× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ತಿಮೊಥೇಯನಿಗ ೨ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧೨೩೪1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮1 1 1 ಕನ್ನಡ ಬೈಬಲ್ (KNCL) 2016 ತಿಮೊಥೇಯನಿಗ ೨ ೧ ಟಿಪ್ಪಣಿಗಳನ್ನು ಉಳಿಸಿ ೧ [1]ನನ್ನ ಪ್ರೀತಿಯ ಪುತ್ರ ತಿಮೊಥೇಯನಿಗೆ ಪೌಲನು ಬರೆಯುವ ಪತ್ರ. ಕ್ರಿಸ್ತಯೇಸುವಿನಲ್ಲಿರುವವರಿಗೆ ಲಭಿಸುವ ಅಮರ ಜೀವದ ವಾಗ್ದಾನವನ್ನು ಸಾರಲು ದೈವಚಿತ್ತಾನುಸಾರ ಪ್ರೇಷಿತನಾದ ನಾನು ತಿಳಿಸುವುದೇನೆಂದರೆ: ಪಿತನಾಗಿರುವ ದೇವರೂ ಒಡೆಯರಾದ ಕ್ರಿಸ್ತಯೇಸುವೂ ನಿಮಗೆ ಕೃಪೆಯನ್ನೂ ಕರುಣೆಯನ್ನೂ ಶಾಂತಿಯನ್ನು ಅನುಗ್ರಹಿಸಲಿ!೨ [2]***೩ [3]ನಾನು ಹಗಲಿರುಳೂ ನನ್ನ ಪ್ರಾರ್ಥನೆಯಲ್ಲಿ ತಪ್ಪದೆ ನಿನ್ನನ್ನು ಸ್ಮರಿಸಿಕೊಳ್ಳುತ್ತೇನೆ. ನನ್ನ ಪೂರ್ವಿಕರ ಹಾಗೆ ಶುದ್ಧಮನಸ್ಸಾಕ್ಷಿಯಿಂದ ನನ್ನ ಆರಾಧ್ಯ ದೇವರಿಗೆ ನಿನ್ನ ವಿಷಯವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಅಂದು ನೀನು ಸುರಿಸಿದ ಕಣ್ಣೀರನ್ನು ನಾನು ಇನ್ನೂ ಮರೆತಿಲ್ಲ. ನಿನ್ನನ್ನು ಪುನಃ ನೋಡಿ ಆನಂದಪಡಬೇಕೆಂದು ಹಂಬಲಿಸುತ್ತಿದ್ದೇನೆ.೪ [4]***೫ [5]ನಿನ್ನ ದೃಢವಿಶ್ವಾಸವು ನನ್ನ ನೆನಪಿನಲ್ಲಿದೆ. ನಿನ್ನ ಅಜ್ಜಿ ಲೋವಿಯಳಲ್ಲೂ ತಾಯಿ ಯೂನಿಸಳಲ್ಲೂ ನೆಲೆಗೊಂಡಿದ್ದ ವಿಶ್ವಾಸ ಈಗ ನಿನ್ನಲ್ಲೂ ಪೂರ್ಣವಾಗಿ ನೆಲೆಗೊಂಡಿದೆಯೆಂದು ನಾನು ನಂಬಿದ್ದೇನೆ.೬ [6]ನಾನು ನಿನ್ನ ಮೇಲೆ ಹಸ್ತ ನಿಕ್ಷೇಪಮಾಡಿ ಪ್ರಾರ್ಥಿಸಿದಾಗ ನೀನು ಪಡೆದಂಥ ವರದಾನವನ್ನು ಪುನಃ ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಿಸುತ್ತೇನೆ.೭ [7]ದೇವರು ನಮಗೆ ಪ್ರದಾನಮಾಡಿರುವ ಪವಿತ್ರಾತ್ಮ ನಮ್ಮನ್ನು ಹೇಡಿಗಳನ್ನಾಗಿ ಮಾಡುವುದಿಲ್ಲ; ನಮ್ಮಲ್ಲಿ ದೈವೀಶಕ್ತಿ, ಪ್ರೀತಿ ಹಾಗೂ ಸಂಯಮಗಳು ಪ್ರವರ್ಧಿಸುವಂತೆ ಮಾಡುತ್ತಾರೆ.೮ [8]ಆದ್ದರಿಂದ ಕ್ರಿಸ್ತಯೇಸುವಿಗೆ ಸಾಕ್ಷಿ ಆಗಿರಲು ನಾಚಬೇಡ. ಅವರಿಗಾಗಿ ಬಂಧಿಯಾಗಿರುವ ನನ್ನ ವಿಷಯದಲ್ಲೂ ನಾಚಬೇಡ. ದೇವರ ಶಕ್ತಿಯನ್ನು ಆಶ್ರಯಿಸಿ ನನ್ನೊಡನೆ ಶುಭಸಂದೇಶಕ್ಕೋಸ್ಕರ ನಿನ್ನ ಪಾಲಿನ ಶ್ರಮವನ್ನು ಅನುಭವಿಸು.