× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೊಹೋಶುವ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೯ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭1 1 1 ಕನ್ನಡ ಬೈಬಲ್ (KNCL) 2016 ಯೊಹೋಶುವ ೯ ಟಿಪ್ಪಣಿಗಳನ್ನು ಉಳಿಸಿ ೧ [1]ಜೋರ್ಡನ್ ಹೊಳೆಯ ಆಚೆ ಬೆಟ್ಟದ ಪ್ರದೇಶ, ಕಣಿವೆ ಪ್ರದೇಶ, ಲೆಬನೋನಿನ ಎದುರಿಗಿರುವ ಮಹಾಸಾಗರದ ತೀರಪ್ರದೇಶ ಇವುಗಳಲ್ಲಿ ವಾಸವಾಗಿದ್ದ ಅಮೋರಿಯ, ಹಿತ್ತಿಯ, ಕಾನಾನ್, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ರಾಜರು ನಡೆದ ಸಂಗತಿಯನ್ನು ಕೇಳಿದರು.೨ [2]ಯೆಹೋಶುವನಿಗೂ ಇಸ್ರಯೇಲರಿಗೂ ವಿರುದ್ಧ ಯುದ್ಧಮಾಡಬೇಕೆಂದು ಒಮ್ಮನಸ್ಸಿನಿಂದ ಕೂಡಿಕೊಂಡರು.೩ [3]ಜೆರಿಕೋದವರನ್ನು ಮತ್ತು ಆಯಿ ಜನರನ್ನು ಯೆಹೋಶುವನು ಸಂಹರಿಸಿದ ಸುದ್ದಿ ಗಿಬ್ಯೋನಿನ ನಿವಾಸಿಗಳಿಗೆ ಮುಟ್ಟಿತು.೪ [4]ಅವರು ಒಂದು ಉಪಾಯವನ್ನು ಹೂಡಿದರು. ಅದೇನೆಂದರೆ - ಅವರು ತಮ್ಮ ಕತ್ತೆಗಳ ಮೇಲೆ ಹಳೆಯ ಗೋಣಿತಟ್ಟುಗಳನ್ನು ಹಾಕಿ ಅವುಗಳ ಮೇಲೆ ತೇಪೆ ಹಾಕಿದ ದ್ರಾಕ್ಷಾರಸದ ಹಳೆಯ ಬುದ್ದಲಿಗಳನ್ನು ಹೇರಿದರು.೫ [5]ಹರಿದುಹೋಗಿದ್ದ ಹಳೆಯ ಕೆರಗಳನ್ನು ಮೆಟ್ಟಿಕೊಂಡರು. ಹಳೆಯ ಬಟ್ಟೆಬರೆಗಳನ್ನು ಹಾಕಿಕೊಂಡರು. ಒಣರೊಟ್ಟಿ ಚೂರುಗಳನ್ನು ಬುತ್ತಿಯಾಗಿ ಕಟ್ಟಿಕೊಂಡರು.೬ [6]ತಾವೂ ರಾಯಭಾರಿಗಳೆಂದು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಬಂದರು. ಅವನಿಗೂ ಇಸ್ರಯೇಲರಿಗೂ, “ನಾವು ದೂರದೇಶದಿಂದ ಬಂದವರು. ನೀವು ನಮ್ಮ ಸಂಗಡ ಒಂದು ಒಪ್ಪಂದ ಮಾಡಿಕೊಳ್ಳಿ,” ಎಂದು ಕೇಳಿಕೊಂಡರು.೭ [7]ಆಗ ಇಸ್ರಯೇಲರು ಹಿವ್ವಿಯರಾದ ಅವರಿಗೆ, “ಬಹುಶಃ ನೀವು ನಮ್ಮ ನಾಡಿನ ನಿವಾಸಿಗಳೇ ಆಗಿರಬಹುದು. ಆದುದರಿಂದ ನಾವು ನಿಮ್ಮ ಸಂಗಡ ಒಪ್ಪಂದ ಮಾಡಿಕೊಳ್ಳುವುದು ಹೇಗೆ?” ಎಂದು ಉತ್ತರಿಸಿದರು.೮ [8]ಅವರು ಯೆಹೋಶುವನಿಗೆ, “ನಾವು ನಿಮ್ಮ ಸೇವಕರು” ಎಂದರು. “ನೀವು ಯಾರು? ಎಲ್ಲಿಯವರು?” ಎಂದು ಆತ ವಿಚಾರಿಸಲು೯ [9]ಅವರು, “ನಿಮ್ಮ ಸೇವಕರಾದ ನಾವು ನಿಮ್ಮ ದೇವರಾದ ಸರ್ವೇಶ್ವರನ ನಾಮ ಮಹತ್ತನ್ನು ಕೇಳಿ ಬಹುದೂರ ದೇಶದಿಂದ ಬಂದಿದ್ದೇವೆ. ಆ ನಿಮ್ಮ ದೇವರು ಈಜಿಪ್ಟಿನಲ್ಲಿ ನಡೆಸಿದ ಮಹತ್ಕಾರ್ಯಗಳ ಸುದ್ದಿಯನ್ನು ನಮ್ಮ ಹಿರಿಯರೂ ದೇಶನಿವಾಸಿಗಳೂ ಕೇಳಿದ್ದಾರೆ.