× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಧರ್ಮೋಪದೇಷಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೫ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯1 1 1 ಕನ್ನಡ ಬೈಬಲ್ (KNCL) 2016 ಧರ್ಮೋಪದೇಷಕಾಂಡ ೨೫ ಟಿಪ್ಪಣಿಗಳನ್ನು ಉಳಿಸಿ ೧ [1]“ಇಬ್ಬರು ವ್ಯಾಜ್ಯವಾಡುತ್ತಾ ನ್ಯಾಯಾಧಿಪತಿಗಳ ಬಳಿಗೆ ಬಂದರೆ ನ್ಯಾಯಾಧಿಪತಿಗಳು ತಪ್ಪಿಲ್ಲದವನನ್ನು ನಿರಪರಾಧಿ ಎಂದೂ ತಪ್ಪುಳ್ಳವನನ್ನು ಅಪರಾಧಿ ಎಂದೂ ತೀರ್ಮಾನಿಸಬೇಕು.೨ [2]ಅಪರಾಧಿಗೆ ಪೆಟ್ಟಿನ ಶಿಕ್ಷೆ ತೀರ್ಮಾನವಾದರೆ ನ್ಯಾಯಾಧಿಪತಿ ಅವನನ್ನು ಮಲಗಿಸಿ, ಅವನ ಅಪರಾಧಕ್ಕೆ ಅನುಸಾರವಾಗಿ ಪೆಟ್ಟುಗಳನ್ನು ತನ್ನ ಮುಂದೆಯೇ ಹೊಡಿಸಿ ಲೆಕ್ಕಿಸಬೇಕು.೩ [3]ಪೆಟ್ಟುಗಳ ಶಿಕ್ಷೆ ನಾಲ್ವತ್ತಕ್ಕಿಂತ ಹೆಚ್ಚಿರಬಾರದು. ಅಷ್ಟಕ್ಕಿಂತ ಮೀರಿ ನೀವು ಹೆಚ್ಚು ಪೆಟ್ಟುಗಳನ್ನು ಹೊಡಿಸಿದರೆ ನಿಮ್ಮ ಸ್ವದೇಶದವನನ್ನು ಕೇವಲ ನೀಚನನ್ನಾಗಿ ನೀವು ಕಂಡಂತಾಗುವುದು.೪ [4]“ಕಣತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದು.”೫ [5]“ಅಣ್ಣತಮ್ಮಂದಿರು ಒಂದೇ ಕುಟುಂಬದಲ್ಲಿರುವಾಗ ಅಣ್ಣನು ಮಗನಿಲ್ಲದೆ ಸತ್ತರೆ ಅವನ ಹೆಂಡತಿ ಬೇರೆ ಪುರುಷನನ್ನು ಮದುವೆ ಆಗಬಾರದು. ಅವಳ ಮೈದುನ ಅವಳನ್ನು ಹೆಂಡತಿಯಾಗಿ ತೆಗೆದುಕೊಂಡು ಮೈದುನ ಧರ್ಮವನ್ನು ನೆರವೇರಿಸಬೇಕು.೬ [6]ಅವಳಲ್ಲಿ ಹುಟ್ಟುವ ಚೊಚ್ಚಲುಮಗನನ್ನು ಸತ್ತವನ ಮಗನೆಂದೇ ಎಣಿಸಬೇಕು; ಹೀಗೆ ಮಾಡುವುದರಿಂದ ಸತ್ತವನ ಹೆಸರು ಇಸ್ರಯೇಲರಲ್ಲಿ ಅಳಿದು ಹೋಗುವುದಿಲ್ಲ.೭ [7]ತಮ್ಮನು ಅಣ್ಣನ ಹೆಂಡತಿಯನ್ನು ಪರಿಗ್ರಹಿಸಲೊಲ್ಲದೆ ಹೋದರೆ ಅವಳು ಚಾವಡಿಗೆ ಹೋಗಿ ಹಿರಿಯರಿಗೆ, ‘ನನ್ನ ಗಂಡನ ತಮ್ಮನು ತನ್ನ ಅಣ್ಣನ ಹೆಸರನ್ನು ಉಳಿಸಲೊಲ್ಲನು; ಮೈದುನ ಧರ್ಮವನ್ನು ನಡಿಸುವುದಿಲ್ಲ ಎನ್ನುತ್ತಾನೆ’ ಎಂದು ತಿಳಿಸಬೇಕು.