೯ [9]ನಾವು ಸ್ವಂತ ಸತ್ಕಾರ್ಯಗಳಿಂದಲ್ಲ, ದೇವರ ಯೋಜನೆ ಹಾಗೂ ಅನುಗ್ರಹಗಳಿಂದಲೇ ಜೀವೋದ್ಧಾರ ವರವನ್ನು ಪಡೆದಿದ್ದೇವೆ; ದೇವರ ಪ್ರಜೆಗಳೆನಿಸಿಕೊಂಡಿದ್ದೇವೆ. ಈ ಅನುಗ್ರಹವನ್ನು ಕ್ರಿಸ್ತಯೇಸುವಿನಲ್ಲಿ ಅನಾದಿಯಿಂದಲೇ ನಮಗೆ ಕೊಡಲಾಯಿತು.೧೦ [10]ಈ ಕಾಲದಲ್ಲೂ ನಮ್ಮ ಉದ್ಧಾರಕ ಕ್ರಿಸ್ತಯೇಸುವಿನ ಪ್ರತ್ಯಕ್ಷದ ಮೂಲಕ ಅದನ್ನು ಬಹಿರಂಗಪಡಿಸಲಾಗಿದೆ. ಮೃತ್ಯುಶಕ್ತಿಯನ್ನು ವಿನಾಶಗೊಳಿಸಿ ಅಮರ ಜೀವವನ್ನು ಶುಭಸಂದೇಶದ ಮೂಲಕ ಬೆಳಕಿಗೆ ತಂದವರು ಯೇಸುವೇ.೧೧ [11]ಈ ಶುಭಸಂದೇಶವನ್ನು ಸಾರುವುದಕ್ಕೇ ಎಂದು ದೇವರು ನನ್ನನ್ನು ಪ್ರೇಷಿತನನ್ನಾಗಿಯೂ ಬೋಧಕನನ್ನಾಗಿಯೂ ನೇಮಿಸಿದ್ದಾರೆ.೧೨ [12]ಇದಕ್ಕಾಗಿಯೇ ಇಷ್ಟೆಲ್ಲಾ ಕಷ್ಟಕಾರ್ಪಣ್ಯಗಳನ್ನು ನಾಚಿಕೆಪಡದೆ ಅನುಭವಿಸುತ್ತಿದ್ದೇನೆ. ನಾನು ಯಾರಲ್ಲಿ ವಿಶ್ವಾಸವನ್ನಿಟ್ಟಿದ್ದೇನೆ ಎಂದು ಚೆನ್ನಾಗಿ ಬಲ್ಲೆ. ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನದವರೆಗೂ ಕಾಪಾಡುವುದಕ್ಕೆ ಅವರು ಶಕ್ತರು. ಆದ್ದರಿಂದ ನಾನು ಪೂರ್ಣ ಭರವಸೆಯಿಂದ ಇದ್ದೇನೆ.೧೩ [13]ಕ್ರಿಸ್ತಯೇಸುವಿನಲ್ಲಿ ನಮ್ಮದಾಗಿರುವ ವಿಶ್ವಾಸ ಹಾಗೂ ಪ್ರೀತಿಯಲ್ಲಿ ನೀನು ನೆಲೆಗೊಂಡಿರು. ನಾನು ಬೋಧಿಸಿದ್ದನ್ನು ಆದರ್ಶವಾಗಿಟ್ಟುಕೊಂಡು ಅನುಸರಿಸು.೧೪ [14]ನಿನ್ನ ವಶಕ್ಕೆ ಕೊಡಲಾಗಿರುವ ಸದ್ಬೋಧನೆಯನ್ನು ನಮ್ಮಲ್ಲಿ ವಾಸಿಸುವ ಪವಿತ್ರಾತ್ಮರ ಸಹಾಯದಿಂದ ಸುರಕ್ಷಿತವಾಗಿಡು.೧೫ [15]ಏಷ್ಯಾ ಪ್ರಾಂತ್ಯದವರೆಲ್ಲ ನನ್ನನ್ನು ಕೈಬಿಟ್ಟುಹೋದರೆಂದು ನೀನು ಬಲ್ಲೆ. ಅವರೊಡನೆ ಫುಗೇಲನೂ ಹೆರ್ಮೊಗೇನನೂ ಸಹ ಹೊರಟುಹೋದರು.೧೬ [16]ಒನೇಸಿಫೊರನ ಕುಟುಂಬವನ್ನು ಪ್ರಭು ಆಶೀರ್ವದಿಸಲಿ. ಆತನು ಅನೇಕ ಸಾರಿ ನನ್ನನ್ನು ಆದರಿಸಿದನು.೧೭ [17]ನಾನು ಸೆರೆಯಾಳಾಗಿದ್ದರೂ ನಾಚಿಕೆಪಡದೆ ತಾನು ರೋಮ್ ನಗರಕ್ಕೆ ಬಂದ ಕೂಡಲೇ ನನ್ನನ್ನು ಎಲ್ಲೆಡೆಗಳಲ್ಲೂ ಹುಡುಕಿ ಕಂಡುಹಿಡಿದನು.೧೮ [18]ಅಂತಿಮ ದಿನದಂದು ಪ್ರಭು ಯೇಸು ಆತನಿಗೆ ಕರುಣೆತೋರಲಿ. ನಾನು ಏಷ್ಯಾದಲ್ಲಿದ್ದಾಗ ಆತನು ನನಗೆ ಎಷ್ಟೊಂದು ನೆರವು ನೀಡಿದನೆಂದು ನಿನಗೆ ಚೆನ್ನಾಗಿ ತಿಳಿದಿದೆ.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ತಿಮೊಥೇಯನಿಗ ೨ ೧ 00:00:00 00:00:00 0.5x 2.0x https://beblia.bible:81/BibleAudio/kannadakncl/2timothy/001.mp3 4 1