× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಫಿಲಿಪಿಯರಿಗೆ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧೨೩೪1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦1 1 1 ಕನ್ನಡ ಬೈಬಲ್ (KNCL) 2016 ಫಿಲಿಪಿಯರಿಗೆ ೧ ಟಿಪ್ಪಣಿಗಳನ್ನು ಉಳಿಸಿ ೧ [1]ಕ್ರಿಸ್ತಯೇಸುವಿನಲ್ಲಿ ಜೀವಿಸುವ ಫಿಲಿಪ್ಪಿಯ ದೇವಜನರಿಗೆ, ಧರ್ಮಾಧಿಕಾರಿಗಳಿಗೆ ಹಾಗೂ ಧರ್ಮಸೇವಕರಿಗೆ - ಕ್ರಿಸ್ತಯೇಸುವಿನ ದಾಸರಾದ ಪೌಲ ಮತ್ತು ತಿಮೊಥೇಯರು ಜೊತೆಗೂಡಿ ಬರೆಯುವ ಪತ್ರ.೨ [2]ನಮ್ಮೆಲ್ಲರ ಪಿತನಾದ ದೇವರ ಮತ್ತು ಪ್ರಭುವಾದ ಯೇಸುಕ್ರಿಸ್ತರ ಆಶೀರ್ವಾದವೂ ಶಾಂತಿಸಮಾಧಾನವೂ ನಿಮಗೆ ಲಭಿಸಲಿ!೩ [3]ನಿಮ್ಮನ್ನು ಜ್ಞಾಪಿಸಿಕೊಳ್ಳುವಾಗಲೆಲ್ಲ ನಾನು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.೪ [4]ನಿಮಗೋಸ್ಕರ ಯಾವಾಗಲೂ ತುಂಬುಹೃದಯದಿಂದ ಪ್ರಾರ್ಥಿಸುತ್ತೇನೆ.೫ [5]ಏಕೆಂದರೆ, ನಾನು ನಿಮ್ಮನ್ನು ಸಂಧಿಸಿದ ಮೊದಲ ದಿನದಿಂದ ಇಂದಿನವರೆಗೂ ನೀವು ನನ್ನೊಡನೆ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ಸಹಕರಿಸುತ್ತಿರುವಿರಿ.೬ [6]ಈ ಸತ್ಕಾರ್ಯವನ್ನು ನಿಮ್ಮಲ್ಲಿ ಪ್ರಾರಂಭಿಸಿದ ದೇವರು ಅದನ್ನು ಮುಂದುವರೆಸುತ್ತಾ, ಯೇಸುಕ್ರಿಸ್ತರು ಪುನರಾಗಮಿಸುವಷ್ಟರಲ್ಲಿ ಪೂರೈಸುವರು ಎಂಬುದೇ ನನ್ನ ದೃಢ ನಂಬಿಕೆ.೭ [7]ನೀವು ನನಗೆ ಆತ್ಮೀಯರು. ಆದಕಾರಣ, ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. ನಾನು ಸೆರೆಯಲ್ಲಿರುವಾಗಲೂ ಶುಭಸಂದೇಶಕ್ಕಾಗಿ ಹೋರಾಡಿ ಆದನ್ನು ಸ್ಥಿರಗೊಳಿಸುವಾಗಲೂ ದೇವರ ಅನುಗ್ರಹದಲ್ಲಿ ನೀವು ನನ್ನೊಂದಿಗೆ ಸಹಭಾಗಿಗಳಾಗಿದ್ದಿರಿ.