× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಧರ್ಮೋಪದೇಷಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೮ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨1 1 1 ಕನ್ನಡ ಬೈಬಲ್ (KNCL) 2016 ಧರ್ಮೋಪದೇಷಕಾಂಡ ೧೮ ಟಿಪ್ಪಣಿಗಳನ್ನು ಉಳಿಸಿ ೧ [1]“ಯಾಜಕಸೇವೆ ಮಾಡುವ ಲೇವಿಯರಿಗೆ ಹಾಗು ಲೇವಿಯಕುಲದ ಸರ್ವರಿಗೆ ಇತರ ಇಸ್ರಯೇಲರಂತೆ ಸ್ವಂತಕ್ಕಾಗಿ ಭೂಸ್ವತ್ತು ದೊರೆಯುವುದಿಲ್ಲ. ಸರ್ವೇಶ್ವರನಿಗೆ ಸಮರ್ಪಿತವಾದ ಬಲಿದ್ರವ್ಯಗಳು ಹಾಗು ಎಲ್ಲ ಮೀಸಲಾಗಿಟ್ಟವುಗಳೇ ಅವರಿಗೆ ಜೀವನಾಧಾರ.೨ [2]ಸ್ವದೇಶದವರಿಗೆ ದೊರಕುವಂತೆ ಅವರಿಗೆ ಸೊತ್ತು ದೊರಕುವುದಿಲ್ಲ. ಸರ್ವೇಶ್ವರ ಸ್ವಾಮಿಯೇ ಲೇವಿಯರ ಸೊತ್ತು. ಇದನ್ನು ಸ್ವಾಮಿಯೇ ಅವರಿಗೆ ಹೇಳಿದ್ದಾರೆ.೩ [3]“ಜನರಿಂದ ಯಾಜಕರು ಹೊಂದಬೇಕಾದವುಗಳು ಯಾವುವೆಂದರೆ: ದನಕರುಗಳನ್ನು ಹಾಗು ಆಡುಕುರಿಗಳನ್ನು ಕೊಯ್ದು ಬಲಿದಾನ ಮಾಡುವವರೆಲ್ಲರು ಆ ಪಶುಗಳ ಮುಂದೊಡೆಯನ್ನೂ ಎರಡು ದವಡೆಗಳನ್ನೂ ಕೋಷ್ಠವನ್ನೂ ಯಾಜಕರಿಗೆ ಕೊಡಬೇಕು.೪ [4]ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳ ಪ್ರಥಮಫಲಗಳನ್ನು ಹಾಗು ಮೊದಲನೆಯ ಸಾರಿ ಕತ್ತರಿಸುವ ಕುರಿಗಳ ಉಣ್ಣೆಯನ್ನು ಅವರಿಗೆ ಕೊಡಬೇಕು.೫ [5]ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಎಲ್ಲ ಕುಲಗಳಲ್ಲಿ ಲೇವಿಯನನ್ನು, ಇವನ ತರುವಾಯ ಇವನ ಸಂತತಿಯವರನ್ನು, ತಮ್ಮ ಸನ್ನಿಧಿಯಲ್ಲಿ ಶಾಶ್ವತವಾಗಿ ಸೇವೆಮಾಡುವುದಕ್ಕೆ ತಾವೇ ನೇಮಿಸಿಕೊಂಡು ಇದ್ದಾರಲ್ಲವೆ?೬ [6]“ಇಸ್ರಯೇಲರ ಯಾವುದಾದರೊಂದು ಊರಲ್ಲಿ ಇಳಿದುಕೊಂಡಿದ್ದ ಒಬ್ಬ ಲೇವಿಯನು ಸ್ವಂತ ಮನಸ್ಸಿನಿಂದ ಆ ಊರನ್ನು ಬಿಟ್ಟು ಸರ್ವೇಶ್ವರ ಆರಿಸಿಕೊಂಡ ಸ್ಥಳಕ್ಕೆ ಬರಬಹುದು.೭ [7]ಅಲ್ಲೇ ಸರ್ವೇಶ್ವರನ ಸನ್ನಿಧಿಯಲ್ಲಿ ಸೇವೆಮಾಡುವ ತನ್ನ ಸ್ವಕುಲದವರಂತೆ ತನ್ನ ದೇವರಾದ ಸರ್ವೇಶ್ವರನ ಹೆಸರನ್ನು ಹೇಳಿ ತಾನೂ ಸೇವೆ ನಡೆಸಬಹುದು;೮ [8]ಅಂಥವನ ಕೈಯಲ್ಲಿ ಪಿತ್ರಾರ್ಜಿತ ಸೊತ್ತನ್ನು ಮಾರಿದ ಹಣವಿದ್ದರೂ ಮಿಕ್ಕ ಲೇವಿಯರೊಂದಿಗೆ ಸಮವಾದ ಪಾಲಿಗೆ ಬಾಧ್ಯನಾಗಿರುವನು.೯ [9]“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ನೀವು ಸೇರಿದಾಗ ಅಲ್ಲಿರುವ ಜನಗಳು ಮಾಡುವ ಖಂಡನೀಯ ಆಚಾರಗಳನ್ನು ಅನುಸರಿಸಲೇಬಾರದು.೧೦ [10]ಮಕ್ಕಳನ್ನು ಆಹುತಿಕೊಡುವವರು, ಕಣಿಹೇಳುವವರು, ಶಕುನ ನೋಡುವವರು, ಯಂತ್ರಮಂತ್ರಗಳನ್ನು ಮಾಡುವವರು,೧೧ [11]ಮಾಟಗಾರರು, ತಂತ್ರಗಾರರು, ಸತ್ತವರನ್ನು ವಿಚಾರಿಸುವವರು, ಬೇತಾಳಿಕರು, ಪ್ರೇತಸಿದ್ಧರು ಇಂಥವರು ಯಾರೂ ನಿಮ್ಮಲ್ಲಿ ಇರಬಾರದು.