× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೊಹೋಶುವ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩1 1 1 ಕನ್ನಡ ಬೈಬಲ್ (KNCL) 2016 ಯೊಹೋಶುವ ೧೧ ಟಿಪ್ಪಣಿಗಳನ್ನು ಉಳಿಸಿ ೧ [1]ಹಾಚೋರಿನ ಅರಸ ಯಾಬೀನನು ಇದನ್ನೆಲ್ಲಾ ಕೇಳಿ ಯೋಬಾಬನೆಂಬ ಮದೋನಿನ ಅರಸನಿಗೂ ಶಿಮ್ರೋನಿನ ಅರಸನಿಗೂ ಹಾಗು ಅಕ್ಷಾಫಿನ ಅರಸನಿಗೂ ಕರೆಕಳಿಸಿದನು.೨ [2]ಉತ್ತರದಿಕ್ಕಿನ ಪರ್ವತಪ್ರದೇಶ, ಕಿನ್ನೆರೋತ್ ಸಮುದ್ರದ ದಕ್ಷಿಣದಲ್ಲಿನ ಕಣಿವೆಪ್ರದೇಶ, ಇಳಿಜಾರು ಪ್ರದೇಶ, ದೋರ್ ಊರಿನ ಪಶ್ಚಿಮದಲ್ಲಿದ್ದ ಮಲೆನಾಡಿನ ಪ್ರದೇಶ, ಇವುಗಳ ಅರಸರಿಗೂ೩ [3]ಪೂರ್ವ ಪಶ್ಚಿಮಗಳಲ್ಲಿರುವ ಕಾನಾನ್ಯರು, ಅಮೋರಿಯರು, ಹಿತ್ತಿಯರು, ಪೆರಿಜ್ಜೀಯರು, ಮಲೆನಾಡಿನ ಪ್ರದೇಶದಲ್ಲಿದ್ದ ಯೆಬೂಸಿಯರು, ಹೆರ್ನೋನಿನ ಬುಡದಲ್ಲಿ ಮಿಚ್ಪಾನಾಡಿನಲ್ಲಿದ್ದ ಹಿವ್ವಿಯರು ಇವರಿಗೂ ಹೇಳಿಕಳಿಸಿದನು.೪ [4]ಅವರು ಒಡನೆ ಬಹುರಥಾಶ್ವಗಳಿಂದ ಕೂಡಿದ್ದ ತಮ್ಮ ಸರ್ವಸೈನ್ಯಗಳನ್ನು ತೆಗೆದುಕೊಂಡು ಹೊರಟರು. ಸೈನಿಕರು ಸಮುದ್ರ ತೀರದ ಮರಳಿನಂತೆ ಅಸಂಖ್ಯರಾಗಿದ್ದರು.೫ [5]ಇಸ್ರಯೇಲರೊಡನೆ ಯುದ್ಧಮಾಡಲು ಅರಸರೆಲ್ಲರು ಒಟ್ಟುಗೂಡಿ ಮೇರೋಮ್ ಜಲಾಶಯದ ಬಳಿ ಇಳಿದುಕೊಂಡರು.೬ [6]ಆಗ ಸರ್ವೇಶ್ವರಸ್ವಾಮಿ ಯೆಹೋಶುವನಿಗೆ, “ನೀನು ಅವರಿಗೆ ಹೆದರಬೇಡ; ನಾಳೆ ಇದೇ ವೇಳೆಗೆ ಅವರನ್ನು ಇಸ್ರಯೇಲರಿಗೆ ಒಪ್ಪಿಸುವೆನು. ಇಸ್ರಯೇಲರು ಅವರನ್ನು ಹತಿಸಿಬಿಡುವರು. ನೀನು ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕಡಿದು ರಥಗಳನ್ನು ಸುಟ್ಟುಬಿಡಬೇಕು,” ಎಂದರು.೭ [7]ಯೆಹೋಶುವನು ತನ್ನ ಎಲ್ಲ ಯೋಧರೊಡನೆ ಹೊರಟು ಮೇರೋಮ್ ಜಲಾಶಯದ ಬಳಿಯಲ್ಲಿದ್ದ ಶತ್ರುಗಳ ಮೇಲೆ ಬಿದ್ದನು.