× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಧರ್ಮೋಪದೇಷಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೯ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭1 1 1 ಕನ್ನಡ ಬೈಬಲ್ (KNCL) 2016 ಧರ್ಮೋಪದೇಷಕಾಂಡ ೨೯ ಟಿಪ್ಪಣಿಗಳನ್ನು ಉಳಿಸಿ ೧ [1]ಸರ್ವೇಶ್ವರಸ್ವಾಮಿ ಹೋರೇಬಿನಲ್ಲಿ ಇಸ್ರಯೇಲರೊಡನೆ ಮಾಡಿದ ಒಡಂಬಡಿಕೆ ಅಲ್ಲದೆ ಅವರು ಮೋವಾಬ್ ನಾಡಿನಲ್ಲಿ ಅವರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ಒಡಂಬಡಿಕೆಯ ವಚನಗಳು ಇವು:೨ [2]ಮೋಶೆ ಇಸ್ರಯೇಲರೆಲ್ಲರನ್ನು ಕರೆದು ಹೀಗೆಂದನು, “ಸರ್ವೇಶ್ವರ ಈಜಿಪ್ಟ್ ದೇಶದಲ್ಲಿ ನಿಮ್ಮ ಕಣ್ಣಮುಂದೆ ಫರೋಹನಿಗೂ ಅವನ ಪರಿವಾರದವರಿಗೂ೩ [3]ಅವನ ಇಡೀ ನಾಡಿಗೂ ಮಾಡಿದವುಗಳನ್ನೆಲ್ಲಾ ನೀವು ನೋಡಿದ್ದೀರಿ. ಮಹಾಪರಿಶೋಧನೆ, ಪವಾಡ, ಮಹತ್ಕಾರ್ಯ ಇವುಗಳನ್ನು ಕಣ್ಣಾರೆ ನೋಡಿದ್ದೀರಿ.೪ [4]ಆದರೂ ಗ್ರಹಿಸುವ ಬುದ್ಧಿ, ನೋಡುವ ಕಣ್ಣು, ಕೇಳುವ ಕಿವಿ ಇವುಗಳನ್ನು ಸರ್ವೇಶ್ವರ ಇಂದಿನವರೆಗೂ ಅಯ್ಯೋ ನಿಮಗೆ ಅನುಗ್ರಹಿಸಲಿಲ್ಲ!೫ [5]ನಲವತ್ತು ವರ್ಷ ನಾನು ನಿಮ್ಮನ್ನು ಮರುಭೂಮಿಯಲ್ಲಿ ನಡೆಸಿಕೊಂಡು ಬಂದಿದ್ದೇನೆ. ನಿಮ್ಮ ಮೈಮೇಲಿದ್ದ ಉಡುಪಾಗಲಿ, ಕಾಲಲ್ಲಿದ್ದ ಕೆರವಾಗಲಿ ಸವೆದುಹೋಗಲಿಲ್ಲ.೬ [6]ನೀವು ರೊಟ್ಟಿ ತಿನ್ನಲಿಲ್ಲ; ದ್ರಾಕ್ಷಾರಸವನ್ನಾಗಲಿ ಯಾವ ಮದ್ಯವನ್ನಾಗಲಿ ಕುಡಿಯಲೇ ಇಲ್ಲ. ಸರ್ವೇಶ್ವರನೇ ನಿಮ್ಮ ದೇವರು ಎಂಬುದು ನಿಮಗೆ ತಿಳಿಯಬೇಕೆಂಬ ಉದ್ದೇಶದಿಂದ ಹೀಗಾಯಿತು.೭ [7]ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸ ಸೀಹೋನನೂ ಬಾಷಾನಿನ ಅರಸ ಓಗನೂ ನಮ್ಮೊಡನೆ ಯುದ್ಧಮಾಡುವುದಕ್ಕೆ ಬಂದರು.೮ [8]ನಾವು ಅವರನ್ನು ಸೋಲಿಸಿ ಅವರ ರಾಜ್ಯಗಳನ್ನು ಸ್ವಾಧೀನಮಾಡಿಕೊಂಡು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಕುಲದವರಲ್ಲಿ ಅರ್ಧಜನರಿಗೂ ಸೊತ್ತಾಗಿ ಕೊಟ್ಟೆವಷ್ಟೆ.೯ [9]ಈ ಸಂಗತಿಗಳನ್ನೆಲ್ಲಾ ನೀವು ಜ್ಞಾಪಕಮಾಡಿಕೊಂಡು ಈ ಒಡಂಬಡಿಕೆಯ ವಾಕ್ಯಗಳನ್ನು ಅನುಸರಿಸಿ ನಡೆಯಬೇಕು; ಆಗ ನೀವು ನಡೆಸುವ ಕೆಲಸಕಾರ್ಯಗಳಲ್ಲಿ ಜಾಣರಾಗಿ ಅಭಿವೃದ್ಧಿ ಹೊಂದುವಿರಿ.