೧೦ [10]ಹೆಷ್ಬೋನಿನ ಅರಸ ಸೀಹೋನ್ ಮತ್ತು ಅಷ್ಟರೋತಿನಲ್ಲಿ ವಾಸವಾಗಿದ್ದ ಬಾಷಾನಿನ ಅರಸ ಓಗ್ ಎಂಬ ಈ ಇಬ್ಬರು ಅಮೋರಿಯರಿಗೆ ಆ ದೇವರು ಮಾಡಿದ್ದೆಲ್ಲವನ್ನು ಕೇಳಿದ್ದಾರೆ.೧೧ [11]ಅವರು ನಮ್ಮನ್ನು ಇಲ್ಲಿಗೆ ಕಳಿಸುತ್ತಾ, ‘ನೀವು ಪ್ರಯಾಣಕ್ಕಾಗಿ ಬುತ್ತಿ ಕಟ್ಟಿಕೊಂಡು ಹೋಗಿ ಇಸ್ರಯೇಲರನ್ನು ಎದುರುಗೊಳ್ಳಿ - ನಾವು ನಿಮ್ಮ ಸೇವಕರು, ನೀವು ನಮ್ಮ ಸಂಗಡ ಒಪ್ಪಂದ ಮಾಡಿಕೊಳ್ಳಿ ಎಂದು ವಿನಂತಿಸಿ,’ ಎಂದು ಹೇಳಿದರು.೧೨ [12]ನಾವು ನಿಮ್ಮನ್ನು ಭೇಟಿಯಾಗುವುದಕ್ಕಾಗಿ ಮನೆಬಿಟ್ಟು ಹೊರಟಾಗ ಪ್ರಯಾಣಕ್ಕೆಂದು ತೆಗೆದುಕೊಂಡ ಈ ರೊಟ್ಟಿ ಬಿಸಿಯಾಗಿತ್ತು. ಈಗ ಒಣಗಿ ಚೂರು ಚೂರಾಗಿದೆ ನೋಡಿ.೧೩ [13]ದ್ರಾಕ್ಷಾರಸ ತುಂಬಿಸಿಕೊಂಡಿದ್ದ ಈ ಬುದ್ದಲಿಗಳು ಹೊಸದಾಗಿದ್ದವು. ಈಗ ಹರಿದುಹೋಗಿವೆ. ನಮ್ಮ ಬಟ್ಟೆಬರೆಗಳು ಹಾಗೂ ಕೆರಗಳು ದೀರ್ಘ ಪ್ರಯಾಣದಿಂದ ಸವೆದುಹೋಗಿವೆ,” ಎಂದು ವಿವರಿಸಿದರು.೧೪ [14]ಆಗ ಇಸ್ರಯೇಲರು ಅವರ ಬುತ್ತಿಯಲ್ಲಿ ಸ್ವಲ್ಪ ತೆಗೆದುಕೊಂಡರು. ಆದರೆ ಸರ್ವೇಶ್ವರ ಸ್ವಾಮಿಯ ಅಪ್ಪಣೆಯನ್ನು ಕೇಳಲಿಲ್ಲ.೧೫ [15]ಯೆಹೋಶುವ ಅವರೊಡನೆ, “ನಿಮ್ಮ ಜೀವವನ್ನು ಕಾಪಾಡುತ್ತೇವೆ” ಎಂದು ಶಾಂತಿಸಂಧಾನ ಮಾಡಿಕೊಂಡನು. ಸಭೆಯ ನಾಯಕರೂ ಅಂತೆಯೇ ಪ್ರಮಾಣ ಮಾಡಿದರು.೧೬ [16]ಈ ಒಪ್ಪಂದವಾದ ಮೂರು ದಿನಗಳ ಮೇಲೆ ಅವರು ತಮ್ಮ ನೆರೆಯವರೆಂದೂ ತಮ್ಮ ಮಧ್ಯೆ ವಾಸಿಸುವವರೆಂದೂ ಇಸ್ರಯೇಲರಿಗೆ ಗೊತ್ತಾಯಿತು.೧೭ [17]ಹೇಗೆಂದರೆ - ಮೂರನೆಯ ದಿನದಂದು ಇಸ್ರಯೇಲರು ಹೊರಟು ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ಯಾರೀಮ್ ಎಂಬ ಊರುಗಳನ್ನು ಸೇರಿದರು. ಆಗ ಆ ಊರುಗಳು ಆ ಜನರದ್ದೇ ಎಂದು ಗೊತ್ತಾಯಿತು.೧೮ [18]ಸಭೆಯ ನಾಯಕರು ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿನಲ್ಲಿ ಆ ಜನರಿಗೆ ಪ್ರಮಾಣ ಮಾಡಿದ್ದರಿಂದ ಇಸ್ರಯೇಲರು ಅವರನ್ನು ಕೊಲ್ಲಲಿಲ್ಲ. ಆದರೆ ಸಭಿಕರೆಲ್ಲರುತಮ್ಮ ನಾಯಕರಿಗೆ ವಿರುದ್ಧ ಗೊಣಗುಟ್ಟಿದರು.