× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಧರ್ಮೋಪದೇಷಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೩ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫1 1 1 ಕನ್ನಡ ಬೈಬಲ್ (KNCL) 2016 ಧರ್ಮೋಪದೇಷಕಾಂಡ ೨೩ ಟಿಪ್ಪಣಿಗಳನ್ನು ಉಳಿಸಿ ೧ [1]“ಬೀಜಹೊಡಿಸಿಕೊಂಡಾಗಲಿ, ಜನನ ಇಂದ್ರಿಯ ಕತ್ತರಿಸಿಕೊಂಡಾಗಲಿ ನಪುಂಸಕರಾದವರು ಸರ್ವೇಶ್ವರನ ಸಭೆಯಲ್ಲಿ ಸೇರಬಾರದು.೨ [2]ಅಗಮ್ಯಾಗಮನದಿಂದುಂಟಾದ ಸಂತತಿಯವರು ಹತ್ತನೆಯ ತಲೆಯವರಾದರೂ ಸರ್ವೇಶ್ವರನ ಸಭೆಗೆ ಸೇರಬಾರದು.೩ [3]“ಅಮ್ಮೋನಿಯರಾಗಲಿ ಮೋವಾಬ್ಯರಾಗಲಿ ಸರ್ವೇಶ್ವರನ ಸಭೆಗೆ ಎಂದೆಂದಿಗೂ ಸೇರಬಾರದು. ಅವರ ಸಂತತಿಯವರು ಹತ್ತನೆಯ ತಲೆಯವರಾದರೂ ಸರ್ವೇಶ್ವರನ ಸಭೆಗೆ ಸೇರಬಾರದು.೪ [4]ಏಕೆಂದರೆ ನೀವು ಈಜಿಪ್ಟ್ ದೇಶದಿಂದ ಬಂದಾಗ ಅವರು ಅನ್ನಪಾನಗಳನ್ನು ತಂದು ನಿಮ್ಮನ್ನು ಎದುರುಗೊಳ್ಳಲಿಲ್ಲ; ನಿಮ್ಮನ್ನು ಶಪಿಸುವುದಕ್ಕಾಗಿ ಬೆಯೋರನ ಮಗ ಬಿಳಾಮನಿಗೆ ಹಣಕೊಟ್ಟು ಎರಡು ನದಿಗಳ ಮಧ್ಯದಲ್ಲಿರುವ ಅರಾಮಿನ ಪೆತೋರೂರಿನಿಂದ ಅವನನ್ನು ಕರೆಸಿದರು.೫ [5]ಆದರೂ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸದೆ, ಅವನಿಂದ ಶಾಪವನ್ನು ನುಡಿಸದೆ, ಆಶೀರ್ವಾದವನ್ನೇ ಹೇಳಿಸಿದರು.೬ [6]ನಿಮ್ಮ ಜೀವಮಾನಕಾಲವನ್ನೆಲ್ಲಾ ಅವರ ಯೋಗಕ್ಷೇಮವನ್ನು ಬಯಸಲೇಬಾರದು.೭ [7]“ಎದೋಮ್ಯರನ್ನು ಸಂಪೂರ್ಣವಾಗಿ ನಿಷೇಧಿಸಬಾರದು; ಅವರು ನಿಮ್ಮ ಬಂಧುಜನಗಳು. ಈಜಿಪ್ಟರನ್ನೂ ಸಂಪೂರ್ಣವಾಗಿ ನಿಷೇಧಿಸಬಾರದು; ಅವರ ದೇಶದಲ್ಲಿ ನೀವು ಪ್ರವಾಸಿಗಳಾಗಿದ್ದಿರಲ್ಲವೆ?