× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಫಿಲೆಮೋನನಿಗೆ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨1 1 1 ಫಿಲೆಮೋನನಿಗೆ ೧ ಟಿಪ್ಪಣಿಗಳನ್ನು ಉಳಿಸಿ ೧ [1]ನಮ್ಮ ಅತಿಪ್ರಿಯನೂ ಸಹೋದ್ಯೋಗಿಯೂ ಆದ ಫಿಲೆಮೋನನಿಗೂ ನಿನ್ನ ಮನೆಯಲ್ಲಿ ಸಭೆಸೇರುವ ಸಹೋದರರಿಗೂ ಹಾಗು ನಮ್ಮ ಸಹೋದರಿ ಅಪ್ಪಿಯ ಮತ್ತು ಸಹಸೈನಿಕ ಅರ್ಖಿಪ್ಪನಿಗೂ - ಕ್ರಿಸ್ತಯೇಸುವಿಗೋಸ್ಕರ ಸೆರೆಯಾಳಾಗಿರುವ ಪೌಲನೂ ಮತ್ತು ನಮ್ಮ ಸಹೋದರ ತಿಮೊಥೇಯನೂ ಬರೆಯುವ ಪತ್ರ: ನಮ್ಮ ತಂದೆಯಾದ ದೇವರು ಮತ್ತು ಒಡೆಯರಾದ ಯೇಸುಕ್ರಿಸ್ತರು ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ!೨ [2]ಪ್ರಿಯ ಫಿಲೆಮೋನನೇ, ನಾನು ನಿನಗಾಗಿ ಪ್ರಾರ್ಥಿಸುವಾಗಲೆಲ್ಲಾ ದೇವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ.೩ [3]ಏಕೆಂದರೆ, ಪ್ರಭು ಯೇಸುವಿನಲ್ಲೂ ದೇವಜನರೆಲ್ಲರಲ್ಲೂ ನಿನಗಿರುವ ಪ್ರೀತಿವಿಶ್ವಾಸದ ಬಗ್ಗೆ ನಾನು ಕೇಳುತ್ತಿದ್ದೇನೆ.೪ [4]ನಿನ್ನ ವಿಶ್ವಾಸವನ್ನು ಬೇರೆಯವರಿಗೂ ನೀಡಿ ಕ್ರಿಸ್ತಯೇಸುವಿನಲ್ಲಿ ನಮ್ಮದಾಗಿರುವ ಎಲ್ಲಾ ಒಳಿತಿನ ಅರಿವನ್ನು ಹೆಚ್ಚಿಸಿಕೊಳ್ಳಬೇಕೆಂಬುದೇ ನನ್ನ ಪ್ರಾರ್ಥನೆ.೫ [5]ಸಹೋದರನೇ, ನಿನ್ನ ಪ್ರೀತಿಯನ್ನು ನೆನೆದು ನಾನು ಆನಂದವನ್ನೂ ಆದರಣೆಯನ್ನೂ ಪಡೆಯುತ್ತಿದ್ದೇನೆ. ದೇವಜನರೆಲ್ಲರ ಹೃದಯಗಳನ್ನು ನೀನು ಉಲ್ಲಾಸಪಡಿಸುತ್ತಿರುವೆ.೬ [6]ಆದಕಾರಣ, ನೀನು ಮಾಡಬೇಕಾದುದನ್ನು ಮಾಡು ಎಂದು ಆಜ್ಞಾಪಿಸಲು ಕ್ರಿಸ್ತಯೇಸುವಿನಲ್ಲಿ ನನಗೆ ಧೈರ್ಯ ಮತ್ತು ಅಧಿಕಾರಗಳಿವೆ.೭ [7]ಆದರೂ ನಿನ್ನ ಮೇಲಿರುವ ಪ್ರೀತಿಯ ನಿಮಿತ್ತ ನಾನು ನಿನ್ನಲ್ಲಿ ವಿನಂತಿಸುತ್ತೇನೆ: ವೃದ್ಧಪ್ರಾಯನೂ ಮತ್ತು ಕ್ರಿಸ್ತಯೇಸುವಿಗೋಸ್ಕರ ಈಗ ಸೆರೆಯಾಳೂ ಆಗಿರುವ ಪೌಲನೆಂಬ ನಾನು ಒನೇಸಿಮನ ಪರವಾಗಿ ನಿನ್ನಲ್ಲಿ ವಿಜ್ಞಾಪಿಸುತ್ತೇನೆ.