೮ [8]ಕ್ರಿಸ್ತಯೇಸುವಿನಲ್ಲಿರುವ ಉತ್ಕಟ ಪ್ರೀತಿಯಿಂದಲೇ ನಾನು ನಿಮ್ಮೆಲ್ಲರಿಗಾಗಿ ಹಂಬಲಿಸುತ್ತಿದ್ದೇನೆ; ಇದಕ್ಕೆ ದೇವರೇ ಸಾಕ್ಷಿ.೯ [9]ನೀವು ಪ್ರೀತಿಯಲ್ಲಿ ಪ್ರವರ್ಧಿಸುತ್ತಾ, ಪೂರ್ಣ ಜ್ಞಾನ ಹಾಗೂ ವಿವೇಕದಿಂದ ಕೂಡಿದವರಾಗಬೇಕೆಂಬುದೇ ನನ್ನ ಪ್ರಾರ್ಥನೆ.೧೦ [10]ಹೀಗೆ ನೀವು ಉತ್ತಮೋತ್ತಮವಾದುವುಗಳನ್ನೇ ಆರಿಸಿಕೊಂಡು, ಪ್ರಭು ಕ್ರಿಸ್ತರ ದಿನದಂದು ನಿರ್ದೋಷಿಗಳೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಿರಿ.೧೧ [11]ಯೇಸುಕ್ರಿಸ್ತರ ಮುಖಾಂತರ ಲಭಿಸುವ ಸತ್ಸಂಬಂಧದ ಫಲಗಳಿಂದ ತುಂಬಿದವರಾಗಿ ದೇವರಿಗೆ ಸ್ತುತಿಸಲ್ಲಿಸಿ, ಅವರ ಮಹಿಮೆ ಬೆಳಗುವಂತೆ ಮಾಡುವಿರಿ.೧೨ [12]ಸಹೋದರರೇ, ನನಗೆ ಬಂದೊದಗಿರುವುದೆಲ್ಲವೂ ಶುಭಸಂದೇಶದ ಬೆಳವಣಿಗೆಗೆ ಹಿತಕರವಾಗಿ ಪರಿಣಮಿಸಿದೆ. ಇದು ನಿಮಗೆ ತಿಳಿದಿರಬೇಕೆಂಬುದೇ ನನ್ನ ಆಶಯ.೧೩ [13]ಯೇಸುಕ್ರಿಸ್ತರ ಸಲುವಾಗಿಯೇ ನಾನು ಸೆರೆಯಲ್ಲಿರುವುದೆಂದು ಇಲ್ಲಿಯ ಅರಮನೆಯ ಕಾವಲಾಳುಗಳಿಗೂ ಇತರರೆಲ್ಲರಿಗೂ ಚೆನ್ನಾಗಿ ತಿಳಿದಿದೆ.೧೪ [14]ನನ್ನ ಬಂಧನದಿಂದಾಗಿ ನಮ್ಮ ಸಹೋದರರಲ್ಲಿ ಅನೇಕರು ದೇವರಲ್ಲಿ ಭರವಸೆಯಿಟ್ಟಿರುವರು. ಅಳುಕಿಲ್ಲದೆ, ಅಂಜಿಕೆಯಿಲ್ಲದೆ ದಿಟ್ಟತನದಿಂದ ಶುಭಸಂದೇಶವನ್ನು ಅವರು ಸಾರುತ್ತಿರುವರು.೧೫ [15]ಕೆಲವರೇನೋ ಅಸೂಯೆಯಿಂದಲೂ ವೈಮನಸ್ಸಿನಿಂದಲೂ ಕ್ರಿಸ್ತಯೇಸುವನ್ನು ಸಾರುತ್ತಿರುವುದು ನಿಜ; ಆದರೆ ಮಿಕ್ಕವರು ಸದುದ್ದೇಶದಿಂದ ಸಾರುತ್ತಿದ್ದಾರೆ;೧೬ [16]ಒಲವಿನ ಒತ್ತಾಯದಿಂದ ಸಾರುತ್ತಿದ್ದಾರೆ; ಶುಭಸಂದೇಶದ ಸತ್ಯವನ್ನು ಸಮರ್ಥಿಸುವುದಕ್ಕಾಗಿ ನಾನು ಬಂಧಿತನೆಂದು ಇವರು ಬಲ್ಲರು.