೧೦ [10]“ಇಸ್ರಯೇಲ ಜನರೇ, ನಿಮ್ಮ ಮುಖ್ಯಸ್ಥರು,೧೧ [11]ಗೋತ್ರದವರು, ಹಿರಿಯರು, ಅಧಿಕಾರಿಗಳು, ಹೆಂಗಸರು, ಮಕ್ಕಳು ನಿಮ್ಮ ಪಾಳೆಯದಲ್ಲಿ ಇರುವ ಅನ್ಯರಾದ ಕಟ್ಟಿಗೆಯವರು, ನೀರಿನವರು ಮುಂತಾದ ಆಳುಗಳು,೧೨ [12]ನೀವೆಲ್ಲರೂ ಈ ದಿನ ನಿಮ್ಮ ದೇವರಾದ ಸರ್ವೆಶ್ವರನ ಸನ್ನಿಧಿಯಲ್ಲಿ ನಿಂತಿರುವುದಕ್ಕೆ ಕಾರಣವೇನೆಂದರೆ - ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಹೇಳಿದಂತೆ ಹಾಗು ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ವಾಗ್ದಾನಮಾಡಿದಂತೆ ನಿಮ್ಮನ್ನು ತಮಗೆ ಸ್ವಕೀಯ ಜನರನ್ನಾಗಿಯೂ ತಮ್ಮನ್ನು ನಿಮಗೆ ದೇವರನ್ನಾಗಿಯೂ ಸ್ಥಾಪಿಸಿಕೊಳ್ಳುವುದಕ್ಕಾಗಿ ಈಗ ನಿಮ್ಮೊಡನೆ ಪ್ರಮಾಣಪೂರ್ವಕವಾದ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳಬೇಕೆಂದಿದ್ದಾರೆ; ನೀವು ಅದಕ್ಕೆ ಸೇರಲು ಕೂಡಿಬಂದಿದ್ದೀರಿ.೧೩ [13]“ನಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಿದ್ಧರಾಗಿ ನಿಂತಿರುವ ನಮ್ಮೊಡನೆ ಮಾತ್ರವಲ್ಲದೆ, ಮುಂದೆ ಹುಟ್ಟುವ ನಮ್ಮ ಸಂತತಿಯವರೊಡನೆಯೂ ಪ್ರಮಾಣಪೂರ್ವಕವಾದ ಈ ಒಡಂಬಡಿಕೆಯನ್ನು ಮಾಡಿಕೊಳ್ಳಬೇಕೆಂದಿದ್ದಾರೆ.೧೪ [14]ನಾವು ಈಜಿಪ್ಟ್ ದೇಶದಲ್ಲಿ ವಾಸಮಾಡಿದ್ದು, ಅನೇಕ ಜನಾಂಗಗಳ ಪ್ರದೇಶಗಳನ್ನು ದಾಟಿಬಂದದ್ದು ನಿಮಗೆ ತಿಳಿದೇ ಇದೆ.೧೫ [15]ಆ ಜನಾಂಗಗಳಲ್ಲಿ ನಡೆಯುವ ಹೇಯಾಚಾರಗಳನ್ನೂ ಅವರು ಮರ, ಕಲ್ಲು, ಬೆಳ್ಳಿ, ಬಂಗಾರಗಳಿಂದ ಮಾಡಿಕೊಂಡು ಪೂಜಿಸುವ ಬೊಂಬೆಗಳನ್ನೂ ನೀವು ಖಂಡಿತವಾಗಿ ನೋಡಿದ್ದೀರಿ.೧೬ [16]“ಎಚ್ಚರಿಕೆಯಿಂದಿರಿ! ನಮ್ಮ ದೇವರಾದ ಸರ್ವೇಶ್ವರನನ್ನು ಬಿಟ್ಟು, ಆ ಜನಾಂಗಗಳ ದೇವರುಗಳನ್ನು ಅವಲಂಬಿಸುವ ಯಾವ ಕುಲವಾಗಲಿ, ಕುಟುಂಬವಾಗಲಿ, ಸ್ತ್ರೀಪುರುಷರಾಗಲಿ ನಿಮ್ಮಲ್ಲಿ ಇರಲೇಬಾರದು; ನಿಮ್ಮಲ್ಲಿ ಯಾವ ವಿಷಲತೆಯ ಬೇರೂ ಇರಬಾರದು.೧೭ [17]ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರು ತನ್ನೊಳಗೆ, ‘ನಾನು ಹಟಹಿಡಿದು ಅವಿಧೇಯನಾದರೂ ನನಗೆ ಕ್ಷೇಮವಾಗಿಯೇ ಇರುವುದು’ ಎಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ನಿರ್ದೋಷಿಗಳಿಗೂ ನಾಶವನ್ನುಂಟು ಮಾಡುವನು.೧೮ [18]ಸರ್ವೇಶ್ವರ ಅಂಥವನನ್ನು ಎಂದಿಗೂ ಕ್ಷಮಿಸರು; ಬದಲಿಗೆ ಅವನ ಮೇಲೆ ಸಿಟ್ಟುಗೊಂಡು, ತಮ್ಮ ಗೌರವವನ್ನು ಕಾಪಾಡಿಕೊಳ್ಳುವವರಾಗಿ, ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸುವರು. ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವರು.