× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಕೊರಿಂಥಿಯರಿಗೆ ೧ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧೨೩೪೫೬೭೮೯೧೦೧೧೧೨೧೩೧೪೧೫೧೬1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧1 1 1 ಕನ್ನಡ ಬೈಬಲ್ (KNCL) 2016 ಕೊರಿಂಥಿಯರಿಗೆ ೧ ೧ ಟಿಪ್ಪಣಿಗಳನ್ನು ಉಳಿಸಿ ೧ [1]ಕ್ರಿಸ್ತಯೇಸುವಿನಲ್ಲಿ ಪುನೀತರಾಗಿ ದೇವಜನರಾಗಲು ಕರೆಹೊಂದಿರುವ ಕೊರಿಂಥದ ಶ್ರೀಸಭೆಯವರಿಗೂ ಹಾಗೂ ಪ್ರಭು ಯೇಸುಕ್ರಿಸ್ತರನ್ನು ಎಲ್ಲೆಡೆಯೂ ನಾಮಸ್ಮರಣೆ ಮಾಡುವ ಸರ್ವಜನರಿಗೂ - ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾಗಲು ಕರೆಹೊಂದಿದ ಪೌಲನಾದ ನಾನು ಸಹೋದರ ಸೊಸ್ಥೆನನೊಂದಿಗೆ ಸೇರಿ ಬರೆಯುವ ಪತ್ರ.೨ [2]ಯೇಸುಕ್ರಿಸ್ತರು ನಮಗೂ ಸಮಸ್ತ ದೇವಜನರಿಗೂ ಪ್ರಭುವಾಗಿದ್ದಾರೆ.೩ [3]ನಮ್ಮ ತಂದೆಯಾದ ದೇವರಿಂದಲೂ ಪ್ರಭುವಾದ ಯೇಸುಕ್ರಿಸ್ತರಿಂದಲೂ ನಿಮಗೆ ಅನುಗ್ರಹ ಮತ್ತು ಶಾಂತಿಸಮಾಧಾನ ಲಭಿಸಲಿ!೪ [4]ಕ್ರಿಸ್ತಯೇಸುವಿನಲ್ಲಿ ನಿಮಗೆ ಕೊಡಲಾಗಿರುವ ದೇವಾನುಗ್ರಹದ ಸಲುವಾಗಿ ನಾನು ನಿಮಗೋಸ್ಕರ ನನ್ನ ದೇವರಿಗೆ ಸತತವಾಗಿ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.೫ [5]ಏಕೆಂದರೆ, ಕ್ರಿಸ್ತಯೇಸುವಿನಲ್ಲಿ ನೀವು ಎಲ್ಲ ದೃಷ್ಟಿಯಿಂದಲೂ ಶ್ರೀಮಂತರು, ಜ್ಞಾನಸಂಪನ್ನರು ಮತ್ತು ವಾಕ್ಚತುರರು ಆಗಿದ್ದೀರಿ.೬ [6]ಇದಲ್ಲದೆ, ಕ್ರಿಸ್ತಯೇಸುವನ್ನು ಕುರಿತ ಸಾಕ್ಷ್ಯವು ನಿಮ್ಮಲ್ಲಿ ನೆಲೆಗೊಂಡಿದೆ.೭ [7]ಇದರಿಂದಾಗಿ ನಮ್ಮ ಪ್ರಭು ಯೇಸುಕ್ರಿಸ್ತರು ಪ್ರತ್ಯಕ್ಷವಾಗುವುದನ್ನೇ ಎದುರುನೋಡುತ್ತಿರುವ ನಿಮಗೆ ಯಾವ ಕೃಪಾಶೀರ್ವಾದಗಳ ಕೊರತೆಯು ಇಲ್ಲ.