× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಕೊಲೊಸ್ಸೆಯರಿಗೆ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧೨೩೪1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯1 1 1 ಕನ್ನಡ ಬೈಬಲ್ (KNCL) 2016 ಕೊಲೊಸ್ಸೆಯರಿಗೆ ೧ ಟಿಪ್ಪಣಿಗಳನ್ನು ಉಳಿಸಿ ೧ [1]ಕೊಲೊಸ್ಸೆಯಲ್ಲಿರುವ ದೇವಜನರಿಗೆ ಹಾಗೂ ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಸಹೋದರರಿಗೆ -೨ [2]ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾದ ಪೌಲನು ಮತ್ತು ಸಹೋದರ ತಿಮೊಥೇಯನು ಬರೆಯುವ ಪತ್ರ. ನಮ್ಮ ತಂದೆಯಾದ ದೇವರ ಅನುಗ್ರಹವೂ ಶಾಂತಿ ಸಮಾಧಾನವೂ ನಿಮ್ಮಲ್ಲಿರಲಿ!೩ [3]ನೀವು ಪ್ರಭು ಯೇಸುಕ್ರಿಸ್ತರಲ್ಲಿ ಇಟ್ಟಿರುವ ವಿಶ್ವಾಸ ಹಾಗೂ ದೇವಜನರಲ್ಲಿ ನೀವು ಇರಿಸಿರುವ ಪ್ರೀತಿ ಇವುಗಳ ಬಗ್ಗೆ ನಾವು ಕೇಳಿದ್ದೇವೆ. ಇದಕ್ಕಾಗಿ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಲ್ಲಿ ಪ್ರಾರ್ಥಿಸುವಾಗಲೆಲ್ಲ ನಿಮಗಾಗಿ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.೪ [4]***೫ [5]ಸತ್ಯ ವಾಕ್ಯದ, ಅಂದರೆ ಶುಭಸಂದೇಶದ ಮೂಲಕ ನೀವು ಕೇಳಿ ತಿಳಿದಂಥ ಹಾಗೂ ನಿರೀಕ್ಷಿಸುವಂಥ ಸೌಭಾಗ್ಯವನ್ನು ಸ್ವರ್ಗಲೋಕದಲ್ಲಿ ನಿಮಗಾಗಿ ಕಾದಿರಿಸಲಾಗಿದೆ.೬ [6]ದೇವಾನುಗ್ರಹದ ಸತ್ಯಾರ್ಥವನ್ನು ನೀವು ತಿಳಿದ ದಿನದಿಂದಲೂ ನಿಮ್ಮಲ್ಲಿ ಶುಭಸಂದೇಶವು ಹೇಗೆ ಫಲಭರಿತವಾಗುತ್ತಿದೆಯೋ ಹಾಗೆ ಈ ಶುಭಸಂದೇಶವು ಜಗತ್ತಿನ ಎಲ್ಲೆಡೆಯೂ ಹಬ್ಬಿಹರಡುತ್ತಲಿದೆ.೭ [7]ಈ ಶುಭಸಂದೇಶವನ್ನು ಕ್ರಿಸ್ತಯೇಸುವಿನ ನಂಬಿಕಸ್ಥ ದಾಸನೂ ನಮ್ಮ ಜೊತೆಯ ಸೇವಕನೂ ಆದ ಎಪಫ್ರನಿಂದ ಕಲಿತುಕೊಂಡಿದ್ದೀರಿ.೮ [8]ಪವಿತ್ರಾತ್ಮ ಅವರು ನಿಮಗೆ ಅನುಗ್ರಹಿಸಿದ ಪ್ರೀತಿಯ ಬಗ್ಗೆ ನಮಗೆ ತಿಳಿಸಿದವನು ಸಹ ಆತನೇ.೯ [9]ಹೀಗಿರುವುದರಿಂದ ಈ ವಿಷಯವನ್ನು ನಾವು ಕೇಳಿದ ದಿನದಿಂದಲೂ ನಿಮಗಾಗಿ ಸದಾ ಪ್ರಾರ್ಥಿಸುತ್ತಲೇ ಇದ್ದೇವೆ. ನೀವು ಪರಿಪೂರ್ಣ ವಿವೇಕದಿಂದಲೂ ಆಧ್ಯಾತ್ಮಿಕ ಜ್ಞಾನದಿಂದಲೂ ದೇವರ ಚಿತ್ತವನ್ನು ಸಂಪೂರ್ಣವಾಗಿ ಅರಿಯಬೇಕೆಂಬುದೇ ನಮ್ಮ ಕೋರಿಕೆ.