× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಜೆಕರ್ಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧೨೩೪೫೬೭೮೯೧೦೧೧೧೨೧೩೧೪1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧1 1 1 ಕನ್ನಡ ಬೈಬಲ್ (KNCL) 2016 ಜೆಕರ್ಯನ ೧ ಟಿಪ್ಪಣಿಗಳನ್ನು ಉಳಿಸಿ ೧ [1]ಡೇರಿಯಸನ ಆಳ್ವಿಕೆಯ ಎರಡನೆಯ ವರ್ಷದ ಎಂಟನೆಯ ತಿಂಗಳಲ್ಲಿ ಸರ್ವೇಶ್ವರನಿಂದ ಇದ್ದೋವಿನ ಮೊಮ್ಮಗನೂ ಬೆರೆಕ್ಯನ ಮಗನೂ ಆದ ಜೆಕರ್ಯನೆಂಬ ಪ್ರವಾದಿಗೆ ಕೇಳಿಬಂದ ದೈವವಾಣಿಯಿದು:೨ [2]ಸರ್ವೇಶ್ವರ ನಿಮ್ಮ ಪಿತೃಗಳ ಮೇಲೆ ಬಹಳ ಸಿಟ್ಟುಗೊಂಡಿದ್ದಾರೆ.೩ [3]ಎಂದೇ ನೀನು ನನ್ನ ಜನರಿಗೆ ಹೀಗೆಂದು ಹೇಳು: “ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ಮರಳಿ ನನಗೆ ಅಭಿಮುಖರಾಗಿರಿ. ಆಗ ನಾನು ನಿಮಗೆ ಮರಳಿ ಅಭಿಮುಖನಾಗುವೆನು.೪ [4]ನಿಮ್ಮ ಪಿತೃಗಳಂತೆ ಆಗಬೇಡಿ. ಅವರಿಗೆ ಪೂರ್ವಕಾಲದ ಪ್ರವಾದಿಗಳು, ‘ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ನಿಮ್ಮ ದುರ್ಮಾರ್ಗಗಳನ್ನೂ ದುಷ್ಕೃತ್ಯಗಳನ್ನೂ ಬಿಟ್ಟು ಹಿಂದಿರುಗಿ’ ಎಂದು ಸಾರಿದರು. ಆದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ.೫ [5]ನಿಮ್ಮ ಪಿತೃಗಳು ಈಗಲೂ ಇದ್ದಾರೆಯೇ? ಪ್ರವಾದಿಗಳು ಸದಾಕಾಲ ಇರುವರೆ?೬ [6]ಆದರೂ ನನ್ನ ದಾಸರಾದ ಪ್ರವಾದಿಗಳಿಗೆ ನಾನು ಕೊಟ್ಟ ಆಜ್ಞೆಗಳು, ವಿಧಿನಿಯಮಗಳು ನಿಮ್ಮ ಪಿತೃಗಳ ಮರಣದ ನಂತರವೂ ಶಾಶ್ವತವಾಗಿ ಉಳಿದಿವೆಯಲ್ಲವೆ? ಅವರು ಪಶ್ಚಾತ್ತಾಪಪಟ್ಟು, ‘ಸೇನಾಧೀಶ್ವರ ಸರ್ವೇಶ್ವರ ನಮ್ಮ ದುರ್ಮಾರ್ಗ ಹಾಗೂ ದುಷ್ಕೃತ್ಯಗಳಿಗೆ ತಕ್ಕಂತೆ ಏನು ಮಾಡಬೇಕೆಂದು ಸಂಕಲ್ಪಿಸಿದ್ದರೋ, ಅದನ್ನು ನಮಗೆ ಮಾಡಿಯೇ ಮಾಡಿದ್ದಾರೆ’ ಎಂದು ಹೇಳಿಕೊಂಡರಲ್ಲವೆ?”