೮ [8]ಆಗ ಆ ಊರಿನ ಹಿರಿಯರು ಅವನನ್ನು ಕರೆಸಿ ವಿಚಾರಿಸಿದಲ್ಲಿ ಅವನು ಅವರ ಮುಂದೆ ನಿಂತು, ‘ಈಕೆಯನ್ನು ಪರಿಗ್ರಹಿಸುವುದಕ್ಕೆ ನನಗೆ ಇಷ್ಟವಿಲ್ಲ’ ಎಂದು ಹೇಳುವ ಪಕ್ಷಕ್ಕೆ೯ [9]ಅವನ ಅತ್ತಿಗೆ ಹಿರಿಯರ ಎದುರಿನಲ್ಲಿ ಅವನ ಕೆರವನ್ನು ಅವನ ಕಾಲಿನಿಂದ ತೆಗೆದುಬಿಟ್ಟು, ಅವನ ಮುಖದ ಮೇಲೆ ಉಗುಳಿ, ‘ಅಣ್ಣನಿಗೆ ಸಂತಾನವನ್ನು ಹುಟ್ಟಿಸಲೊಲ್ಲದವರೆಲ್ಲರಿಗೂ ಇಂಥ ಅವಮಾನವಾಗಲಿ,’ ಎಂದು ಹೇಳಬೇಕು.೧೦ [10]ಆ ಮನುಷ್ಯನ ಮನೆಯವರಿಗೆ, ‘ಕೆರಬಿಚ್ಚಿಸಿಕೊಂಡವನ ಮನೆಯವರು’ ಎಂಬ ಹೆಸರು ಬರುವುದು.೧೧ [11]“ಇಬ್ಬರು ಗಂಡಸರು ಜಗಳವಾಡುತ್ತಿರುವಾಗ ಅವರಲ್ಲಿ ಒಬ್ಬನ ಹೆಂಡತಿ ಬಂದು ತನ್ನ ಗಂಡನನ್ನು ಬಿಡಿಸಬೇಕೆಂದು ಆ ಇನ್ನೊಬ್ಬನ ಜನನೇಂದ್ರಿಯವನ್ನು ಹಿಡಿದುಕೊಂಡರೆ,೧೨ [12]ಅವಳ ಕೈ ಕಡಿದುಹಾಕಿಸಬೇಕು; ಅವಳಿಗೆ ಕನಿಕರ ತೋರಿಸಬಾರದು.೧೩ [13]“ಹೆಚ್ಚುಕಡಿಮೆಯಾಗಿರುವ ಎರಡು ವಿಧವಾದ ಕಳ್ಳತೂಕದ ಬಟ್ಟುಗಳನ್ನು ನಿಮ್ಮ ಚೀಲದಲ್ಲಿಟ್ಟುಕೊಳ್ಳಬೇಡಿ.೧೪ [14]ಹೆಚ್ಚುಕಡಿಮೆಯಾದ ಎರಡು ವಿಧವಾದ ಕಳ್ಳಸೇರುಗಳು ನಿಮ್ಮ ಮನೆಯಲ್ಲಿರಬಾರದು.೧೫ [15]ನಿಮ್ಮ ತೂಕದ ಬಟ್ಟೂ, ನಿಮ್ಮ ಅಳತೆಯ ಸೇರೂ ನ್ಯಾಯವಾಗಿಯೇ ಇರಬೇಕು. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡಿನಲ್ಲಿ ಬಹುಕಾಲ ಬಾಳುವಿರಿ.೧೬ [16]ನ್ಯಾಯ ವಿರುದ್ಧವಾದ ಅಳತೆತೂಕಗಳನ್ನು ಮಾಡುವವರೆಲ್ಲರು ನಿಮ್ಮ ದೇವರಾದ ಸರ್ವೇಶ್ವರನಿಗೆ ಹೇಯವಾಗಿದ್ದಾರೆ.೧೭ [17]“ನೀವು ಈಜಿಪ್ಟ್ ದೇಶದಿಂದ ಬರುವಾಗ ದಾರಿಯಲ್ಲಿ ಅಮಾಲೇಕ್ಯರು ನಿಮ್ಮನ್ನು ಎದುರಿಸಿದ್ದನ್ನು ಜ್ಞಾಪಿಸಿಕೊಳ್ಳಿ.೧೮ [18]ಅವರು ದೇವರಲ್ಲಿ ಸ್ವಲ್ಪವೂ ಭಯಭಕ್ತಿಯಿಲ್ಲದವರು; ನೀವು ದಣಿದು ಬಳಲಿದ್ದಾಗ ನಿಮ್ಮವರಲ್ಲಿ ಹಿಂದೆಬಿದ್ದ ಬಲಹೀನರನ್ನು ಸಂಹಾರಮಾಡಿದರು.೧೯ [19]ಆದಕಾರಣ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡಿನಲ್ಲಿ ನಿಮ್ಮನ್ನು ಸೇರಿಸಿ, ಸುತ್ತಲು ಯಾವ ಶತ್ರುಗಳೂ ಇಲ್ಲದಂತೆ ಮಾಡಿದಾಗ, ಜಗದಲ್ಲಿ ಅಮಾಲೇಕ್ಯರ ಹೆಸರೇ ಉಳಿಯದಂತೆ ಮಾಡಬೇಕು; ಇದನ್ನು ಮರೆಯಬೇಡಿ.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಧರ್ಮೋಪದೇಷಕಾಂಡ ೨೫ 00:00:00 00:00:00 0.5x 2.0x https://beblia.bible:81/BibleAudio/kannadakncl/deuteronomy/025.mp3 34 25