× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೊಹೋಶುವ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೭ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮1 1 1 ಕನ್ನಡ ಬೈಬಲ್ (KNCL) 2016 ಯೊಹೋಶುವ ೧೭ ಟಿಪ್ಪಣಿಗಳನ್ನು ಉಳಿಸಿ ೧ [1]ಜೋಸೆಫನ ಚೊಚ್ಚಲ ಮಗ ಮನಸ್ಸೆಯ ವಂಶದವರಿಗೆ ದೊರಕಿದ ಸೊತ್ತಿನ ವಿವರ ಇದು: ಮನಸ್ಸೆಯ ಹಿರಿಯ ಮಗನೂ ಗಿಲ್ಯಾದನ ತಂದೆಯೂ ಆದ ಮಾಕೀರನು ಯುದ್ಧವೀರನು. ಆದ್ದರಿಂದ ಅವನಿಗೆ ಗಿಲ್ಯಾದ, ಬಾಷಾನ ಎಂಬ ಪ್ರಾಂತ್ಯಗಳು ಸಿಕ್ಕಿದವು.೨ [2]ಜೋಸೆಫನ ಮಗ ಮನಸ್ಸೆಯ ಉಳಿದ ಗಂಡು ಮಕ್ಕಳಾದ ಅಬೀಯೆಜೆರ್, ಹೇಲೆಕ್, ಅಸ್ರೀಯೇಲ್, ಶೆಕೆಮ್, ಹೇಫೆರ್, ಶಮೀದಾ, ಎಂಬವರ ವಂಶದವರಿಗೆ ಜೋರ್ಡನಿನ ಈಚೆಕಡೆ ಪಾಲು ಸಿಕ್ಕಿತು.೩ [3]ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನೂ ಆದ ಚಲ್ಪಹಾದನಿಗೆ ಹೆಣ್ಣು ಮಕ್ಕಳು ಹುಟ್ಟಿದರೇ ಹೊರತು ಗಂಡು ಮಕ್ಕಳು ಆಗಲಿಲ್ಲ. ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬವರು ಅವನ ಹೆಣ್ಣುಮಕ್ಕಳು.೪ [4]ಇವರು ಮಹಾಯಾಜಕನಾದ ಎಲ್ಲಾಜಾರ್, ನೂನನ ಮಗ ಯೆಹೋಶುವ ಹಾಗೂ ಕುಲಾಧಿಪತಿಗಳ ಬಳಿಗೆ ಬಂದು, “ನಮ್ಮ ಅಣ್ಣತಮ್ಮಂದಿರೊಡನೆ ನಮಗೂ ಪಾಲುಕೊಡಬೇಕೆಂದು ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದ್ದಾರಲ್ಲವೆ?” ಎಂದು ಹೇಳಿದರು. ಯೆಹೋಶುವನು ಸರ್ವೇಶ್ವರನ ಅಪ್ಪಣೆಯಂತೆ ಅವರಿಗೆ ಅವರ ತಂದೆಯ ಅಣ್ಣತಮ್ಮಂದಿರ ಜೊತೆಗೆ ಸೊತ್ತನ್ನು ಪಾಲಾಗಿಕೊಟ್ಟನು.