೮ [8]ಇವನು ಯೇಸುವಿನಲ್ಲಿ ನನ್ನ ಸ್ವಂತ ಮಗನಂತಿದ್ದಾನೆ. ಸೆರೆಮನೆಯಲ್ಲೇ ನಾನು ಅವನನ್ನು ಆಧ್ಯಾತ್ಮಿಕವಾಗಿ ಪಡೆದೆನು.೯ [9]ಹಿಂದೆ ಅವನು ನಿನಗೆ ಪ್ರಯೋಜಕನಾಗಿರಲಿಲ್ಲ. ಈಗಲಾದರೋ ನಿನಗೂ ನನಗೂ ಪ್ರಯೋಜಕನಾಗಿದ್ದಾನೆ.೧೦ [10]ನನಗಂತೂ ಇವನು ಪ್ರಾಣದಂತಿದ್ದರೂ ಈಗ ನಿನ್ನ ಬಳಿಗೆ ಕಳುಹಿಸುತ್ತಿದ್ದೇನೆ.೧೧ [11]ಶುಭಸಂದೇಶಕ್ಕೋಸ್ಕರ ನಾನು ಸೆರೆಮನೆಯಲ್ಲಿರುವಾಗ ನಿನ್ನ ಬದಲಾಗಿ ನನಗೆ ಸಹಾಯಮಾಡಲು ಇವನನ್ನು ಇಲ್ಲಿಯೇ ಉಳಿಸಿಕೊಳ್ಳಲು ಇಷ್ಟವಿತ್ತು.೧೨ [12]ಆದರೆ ನನಗೆ ಸಹಾಯವಾಗಲೆಂದು ನಿನ್ನನ್ನು ಖಡ್ಡಾಯಪಡಿಸಲು ನನಗಂತೂ ಇಷ್ಟವಿಲ್ಲ. ನೀನಾಗಿಯೇ ನಿನ್ನ ಸ್ವಂತ ಇಚ್ಛೆಯಿಂದ ಹಾಗೆ ಮಾಡಬೇಕೆಂಬುದು ನನ್ನ ಅಪೇಕ್ಷೆ. ಆದ್ದರಿಂದ ನಿನ್ನ ಒಪ್ಪಿಗೆಯಿಲ್ಲದೆ ನಾನು ಏನನ್ನೂ ಮಾಡುತ್ತಿಲ್ಲ.೧೩ [13]ಸ್ವಲ್ಪಕಾಲ ಒನೇಸಿಮನು ನಿನ್ನಿಂದ ದೂರವಿದ್ದುದಕ್ಕೆ ಕಾರಣ ಆತನು ಸದಾಕಾಲ ನಿನ್ನವನಾಗುವುದಕ್ಕೋ ಏನೋ.೧೪ [14]ಈಗ ಅವನು ನಿನ್ನ ಬಳಿಗೆ ಬರುತ್ತಿರುವುದು ಕೇವಲ ಗುಲಾಮನಂತೆ ಅಲ್ಲ. ಅದಕ್ಕಿಂತಲೂ ಬಹಳ ಮೇಲಾದವನಂತೆ, ಕ್ರಿಸ್ತಯೇಸುವಿನಲ್ಲಿ ಪ್ರಿಯ ಸಹೋದರನಂತೆ, ಅವನೆಂದರೆ ನನಗೆಷ್ಟೋ ಪ್ರೀತಿ. ಹಾಗಾದರೆ ನಿನ್ನ ಸೇವಕನೂ ನಮ್ಮ ಪ್ರಭುವಿನಲ್ಲಿ ನಿನ್ನ ಪ್ರಿಯ ಸಹೋದರನೂ ಆಗಿರುವ ಅವನ ಬಗ್ಗೆ ನಿನಗೆ ಮತ್ತಷ್ಟು ಪ್ರೀತಿ ಇರಬೇಕಲ್ಲವೇ?೧೫ [15]ಆದ್ದರಿಂದ ಕ್ರಿಸ್ತಯೇಸುವಿನಲ್ಲಿ ನಿನಗೂ ನನಗೂ ಅನ್ಯೋನ್ಯತೆ ಇದೆಯೆಂದು ನೀನು ಪರಿಗಣಿಸುವುದಾದರೆ ನನ್ನನ್ನು ಹೇಗೆ ಸ್ವಾಗತಿಸುತ್ತಿದ್ದೆಯೋ ಹಾಗೆಯೇ ಇವನನ್ನು ಸ್ವಾಗತಿಸು.