× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಕೊರಿಂಥಿಯರಿಗೆ ೨ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧೨೩೪೫೬೭೮೯೧೦೧೧೧೨೧೩1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨1 1 1 ಕನ್ನಡ ಬೈಬಲ್ (KNCL) 2016 ಕೊರಿಂಥಿಯರಿಗೆ ೨ ೧ ಟಿಪ್ಪಣಿಗಳನ್ನು ಉಳಿಸಿ ೧ [1]ಕೊರಿಂಥದಲ್ಲಿರುವ ದೇವರ ಸಭೆಗೂ ಅಖಾಯ ಸೀಮೆಯಲ್ಲಿರುವ ಎಲ್ಲಾ ದೇವಜನರಿಗೂ - ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾದ ಪೌಲನು ಸಹೋದರ ತಿಮೊಥೇಯನೊಡನೆ ಸೇರಿ ಬರೆಯುವ ಪತ್ರ.೨ [2]ನಮ್ಮ ತಂದೆಯಾದ ದೇವರಿಂದಲೂ ಪ್ರಭುವಾದ ಯೇಸುಕ್ರಿಸ್ತರಿಂದಲೂ ನಿಮಗೆ ಆಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ!೩ [3]ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತೋತ್ರವಾಗಲಿ. ಅವರು ಕರುಣಾಭರಿತ ತಂದೆ; ಸಕಲ ಸಾಂತ್ವನವನ್ನೀಯುವ ದೇವರು.೪ [4]ನಮಗೆ ಒದಗುವ ಎಲ್ಲಾ ಸಂಕಷ್ಟಗಳಲ್ಲಿ ಅವರು ನಮ್ಮನ್ನು ಸಂತೈಸುತ್ತಾರೆ. ಹೀಗೆ ದೇವರಿಂದ ದೊರೆತ ಆದರಣೆಯಿಂದ ವಿವಿಧ ಸಂಕಷ್ಟಗಳಲ್ಲಿ ನರಳುತ್ತಿರುವವರನ್ನು ಸಂತೈಸುವುದಕ್ಕೆ ನಾವು ಶಕ್ತರಾಗುತ್ತೇವೆ.೫ [5]ಕ್ರಿಸ್ತಯೇಸುವಿನ ಯಾತನೆಯು ನಮ್ಮ ಬಾಳಿನಲ್ಲಿ ತುಂಬಿರುವಂತೆ ಅವರ ಮುಖಾಂತರ ಲಭಿಸುವ ಸಾಂತ್ವನವೂ ನಮ್ಮಲ್ಲಿ ತುಂಬಿರುತ್ತದೆ.೬ [6]ನಾವು ಕಷ್ಟಸಂಕಟಗಳನ್ನು ಸಹಿಸಬೇಕಾಗುವುದು ಸಹ ನಿಮ್ಮ ಉಪಶಮನ ಹಾಗೂ ಸಾಂತ್ವನಕ್ಕಾಗಿಯೇ. ನಮ್ಮ ಕಷ್ಟಸಂಕಟಗಳು ನಿವಾರಣೆಯಾದರೆ ಅದೂ ನಿಮ್ಮ ಆದರಣೆಗಾಗಿಯೇ. ನಾವು ಪಡುವ ಯಾತನೆಯನ್ನು ನೀವು ಸಹನೆಯಿಂದ ಅನುಭವಿಸುವಂತೆ ಅದು ಹುರಿದುಂಬಿಸುತ್ತದೆ.೭ [7]ನಿಮ್ಮಲ್ಲಿ ನಮಗೆ ಅಚಲವಾದ ಭರವಸೆಯಿದೆ. ಏಕೆಂದರೆ, ನಮ್ಮ ಯಾತನೆಗಳಲ್ಲಿ ನೀವು ಪಾಲುಗೊಳ್ಳುವಂತೆ ನಾವು ಪಡೆಯುವ ಸಾಂತ್ವನದಲ್ಲಿಯೂ ನೀವು ಸಹಭಾಗಿಗಳಾಗಿದ್ದೀರಿ, ಎಂಬುದು ನಮಗೆ ಗೊತ್ತಿದೆ.