೮ [8]ನಮ್ಮ ಪ್ರಭು ಯೇಸುಕ್ರಿಸ್ತರ ದಿನದಂದು ನೀವು ನಿರ್ದೋಷಿಗಳಾಗಿರುವಂತೆ ಆ ದೇವರೇ, ನಿಮ್ಮನ್ನು ಕಡೆಯವರೆಗೂ ಸ್ಥಿರವಾಗಿ ಕಾಪಾಡುವರು.೯ [9]ತಮ್ಮ ಪುತ್ರನೂ ನಮ್ಮ ಪ್ರಭುವೂ ಆದ ಯೇಸುಕ್ರಿಸ್ತರ ಅನ್ಯೋನ್ಯತೆಗೆ ನಿಮ್ಮನ್ನು ಕರೆದಿರುವ ದೇವರು ನಿಜಕ್ಕೂ ವಿಶ್ವಾಸಪಾತ್ರರು.೧೦ [10]ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ನಾನು ಕೇಳಿಕೊಳ್ಳುವುದೇನೆಂದರೆ: ವಾದವಿವಾದವಿಲ್ಲದೆ, ಭಿನ್ನಭೇದಗಳಿಲ್ಲದೆ ಒಂದೇ ಮನಸ್ಸಿನಿಂದಲೂ ಒಂದೇ ಉದ್ದೇಶದಿಂದಲೂ ನೀವು ಐಕಮತ್ಯದಿಂದ ಬಾಳಿರಿ.೧೧ [11]ಸಹೋದರರೇ, ನೀವು ಜಗಳವಾಡುತ್ತಿದ್ದೀರಿ ಎಂಬುದು ಖ್ಲೊಯೇಯನ ಮನೆಯವರಿಂದ ತಿಳಿದುಬಂದಿದೆ.೧೨ [12]ನಿಮ್ಮ ಪೈಕಿ, ತಾನು ಪೌಲನ ಕಡೆಯವನು ಎಂದು ಒಬ್ಬ, ತಾನು ಅಪೊಲೋಸನ ಕಡೆಯವನು ಎಂದು ಇನ್ನೊಬ್ಬ, ತಾನು ಕೇಫನ ಕಡೆಯವನು ಎಂದು ಮತ್ತೊಬ್ಬ, ತಾನು ಕ್ರಿಸ್ತನ ಕಡೆಯವನು ಎಂದು ಮಗದೊಬ್ಬ. ಹೀಗೆ ಒಬ್ಬೊಬ್ಬರು ಒಂದೊಂದು ತೆರನಾಗಿ ಹೇಳಿಕೊಳ್ಳುತ್ತಾರಂತೆ.೧೩ [13]ಕ್ರಿಸ್ತಯೇಸು ಭಾಗಭಾಗವಾಗಿ ವಿಂಗಡಿಸಿ ಹೋಗಿದ್ದಾರೆಯೇ? ನಿಮಗೋಸ್ಕರ ಶಿಲುಬೆಯ ಮೇಲೆ ಮಡಿದವನು ಪೌಲನೇ? ನೀವು ದೀಕ್ಷಾಸ್ನಾನ ಪಡೆದದ್ದು ಪೌಲನ ಹೆಸರಿನಲ್ಲೇ?೧೪ [14]ಸದ್ಯ! ಕ್ರಿಸ್ಪನು ಮತ್ತು ಗಾಯನು ಇವರಿಬ್ಬರನ್ನು ಬಿಟ್ಟರೆ ನಿಮ್ಮ ಪೈಕಿ ಯಾರಿಗೂ ನಾನು ದೀಕ್ಷಾಸ್ನಾನವನ್ನು ಕೊಟ್ಟಿಲ್ಲ.೧೫ [15]ಆದ್ದರಿಂದ ನಿಮ್ಮಲ್ಲಿ ಯಾರೂ ದೀಕ್ಷಾಸ್ನಾನವನ್ನು ನನ್ನ ಹೆಸರಿನಲ್ಲಿ ಪಡೆದಿರಿ ಎಂದು ಹೇಳಿಕೊಳ್ಳುವಂತಿಲ್ಲ.