೧೭ [17]ಆ ಕೆಲವರಾದರೋ ಸ್ವಾರ್ಥಸಾಧನೆಗಾಗಿಯೇ ಹೊರತು ಪ್ರಾಮಾಣಿಕರಾಗಿ ಕ್ರಿಸ್ತಯೇಸುವನ್ನು ಸಾರುತ್ತಿಲ್ಲ. ಸೆರೆಯಲ್ಲಿರುವ ನನ್ನನ್ನು ಇನ್ನೂ ಹೆಚ್ಚಿನ ಕಷ್ಟಕ್ಕೆ ಗುರಿಮಾಡಬೇಕೆಂಬುದೇ ಅವರ ಉದ್ದೇಶ.೧೮ [18]ಅವರ ಉದ್ದೇಶ ಏನೇ ಆಗಿರಲಿ, ನನಗದು ಮುಖ್ಯವಲ್ಲ. ಕ್ರಿಸ್ತಯೇಸುವನ್ನು ಅವರು ಸಾರುತ್ತಿರುವುದೇ ನನಗೆ ಸಂತೋಷ.೧೯ [19]ಹೌದು, ನನಗದು ತುಂಬಾ ಸಂತೋಷದ ವಿಷಯ. ನಿಮ್ಮ ಪ್ರಾರ್ಥನಾ ಫಲದಿಂದಲೂ ಯೇಸುಕ್ರಿಸ್ತರು ಕೊಡುವ ಆತ್ಮದ ನೆರವಿನಿಂದಲೂ ನನಗೆ ಬಿಡುಗಡೆ ಖಚಿತವೆಂದು ಬಲ್ಲೆ.೨೦ [20]ನನ್ನ ಕರ್ತವ್ಯಪಾಲನೆಯಲ್ಲಿ ನಾಚುವಂಥ ಸಂದರ್ಭವು ನನಗೆಂದಿಗೂ ಬರದೆಂದು ಬಲ್ಲೆ; ನಾನು ಬದುಕಿದರೂ ಸರಿ, ಸತ್ತರೂ ಸರಿ; ನನ್ನ ದೇಹದ ಮೂಲಕ ಕ್ರಿಸ್ತಯೇಸುವಿಗೆ ಎಂದಿನಂತೆ ಈಗಲೂ ಮಹಿಮೆ ಉಂಟಾಗಬೇಕೆಂಬುದೇ ನನ್ನ ಉತ್ಕಟ ಆಕಾಂಕ್ಷೆ ಹಾಗೂ ನಿರೀಕ್ಷೆ.೨೧ [21]ನನಗಂತೂ ಬದುಕುವುದೆಂದರೆ ಕ್ರಿಸ್ತಯೇಸುವೇ; ಸಾಯುವುದು ಲಾಭವೇ.೨೨ [22]ದೈಹಿಕವಾಗಿ ಬದುಕುವುದು ಫಲಪ್ರದವಾಗಿದ್ದರೆ, ನಾನು ಬದುಕುವುದು ಉತ್ತಮವೋ ಅಥವಾ ಸಾಯುವುದು ಸೂಕ್ತವೋ ನನಗೆ ತಿಳಿಯದು.೨೩ [23]ಉಭಯ ಸಂಕಟಕ್ಕೆ ಸಿಲುಕಿದ್ದೇನೆ. ಒಂದು ಕಡೆ, ಈ ಬದುಕನ್ನು ತೊರೆದು ಕ್ರಿಸ್ತಯೇಸುವಿನೊಡನೆ ಒಂದಾಗಿರಬೇಕೆಂಬುದೇ ನನ್ನ ಬಯಕೆ. ಇದು ಎಷ್ಟೋ ಮೇಲಾದುದು.೨೪ [24]ಮತ್ತೊಂದು ಕಡೆ, ನಿಮಗೋಸ್ಕರ ಇಹದಲ್ಲಿದ್ದು ಜೀವಿಸುವುದು ಅತ್ಯವಶ್ಯಕವಾಗಿದೆ.