೧೦ [10]ಆಗ ಎಲ್ಲ ವಿಷಯಗಳಲ್ಲಿಯೂ ಪ್ರಭುಯೇಸು ಮೆಚ್ಚುವ ರೀತಿಯಲ್ಲಿ ನೀವು ಜೀವಿಸುವಿರಿ. ನಾನಾ ತರಹದ ಸತ್ಕಾರ್ಯಗಳನ್ನು ಕೈಗೊಳ್ಳುವಿರಿ. ಸತ್ಫಲವನ್ನೀಯುವ ದೈವಜ್ಞಾನದಲ್ಲಿ ವೃದ್ಧಿಹೊಂದುವಿರಿ.೧೧ [11]ದೇವರ ಮಹಿಮಾಶಕ್ತಿಯಿಂದ ನೀವು ಬಲಗೊಂಡು ಎಲ್ಲವನ್ನೂ ತಾಳ್ಮೆಯಿಂದಲೂ ಸಮಾಧಾನದಿಂದಲೂ ಸಹಿಸಿಕೊಳ್ಳುವಿರಿ.೧೨ [12]ಪಿತನಿಗೆ ಹರ್ಷದಿಂದ ಕೃತಜ್ಞತಾಸ್ತುತಿ ಸಲ್ಲಿಸುವಿರಿ. ಏಕೆಂದರೆ, ಬೆಳಕಿನಲ್ಲಿರುವ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯದಲ್ಲಿ ಪಾಲುಗಾರರಾಗಲು ನಿಮ್ಮನ್ನು ಯೋಗ್ಯರನ್ನಾಗಿ ಅವರು ಮಾಡಿದ್ದಾರೆ.೧೩ [13]ದೇವರು ನಮ್ಮನ್ನು ಅಂಧಕಾರದ ಆಡಳಿತದಿಂದ ಬಿಡುಗಡೆಮಾಡಿ ತಮ್ಮ ಪುತ್ರನ ಸಾಮ್ರಾಜ್ಯಕ್ಕೆ ಸುರಕ್ಷಿತವಾಗಿ ತಂದಿದ್ದಾರೆ.೧೪ [14]ಈ ಪುತ್ರನಲ್ಲಿ ನಮಗೆ ಪಾಪಕ್ಷಮೆ ದೊರಕಿದೆ, ವಿಮೋಚನೆ ಲಭಿಸಿದೆ.೧೫ [15]ಅದೃಶ್ಯ ದೇವನ ಸದೃಶ್ಯರೂಪನು ಕ್ರಿಸ್ತ, ಸೃಷ್ಟಿಗೆಲ್ಲ ಜೇಷ್ಠಪುತ್ರನಾತ,೧೬ [16]ಇರಲಿ ಇಹದಲಿ, ಇರಲಿ ಪರದಲಿ, ಅಶರೀರ ಒಡೆಯರಾಗಲಿ, ಒಡೆತನವಾಗಲಿ, ಅಧಿಕಾರಿಗಳಾಗಲಿ, ಆಧಿಪತ್ಯವಾಗಿರಲಿ, ಆದುದೆಲ್ಲವೂ ಆತನಲಿ, ಆತನಿಂದ, ಆತನಿಗಾಗಿ.೧೭ [17]ಎಲ್ಲಕ್ಕೂ ಮೊದಲೇ ಇರುವನಾತ, ಸಮಸ್ತಕ್ಕೂ ಆಧಾರಭೂತ.೧೮ [18]ಸಭೆಯೆಂಬ ಶರೀರಕ್ಕೆ ಶಿರಸ್ಸಾತ, ಆದಿಸಂಭೂತ, ಆಗಲೆಲ್ಲದರಲೂ ಅಗ್ರಸ್ಥ, ಸತ್ತವರಿಂದ ಮೊದಲೆದ್ದು ಬಂದನಾತ.೧೯ [19]ಆ ಸುತನಲ್ಲೇ ಇರಿಸಲು ನಿರ್ಧರಿಸಿದನು ಪಿತದೇವ ತನ್ನ ಸರ್ವಸಂಪೂರ್ಣತೆಯನು.೨೦ [20]ಶಿಲುಬೆಯಿಂದಾತ ಹರಿಸಿದ ರಕುತದಿಂದ ಆಗುತಲಿದೆ ಶಾಂತಿಸಮಾಧಾನ, ನಡೆದಿದೆ ದೇವರೊಡನೆ ಸಂಧಾನ, ಇಹಪರಗಳೆಲ್ಲಕ್ಕೂ ಆತನ ಮುಖೇನ.೨೧ [21]ಹಿಂದೆ, ನೀವು ಆಚಾರ-ವಿಚಾರಗಳಲ್ಲಿ ಕೆಟ್ಟವರಾಗಿದ್ದರಿಂದ ದೇವರ ವಿರೋಧಿಗಳಾಗಿದ್ದು ಅವರಿಂದ ದೂರವಿದ್ದಿರಿ.೨೨ [22]ಈಗಲಾದರೋ ಯೇಸುಕ್ರಿಸ್ತರ ದೈವಿಕ ಮರಣದ ಫಲವಾಗಿ ನಿಮಗೂ ದೇವರಿಗೂ ಸಂಧಾನ ನಡೆದಿದೆ. ಹೀಗೆ ದೇವರು ನಿಮ್ಮನ್ನು ತಮ್ಮ ಸನ್ನಿಧಿಗೆ ಸೇರಿಸಿಕೊಳ್ಳಲು ನೀವು ಪವಿತ್ರರೂ ನಿಷ್ಕಳಂಕರೂ ದೋಷರಹಿತರೂ ಆಗಿರುವಂತೆ ಮಾಡಿದ್ದಾರೆ.