೮ [8]ಸಹೋದರರೇ, ಏಷ್ಯಾ ಪ್ರಾಂತ್ಯದಲ್ಲಿ ನಮಗೊದಗಿದ ಹಿಂಸೆಬಾಧೆಗಳು ನಿಮಗೆ ತಿಳಿದಿವೆಯಷ್ಟೆ. ಅಲ್ಲಿ ಸಹಿಸಲಸಾಧ್ಯವಾದಷ್ಟು ಸಂಕಟವನ್ನು ಅನುಭವಿಸಬೇಕಾಯಿತು. ನಾವು ಬದುಕುವ ಆಶೆಯನ್ನೇ ಬಿಡಬೇಕಾಯಿತು.೯ [9]ನಿಜವಾಗಿಯೂ ನಮಗೆ ಮರಣದಂಡನೆ ವಿಧಿಸಲಾಗಿದೆಯೆಂದು ಭಾವಿಸಿದೆವು. ಇದರಿಂದ ನಾವು ನಮ್ಮ ಸ್ವಂತ ಶಕ್ತಿಯನ್ನೇ ನಂಬಿಕೊಳ್ಳದೆ, ಸತ್ತವರನ್ನು ಪುನರುತ್ಥಾನಗೊಳಿಸುವ ದೇವರಲ್ಲಿ ಭರವಸೆಯಿಡುವಂತೆ ಹೀಗಾಯಿತು.೧೦ [10]ದೇವರೇ ನಮ್ಮನ್ನು ಈ ಭಯಂಕರ ಮರಣದಿಂದ ಪಾರುಮಾಡಿದರು. ಇನ್ನು ಮುಂದಕ್ಕೂ ಪಾರುಮಾಡುವರು. ಹೌದು, ನೀವು ಸಹ ನಮಗಾಗಿ ಪ್ರಾರ್ಥಿಸುತ್ತಾ ನಮ್ಮೊಡನೆ ಸಹಕರಿಸಿದರೆ, ಇನ್ನು ಮುಂದಕ್ಕೂ ನಮ್ಮನ್ನು ಪಾರುಮಾಡುವರು ಎಂಬ ಭರವಸೆಯಿಂದ ಇದ್ದೇವೆ. ಇದರ ಫಲವಾಗಿ ನಮಗೆ ದೊರೆಯುವ ವರದಾನಗಳಿಗಾಗಿ ಅನೇಕರು ನಮ್ಮ ಪರವಾಗಿ ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸುವರು.೧೧ [11]ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.೧೨ [12]ನೀವು ಓದಿ ಗ್ರಹಿಸಿಕೊಳ್ಳಬಲ್ಲ ವಿಷಯಗಳನ್ನು ಮಾತ್ರವೇ ನಾವು ನಿಮಗೆ ಬರೆದಿದ್ದೇವೆ. ನಮ್ಮನ್ನು ನೀವಿನ್ನೂ ಭಾಗಶಃ ಅರಿತುಕೊಂಡಿದ್ದೀರಿ. ಮುಂದಕ್ಕಾದರೂ ನೀವು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳುವಿರೆಂಬ ಭರವಸೆ ನನಗಿದೆ. ಹಾಗೆಯೇ ‘ಪ್ರಭುವಿನ ದಿನದಂದು ನಾವು ನಿಮ್ಮನ್ನು ಕುರಿತು ಹೆಮ್ಮೆಪಡುವಂತೆ ನೀವೂ ನಮ್ಮನ್ನು ಕುರಿತು ಹೆಮ್ಮೆಪಡುವಿರಿ.೧೩ [13]ಈ ನಂಬಿಕೆಯಿಂದಲೇ ನಿಮಗೆ ಇಮ್ಮಡಿ ಸಂತೋಷ ಲಭಿಸಬೇಕೆಂದು ನಾನು ನಿಮ್ಮ ಬಳಿಗೆ ಈ ಮುಂಚಿತವಾಗಿಯೇ ಬರಬೇಕೆಂದಿದ್ದೆ.೧೪ [14]ನಾನು ಮಕೆದೋನಿಯಕ್ಕೆ ಹೋಗುವ ದಾರಿಯಲ್ಲಿ ಒಮ್ಮೆ ನಿಮ್ಮನ್ನು ಭೇಟಿಮಾಡಬೇಕು ಎಂದಿದ್ದೆ; ಮಕೆದೋನಿಯದಿಂದ ಹಿಂದಿರುಗುವಾಗ ಇನ್ನೊಮ್ಮೆ ಭೇಟಿಯಿತ್ತು ನಿಮ್ಮ ನೆರವಿನಿಂದ ಜುದೇಯ ಪ್ರವಾಸವನ್ನು ಕೈಗೊಳ್ಳಬೇಕೆಂದು ಆಲೋಚಿಸಿದೆ.