೧೯ [19]ಈ ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಬಂಧನೆಯನ್ನು ಮೀರುವವರಿಗೆ ಉಂಟಾಗುವ ಶಾಪಗಳು ಅವನಲ್ಲಿ ನೆರವೇರಲೆಂದು ಸರ್ವೇಶ್ವರ ಅವನನ್ನು ಇಸ್ರಯೇಲರ ಎಲ್ಲ ಕುಲಗಳಿಂದ ಪ್ರತ್ಯೇಕಿಸಿ, ದಂಡಿಸುವರು.೨೦ [20]“ಮುಂದೆ ಹುಟ್ಟುವ ನಿಮ್ಮ ಸಂತತಿಯವರೂ ದೇಶಾಂತರಗಳಿಂದ ಬರುವ ಅನ್ಯರೂ ನಿಮ್ಮ ನಾಡಿಗೆ ಸರ್ವೇಶ್ವರ ಉಂಟುಮಾಡಿದ ರೋಗೋಪದ್ರವಗಳನ್ನು ಕಂಡು ಆಶ್ಚರ್ಯಪಡುವರು.೨೧ [21]ಎಲ್ಲ ಜನಾಂಗಗಳವರೂ ನಿಮ್ಮ ಆ ನಾಡು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ನೋಡುವರು. ಸರ್ವೇಶ್ವರ ಮಹಾಕೋಪದಿಂದ ಕೆಡವಿದ ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟುಹೋಗಿರುವುದನ್ನೂ ಎಲ್ಲ ಕಡೆಗಳಲ್ಲೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನೂ ನೋಡುವರು.೨೨ [22]‘ಸರ್ವೇಶ್ವರ ಈ ನಾಡಿಗೆ ಹೀಗೆ ಮಾಡಿದ್ದೇಕೆ? ಇಂಥ ಕೋಪಾಗ್ನಿಗೆ ಕಾರಣ ಏನಿರಬಹುದು?’ ಎಂದು ವಿಚಾರಿಸುವರು.೨೩ [23]ಅದಕ್ಕೆ ಜನರು, ‘ಈ ನಾಡಿನವರ ಪಿತೃಗಳ ದೇವರಾದ ಸರ್ವೇಶ್ವರ ಅವರನ್ನು ಈಜಿಪ್ಟ್ ದೇಶದಿಂದ ಬಿಡಿಸಿ ಅವರೊಡನೆ ಮಾಡಿದ ಒಡಂಬಡಿಕೆಯನ್ನು ಅವರು ಉಲ್ಲಂಘಿಸಿದರು.೨೪ [24]ತಮಗೆ ನೇಮಕವಾಗದಿದ್ದ ಹಾಗು ಗೊತ್ತಿಲ್ಲದಿದ್ದ ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರು.೨೫ [25]ಆದುದರಿಂದ ಸರ್ವೇಶ್ವರ ಅವರ ನಾಡಿನ ಮೇಲೆ ಕೋಪಗೊಂಡು ಈ ಗ್ರಂಥದಲ್ಲಿ ಬರೆದಿರುವ ಶಾಪಗಳನ್ನು ಅವರ ಮೇಲೆ ಬರಮಾಡಿದ್ದಾರೆ;೨೬ [26]ಮಹಾಕೋಪೋದ್ರೇಕದಿಂದ ಆ ಜನರನ್ನು ನಾಡಿನಿಂದ ಕಿತ್ತುಹಾಕಿ ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರ ಅಟ್ಟಿಬಿಟ್ಟಿ ಇದ್ದಾರೆ’ ಎಂದು ಉತ್ತರಕೊಡುವರು.೨೭ [27]“ರಹಸ್ಯವಾದವುಗಳು ನಮ್ಮ ದೇವರಾದ ಸರ್ವೇಶ್ವರನಿಗೆ ಸೇರಿದವು. ಆದರೆ ಅವರಿಂದ ಪ್ರಕಟವಾದವುಗಳು ಸದಾ ನಮ್ಮ ಮತ್ತು ನಮ್ಮ ಸಂತತಿಯವರ ಪಾಲಾಗಿರುವುವು; ಆದುದರಿಂದ ನಾವು ಈ ಧರ್ಮಶಾಸ್ತ್ರನಿಯಮಗಳನ್ನು ಅನುಸರಿಸಿ ನಡೆಯಬೇಕಾದ ಹಂಗಿನಲ್ಲಿದ್ದೇವೆ.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಧರ್ಮೋಪದೇಷಕಾಂಡ ೨೯ 00:00:00 00:00:00 0.5x 2.0x https://beblia.bible:81/BibleAudio/kannadakncl/deuteronomy/029.mp3 34 29