೭ [7]ಡೇರಿಯಸನ ಆಳ್ವಿಕೆಯ ಎರಡನೇ ವರ್ಷದ ಹನ್ನೊಂದನೆಯ ತಿಂಗಳಿನ (ಅಂದರೆ ಶೆಬಾತ್ ತಿಂಗಳಿನ) ಇಪ್ಪತ್ತನಾಲ್ಕನೆಯ ದಿನದಲ್ಲಿ ಇದ್ದೋವಿನ ಮೊಮ್ಮಗನೂ ಬೆರೆಕ್ಯನ ಮಗನೂ ಆದ ಜೆಕರ್ಯನೆಂಬ ಪ್ರವಾದಿಗೆ ಸರ್ವೇಶ್ವರ ಕೊಟ್ಟ ದರ್ಶನವಿದು:೮ [8]ರಾತ್ರಿಯಲ್ಲಿ ನನಗೆ ಈ ದರ್ಶನವಾಯಿತು. ಇಗೋ, ಕೆಂಪು ಕುದುರೆಯನ್ನೇರಿದ್ದ ಒಬ್ಬ ವ್ಯಕ್ತಿ ತಗ್ಗಿನಲ್ಲಿರುವ ಸುಗಂಧ ವೃಕ್ಷಗಳ ನಡುವೆ ನಿಂತಿದ್ದಾನೆ. ಅವನ ಹಿಂದೆ ಕೆಂಪು, ನಸುಗೆಂಪು ಮತ್ತು ಬಿಳಿಯ ಕುದುರೆಗಳಿವೆ.೯ [9]ನಾನು, ‘ಸ್ವಾಮೀ, ಇದೆಲ್ಲ ಏನು?’ ಎಂದು ಕೇಳಿದೆ. ಅದಕ್ಕೆ ಸೂತ್ರಧಾರಿಯಾದ ದೂತನು ನನ್ನೊಡನೆ ಮಾತನಾಡುತ್ತಾ ‘ಇದು ಏನನ್ನು ಸೂಚಿಸುತ್ತದೆಂಬುದನ್ನು ನಿನಗೆ ತೋರಿಸುತ್ತೇನೆ’ ಎಂದು ಹೇಳಿದ.೧೦ [10]ಕೂಡಲೆ ಸುಗಂಧ ವೃಕ್ಷಗಳ ನಡುವೆ ಇದ್ದವನು: “ಇವರು ಲೋಕದ ವೀಕ್ಷಣಾರ್ಥವಾಗಿ ದೇವರಿಂದ ಕಳುಹಿಸಲ್ಪಟ್ಟವರು” ಎಂದು ಉತ್ತರಕೊಟ್ಟ.೧೧ [11]ಆಗ ಅವರು ವೃಕ್ಷಗಳ ನಡುವೆ ನಿಂತಿದ್ದ ದೇವದೂತನಿಗೆ “ನಾವು ಲೋಕವನ್ನೆಲ್ಲ ವೀಕ್ಷಿಸಿಬಂದಿದ್ದೇವೆ. ಅದು ನಿಶ್ಚಿಂತೆಯಿಂದ ನೆಮ್ಮದಿಯಾಗಿದೆ,” ಎಂದು ವರದಿ ಮಾಡಿದರು.೧೨ [12]ಆಗ ದೇವದೂತನು: “ಸೇನಾಧಿಶ್ವರ ಸರ್ವೇಶ್ವರಾ, ಕಳೆದ ಎಪ್ಪತ್ತು ವರ್ಷಗಳಿಂದ ನೀವು ಕೋಪದಿಂದಿರುವಿರಿ, ಏಕೆ? ಇನ್ನೆಷ್ಟು ಕಾಲ ಜೆರುಸಲೇಮಿಗೂ ಜುದೇಯದ ಇತರ ಪಟ್ಟಣಗಳಿಗೂ ಕರುಣೆತೋರಿಸದೆ ಇರುವಿರಿ?” ಎಂದು ಕೇಳಿದ.೧೩ [13]ಆಗ ಸೂತ್ರಧಾರಿಯಾದ ದೂತನಿಗೆ ಸರ್ವೇಶ್ವರ ಕರುಣೆಯಿಂದ ಸದುತ್ತರ ಕೊಟ್ಟರು.೧೪ [14]ಮತ್ತು ಆ ದೂತ ಹೀಗೆಂದು ನನಗೆ ಅಪ್ಪಣೆಮಾಡಿದ: “ಇದನ್ನು ನೀನು ಸಾರಿ ಹೇಳಬೇಕು. ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ - ಜೆರುಸಲೇಮಿನ ಹಾಗೂ ಸಿಯೋನಿನ ಮೇಲೆ ನನಗೆ ತುಂಬ ಅಭಿಮಾನವಿದೆ.