× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಧರ್ಮೋಪದೇಷಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨1 1 1 ಕನ್ನಡ ಬೈಬಲ್ (KNCL) 2016 ಧರ್ಮೋಪದೇಷಕಾಂಡ ೧೧ ಟಿಪ್ಪಣಿಗಳನ್ನು ಉಳಿಸಿ ೧ [1]“ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಪ್ರೀತಿಯಿಟ್ಟು, ಅವರ ನಿಯಮಗಳನ್ನು ಕೈಕೊಂಡು ಅವರ ಆಜ್ಞಾವಿಧಿನಿರ್ಣಯಗಳನ್ನು ಯಾವಾಗಲೂ ಅನುಸರಿಸಬೇಕು.೨ [2]“ನಿಮ್ಮ ದೇವರಾದ ಸರ್ವೇಶ್ವರ ಪ್ರಯೋಗಿಸಿದ ಶಿಕ್ಷಣಕ್ರಮವನ್ನೂ ಮಹಿಮೆಯನ್ನೂ ಭುಜಬಲವನ್ನೂ ಶಿಕ್ಷಾಹಸ್ತವನ್ನೂ೩ [3]ಅಂದರೆ, ಅವರು ಈಜಿಪ್ಟ್ ದೇಶದಲ್ಲಿ ಫರೋಹನನ್ನೂ ಅವನ ದೇಶವನ್ನೂ ಶಿಕ್ಷಿಸುವುದಕ್ಕಾಗಿ ನಡೆಸಿದ ಸೂಚಕ ಮತ್ತು ಮಹತ್ಕಾರ್ಯಗಳನ್ನೂ;೪ [4]ಈಜಿಪ್ಟಿನವರು ರಥಾಶ್ವಬಲಗಳಿಂದ ಕೂಡಿದಂಥ ದಂಡಿನ ಸಮೇತ ನಿಮ್ಮನ್ನು ಹಿಂದಟ್ಟಿ ಬಂದಾಗ ಕೆಂಪುಸಮುದ್ರದ ನೀರನ್ನು ಅವರ ಮೇಲೆ ಬರಮಾಡಿ ಸಂಪೂರ್ಣವಾಗಿ ನಾಶಮಾಡಿದ್ದನ್ನೂ;೫ [5]ನೀವು ಈ ಸ್ಥಳಕ್ಕೆ ಸೇರುವ ತನಕ ನಿಮಗೆ ಮರುಭೂಮಿಯಲ್ಲಿ ಮಾಡಿದ ಉಪಕಾರಗಳನ್ನೂ;೬ [6]ರೂಬೇನನ ಮೊಮ್ಮಕ್ಕಳೂ ಎಲೀಯಾಬನ ಮಕ್ಕಳೂ ಆದ ದಾತಾನ್ ಅಬೀರಾಮರು ದಂಗೆಯೆದ್ದಾಗ ಭೂಮಿ ಬಾಯ್ದೆರೆದು ಅವರನ್ನೂ ಅವರ ಮನೆಯವರನ್ನೂ ಡೇರೆಗಳನ್ನೂ ಅವರಿಗೆ ಸೇರಿದ ಎಲ್ಲ ಪಶುಪ್ರಾಣಿಗಳನ್ನೂ ಇಸ್ರಯೇಲರ ನಡುವೆ ನುಂಗಿಬಿಟ್ಟದ್ದನ್ನೂ ಈಗ ಜ್ಞಾಪಕಮಾಡಿಕೊಳ್ಳಿ. ಈ ಕಾರ್ಯಗಳನ್ನು ನೋಡದೆ ಹಾಗು ತಿಳಿಯದೆ ಇರುವ ನಿಮ್ಮ ಮಕ್ಕಳಿಗೆ ನಾನು ಈ ಮಾತನ್ನು ಹೇಳುತ್ತಿಲ್ಲ;೭ [7]ಸರ್ವೇಶ್ವರ ನಡೆಸಿದ ಆ ವಿಶೇಷಕಾರ್ಯಗಳನ್ನು ಪ್ರತ್ಯಕ್ಷವಾಗಿ ನೋಡಿದವರಾದ ನಿಮಗೇ ಹೇಳುತ್ತಾ ಇದ್ದೇನೆ.