೧೬ [16]ಇವನು ನಿನಗೇನಾದರೂ ಅನ್ಯಾಯ ಮಾಡಿದ್ದಾದರೆ, ಅಥವಾ ಇವನಿಂದ ನಿನಗೇನಾದರೂ ಸಲ್ಲಬೇಕಾದ ಬಾಕಿಯಿದ್ದರೆ, ಅದೆಲ್ಲವನ್ನೂ ನನ್ನ ಲೆಕ್ಕಕ್ಕೆ ಹಾಕು.೧೭ [17]ಅದನ್ನು ಪೌಲನೆಂಬ ನಾನೇ ಕೊಟ್ಟು ತೀರಿಸುತ್ತೇನೆ ಎಂದು ನನ್ನ ಹಸ್ತಾಕ್ಷರದಲ್ಲೇ ಬರೆದುಕೊಡುತ್ತಿದ್ದೇನೆ. ಆದರೆ ಈಗ ನೀನು ಏನಾಗಿದ್ದೀಯೋ ಅದು ನನ್ನಿಂದಲೇ. ಹೀಗೆ ನೀನೇ ನನಗೆ ಸಾಲಗಾರನಾಗಿದ್ದೀ ಎಂದು ನಾನು ಹೇಳಬೇಕಾಗಿಲ್ಲ.೧೮ [18]ಹೌದು, ಪ್ರಿಯ ಸಹೋದರನೇ, ಪ್ರಭುವಿನ ಹೆಸರಿನಲ್ಲಿ ಇದೊಂದು ಉಪಕಾರವನ್ನು ನನಗೆ ಮಾಡಿಕೊಡು; ಕ್ರಿಸ್ತಯೇಸುವಿನಲ್ಲಿ ನನ್ನ ಹೃದಯ ಆನಂದಿಸುವಂತೆ ಮಾಡು.೧೯ [19]ನನ್ನ ಕೋರಿಕೆಯನ್ನು ನೆರವೇರಿಸುವೆ ಎಂಬ ಭರವಸೆಯಿಂದ ಈ ಪತ್ರವನ್ನು ಬರೆಯುತ್ತಿದ್ದೇನೆ. ನಾನು ಕೇಳಿದ್ದಕ್ಕಿಂತಲೂ ಹೆಚ್ಚಾಗಿಯೇ ಮಾಡುವೆಯೆಂದು ನನಗೆ ಗೊತ್ತಿದೆ.೨೦ [20]ಇದಲ್ಲದೆ, ನಿಮ್ಮೆಲ್ಲರ ಪ್ರಾರ್ಥನೆಗಳ ಫಲವಾಗಿ ದೇವರು ನನ್ನನ್ನು ಇಲ್ಲಿಂದ ಬಿಡುಗಡೆ ಮಾಡಿ ನಿಮ್ಮ ಬಳಿಗೆ ಕಳುಹಿಸುವರು ಎಂಬ ನಂಬಿಕೆ ನನಗಿದೆ. ಆದ್ದರಿಂದ ನನಗಾಗಿ ಒಂದು ಅತಿಥಿ ಕೊಠಡಿಯನ್ನು ಸಿದ್ಧಪಡಿಸಿಟ್ಟುಕೊಂಡಿರು.೨೧ [21]“ಕ್ರಿಸ್ತಯೇಸುವಿಗೋಸ್ಕರ ನನ್ನ ಜೊತೆಯಲ್ಲಿ ಸೆರೆಮನೆಯಲ್ಲಿರುವ ಎಪಫ್ರನೂ ನನ್ನ ಸಹೋದ್ಯೋಗಿಗಳಾದ ಮಾರ್ಕ, ಅರಿಸ್ತಾರ್ಕ, ದೇಮ ಮತ್ತು ಲೂಕನು ನಿಮಗೆ ಶುಭಾಶಯಗಳನ್ನು ಕಳುಹಿಸುತ್ತಾರೆ.೨೨ [22]ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹ ನಿಮ್ಮೆಲ್ಲರಲ್ಲೂ ಇರಲಿ!Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಫಿಲೆಮೋನನಿಗೆ ೧ 00:00:00 00:00:00 0.5x 2.0x https://beblia.bible:81/BibleAudio/kannadakncl/philemon/001.mp3 1 1