೧೫ [15]ನೆಮ್ಮದಿಯಿಂದ ಬಾಳುವ ರಾಷ್ಟ್ರಗಳ ಮೇಲೆ ಬಹಳ ಸಿಟ್ಟುಗೊಂಡಿದ್ದೇನೆ. ಏಕೆಂದರೆ, ನಾನು ಜೆರುಸಲೇಮಿನ ವಿರುದ್ಧ ಕಿಂಚಿತ್ತೇ ಕೋಪಗೊಂಡಿದ್ದಾಗ ಅವರು ಕೇಡಿಗೆ ಕೇಡು ಕೂಡಿಸಿಬಿಟ್ಟರು.೧೬ [16]ಆದುದರಿಂದ ನಾನು ಕರುಣಾಮಯನಾಗಿ ಜೆರುಸಲೇಮಿಗೆ ಹಿಂದಿರುಗಿ ಬಂದಿದ್ದೇನೆ. ಅಲ್ಲಿ ನನ್ನ ಆಲಯವನ್ನು ಮರಳಿ ಕಟ್ಟಲಾಗುವುದು. ಜೆರುಸಲೇಮ್ ನಗರವನ್ನು ವಾಸ್ತುಶಿಲ್ಪಕ್ಕೆ ತಕ್ಕಂತೆ ನಿರ್ಮಿಸಲಾಗುವುದು. ಇದು ಸೇನಾಧೀಶ್ವರ ಸರ್ವೇಶ್ವರನ ನುಡಿ.”೧೭ [17]“ಮತ್ತೊಮ್ಮೆ ನೀನು ಹೀಗೆಂದು ಘೋಷಿಸು: ‘ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ. ಇನ್ನು ನನ್ನ ಪಟ್ಟಣದಲ್ಲಿ ಸಿರಿಸಂಪತ್ತು ತುಂಬಿತುಳುಕುವುದು. ಸರ್ವೇಶ್ವರ ಸಿಯೋನನ್ನು ಪುನಃ ಸಂತೈಸುವರು. ಜೆರುಸಲೇಮ್ ನಗರವನ್ನು ಪುನಃ ತನ್ನದಾಗಿ ಆರಿಸಿಕೊಳ್ಳುವರು’.”೧೮ [18]ಮತ್ತೊಂದು ದರ್ಶನದಲ್ಲಿ ನಾನು ನಾಲ್ಕು ಕೊಂಬುಗಳನ್ನು ಕಂಡೆನು.೧೯ [19]“ಈ ಕೊಂಬುಗಳು ಏನನ್ನು ಸೂಚಿಸುತ್ತವೆ?” ಎಂದು ನಾನು ಕೇಳಿದಾಗ ಸೂತ್ರಧಾರಿಯಾದ ದೂತನು: ‘ಇವು ಜೂದ, ಇಸ್ರಯೇಲ್, ಮತ್ತು ಜೆರುಸಲೇಮಿನ ಪ್ರಜೆಗಳನ್ನು ಚದರಿಸಿಬಿಟ್ಟ ಕೊಂಬುಗಳು,’ ಎಂದನು.೨೦ [20]ಅನಂತರ ಸರ್ವೇಶ್ವರ ನನಗೆ ನಾಲ್ಕುಮಂದಿ ಸುತ್ತಿಗೆ ಹಿಡಿದವರನ್ನು ತೋರಿಸಿದರು.೨೧ [21]“ಇವರು ಏನು ಮಾಡುವುದಕ್ಕೆ ಬಂದಿದ್ದಾರೆ?” ಎಂದು ಕೇಳಿದಾಗ ಆತ: ಯೆಹೂದ್ಯರಲ್ಲಿ ಯಾರೂ ತಲೆಯೆತ್ತದಂತೆ ಅವುಗಳನ್ನು ಚದರಿಸುವ ಕೊಂಬುಗಳು ಅವು. ಇವರಾದರೆ ಜುದೇಯ ನಾಡನ್ನು ಚದರಿಸಬೇಕೆಂದು ತಲೆಯೆತ್ತಿದ ರಾಷ್ಟ್ರಗಳನ್ನೆ ಚದರಿಸಿ ಅವರ ಕೊಂಬುಗಳನ್ನು ಹೊಡೆದು ಕೆಡುವುವುದಕ್ಕೆ ಬಂದಿದ್ದಾರೆ,” ಎಂದು ಹೇಳಿದರುKannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಜೆಕರ್ಯನ ೧ 00:00:00 00:00:00 0.5x 2.0x https://beblia.bible:81/BibleAudio/kannadakncl/zechariah/001.mp3 14 1