× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಪ್ರೇಷಿತರ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬1 1 1 ಕನ್ನಡ ಬೈಬಲ್ (KNCL) 2016 ಪ್ರೇಷಿತರ ೧ ಟಿಪ್ಪಣಿಗಳನ್ನು ಉಳಿಸಿ ೧ [1]ಸನ್ಮಾನ್ಯ ಥೆಯೊಫಿಲನೇ, ಯೇಸುಸ್ವಾಮಿ ಸ್ವರ್ಗಕ್ಕೆ ಆರೋಹಣವಾದ ದಿನದವರೆಗೆ ಮಾಡಿದ ಕಾರ್ಯಗಳನ್ನೂ ನೀಡಿದ ಬೋಧನೆಗಳನ್ನೂ ಕುರಿತು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದಿದ್ದೇನೆ. ಸ್ವರ್ಗಾರೋಹಣಕ್ಕೆ ಮೊದಲು ಪ್ರೇಷಿತರನ್ನಾಗಿ ತಾವು ಆರಿಸಿಕೊಂಡಿದ್ದವರಿಗೆ ಪವಿತ್ರಾತ್ಮ ಅವರ ಮುಖಾಂತರ ಉಪದೇಶ ಮಾಡಿದರು.೨ [2]***೩ [3]ತಮ್ಮ ಮರಣದ ನಂತರ ಅವರು ನಲವತ್ತು ದಿನಗಳವರೆಗೆ ಆ ಪ್ರೇಷಿತರಿಗೆ ಪ್ರತ್ಯಕ್ಷರಾದರು. ತಾವು ಜೀವಂತವಾಗಿರುವುದನ್ನು ವಿವಿಧ ರೀತಿಯಲ್ಲಿ ಸ್ಪಷ್ಟಪಡಿಸಿದರು. ದೇವರ ಸಾಮ್ರಾಜ್ಯವನ್ನು ಕುರಿತು ಅವರಿಗೆ ಬೋಧಿಸಿದರು.೪ [4]ಒಮ್ಮೆ ಅವರೆಲ್ಲರೂ ಒಂದುಗೂಡಿದ್ದ ಸಂದರ್ಭದಲ್ಲಿ, “ನೀವು ಜೆರುಸಲೇಮನ್ನು ಬಿಟ್ಟು ಹೋಗಬೇಡಿ; ನಾನು ನಿಮಗೆ ತಿಳಿಸಿದಂತೆ ನನ್ನ ಪಿತನು ವಾಗ್ದಾನ ಮಾಡಿರುವ ವರಕ್ಕಾಗಿ ಕಾದುಕೊಂಡಿರಿ.೫ [5]ಏಕೆಂದರೆ, ಯೊವಾನ್ನನು ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದನು; ಆದರೆ ಇನ್ನು ಕೆಲವೇ ದಿನಗಳಲ್ಲಿ ನೀವು ಪವಿತ್ರಾತ್ಮ ಅವರಿಂದ ದೀಕ್ಷಾಸ್ನಾನ ಪಡೆಯುವಿರಿ,” ಎಂದು ಆಜ್ಞಾಪಿಸಿದರು.೬ [6]ಮತ್ತೊಮ್ಮೆ ಯೇಸುಸ್ವಾಮಿ ತಮ್ಮೊಡನೆ ಇದ್ದಾಗ ಪ್ರೇಷಿತರು, “ಪ್ರಭೂ, ನೀವು ಇದೀಗಲೇ ಇಸ್ರಯೇಲ್ ಜನರ ರಾಜ್ಯವನ್ನು ಪುನರ್ಸ್ಥಾಪಿಸುವಿರೋ?” ಎಂದು ಕೇಳಿದರು.೭ [7]ಯೇಸು ಪ್ರತ್ಯುತ್ತರವಾಗಿ, “ಸಮಯ ಸಂದರ್ಭಗಳು ನನ್ನ ಪಿತನ ಸ್ವಾಧೀನದಲ್ಲಿವೆ. ಅವುಗಳನ್ನು ತಿಳಿಯುವುದು ನಿಮ್ಮ ಕೆಲಸವಲ್ಲ.೮ [8]ಆದರೆ ಪವಿತ್ರಾತ್ಮ ಅವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯುತರಾಗುವಿರಿ. ಆಗ ನೀವು ಜೆರುಸಲೇಮಿನಲ್ಲೂ ಜುದೇಯದಲ್ಲೂ ಸಮಾರಿಯದಲ್ಲೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.