೫ [5]ಮನಸ್ಸೆ ಕುಲದ ಹೆಣ್ಣುಮಕ್ಕಳಿಗೆ ಗಂಡುಮಕ್ಕಳ ಸಮೇತ ಸೊತ್ತು ದೊರಕಿದ್ದರಿಂದ ಮನಸ್ಸೆಯವರಿಗೆ ಜೋರ್ಡನಿನ ಆಚೆಯಿದ್ದ ಬಾಷಾನ್ ಮತ್ತು ಗಿಲ್ಯಾದ್ ಪ್ರಾಂತ್ಯಗಳ ಜೊತೆಗೆ ಈಚೆಯಲ್ಲೂ ಹತ್ತುಪಾಲು ಸಿಕ್ಕಿದವು.೬ [6]ಗಿಲ್ಯಾದ್ ನಾಡು ಮನಸ್ಸೆಯ ಉಳಿದ ಗೋತ್ರಗಳಿಗೆ ಸಿಕ್ಕಿತು.೭ [7]ಮನಸ್ಸೆಯವರ ಸೊತ್ತಿನ ಎಲ್ಲೆ ಆಶೇರ್ ಊರಿನಿಂದ ತೊಡಗಿ ಶೆಕೆಮಿನ ಪೂರ್ವದಲ್ಲಿ ಇರುವ ಮಿಕ್ಮೆತಾತಿನ ಮೇಲೆ ದಕ್ಷಿಣದಲ್ಲಿರುವ ತಪ್ಪೂಹದ ಬುಗ್ಗೆಗೆ ಹೋಗುತ್ತದೆ.೮ [8]ತಪ್ಪೂಹ ನಗರಕ್ಕೆ ಸೇರುವ ಭೂಮಿ ಮನಸ್ಸೆಯವರದು;ಆದರೆ ಅವರ ಸರಹದ್ದಿನಲ್ಲಿರುವ ತಪ್ಪೂಹ ನಗರ ಎಫ್ರಯಿಮ್ಯರದು.೯ [9]ಅಲ್ಲಿಂದ ಅವರ ಎಲ್ಲೆ ಇಳಿಯುತ್ತಾ ಕಾನಾ ಹಳ್ಳದ ದಕ್ಷಿಣಕ್ಕೆ ಹೋಗುತ್ತದೆ. ಅಲ್ಲಿ ಮನಸ್ಸೆಯವರಿಗೆ ಇರುವಂತೆ ಎಫ್ರಯಿಮ್ಯರಿಗೂ ಕೆಲವು ಪಟ್ಟಣಗಳಿವೆ. ಮನಸ್ಸೆಯವರ ಮುಂದಿನ ಎಲ್ಲೆಯು ಹಳ್ಳದ ಉತ್ತರ ತೀರವನ್ನು ಅನುಸರಿಸಿ ಹೋಗಿ ಸಮುದ್ರದ ದಡದಲ್ಲಿ ಮುಕ್ತಾಯಗೊಳ್ಳುತ್ತದೆ.೧೦ [10]ಆ ಹಳ್ಳದ ದಕ್ಷಿಣ ತೀರ ಎಫ್ರಯಿಮ್ಯರದು; ಉತ್ತರ ತೀರ ಮನಸ್ಸೆಯವರದು. ಸಮುದ್ರವೇ ಇವರ ಪಶ್ಚಿಮದ ಎಲ್ಲೆ. ಉತ್ತರಕ್ಕೆ ಆಶೇರ ಕುಲದವರ ಪ್ರಾಂತ್ಯವೂ ಪೂರ್ವಕ್ಕೆ ಇಸ್ಸಾಕಾರ್ ಕುಲದವರ ನಾಡೂ ಇರುತ್ತವೆ.೧೧ [11]ಇದಲ್ಲದೆ ಮನಸ್ಸೆಯವರಿಗೆ ಇಸ್ಸಾಕಾರ್, ಆಶೇರ್ ಎಂಬವರ ಪ್ರಾಂತ್ಯಗಳಲ್ಲಿ ಬೇತ್ ಷೆಯಾನ್, ಇಬ್ಲೆಯಾಮ್, ದೋರ್ ಎಂಬ ನಗರಗಳೂ ಅವುಗಳ ಗ್ರಾಮಗಳೂ ದುರ್ಗತ್ರಯವಾದ ಎಂದೋರ್, ತಾನಕ್, ಮೆಗಿದ್ದೋ ಎಂಬ ನಗರಗಳೂ ಅವುಗಳಿಗೆ ಸೇರಿದ ಊರುಗಳೂ ಸಿಕ್ಕಿದವು.೧೨ [12]ಆದರೆ ಮನಸ್ಸೆಯವರು ಆ ನಗರಗಳ ನಿವಾಸಿಗಳನ್ನು ಹೊರದೂಡಲಾಗಲಿಲ್ಲ. ಕಾನಾನ್ಯರಿಗೆ ಅಲ್ಲೇ ವಾಸಿಸಲು ಅನುಕೂಲವಾಯಿತು.೧೩ [13]ಇಸ್ರಯೇಲರು ಬಲಗೊಂಡ ಮೇಲೂ ಕಾನಾನ್ಯರನ್ನು ಹೊರದೂಡದೆ ಅವರನ್ನು ಜೀತದಾರರನ್ನಾಗಿಸಿಕೊಂಡರು.