೧೯ [19]ಆಗ ನಾಯಕರೆಲ್ಲರು ಸಭೆಯ ಎಲ್ಲ ಸದಸ್ಯರಿಗೆ, “ನಾವು ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿನಲ್ಲಿ ಅವರಿಗೆ ಪ್ರಮಾಣ ಮಾಡಿದ್ದರಿಂದ ಅವರನ್ನು ಮುಟ್ಟಲಾಗದು.೨೦ [20]ನಾವು ಇಟ್ಟ ಅಪ್ಪಣೆಯ ನಿಮಿತ್ತ ದೇವರ ಕೋಪ ನಮ್ಮ ಮೇಲೆ ಬಾರದಂತೆ ಅವರನ್ನು ಜೀವದಿಂದ ಉಳಿಸಬೇಕು. ನಾವು ಹೀಗೆ ಮಾಡೋಣ: ಅವರನ್ನು ಬದುಕಲು ಬಿಟ್ಟುಬಿಡಿ.೨೧ [21]ಆದರೆ ನಮ್ಮ ಜನರಿಗೆ ಅವರು ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರಲಿ,” ಎಂದು ಹೇಳಿದರು. ನಾಯಕರ ಮಾತಿನಂತೆಯೇ ಆಯಿತು.೨೨ [22]ಯೆಹೋಶುವನು ಗಿಬ್ಯೋನ್ಯರನ್ನು ಕರೆಸಿ, “ನೀವು ನಮ್ಮ ನಡುವೆ ವಾಸಿಸುವವರಾಗಿದ್ದರೂ ಬಹುದೂರದವರೆಂದು ಹೇಳಿ ನಮ್ಮನ್ನು ವಂಚಿಸಿದ್ದೇಕೆ?೨೩ [23]ಇದರಿಂದಾಗಿ ನೀವು ಶಾಪಗ್ರಸ್ತರು! ನೀವು ಯಾವಾಗಲೂ ಊಳಿಗದವರಾಗಿದ್ದು, ನನ್ನ ದೇವರ ಮಂದಿರಕ್ಕೆ ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರಬೇಕು,” ಎಂದನು.೨೪ [24]ಅವರು ಯೆಹೋಶುವನಿಗೆ, “ನಿಮ್ಮ ದೇವರಾದ ಸರ್ವೇಶ್ವರ ತಮ್ಮ ದಾಸ ಮೋಶೆಗೆ, ‘ನಾನು ನಿಮಗೆ ಈ ದೇಶವನ್ನೆಲ್ಲ ಕೊಡುವಾಗ ನೀವು ಇದರ ನಿವಾಸಿಗಳನ್ನೆಲ್ಲಾ ಸಂಹರಿಸಬೇಕು’ ಎಂದು ಆಜ್ಞಾಪಿಸಿದ್ದಾರೆಂದು ಕೇಳಿ ನಮ್ಮ ಪ್ರಾಣ ತೆಗೆಯುವಿರೆಂದು ಹೆದರಿ ಹೀಗೆ ಮಾಡಿದೆವು.೨೫ [25]ಇಗೋ, ಈಗ ನಾವು ನಿಮ್ಮ ಕೈಯಲ್ಲಿ ಇದ್ದೇವೆ. ನಿಮಗೆ ಯಾವುದು ಒಳ್ಳೆಯದು, ನ್ಯಾಯವಾದುದು ಎಂದು ತೋರುತ್ತದೋ ಅದರಂತೆ ನಮಗೆ ಮಾಡಿ,” ಎಂದು ಉತ್ತರಕೊಟ್ಟರು.೨೬ [26]ಯೆಹೋಶುವನು ತಾನು ಮೊದಲೇ ಹೇಳಿದಂತೆ ಮಾಡಿದನು. ಅವರನ್ನು ಇಸ್ರಯೇಲರ ಕೈಯಿಂದ ಹತರಾಗದಂತೆ ತಪ್ಪಿಸಿದನು.೨೭ [27]ಸಭೆಗೂ ಸರ್ವೇಶ್ವರ ಆಯ್ದುಕೊಂಡ ಸ್ಥಳದಲ್ಲಿ ಕಟ್ಟಲಾಗುವ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರನ್ನಾಗಿ ಹಾಗೂ ನೀರು ತರುವವರನ್ನಾಗಿ ನೇಮಿಸಿದನು. ಅವರು ಇಂದಿನವರೆಗೂ ಅದೇ ಊಳಿಗದಲ್ಲಿದ್ದಾರೆ.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಯೊಹೋಶುವ ೯ 00:00:00 00:00:00 0.5x 2.0x https://beblia.bible:81/BibleAudio/kannadakncl/joshua/009.mp3 24 9