೯ [9]ಇದನ್ನು ಹೇಳಿದ ಮೇಲೆ ಪ್ರೇಷಿತರು ನೋಡುತ್ತಿದ್ದಂತೆಯೇ, ಯೇಸು ಸ್ವರ್ಗಾರೋಹಣವಾದರು. ಮೇಘವೊಂದು ಕವಿದು ಅವರನ್ನು ಕಣ್ಮರೆಮಾಡಿತು.೧೦ [10]ಹೀಗೆ ಮೇಲೇರುತ್ತಿದ್ದ ಯೇಸುಸ್ವಾಮಿಯನ್ನು ನೋಡುತ್ತಿದ್ದ ಪ್ರೇಷಿತರ ದೃಷ್ಟಿ ಇನ್ನೂ ಆಕಾಶದತ್ತ ನಾಟಿತ್ತು. ಆಗ ಬಿಳಿಯ ವಸ್ತ್ರ ಧರಿಸಿದ್ದ ವ್ಯಕ್ತಿಗಳಿಬ್ಬರು ಇದ್ದಕ್ಕಿದ್ದಂತೆ ಅವರ ಪಕ್ಕದಲ್ಲಿ ನಿಂತರು.೧೧ [11]“ಗಲಿಲೇಯದ ಜನರೇ, ನೀವು ಆಕಾಶವನ್ನು ದಿಟ್ಟಿಸಿ ನೋಡುತ್ತಾ ನಿಂತು ಇರುವುದೇಕೆ? ಸ್ವರ್ಗಾರೋಹಣರಾದ ಈ ಯೇಸು ನಿಮ್ಮ ಬಳಿಯಿಂದ ಹೇಗೆ ಸ್ವರ್ಗಕ್ಕೆ ಏರಿಹೋಗುವುದನ್ನು ಕಂಡಿರೋ ಹಾಗೆಯೇ ಅವರು ಹಿಂದಿರುಗಿ ಬರುವರು,” ಎಂದು ಹೇಳಿದರು.೧೨ [12]ಅನಂತರ ಪ್ರೇಷಿತರು ಓಲಿವ್ ತೋಪಿನ ಗುಡ್ಡದಿಂದ ಸುಮಾರು ಒಂದು ಕಿಲೊಮೀಟರು ದೂರದಲ್ಲಿರುವ ಜೆರುಸಲೇಮಿಗೆ ಹಿಂದಿರುಗಿದರು.೧೩ [13]ಅವರು ಯಾರಾರೆಂದರೆ: ಪೇತ್ರ, ಯೊವಾನ್ನ, ಯಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಕೋಬ, ದೇಶಾಭಿಮಾನಿ ಆದ ಸಿಮೋನ ಮತ್ತು ಯಕೋಬನ ಮಗ ಯೂದ. ಇವರೆಲ್ಲರು ಪಟ್ಟಣವನ್ನು ಸೇರಿದ್ದೇ, ಮೇಲ್ಮಾಳಿಗೆಯಲ್ಲಿದ್ದ ತಮ್ಮ ಕೊಠಡಿಗೆ ಹೋದರು.೧೪ [14]ಅಲ್ಲಿ ಅವರು ಒಮ್ಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗುತ್ತಿದ್ದರು. ಕೆಲವು ಮಹಿಳೆಯರೂ ಯೇಸುವಿನ ತಾಯಿ ಮರಿಯಳೂ ಯೇಸುವಿನ ಸಹೋದರರೂ ಅವರೊಡನೆ ಇದ್ದರು.೧೫ [15]ಸ್ವಲ್ಪ ದಿನಗಳ ನಂತರ ಸುಮಾರು ನೂರ ಇಪ್ಪತ್ತು ಮಂದಿ ಭಕ್ತವಿಶ್ವಾಸಿಗಳು ಸಭೆ ಸೇರಿದ್ದರು. ಆಗ ಪೇತ್ರನು ಎದ್ದುನಿಂತು ಹೀಗೆಂದನು:೧೬ [16]“ಪ್ರಿಯ ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ಮುಂದಾಳಾಗಿದ್ದವನು ಯೂದನು. ಅವನ ವಿಷಯವಾಗಿ ಪವಿತ್ರಾತ್ಮ ಅವರು ದಾವೀದನ ಮುಖಾಂತರ ಮುಂತಿಳಿಸಿದ ವಾಕ್ಯ ನೆರವೇರಲೇಬೇಕಾಗಿತ್ತು.೧೭ [17]ಈ ಯೂದನು ನಮ್ಮಲ್ಲಿ ಒಬ್ಬನಾಗಿದ್ದವನು. ನಾವು ಕೈಗೊಂಡಿರುವ ಸೇವೆಯಲ್ಲಿ ಭಾಗಿಯಾಗಲು ಆಯ್ಕೆಯಾಗಿದ್ದವನು.