೮ [8]ಸರ್ವೇಶ್ವರ ಅವರನ್ನು ಇಸ್ರಯೇಲರ ಕೈವಶ ಮಾಡಿದರು. ಇವರು ಅವರನ್ನು ದೊಡ್ಡ ಚೀದೋನ್ ಹಾಗು ಮಿಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಮತ್ತು ಪೂರ್ವ ದಿಕ್ಕಿನಲ್ಲಿರುವ ಮಿಚ್ಫೆಯ ಬಯಲಿನವರೆಗೂ ಹಿಂದಟ್ಟಿ, ಒಬ್ಬನೂ ಉಳಿಯದಂತೆ ಸದೆಬಡಿದರು.೯ [9]ಯೆಹೋಶುವನು ಸರ್ವೇಶ್ವರನ ಅಪ್ಪಣೆಗನುಸಾರವಾಗಿ ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕಡಿದು ರಥಗಳನ್ನು ಸುಟ್ಟುಬಿಟ್ಟನು.೧೦ [10]ಕೂಡಲೆ ಯೆಹೋಶುವನು ಹಿಂದಿರುಗಿ ಹಾಚೋರನ್ನೂ ಅದರ ಅರಸನನ್ನೂ ಕತ್ತಿಯಿಂದ ಸಂಹರಿಸಿದನು. ಏಕೆಂದರೆ ಹಾಚೋರ್ ಪೂರ್ವಕಾಲದಲ್ಲಿ ಆ ರಾಜ್ಯಗಳಲ್ಲೆಲ್ಲಾ ಶ್ರೇಷ್ಠವಾದುದು.೧೧ [11]ಇಸ್ರಯೇಲರು ಅದರಲ್ಲಿದ್ದ ಜನರನ್ನೆಲ್ಲಾ ಕತ್ತಿಗೆ ಈಡಾಗಿಸಿ ಹಾಚೋರ್ ನಗರವನ್ನು, ಪ್ರಾಣಿಯೊಂದೂ ಉಳಿಯದಂತೆ ಸುಟ್ಟುಬಿಟ್ಟರು.೧೨ [12]ಯೆಹೋಶುವನು ಆ ಬೇರೆ ಅರಸರನ್ನು, ಅವರ ಎಲ್ಲ ನಗರಗಳನ್ನು ಹಿಡಿದು ಸರ್ವೇಶ್ವರನ ದಾಸ ಮೋಶೆಯ ಆಜ್ಞೆಯಂತೆ ಅವರನ್ನು ಕತ್ತಿಯಿಂದ ನಾಶಮಾಡಿದನು.೧೩ [13]ಯೆಹೋಶುವನು ಸುಟ್ಟ ಹಾಚೋರ್ ಒಂದನ್ನು ಬಿಟ್ಟರೆ ಇಸ್ರಯೇಲರು ಮಲೆನಾಡಿನ ಬೇರೆ ಯಾವ ನಗರವನ್ನೂ ಸುಡಲಿಲ್ಲ.೧೪ [14]ಅವುಗಳಲ್ಲಿದ್ದ ಪಶುಪ್ರಾಣಿಗಳನ್ನೂ ಸಾಮಾನು ಸರಂಜಾಮುಗಳನ್ನೂ ಇಸ್ರಯೇಲರು ಕೊಳ್ಳೆಹೊಡೆದರು. ಜನರನ್ನಾದರೋ ಒಬ್ಬರನ್ನೂ ಬಿಡದೆ ಕತ್ತಿಯಿಂದ ನಿರ್ಮೂಲಮಾಡಿದರು.೧೫ [15]ಸರ್ವೇಶ್ವರನ ದಾಸ ಮೋಶೆ, ದೇವರು ತನಗೆ ಹೇಳಿದ್ದನ್ನೆಲ್ಲಾ ಯೆಹೋಶುವನಿಗೆ ಹೇಳಿದ್ದನು. ಅದರಂತೆಯೇ ಯೆಹೋಶುವ ಮಾಡಿದನು. ಸರ್ವೇಶ್ವರ ಮೋಶೆಯ ಮುಖಾಂತರ ಆಜ್ಞಾಪಿಸಿದ್ದರಲ್ಲಿ ಯೆಹೋಶುವ ಒಂದನ್ನೂ ಮೀರಲಿಲ್ಲ.೧೬ [16]ಹೀಗೆ ಮಲೆನಾಡಿನ ಪ್ರದೇಶ, ದಕ್ಷಿಣ ಪ್ರಾಂತ್ಯ, ಗೋಷೆನ್ ನಾಡು, ಇಳಿಜಾರಿನ ಪ್ರದೇಶ, ಕಣಿವೆ ಪ್ರದೇಶ, ಇಸ್ರಯೇಲ್ ನಾಡಿನ ಪರ್ವತ ಪ್ರಾಂತ್ಯ, ಅದಕ್ಕೆ ಸೇರಿದ ಇಳಿಜಾರಿನ ಪ್ರದೇಶ ಇವೆಲ್ಲವೂ ಯೆಹೋಶುವನಿಗೆ ಸ್ವಾಧೀನವಾದವು.