಗಳಂತೆ ಅಪರಿಮಿತರಾಗಲಿ!೧೬ [16]ನಿನ್ನ ವರ್ತಕರು ಆಕಾಶದ ನಕ್ಷತ್ರಗಳಿಗಿಂತ ಅಧಿಕವಾಗಲಿ! ಆದರೆ ಈಗ ಮಿಡತೆ ತನ್ನ ಪರೆಯನ್ನು ಬಿಟ್ಟು ಹಾರಿಹೋಗುವಂತೆ ಎಲ್ಲರು ಪಲಾಯನವಾಗಲಿ!೧೭ [17]ನಿನ್ನ ಪಹರೆಯವರು ಮಿಡತೆಗಳಂತೆ, ನಿನ್ನ ಸೇನಾಧಿಪತಿಗಳು ಗುಂಪು ಮಿಡತೆಗಳಂತೆ ಇದ್ದಾರೆ. ಚಳಿಗಾಲದಲ್ಲಿ ಅವು ಬೇಲಿಯ ಮರೆಯಲ್ಲಿರುತ್ತವೆ. ಹೊತ್ತು ಹುಟ್ಟಿದಾಗ ಯಾರಿಗೂ ತಿಳಿಯದ ಸ್ಥಳಕ್ಕೆ ಹಾರಿಹೋಗುತ್ತವೆ.೧೮ [18]“ಅಸ್ಸೀರಿಯಾದ ಅರಸನೇ, ನಿನ್ನ ರಾಜ್ಯಪಾಲರು ದೀರ್ಘನಿದ್ರೆಯಲ್ಲಿದ್ದಾರೆ. ನಿನ್ನ ಪ್ರಮುಖರು ಜಡವಾಗಿ ಬಿದ್ದಿದ್ದಾರೆ. ನಿನ್ನ ಪ್ರಜೆಗಳು ಬೆಟ್ಟಗುಡ್ಡಗಳಲ್ಲಿ ಚದರಿಹೋಗಿದ್ದಾರೆ. ಅವರನ್ನು ಒಟ್ಟುಗೂಡಿಸತಕ್ಕವರು ಯಾರೂ ಇಲ್ಲದಿದ್ದಾರೆ.೧೯ [19]ನಿನ್ನ ಗಾಯಕ್ಕೆ ಮದ್ದಿಲ್ಲ. ನಿನಗೆ ಬಿದ್ದಿರುವ ಪೆಟ್ಟು ಪ್ರಾಣನಾಶಕ. ನಿನ್ನ ವಿನಾಶದ ಸಮಾಚಾರವನ್ನು ಕೇಳುವವರೆಲ್ಲ ಚಪ್ಪಾಳೆ ಹಾಕುತ್ತಾರೆ. ಏಕೆಂದರೆ ನೀನು ಮಾಡಿರುವ ಕೇಡಿಗೆ ಕೊನೆಯಿಲ್ಲ. ಅದರಿಂದ ತಪ್ಪಿಸಿಕೊಂಡವರು ಯಾರೂ ಇಲ್ಲ.”Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ನಹೂಮನ ೩ 00:00:00 00:00:00 0.5x 2.0x https://beblia.bible:81/BibleAudio/kannadakncl/nahum/003.mp3 3 3