೮ [8]ಅವರ ಸಂತತಿಯವರಲ್ಲಿ ಮೂರನೆಯ ತಲೆಯವರು ಸರ್ವೇಶ್ವರನ ಸಭೆಗೆ ಸೇರಬಹುದು.೯ [9]“ನೀವು ಶತ್ರುಗಳ ವಿರುದ್ಧ ಯುದ್ಧಕ್ಕೆ ಹೊರಟು ಪಾಳೆಯದಲ್ಲಿರುವಾಗ ಯಾವ ಅಶುಚಿಯೂ ಆಗದಂತೆ ಎಚ್ಚರಿಕೆಯಿಂದಿರಬೇಕು.೧೦ [10]ರಾತ್ರಿಕಾಲದಲ್ಲಿ ವೀರ್ಯಸ್ಖಲನದಿಂದ ಯಾವನಾದರು ಅಶುದ್ಧನಾದರೆ ಅವನು ಪಾಳೆಯದೊಳಗೆ ಇರದೆ ಹೊರಗೆ ಇರಬೇಕು.೧೧ [11]ಅವನು ಸಂಜೆವೇಳೆಯಲ್ಲಿ ಸ್ನಾನಮಾಡಿ ಸೂರ್ಯನು ಮುಳುಗಿದ ಮೇಲೆ ಪಾಳೆಯದೊಳಗೆ ಬರಬಹುದು.೧೨ [12]“ಪಾಳೆಯದ ಹೊರಗೆ ಪಾಯಖಾನೆಗಾಗಿ ಒಂದು ಸ್ಥಳವನ್ನು ಗೊತ್ತುಮಾಡಬೇಕು.೧೩ [13]ಯುದ್ಧದ ಸಾಮಾನುಗಳಲ್ಲದೆ ಸಲಕೆ ನಿಮ್ಮ ಬಳಿಯಲ್ಲೇ ಇರಬೇಕು; ನೀವು ಬಹಿರ್ದೆಶೆಗೆ ಹೋದಾಗ ಆ ಸಲಕೆಯಿಂದ ಅಗೆದು ಕಲ್ಮಷವನ್ನು ಮುಚ್ಚಿಬಿಡಬೇಕು.೧೪ [14]ನಿಮ್ಮ ದೇವರಾದ ಸರ್ವೇಶ್ವರಾ ನಿಮ್ಮನ್ನು ಕಾಪಾಡಲು, ಶತ್ರುಗಳನ್ನು ನಿಮ್ಮ ಕೈವಶಮಾಡಲು ನಿಮ್ಮ ಪಾಳೆಯದೊಳಗೆ ಸಂಚಾರಮಾಡುತ್ತಾರೆ; ನಿಮ್ಮಲ್ಲಿ ಅಶುಚಿಯೇನಾದರೂ ಕಂಡುಬಂದರೆ ಅವರು ನಿಮ್ಮನ್ನು ಬಿಟ್ಟುಹೋಗದಂತೆ ಪಾಳೆಯವು ನಿರ್ಮಲವಾಗಿರಬೇಕು.೧೫ [15]“ತಪ್ಪಿಸಿಕೊಂಡ ಒಬ್ಬ ಗುಲಾಮನು ನಿಮ್ಮಲ್ಲಿ ಇರುವುದಕ್ಕೆ ಬಂದರೆ ಅವನನ್ನು ಅವನ ದಣಿಗೆ ಮತ್ತೆ ವಶಪಡಿಸಬಾರದು.೧೬ [16]ನಿಮ್ಮ ಊರುಗಳಲ್ಲಿ ಯಾವ ಸ್ಥಳವು ಅವನಿಗೆ ಇಷ್ಟವಾಗಿದೆಯೋ ಅಲ್ಲೇ ಅವನು ವಾಸವಾಗಿರಬಹುದು; ಅವನನ್ನು ನೀವು ಶೋಷಣೆಗೆ ಗುರಿಪಡಿಸಬಾರದು.೧೭ [17]“ಇಸ್ರಯೇಲರಲ್ಲಿ ಯಾವ ಸ್ತ್ರೀಯೂ ಗುಡಿವೇಶ್ಯೆಯಾಗಬಾರದು; ಅಂತೆಯೇ ಯಾವ ಪುರುಷನೂ ಅಂಥ ವೇಶ್ಯೆತನಕ್ಕೆ ಇಳಿಯಬಾರದು.