೧೭ [17]ಅವನು ಸೇಯೀರಿನ ಹಾದಿಯಲ್ಲಿದ್ದ ಹಾಲಾಕ್ ಬೆಟ್ಟದಿಂದ ಹೆರ್ಮೋನಿನ ಬುಡದಲ್ಲಿ ಲೆಬನೋನ್ ಕಣಿವೆಯಲ್ಲಿರುವ ಬಾಲ್ಗಾದ್ ನಗರದವರೆಗೂ ಇರುವ ಪ್ರದೇಶವನ್ನೆಲ್ಲಾ ತೆಗೆದುಕೊಂಡು ಅದರ ಅರಸರನ್ನೆಲ್ಲಾ ಹಿಡಿದು ಸಂಹರಿಸಿಬಿಟ್ಟನು.೧೮ [18]ಯೆಹೋಶುವ ಈ ಎಲ್ಲಾ ಅರಸರೊಡನೆ ಬಹುದಿನಗಳ ತನಕ ಯುದ್ಧಮಾಡಿದನು.೧೯ [19]ಗಿಬ್ಯೋನಿನ ನಿವಾಸಿಗಳಾದ ಹಿವ್ವಿಯರ ಹೊರತು ಯಾವ ನಗರದವರೂ ಇಸ್ರಯೇಲರೊಡನೆ ಒಪ್ಪಂದ ಮಾಡಿಕೊಳ್ಳಲಿಲ್ಲ. ಎಲ್ಲರನ್ನೂ ಯುದ್ಧದಿಂದಲೇ ವಶಮಾಡಿಕೊಳ್ಳಬೇಕಾಯಿತು.೨೦ [20]ಏಕೆಂದರೆ ಸರ್ವೇಶ್ವರ ಅವರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರಮಾಡಿದ್ದರು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆ ಇಸ್ರಯೇಲರು ಅವರೆಲ್ಲರನ್ನು ಕರುಣೆ ಇಲ್ಲದೆ ಸಂಹರಿಸಿದರು.೨೧ [21]ಅದೇ ಕಾಲದಲ್ಲಿ ಯೆಹೋಶುವನು ಹೆಬ್ರೋನ್, ದೆಬೀರ್ ಹಾಗೂ ಅನಾಬ್ ಎಂಬ ಊರುಗಳಲ್ಲೂ, ಜುದೇಯ ಮತ್ತು ಇಸ್ರಯೇಲ್ ಪ್ರಾಂತ್ಯಗಳ ಬೆಟ್ಟಗುಡ್ಡಗಳಲ್ಲೂ ಇದ್ದ ‘ಅನಾಕಿಮ್’ ಜನರನ್ನು ನಾಶಮಾಡಿ ಅವರ ನಗರಗಳನ್ನು ಹಾಳುಮಾಡಿದನು.೨೨ [22]ಇಸ್ರಯೇಲರ ಪ್ರಾಂತ್ಯದಲ್ಲಿ ಜನರಾರೂ ಉಳಿಯಲಿಲ್ಲ. ಗಾಜಾ, ಗತೂರು, ಅಷ್ಡೋದ್ ಎಂಬ ಊರುಗಳಲ್ಲಿ ಮಾತ್ರ ಕೆಲವರು ಉಳಿದರು.೨೩ [23]ಸರ್ವೇಶ್ವರ ಮೋಶೆಯ ಮುಖಾಂತರ ವಾಗ್ದಾನ ಮಾಡಿದ್ದ ಪ್ರದೇಶವನ್ನೆಲ್ಲಾ ಯೆಹೋಶುವ ಹಿಡಿದುಕೊಂಡನು, ಇಸ್ರಯೇಲ್ ಕುಲಭಾಗಗಳಿಗನುಸಾರ ಅದನ್ನು ಹಂಚಿಕೊಟ್ಟನು. ಯುದ್ಧ ನಿಂತಿತು. ದೇಶದಲ್ಲೆಲ್ಲಾ ಶಾಂತಿಸಮಾಧಾನ ನೆಲೆಸಿತು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಯೊಹೋಶುವ ೧೧ 00:00:00 00:00:00 0.5x 2.0x https://beblia.bible:81/BibleAudio/kannadakncl/joshua/011.mp3 24 11