೧೨ [12]ಇಂಥ ಕೆಲಸಗಳನ್ನು ನಡೆಸುವವರು ಸರ್ವೇಶ್ವರನಿಗೆ ಅಸಹ್ಯರಾಗಿದ್ದಾರೆ. ನಿಮ್ಮ ದೇವರಾದ ಸರ್ವೇಶ್ವರ ಇಂಥ ಹೇಯಕೃತ್ಯಗಳನ್ನು ಮಾಡುವ ಆ ಜನಾಂಗಗಳನ್ನು ನಿಮ್ಮಿಂದ ದೂರ ಹೊರದೂಡಿಸಿಬಿಡುತ್ತಾರೆ.೧೩ [13]ನೀವು ನಿಮ್ಮ ದೇವರಾದ ಸರ್ವೇಶ್ವರನ ಸೇವೆಯ ವಿಷಯದಲ್ಲಿ ಸದಾಚಾರವುಳ್ಳವರು ಆಗಿರಬೇಕು.೧೪ [14]ನೀವು ಸ್ವಾಧೀನಮಾಡಿಕೊಳ್ಳುವ ಆ ನಾಡಿನ ಜನಾಂಗಗಳು ಶಕುನಗಳನ್ನು ನೋಡುತ್ತಾರೆ, ಯಂತ್ರಮಂತ್ರಗಳನ್ನು ಮಾಡುತ್ತಾರೆ. ನೀವಾದರೋ ಹಾಗೆ ಮಾಡುವುದಕ್ಕೆ ನಿಮ್ಮ ದೇವರಾದ ಸರ್ವೇಶ್ವರನ ಅನುಮತಿ ಇಲ್ಲ.೧೫ [15]“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಸಹೋದರರಲ್ಲಿ, ನನ್ನಂಥ ಒಬ್ಬ ಪ್ರವಾದಿಯನ್ನು ನಿಮಗೆ ಏರ್ಪಡಿಸುವರು. ಅವನಿಗೆ ಮಾತ್ರ ಕಿವಿಗೊಡಬೇಕು.೧೬ [16]ಹೋರೇಬಿನಲ್ಲಿ ನೀವು ಸಭೆಕೂಡಿದ ದಿನದಂದು ಇದನ್ನೇ ನೀವು ಕೋರಿಕೊಂಡಿರಿ; ‘ನಮ್ಮ ದೇವರಾದ ಸರ್ವೇಶ್ವರನ ಸ್ವರವನ್ನು ಇನ್ನು ಕೇಳಲು ಹಾಗು ಈ ಘೋರವಾದ ಅಗ್ನಿಜ್ವಾಲೆಯನ್ನು ಇನ್ನು ನೋಡಲು ನಮಗೆ ಮನಸ್ಸಿಲ್ಲ; ಹಾಗೇನಾದರು ಕೇಳಿ, ನೋಡಿದರೆ ಸತ್ತೇವು’ ಎಂದು ನೀವು ಹೇಳಿದಿರಿ.೧೭ [17]ಆಗ ಸರ್ವೇಶ್ವರ ನನಗೆ, ‘ಇವರು ಹೇಳಿದ್ದು ಸರಿಯಾಗಿದೆ;೧೮ [18]ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೆ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು.೧೯ [19]ಅವನು ನನ್ನ ಹೆಸರಿನಲ್ಲಿ ಹೇಳಿದ ಮಾತುಗಳಿಗೆ ಯಾರು ಕಿವಿಕೊಡುವುದಿಲ್ಲವೋ ಅಂಥವರನ್ನು ನಾನು ಶಿಕ್ಷಿಸುವೆನು.೨೦ [20]ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರ ಹೊಂದದೆ ನಾನು ಪ್ರೇರಣೆಮಾಡದ ಮಾತುಗಳನ್ನು ಸರ್ವೇಶ್ವರನ ಮಾತೆಂದು ಜನರಿಗೆ ತಿಳಿಸುವನೋ, ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತಾಡುವನೋ, ಅವನಿಗೆ ಮರಣಶಿಕ್ಷೆಯಾಗಬೇಕು,’ ಎಂದು ಹೇಳಿದರು.೨೧ [21]“ಪ್ರವಾದಿ ಹೇಳಿದ ಮಾತು ಸರ್ವೇಶ್ವರನ ಮಾತಲ್ಲವೆಂದು ತಿಳಿದುಕೊಳ್ಳುವುದು ಹೇಗೆ ಎಂದುಕೊಳ್ಳುತ್ತೀರೋ?೨೨ [22]ಪ್ರವಾದಿ ಸರ್ವೇಶ್ವರನ ಮಾತೆಂದು ಹೇಳಿ, ಮುಂತಿಳಿಸಿದ ಸಂಗತಿ ನಡೆಯದೆ ಹೋದರೆ, ಅವನ ಮಾತು ಸರ್ವೇಶ್ವರನದಲ್ಲವೆಂದು ನೀವು ತಿಳಿದುಕೊಳ್ಳಬೇಕು. ಅವನು ಅಧಿಕಾರವಿಲ್ಲದೆ ಮಾತಾಡಿದವನು; ಅವನಿಗೆ ಹೆದರಬಾರದು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಧರ್ಮೋಪದೇಷಕಾಂಡ ೧೮ 00:00:00 00:00:00 0.5x 2.0x https://beblia.bible:81/BibleAudio/kannadakncl/deuteronomy/018.mp3 34 18