೮ [8]“ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲ ನೀವು ಅನುಸರಿಸಬೇಕು. ಆಗ ನೀವು ಬಲವುಳ್ಳವರಾಗಿ ಈ ನದಿ ದಾಟಿ ಆಚೆಯಿರುವ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ;೯ [9]ಸರ್ವೇಶ್ವರ ನಿಮ್ಮ ಪಿತೃಗಳಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ಆ ನಾಡಿನಲ್ಲಿ ನೀವು ಬಹುಕಾಲ ಬಾಳುವಿರಿ; ಅದು ಹಾಲೂ ಜೇನೂ ಹರಿಯುವ ನಾಡು.೧೦ [10]ನೀವು ಸ್ವಾಧೀನಮಾಡಿಕೊಳ್ಳಲು ಹೋಗುವ ನಾಡು ನೀವು ಬಿಟ್ಟುಬಂದ ಈಜಿಪ್ಟ್ ದೇಶದ ಹಾಗಲ್ಲ. ಈಜಿಪ್ಟಿನಲ್ಲಿ ನೀವು ಹೊಲಗದ್ದೆಗಳಲ್ಲಿ ಬೀಜ ಬಿತ್ತಿದ ಮೇಲೆ ಕಾಯಿಪಲ್ಯಗಳ ತೋಟವನ್ನು ಸಾಗುವಳಿಮಾಡುವ ರೀತಿಯಲ್ಲಿ ಏತವನ್ನು ತುಳಿದು ನೀರುಕಟ್ಟುತ್ತಿದ್ದಿರಿ.೧೧ [11]ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡೋ ಹಳ್ಳದಿಣ್ಣೆಗಳ ನಾಡು; ಆಕಾಶದಿಂದ ಮಳೆಬಿದ್ದಂತೆ ನೀರುದೊರಕುತ್ತದೆ.೧೨ [12]ಅದು ನಿಮ್ಮ ದೇವರಾದ ಸರ್ವೇಶ್ವರ ಪರಾಂಬರಿಸುವ ನಾಡು; ಸಂವತ್ಸರದ ಪ್ರಾರಂಭ ಮೊದಲುಗೊಂಡು ಕೊನೆಯವರೆಗೂ ಅವರು ಅದನ್ನು ಸದಾ ಕಟಾಕ್ಷಿಸುವರು.೧೩ [13]ನಾನು ಈಗ ನಿಮಗೆ ಬೋಧಿಸುವ ಆಜ್ಞೆಗಳಿಗೆ ಲಕ್ಷ್ಯಕೊಟ್ಟು ನಿಮ್ಮ ದೇವರಾದ ಸರ್ವೇಶ್ವರನನ್ನು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಪ್ರೀತಿಸಿ ಅವರಿಗೆ ಸೇವೆಸಲ್ಲಿಸಿದರೆ,೧೪ [14]ನಿಮಗೆ ಗೋದಿ, ದ್ರಾಕ್ಷಿ, ಎಣ್ಣೇಕಾಯಿ ಇವುಗಳ ಬೆಳೆ ಚೆನ್ನಾಗಿ ಆಗುವುದು. ನಿಮ್ಮ ಭೂಮಿಗೆ ಬೇಕಾದ ಮುಂಗಾರು ಹಿಂಗಾರುಗಳನ್ನು ಅವರು ಸರಿಯಾಗಿ ಸುರಿಸುವರು.೧೫ [15]ಅಡವಿಯಲ್ಲಿ ದನಕರುಗಳಿಗೆ ಬೇಕಾದಷ್ಟು ಹುಲ್ಲನ್ನು ಕೊಡುವರು; ನೀವು ಆಹಾರದಿಂದ ತೃಪ್ತರಾಗುವಿರಿ.೧೬ [16]ಆದರೆ ನೀವು ಎಚ್ಚರಿಕೆಯಿಂದಿರಬೇಕು; ಮರುಳುಗೊಂಡು ಸರ್ವೇಶ್ವರ ಹೇಳಿದ ಮಾರ್ಗವನ್ನು ಬಿಟ್ಟು, ಇತರ ದೇವರುಗಳನ್ನು ಅವಲಂಬಿಸಿ, ಪೂಜಿಸಿದರೆ,೧೭ [17]ಅವರು ನಿಮ್ಮ ಮೇಲೆ ಸಿಟ್ಟಗೊಂಡು ಮಳೆಬಾರದಂತೆ ಆಕಾಶವನ್ನು ಮುಚ್ಚಿಡಬಹುದು. ಆಗ ಭೂಮಿಯಲ್ಲಿ ಬೆಳೆಯಾಗದೆ ಸರ್ವೇಶ್ವರ ನಿಮಗೆ ಕೊಡುವ ಆ ಉತ್ತಮನಾಡಿನಲ್ಲಿ ನೀವು ಉಳಿಯದೆ ಬೇಗ ನಾಶವಾಗಿಹೋಗುವಿರಿ.