೧೬ [16]ಹೌದು, ಸ್ತೇಫನನ ಮನೆಯವರಿಗೂ ದೀಕ್ಷಾಸ್ನಾನವನ್ನು ಕೊಟ್ಟಿದ್ದೇನೆ. ಇವರಲ್ಲದೆ ಇನ್ನಾರಿಗೂ ದೀಕ್ಷಾಸ್ನಾನವನ್ನು ಕೊಟ್ಟ ನೆನಪು ನನಗಿಲ್ಲ.೧೭ [17]ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ್ಚಾತುರ್ಯದಿಂದಲ್ಲ. ಹಾಗೆ ಸಾರಿದ್ದೇ ಆದರೆ, ಕ್ರಿಸ್ತಯೇಸುವಿನ ಶಿಲುಬೆಯೇ ನಿರರ್ಥಕವಾದೀತು.೧೮ [18]ವಿನಾಶಮಾರ್ಗದಲ್ಲಿರುವವರಿಗೆ ಶಿಲುಬೆಯ ಸಂದೇಶ ಹುಚ್ಚು ಸಂಗತಿಯಾಗಿದೆ. ಮುಕ್ತಿಮಾರ್ಗದಲ್ಲಿರುವ ನಮಗಾದರೋ ಅದು ದೈವಶಕ್ತಿಯಾಗಿದೆ.೧೯ [19]“ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು ಜಾಣರ ಜಾಣತನಕ್ಕೆ ಭಂಗತರುವೆನು” ಎಂದು ಪವಿತ್ರಗ್ರಂಥದಲ್ಲಿ ಇದೆಯಲ್ಲವೇ?೨೦ [20]ಹೀಗಿರುವಾಗ ಜ್ಞಾನಿಯೆಲ್ಲಿ? ಶಾಸ್ತ್ರಜ್ಞನೆಲ್ಲಿ? ಜಗತ್ತಿನ ತರ್ಕನಿಪುಣನೆಲ್ಲಿ? ಪ್ರಪಂಚದ ಜ್ಞಾನವನ್ನು ದೇವರು ಹುಚ್ಚುತನವಾಗಿಸಿಲ್ಲವೇ?೨೧ [21]ಲೋಕವು ತನ್ನ ಸ್ವಂತ ಜ್ಞಾನದಿಂದ ದೇವರನ್ನು ಅರಿಯಲಾರದೆ ಹೋಯಿತು. ಇದು ದೈವಸಂಕಲ್ಪವೇ ಸರಿ. ಆದ್ದರಿಂದಲೇ ನಾವು ಸಾರುವ ‘ಹುಚ್ಚುತನ’ವೆಂಬ ಸಂದೇಶದ ಮೂಲಕ ವಿಶ್ವಾಸವುಳ್ಳವರನ್ನು ಉದ್ಧರಿಸುವುದು ದೇವರಿಗೆ ಉಚಿತವೆನಿಸಿತು೨೨ [22]ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ. ಗ್ರೀಕರು ಜ್ಞಾನವನ್ನು ಅರಸುತ್ತಾರೆ.೨೩ [23]ನಾವಾದರೋ ಶಿಲುಬೆಗೇರಿಸಲಾದ ಕ್ರಿಸ್ತಯೇಸುವನ್ನು ಪ್ರಚುರಪಡಿಸುತ್ತೇವೆ. ಯೆಹೂದ್ಯರಿಗೆ ಇದು ಅಸಹ್ಯವಾಗಿದೆ; ಅನ್ಯಜನರಿಗೆ ಹಾಸ್ಯಾಸ್ಪದವಾಗಿದೆ.೨೪ [24]ಆದರೆ ಯೆಹೂದ್ಯರಾಗಿರಲಿ, ಗ್ರೀಕರಾಗಿರಲಿ, ದೇವರಿಂದ ಕರೆಹೊಂದಿದ್ದರೆ ಅಂಥವರಿಗೆ ಯೇಸುಕ್ರಿಸ್ತರು ದೇವರ ಶಕ್ತಿಯಾಗಿದ್ದಾರೆ ಹಾಗೂ ದೇವರ ಜ್ಞಾನವಾಗಿದ್ದಾರೆ.