೧೫ [15]ಹೀಗೆ ಆಲೋಚಿಸುತ್ತಿದ್ದಾಗ ನಾನು ಚಂಚಲಚಿತ್ತನಾಗಿದ್ದೆನೋ? ಕೇವಲ ಪ್ರಾಪಂಚಿಕನಂತೆ ಈ ಕ್ಷಣ ಹೌದು, ಮರುಕ್ಷಣ ಇಲ್ಲ ಎಂದು ಹೇಳುವವನಂತಿದ್ದೆನೋ?೧೬ [16]ಎಂದಿಗೂ ಇಲ್ಲ, ನಾನು ನಿಮಗೆ ಕೊಟ್ಟ ಮಾತು ದ್ವಂದ್ವಾರ್ಥವುಳ್ಳದ್ದಾಗಿರಲಿಲ್ಲ. ಇದಕ್ಕೆ ದೇವರೇ ಸಾಕ್ಷಿ.೧೭ [17]ನಾವು, ಅಂದರೆ ಸಿಲ್ವಾನ, ತಿಮೊಥೆಯ ಮತ್ತು ನಾನು, ಪ್ರಚಾರಮಾಡಿದ ದೇವರ ಪುತ್ರರಾದ ಯೇಸುಕ್ರಿಸ್ತರು, ಈ ಕ್ಷಣ ಹೌದು, ಮರುಕ್ಷಣ ಇಲ್ಲ ಎಂದು ಹೇಳುವವರಲ್ಲ, ಅವರು ದೇವರ ತಥಾಸ್ತು ಆಗಿದ್ದಾರೆ.೧೮ [18]ಏಕೆಂದರೆ, ದೇವರು ಮಾಡಿದ ಸಮಸ್ತ ವಾಗ್ದಾನಗಳಿಗೂ ‘ಹೌದು’ ಎಂಬ ಉತ್ತರ ಸಾಕ್ಷಾತ್ ಅವರೇ. ಈ ಕಾರಣದಿಂದಲೇ ನಾವು ದೇವರ ಮಹಿಮೆಯನ್ನು ಸಾರುವಾಗ ಯೇಸುಕ್ರಿಸ್ತರ ಮುಖಾಂತರವೇ ‘ಆಮೆನ್’ ಎನ್ನುತ್ತೇವೆ.೧೯ [19]ನಿಮ್ಮನ್ನೂ ನಮ್ಮನ್ನೂ ಕ್ರಿಸ್ತಯೇಸುವಿನಲ್ಲಿ ಒಂದಾಗಿಸಿ ಸ್ಥಿರಪಡಿಸಿದವರು ದೇವರೇ. ನಮ್ಮನ್ನು ಅಭಿಷೇಕಿಸಿದವರೂ ಮೀಸಲಾಗಿಟ್ಟವರೂ ದೇವರೇ.೨೦ [20]ಅವರೇ ನಮ್ಮ ಮೇಲೆ ತಮ್ಮ ಮುದ್ರೆಯನ್ನೊತ್ತಿ ನಮ್ಮ ಅಂತರಂಗದಲ್ಲಿ ಪವಿತ್ರಾತ್ಮ ಅವರನ್ನು ಖಾತರಿಯಾಗಿ ಇರಿಸಿದ್ದಾರೆ.೨೧ [21]ನಿಮಗೆ ತೊಂದರೆ ಆಗಬಾರದೆಂದು ನಾನು ಕೊರಿಂಥಕ್ಕೆ ಬರಲಿಲ್ಲ. ಇದನ್ನು ಹೃದಯಪೂರ್ವಕವಾಗಿ ಹೇಳುತ್ತಿದ್ದೇನೆ. ಇದಕ್ಕೆ ದೇವರೇ ಸಾಕ್ಷಿ.೨೨ [22]ನಿಮ್ಮ ವಿಶ್ವಾಸದ ಬಗ್ಗೆ ನಾವು ದಬ್ಬಾಳಿಕೆ ನಡೆಸುತ್ತಿದ್ದೇವೆಂದು ತಿಳಿಯಬೇಡಿ; ವಿಶ್ವಾಸದಲ್ಲಿ ನೀವು ದೃಢರಾಗಿಯೇ ಇದ್ದೀರಿ. ನಿಮ್ಮ ಸಂತೋಷಕ್ಕಾಗಿ ನಾವು ನಿಮ್ಮೊಡನೆ ಸಹಕರಿಸುತ್ತೇವೆ.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಕೊರಿಂಥಿಯರಿಗೆ ೨ ೧ 00:00:00 00:00:00 0.5x 2.0x https://beblia.bible:81/BibleAudio/kannadakncl/2corinthians/001.mp3 13 1