೧೮ [18]ಸೂಳೆತನದಿಂದಾಗಲಿ ಜಾರತ್ವದಿಂದಾಗಲಿ ಸಂಪಾದಿಸಿದ ಹಣವನ್ನು ಹರಕೆಯಾಗಿ ನಿಮ್ಮ ದೇವರಾದ ಸರ್ವೇಶ್ವರನ ಮಂದಿರದೊಳಗೆ ತರಲೇಬಾರದು; ಈ ಎರಡೂ ಅವರಿಗೆ ಅಸಹ್ಯವಾದುವು.೧೯ [19]“ಹಣವನ್ನಾಗಲಿ, ಆಹಾರಪದಾರ್ಥಗಳನ್ನಾಗಲಿ, ಬೇರೆ ಯಾವುದನ್ನೇ ಆಗಲಿ೨೦ [20]ಪರದೇಶದವನಿಗೆ ಬಡ್ಡಿಗೆ ಕೊಡಬಹುದೇ ಹೊರತು ಸ್ವದೇಶದವನಿಗೆ ಕೊಡಬಾರದು. ಹೀಗೆ ನಡೆದರೆ ನೀವು ಸ್ವದೇಶವಾಗಿ ಪಡೆಯಲಿರುವ ನಾಡಿನಲ್ಲಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಎಲ್ಲ ಪ್ರಯತ್ನಗಳನ್ನು ಕೈಗೂಡಿಸಿ ಅಭಿವೃದ್ಧಿಪಡಿಸುವರು.೨೧ [21]“ನಿಮ್ಮ ದೇವರಾದ ಸರ್ವೇಶ್ವರನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಅವರು ತಪ್ಪದೆ ಅದನ್ನು ವಿಚಾರಿಸುವರು; ತೀರಿಸದೆ ಹೋಗುವುದು ಪಾಪ.೨೨ [22]ನೀವು ಹರಕೆಮಾಡದಿದ್ದರೆ ದೋಷವೇನೂ ಇಲ್ಲ.೨೩ [23]ಆದರೆ ಬಾಯಿಂದ ನುಡಿದದ್ದನ್ನು ನೆರವೇರಿಸಲೇಬೇಕು. ನಿಮ್ಮ ದೇವರಾದ ಸರ್ವೇಶ್ವರನಿಗೆ ಬಾಯಿಂದ ಹರಕೆಮಾಡಿಕೊಂಡಂತೆಯೇ ಅದನ್ನು ಒಪ್ಪಿಸಿಬಿಡಬೇಕು.೨೪ [24]“ಮತ್ತೊಬ್ಬನ ದ್ರಾಕ್ಷಿತೋಟದಲ್ಲಿ ನೀವು ಹಾದುಹೋಗುವಾಗ ಇಷ್ಟಾನುಸಾರ ಹಣ್ಣುಗಳನ್ನು ತಿನ್ನಬಹುದು. ಆದರೆ ಬುಟ್ಟಿಯಲ್ಲಿ ಹಾಕಿಕೊಂಡು ಹೋಗಬಾರದು.೨೫ [25]ಮತ್ತೊಬ್ಬನ ಬೆಳೆಯ ನಡುವೆ ಹಾದುಹೋಗುವಾಗ ತೆನೆಗಳನ್ನು ಕೈಯಿಂದ ಮುರಿದುಕೊಳ್ಳಬಹುದು; ಆದರೆ ಆ ಬೆಳೆಗೆ ಕುಡುಗೋಲು ಹಾಕಬಾರದು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಧರ್ಮೋಪದೇಷಕಾಂಡ ೨೩ 00:00:00 00:00:00 0.5x 2.0x https://beblia.bible:81/BibleAudio/kannadakncl/deuteronomy/023.mp3 34 23