೧೮ [18]“ಆದುದರಿಂದ ನೀವು ಈ ನನ್ನ ಮಾತುಗಳನ್ನು ನಿಮ್ಮ ಹೃದಯದಲ್ಲೂ ಮನಸ್ಸಿನಲ್ಲೂ ಇಟ್ಟುಕೊಳ್ಳಬೇಕು; ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು; ಇವು ನಿಮ್ಮ ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತಿರಬೇಕು.೧೯ [19]ನೀವು ಮನೆಯಲ್ಲಿರುವಾಗಲೂ ಪ್ರಯಾಣದಲ್ಲಿರುವಾಗಲೂ ಮಲಗುವಾಗಲೂ ಏಳುವಾಗಲೂ ಇವುಗಳ ವಿಷಯದಲ್ಲಿ ಮಾತಾಡುತ್ತಾ ನಿಮ್ಮ ಮಕ್ಕಳಿಗೆ ಇವುಗಳನ್ನು ಮನದಟ್ಟಾಗಿಸಬೇಕು.೨೦ [20]ನಿಮ್ಮ ಮನೇ ಬಾಗಿಲಿನ ನಿಲುವುಪಟ್ಟಿಗಳ ಹಾಗು ಹೆಬ್ಬಾಗಿಲುಗಳ ಮೇಲೆಯೂ ಇವುಗಳನ್ನೂ ಬರೆಯಬೇಕು.೨೧ [21]ಹೀಗೆ ಮಾಡಿದರೆ ಭೂಮಿಯ ಮೇಲೆ ಆಕಾಶ ಎಷ್ಟುಕಾಲ ನಿಂತಿರುವುದೋ ಅಷ್ಟು ಕಾಲವೂ ನೀವು ಹಾಗು ನಿಮ್ಮ ಸಂತತಿಯವರು ನಿಮ್ಮ ಪಿತೃಗಳಿಗೆ ಸರ್ವೇಶ್ವರ ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ಆ ನಾಡಿನಲ್ಲಿ ಬಾಳುವಿರಿ.೨೨ [22]“ನಾನು ಬೋಧಿಸುವ ಈ ಧರ್ಮೋಪದೇಶವನ್ನೆಲ್ಲ ನೀವು ಅನುಸರಿಸುವವರಾಗಿ, ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ, ಎಲ್ಲ ವಿಷಯಗಳಲ್ಲೂ ಅವರು ಹೇಳುವ ಮಾರ್ಗದಲ್ಲೇ ನಡೆದು, ಅವರನ್ನೇ ಹೊಂದಿಕೊಂಡಿದ್ದರೆ,೨೩ [23]ಅವರು ಆ ಜನಾಂಗಗಳನ್ನೆಲ್ಲ ನಿಮ್ಮ ಬಳಿಯಿಂದ ಹೊರದೂಡುವರು; ನಿಮಗಿಂತಲೂ ಮಹಾಬಲಿಷ್ಠಜನಾಂಗಗಳ ನಾಡನ್ನು ಸ್ವಾಧೀನಮಾಡಿಕೊಳ್ಳುವಿರಿ.೨೪ [24]ನೀವು ಹೆಜ್ಜೆಯಿಡುವ ಎಲ್ಲ ಸ್ಥಳಗಳೂ ನಿಮ್ಮದಾಗುವುವು; ಮರುಭೂಮಿ ಮೊದಲುಗೊಂಡು ಲೆಬನೋನ್ ಪರ್ವತದವರೆಗೂ ಮತ್ತು ಯೂಫ್ರೆಟಿಸ್ ನದಿಯಿಂದ ಪಶ್ಚಿಮ ಸಮುದ್ರದವರೆಗೂ ನಿಮ್ಮ ನಾಡು ವ್ಯಾಪಿಸುವುದು.