೨೫ [25]ಇದರಲ್ಲಿ ನನಗೆ ಎಳ್ಳಷ್ಟೂ ಸಂದೇಹವಿಲ್ಲ. ಈ ಕಾರಣ, ನಾನು ಇಹದಲ್ಲಿ ಉಳಿಯುವೆನೆಂದು ಬಲ್ಲೆ. ನಿಮ್ಮೆಲ್ಲರೊಡನಿದ್ದು, ಕ್ರೈಸ್ತವಿಶ್ವಾಸದಲ್ಲಿ ನೀವು ವೃದ್ಧಿಯಾಗಿ ಆನಂದಿಸುವಂತೆ ನಿಮಗೆ ನೆರವಾಗುತ್ತೇನೆ.೨೬ [26]ನಿಮ್ಮಲ್ಲಿಗೆ ನಾನು ಮರಳಿಬಂದಾಗ ಕ್ರಿಸ್ತಯೇಸುವಿನಲ್ಲಿ ನೀವು ಹಿರಿಹಿಗ್ಗುವುದಕ್ಕೆ ಮಹದವಕಾಶ ದೊರಕುವುದು.೨೭ [27]ಅದೇನೇ ಇರಲಿ, ನೀವು ಮಾತ್ರ ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯೋಗ್ಯರಾಗಿ ನಡೆದುಕೊಳ್ಳಿರಿ. ನಾನು ನಿಮ್ಮಲ್ಲಿಗೆ ಬಂದರೂ ಸರಿ, ಬಾರದಿದ್ದರೂ ಸರಿ, ಇದು ಮುಖ್ಯವಲ್ಲ. ಶುಭಸಂದೇಶವು ನೀಡುವ ವಿಶ್ವಾಸಕ್ಕಾಗಿ ನೀವು ಒಮ್ಮನಸ್ಸಿನಿಂದ, ಕೆಚ್ಚಿನಿಂದ ಹೋರಾಡುವುದೇ ಮುಖ್ಯ. ಇದು ನನಗೆ ತಿಳಿದುಬಂದರೆ ಅಷ್ಟೇ ಸಾಕು.೨೮ [28]ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲೂ ಅಂಜದೆ, ಅಳುಕದೆ ಧೈರ್ಯದಿಂದಿರಿ. ಇದೇ ಅವರಿಗೆ ಅವರ ವಿನಾಶದ ಸ್ಪಷ್ಟ ಮುನ್ಸೂಚನೆ! ನಿಮಗೆ ದೇವರಿಂದ ಬರುವ ಸಂರಕ್ಷಣೆಯ ಮುನ್ಸೂಚನೆ.೨೯ [29]ಕ್ರಿಸ್ತಯೇಸುವನ್ನು ನೀವು ವಿಶ್ವಾಸಿಸುವುದು ಮಾತ್ರವಲ್ಲ, ಅವರಿಗೋಸ್ಕರ ಸಂಕಷ್ಟಗಳನ್ನು ಅನುಭವಿಸುವ ಸೌಭಾಗ್ಯವೂ ನಿಮ್ಮದಾಗಿದೆ.೩೦ [30]ನಿಮ್ಮ ಹೋರಾಟವೂ ನಮ್ಮ ಹೋರಾಟವೂ ಒಂದೇ ಆಗಿದೆ. ನಾನು ಕ್ರಿಸ್ತಯೇಸುವಿಗಾಗಿ ಪಟ್ಟ ಕಷ್ಟವನ್ನು ನೀವು ಕಂಡಿದ್ದೀರಿ. ಈಗಲೂ ಅನುಭವಿಸುತ್ತಿದ್ದೇನೆಂದು ಅರಿತಿದ್ದೀರಿ.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಫಿಲಿಪಿಯರಿಗೆ ೧ 00:00:00 00:00:00 0.5x 2.0x https://beblia.bible:81/BibleAudio/kannadakncl/philippians/001.mp3 4 1