೧೪ [14]ಜೋಸೆಫ್ಯರು ಯೆಹೋಶುವನಿಗೆ, “ನೀವು ಚೀಟುಹಾಕಿ, ನಮಗೆ ಒಂದೇ ಒಂದುಭಾಗವನ್ನು ಕೊಟ್ಟಿದ್ದೀರಿ, ಇದು ಸರಿಯೆ? ಸರ್ವೇಶ್ವರ ಸ್ವಾಮಿ ನಮ್ಮನ್ನು ಇಂದಿನವರೆಗೂ ಆಶೀರ್ವದಿಸಿ ನಮ್ಮನ್ನು ಮಹಾಜನಾಂಗವಾಗಿಸಿದ್ದಾರಲ್ಲವೆ?” ಎಂದು ಕೇಳಿಕೊಂಡರು.೧೫ [15]ಅದಕ್ಕೆ ಯೆಹೋಶುವನು, “ಮಹಾಜನಾಂಗವಾದ ನಿಮಗೆ ಎಫ್ರಯಿಮ್ ಮಲೆನಾಡು ಸಾಲದಿದ್ದರೆ ಪೆರಿಜ್ಜೀಯರ ಮತ್ತು ರೆಫಾಯರ ನಾಡುಗಳಿಗೆ ಹೋಗಿ ಅಲ್ಲಿನ ಕಾಡು ಕಡಿದು ಸ್ಥಳ ಮಾಡಿಕೊಳ್ಳಿ,” ಎಂದನು.೧೬ [16]ಅವರು ಮತ್ತೆ ಯೆಹೋಶುವನಿಗೆ, “ನಮ್ಮ ಮಲೆನಾಡು ನಮಗೆ ಸಾಲುವುದಿಲ್ಲ. ಬೇತ್ ಷೆಯಾನ್ ಮತ್ತು ಅದಕ್ಕೆ ಸೇರಿದ ಊರುಗಳಿರುವ ಕಣಿವೆಯಲ್ಲೂ ಹಾಗೂ ಇಜ್ರೇಲಿನ ಕಣಿವೆಯಲ್ಲೂ ವಾಸಮಾಡುವ ಕಾನಾನ್ಯರೆಲ್ಲರು ಕಬ್ಬಿಣದ ರಥವುಳ್ಳವರು,” ಎಂದರು.೧೭ [17]ಯೆಹೋಶುವನು ಜೋಸೆಫ್ಯರಾದ ಎಫ್ರಯಿಮ್ - ಮನಸ್ಸೆಕುಲದ ಆ ಜನರಿಗೆ, “ನೀವು ಮಹಾಜನಾಂಗ ಹಾಗೂ ಶಕ್ತಿಶಾಲಿಗಳೆಂಬುದೇನೋ ನಿಜ. ನೀವು ಒಂದು ಪಾಲಿಗಿಂತ ಹೆಚ್ಚು ತೆಗೆದುಕೊಳ್ಳಬಹುದಾಗಿದೆ.೧೮ [18]ಆಮೇಲೆ ನಾಡನ್ನು ನಿಮಗೆ ಕೊಟ್ಟಿರುತ್ತೇನೆ. ಅದರಲ್ಲಿ ಕಾಡುಗಳಿದ್ದರೂ ನೀವು ಅವುಗಳನ್ನು ಕಡಿದು ಹಾಕಬಹುದು. ಅದಕ್ಕೆ ಸೇರಿರುವ ಬಯಲುಭೂಮಿ ನಿಮ್ಮದೇ. ಕಾನಾನ್ಯರು ಬಲಿಷ್ಠರು ಹಾಗೂ ಕಬ್ಬಿಣದ ರಥಗಳುಳ್ಳವರು. ಆದರೂ ನೀವು ಅವರನ್ನು ಹೊರದೂಡಬಲ್ಲಿರಿ,” ಎಂದು ಉತ್ತರ ಕೊಟ್ಟನು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಯೊಹೋಶುವ ೧೭ 00:00:00 00:00:00 0.5x 2.0x https://beblia.bible:81/BibleAudio/kannadakncl/joshua/017.mp3 24 17