೨೩ [23]ಇನ್ನು ನೀವು ವಿಶ್ವಾಸದಲ್ಲಿ ದೃಢವಾಗಿ ಮುನ್ನಡೆಯಬೇಕು. ಶುಭಸಂದೇಶವನ್ನು ಕೇಳಿದಾಗ ನೀವು ಹೊಂದಿದ ಭರವಸೆಯನ್ನು ಕಳೆದುಕೊಳ್ಳದಂತೆ ಜಾಗರೂಕರಾಗಿರಬೇಕು. ಪೌಲನಾದ ನಾನು ಇದೇ ಶುಭಸಂದೇಶದ ಪ್ರಚಾರಕ. ಈ ಶುಭಸಂದೇಶವನ್ನು ಜಗತ್ತಿನಲ್ಲಿರುವ ಸರ್ವಸೃಷ್ಟಿಗೂ ಸಾರಲಾಗುತ್ತಿದೆ.೨೪ [24]ಈಗ ನಿಮಗೋಸ್ಕರ ಸಂಕಟಪಡುವುದರಲ್ಲಿ ನನಗೆ ಸಂತೋಷವಿದೆ. ಕ್ರಿಸ್ತಯೇಸು ತಮ್ಮ ಶರೀರವಾದ ಧರ್ಮಸಭೆಗೋಸ್ಕರ ಅನುಭವಿಸಬೇಕಾದ ಯಾತನೆಗಳಲ್ಲಿ ಉಳಿದದ್ದನ್ನು ನಾನು ನನ್ನ ದೇಹದಲ್ಲಿ ಅನುಭವಿಸಿ ಪೂರ್ಣಗೊಳಿಸುತ್ತಿದ್ದೇನೆ.೨೫ [25]ದೇವರು ನನ್ನನ್ನು ಧರ್ಮಸಭೆಯ ದಾಸನನ್ನಾಗಿ ನೇಮಿಸಿದ್ದಾರೆ. ನಿಮ್ಮ ಹಿತಕ್ಕಾಗಿ ಒಂದು ಮಹತ್ವದ ಕಾರ್ಯವನ್ನು ನನಗೆ ವಹಿಸಿರುತ್ತಾರೆ.೨೬ [26]ಯುಗಯುಗಾಂತರಗಳಿಂದಲೂ ತಲತಲಾಂತರಗಳಿಂದಲೂ ನಿಗೂಢವಾಗಿದ್ದ ರಹಸ್ಯಗಳನ್ನು, ಅಂದರೆ ತಮ್ಮ ವಾಕ್ಯವನ್ನು, ಈಗ ತಮ್ಮ ಜನರಿಗೆ ದೇವರು ಪ್ರಕಟಿಸಿದ್ದಾರೆ.೨೭ [27]ಈ ರಹಸ್ಯ ಎಷ್ಟು ಶ್ರೀಮಂತವಾದುದು, ಎಷ್ಟು ಮಹಿಮಾನ್ವಿತವಾದುದು ಎಂಬುದನ್ನು ಎಲ್ಲಾ ಜನಾಂಗಗಳಿಗೂ ತಿಳಿಸಲು ದೇವರು ಇಚ್ಛಿಸಿದರು. ಕ್ರಿಸ್ತಯೇಸು ನಿಮ್ಮಲ್ಲಿದ್ದು ಮುಂದಿನ ಮಹಿಮೆಯ ನಿರೀಕ್ಷೆಗೆ ಆಧಾರವಾಗಿದ್ದಾರೆ ಎಂಬುದೇ ಈ ರಹಸ್ಯ.೨೮ [28]ನಾವು ಸಾರುತ್ತಲಿರುವುದೂ ಯೇಸುಕ್ರಿಸ್ತರನ್ನೇ. ಎಲ್ಲರಿಗೂ ಬುದ್ಧಿಹೇಳುತ್ತಾ ಎಲ್ಲರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತಯೇಸುವಿನಲ್ಲಿ ಪರಿಣತರನ್ನಾಗಿ ಊರ್ಜಿತಗೊಳಿಸಲು ಪ್ರಯತ್ನಿಸುತ್ತಿದ್ದೇವೆ.೨೯ [29]ನನ್ನನ್ನು ಚೇತನಗೊಳಿಸುತ್ತಿರುವ ಯೇಸುಕ್ರಿಸ್ತರ ಶಕ್ತಿಯಿಂದ ಈ ಗುರಿಯನ್ನು ಸಾಧಿಸಲು ಶ್ರಮವಹಿಸಿ ಹೋರಾಡುತ್ತಿದ್ದೇನೆ.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಕೊಲೊಸ್ಸೆಯರಿಗೆ ೧ 00:00:00 00:00:00 0.5x 2.0x https://beblia.bible:81/BibleAudio/kannadakncl/colossians/001.mp3 4 1