೨೫ [25]‘ದೇವರ ಹುಚ್ಚುತನ’ ಎಂಬುದು ಮಾನವ ಜ್ಞಾನಕ್ಕಿಂತಲೂ ಶ್ರೇಷ್ಠವಾದುದು. ‘ದೇವರ ದೌರ್ಬಲ್ಯ’ ಎಂಬುದು ಮಾನವ ಶಕ್ತಿಗಿಂತಲೂ ಪ್ರಬಲವಾದುದು.೨೬ [26]ಸಹೋದರರೇ, ನಿಮ್ಮನ್ನು ದೇವರು ಕರೆದಾಗ ನೀವು ಹೇಗಿದ್ದಿರಿ ಎಂದು ಜ್ಞಾಪಿಸಿಕೊಳ್ಳಿ. ಲೋಕದ ಎಣಿಕೆಯಲ್ಲಿ ನಿಮ್ಮೊಳಗೆ ಜ್ಞಾನಿಗಳು ಅನೇಕರಿಲ್ಲ. ಪರಾಕ್ರಮಿಗಳು ಅನೇಕರಿಲ್ಲ, ಕುಲೀನರು ಅನೇಕರಿಲ್ಲ.೨೭ [27]ಜ್ಞಾನಿಗಳನ್ನು ನಾಚಿಕೆಗೀಡುಮಾಡಲು ದೇವರು ಲೋಕದ ದೃಷ್ಟಿಯಲ್ಲಿ ಮೂರ್ಖರನ್ನು ಆರಿಸಿಕೊಂಡರು; ಅಂತೆಯೇ ಬಲಿಷ್ಠರನ್ನು ಲಜ್ಜೆಗೀಡುಮಾಡಲು ಲೋಕದ ದೃಷ್ಟಿಯಲ್ಲಿ ಬಲಹೀನರನ್ನು ಆರಿಸಿಕೊಂಡರು.೨೮ [28]ಲೋಕದ ದೃಷ್ಟಿಯಲ್ಲಿ ಗಣ್ಯವಾದುದನ್ನು ನಿರ್ನಾಮಗೊಳಿಸಲು ಗಣನೆಗೆ ಬಾರದುದನ್ನು, ಕೀಳಾದುದನ್ನು, ಬೀಳಾದುದನ್ನು ಆರಿಸಿಕೊಂಡರು.೨೯ [29]ಯಾವ ಮಾನವನೂ ತಮ್ಮ ಸಮ್ಮುಖದಲ್ಲಿ ಅಹಂಕಾರಪಡದಂತೆ ದೇವರು ಹೀಗೆ ಮಾಡಿದರು.೩೦ [30]ಅವರ ಕೃಪೆಯಿಂದಲೇ ನೀವು ಕ್ರಿಸ್ತಯೇಸುವಿನಲ್ಲಿ ಬಾಳುತ್ತಾ ಇದ್ದೀರಿ; ಅವರ ಕೃಪೆಯಿಂದಲೇ ಕ್ರಿಸ್ತಯೇಸು ನಮಗೆ ಜ್ಞಾನ ಮೂಲವಾಗಿದ್ದಾರೆ. ದೇವರಿಂದ ನಮಗೆ ದೊರಕುವ ಸತ್ಸಂಬಂಧ, ಪಾವನತೆ ಹಾಗೂ ವಿಮೋಚನೆ ಆ ಕ್ರಿಸ್ತಯೇಸುವಿನಿಂದಲೇ.೩೧ [31]ಆದ್ದರಿಂದ ಪವಿತ್ರಗ್ರಂಥದಲ್ಲಿ ಹೇಳಿರುವಂತೆ: ‘ಹೆಚ್ಚಳಪಡುವವನು ಪ್ರಭುವಿನಲ್ಲಿ ಹೆಚ್ಚಳಪಡಲಿ.’Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಕೊರಿಂಥಿಯರಿಗೆ ೧ ೧ 00:00:00 00:00:00 0.5x 2.0x https://beblia.bible:81/BibleAudio/kannadakncl/1corinthians/001.mp3 16 1