೨೫ [25]ಯಾರೂ ನಿಮ್ಮ ಮುಂದೆ ನಿಲ್ಲುವುದಿಲ್ಲ. ನೀವು ಕಾಲಿಡುವ ಎಲ್ಲ ಪ್ರದೇಶಗಳ ಜನಗಳಿಗೂ ನಿಮ್ಮಿಂದ ದಿಗಿಲೂ ಹೆದರಿಕೆಯೂ ಉಂಟಾಗುವ ಹಾಗೆ ನಿಮ್ಮ ದೇವರಾದ ಸರ್ವೇಶ್ವರ ತಾನೇ ಹೇಳಿರುವಂತೆ ಮಾಡುವರು.೨೬ [26]“ಇಗೋ ನೋಡಿ, ಈ ದಿನ ಆಶೀರ್ವಾದವನ್ನೂ ಶಾಪವನ್ನೂ ನಿಮ್ಮ ಮುಂದೆ ಇಡುತ್ತಾ ಇದ್ದೇನೆ.೨೭ [27]ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಸರ್ವೇಶ್ವರನ ಆಜ್ಞೆಗಳಿಗೆ ನೀವು ವಿಧೇಯರಾಗಿ ನಡೆದರೆ, ಆಶೀರ್ವಾದ ನಿಮ್ಮದಾಗುವುದು.೨೮ [28]ಈ ಆಜ್ಞೆಗಳಿಗೆ ವಿಧೇಯರಾಗದೆ, ನಾನು ಈಗ ಬೋಧಿಸುವ ಮಾರ್ಗವನ್ನು ಬಿಟ್ಟು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ಅವಲಂಬಿಸಿದರೆ, ನಿಮಗೆ ಶಾಪ ತಗಲುವುದು.೨೯ [29]“ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿಗೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಸೇರಿಸಿದ ನಂತರ ನೀವು ಗೆರಿಜ್ಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಏಬಾಲ್ ಬೆಟ್ಟದ ಮೇಲೆ ಶಾಪವನ್ನೂ ಪ್ರಕಟಿಸಬೇಕು.೩೦ [30]ಆ ಬೆಟ್ಟಗಳು ಜೋರ್ಡನ್ ನದಿಯ ಆಚೆ, ಪಡುವಣ ದಾರಿಯ ಪಶ್ಚಿಮದಲ್ಲಿ ಕಾನಾನ್ಯರು ವಾಸಿಸುವ ಅರಾಬಾ ಪ್ರದೇಶದಲ್ಲಿ, ಗಿಲ್ಗಾಲಿಗೆ ಎದುರಾಗಿ ಮೋರೆ ಎಂಬ ವೃಕ್ಷದ ಬಳಿಯಲ್ಲಿ ಇವೆ.೩೧ [31]“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ನೀವು ಜೋರ್ಡನ್ ನದಿಯನ್ನು ದಾಟಬೇಕಾಗಿದೆ. ನೀವು ಆ ನಾಡನ್ನು ವಶಪಡಿಸಿಕೊಂಡು, ಅದರಲ್ಲಿ ವಾಸಮಾಡುವಾಗ,೩೨ [32]ನಾನು ಈಗ ನಿಮಗೆ ತಿಳಿಸುವ ಎಲ್ಲ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಲೇಬೇಕು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಧರ್ಮೋಪದೇಷಕಾಂಡ ೧೧ 00:00:00 00:00:00 0.5x 2.0x https://beblia.bible:81/BibleAudio/kannadakncl/deuteronomy/011.mp3 34 11