೧೮ [18](\ಇವನು ತನ್ನ ನೀಚ ಕೃತ್ಯದಿಂದ ಪಡೆದ ಹಣದಿಂದ ಒಂದು ಹೊಲವನ್ನು ಕೊಂಡುಕೊಂಡ. ಆದರೆ ಅದರಲ್ಲೇ ಪ್ರಾಣ ಕಳೆದುಕೊಂಡ. ತಲೆಕೆಳಗಾಗಿ ಬಿದ್ದು, ಹೊಟ್ಟೆ ಬಿರಿದು, ಕರುಳೆಲ್ಲಾ ಹೊರಬಂದು ಸತ್ತುಹೋದ.೧೯ [19]ಈ ವಿಷಯ ಜೆರುಸಲೇಮಿನ ನಿವಾಸಿಗಳಿಗೆಲ್ಲಾ ತಿಳಿಯಿತು. ಆ ಜಮೀನನ್ನು ತಮ್ಮ ಭಾಷೆಯಲ್ಲಿ ‘ಅಖೆಲ್ದಾಮ’ ಅಂದರೆ ‘ನೆತ್ತರನೆಲ’ ಎಂದು ಕರೆಯಲಾರಂಭಿಸಿದರು).೨೦ [20]‘ಅವನ ಮನೆ ಹಾಳಾಗಲಿ, ಅದು ಪಾಳುಬೀಳಲಿ,’ ಎಂದೂ, ‘ಅವನ ಸ್ಥಾನ ಇನ್ನೊಬ್ಬನದಾಗಲಿ,’ ಎಂದೂ ಕೀರ್ತನಗ್ರಂಥದಲ್ಲಿ ಬರೆಯಲಾಗಿದೆ.೨೧ [21]“ಆದುದರಿಂದ ಪ್ರಭುಯೇಸುವಿನ ಪುನರುತ್ಥಾನಕ್ಕೆ ನಮ್ಮೊಡನೆ ಸಾಕ್ಷಿಯಾಗಿರಲು ಒಬ್ಬನನ್ನು ನಾವು ಆರಿಸಬೇಕಾಗಿದೆ. ಅಂಥವನು ಯೇಸುವಿನ ಸೇವಾಸಂಚಾರದಲ್ಲೆಲ್ಲಾ ನಮ್ಮೊಡನೆ ಇದ್ದವನಾಗಿರಬೇಕು.೨೨ [22]ಅಂದರೆ, ಸ್ನಾನಿಕ ಯೊವಾನ್ನನು ಸ್ನಾನದೀಕ್ಷೆಯನ್ನು ಕುರಿತು ಬೋಧಿಸಿದ ದಿನದಿಂದ ಯೇಸುವಿನ ಸ್ವರ್ಗಾರೋಹಣದ ದಿನದವರೆಗೂ ನಮ್ಮ ಸಂಗಡ ಇದ್ದವನಾಗಿರಬೇಕು.”೨೩ [23]ಆಗ ಬಾರ್ನಬ ಎಂದು ಹೆಸರಿಸಲಾದ ಜೋಸೆಫ್ (ಇವನನ್ನು ಯುಸ್ತ ಎಂದೂ ಕರೆಯುತ್ತಿದ್ದರು) ಮತ್ತು ಮತ್ತೀಯ ಎಂಬ ಇಬ್ಬರ ಹೆಸರನ್ನು ಸೂಚಿಸಲಾಯಿತು.೨೪ [24]ಅನಂತರ ಎಲ್ಲರೂ ಪ್ರಾರ್ಥನೆಮಾಡುತ್ತಾ, “ಸರ್ವೇಶ್ವರಾ, ನೀವು ಸರ್ವರ ಅಂತರಂಗಗಳನ್ನು ಅರಿತಿರುವಿರಿ. ಯೂದನು ತನ್ನ ಪ್ರೇಷಿತಸ್ಥಾನದಿಂದ ಭ್ರಷ್ಟನಾದ, ತನಗೆ ತಕ್ಕುದಾದ ಸ್ಥಳಕ್ಕೆ ತೆರಳಿದ. ಈ ಸೇವಾಸ್ಥಾನಕ್ಕೆ ಇವರಿಬ್ಬರಲ್ಲಿ ನೀವು ಆರಿಸಿದವನು ಯಾರೆಂದು ನಮಗೆ ತೋರಿಸಿರಿ,” ಎಂದರು.೨೫ [25]***೨೬ [26]ಅನಂತರ ಚೀಟುಹಾಕಿದರು. ಅದು ಮತ್ತೀಯನ ಪರವಾಗಿತ್ತು. ಅವನನ್ನು ಹನ್ನೊಂದು ಮಂದಿಯೊಡನೆ ಪ್ರೇಷಿತಸ್ಥಾನಕ್ಕೆ ಸೇರಿಸಿಕೊಳ್ಳಲಾಯಿತು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಪ್ರೇಷಿತರ ೧ 00:00:00 00:00:00 0.5x 2.0x https://beblia.bible:81/BibleAudio/kannadakncl/acts/001.mp3 28 1