× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಪೇತ್ರನು ೧ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧೨೩೪೫1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫1 1 1 ಕನ್ನಡ ಬೈಬಲ್ (KNCL) 2016 ಪೇತ್ರನು ೧ ೧ ಟಿಪ್ಪಣಿಗಳನ್ನು ಉಳಿಸಿ ೧ [1]ಪೊಂತ, ಗಲಾತ್ಯ, ಕಪ್ಪದೋಕ್ಯ, ಏಷ್ಯಾ, ಬಿಥೂನಿಯ ಪ್ರಾಂತ್ಯಗಳಲ್ಲಿ ಚದರಿಹೋಗಿ ನಿರಾಶ್ರಿತರಂತೆ ಜೀವಿಸುತ್ತಿರುವ ದೇವಜನರಿಗೆ - ಯೇಸುಕ್ರಿಸ್ತರ ಪ್ರೇಷಿತನಾದ ಪೇತ್ರನು ಬರೆಯುವ ಪತ್ರ:೨ [2]ನೀವು ಯೇಸುಕ್ರಿಸ್ತರಿಗೆ ಶರಣಾಗಿ ಅವರ ರಕ್ತದಿಂದ ಶುದ್ಧೀಕರಣಹೊಂದಲು ತಂದೆಯಾದ ದೇವರ ಸಂಕಲ್ಪಾನುಸಾರ ಆಯ್ಕೆಯಾದವರು; ಅವರ ಆತ್ಮದ ಮುಖಾಂತರ ಪವಿತ್ರೀಕರಿಸಲಾದವರು. ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಸಮೃದ್ಧಿಯಾಗಿ ಲಭಿಸಲಿ!೩ [3]ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ! ಯೇಸುಕ್ರಿಸ್ತರನ್ನು ಮರಣದಿಂದ ಪುನರುತ್ಥಾನಗೊಳಿಸುವುದರ ಮೂಲಕ ದೇವರು ತಮ್ಮ ಅಪಾರ ಕರುಣೆಯಿಂದ ನಮಗೆ ಹೊಸ ಜನ್ಮವನ್ನು ಮತ್ತು ಜೀವಂತ ನಿರೀಕ್ಷೆಯನ್ನು ನೀಡಿದ್ದಾರೆ.೪ [4]ಹೀಗೆ ಅವರು, ತಮ್ಮ ಸ್ವಂತ ಜನರಿಗಾಗಿ ಸ್ವರ್ಗದಲ್ಲಿ ಕಾದಿರಿಸಿರುವ ಅಳಿಯದ, ಅಕ್ಷಯವಾದ, ಅನಂತವಾದ ಸಿರಿಸಂಪತ್ತಿಗೆ ನಿಮ್ಮನ್ನು ಬಾಧ್ಯರನ್ನಾಗಿ ಮಾಡಿದ್ದಾರೆ.೫ [5]ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗಲಿರುವ ಜೀವೋದ್ಧಾರವು ವಿಶ್ವಾಸಿಗಳಾದ ನಿಮಗೆ ಲಭಿಸುವಂತೆ ದೇವರು ತಮ್ಮ ಶಕ್ತಿಯಿಂದ ನಿಮ್ಮನ್ನು ಕಾಪಾಡುತ್ತಾರೆ.೬ [6]ಸದ್ಯಕ್ಕೆ ನೀವು ಕೊಂಚಕಾಲ ಹಲವಿಧವಾದ ಪರಿಶೋಧನೆಗಳ ನಿಮಿತ್ತ ದುಃಖವನ್ನು ಅನುಭವಿಸಬೇಕಾಗಿದ್ದರೂ ಪ್ರತ್ಯಕ್ಷವಾಗಲಿರುವ ಆ ಸಿರಿಸಂಪತ್ತನ್ನು ಜ್ಞಾಪಿಸಿಕೊಂಡು ಹರ್ಷಚಿತ್ತರಾಗಿರಿ.೭ [7]ಪರಿಶೋಧನೆಗಳು ಬಂದೊದಗುವುದು ನಿಮ್ಮ ವಿಶ್ವಾಸವನ್ನು ಪುಟವಿಡುವುದಕ್ಕಾಗಿಯೇ. ನಶಿಸಿಹೋಗುವ ಬಂಗಾರವೂ ಕೂಡ ಬೆಂಕಿಯಿಂದ ಪರಿಶೋಧಿತವಾಗುತ್ತದೆ. ಬಂಗಾರಕ್ಕಿಂತಲೂ ಬಹು ಅಮೂಲ್ಯವಾದ ನಿಮ್ಮ ವಿಶ್ವಾಸವು ಶೋಧಿತವಾಗಬೇಕು. ಆಗ ಮಾತ್ರ ಯೇಸುಕ್ರಿಸ್ತರು ಪ್ರತ್ಯಕ್ಷವಾಗುವ ದಿನದಂದು ನಿಮಗೆ ಪ್ರಶಂಸೆ, ಪ್ರತಿಷ್ಠೆ ಹಾಗೂ ಪ್ರತಿಭೆ ದೊರಕುತ್ತವೆ.೮ [8]ಕ್ರಿಸ್ತಯೇಸುವನ್ನು ನೀವು ನೋಡದಿದ್ದರೂ ಅವರನ್ನು ಪ್ರೀತಿಸುತ್ತೀರಿ. ನೀವೀಗ ಕಣ್ಣಾರೆ ಕಾಣದಿದ್ದರೂ ಅವರನ್ನು ವಿಶ್ವಾಸಿಸುತ್ತೀರಿ.೯ [9]ಇದರ ಅಂತಿಮ ಫಲವಾಗಿ ಜೀವೋದ್ಧಾರವನ್ನು ಪಡೆಯುತ್ತೀರಿ. ಈ ಕಾರಣದಿಂದ ಅವರ್ಣನೀಯವಾದ ಮಹದಾನಂದದಿಂದ ನಲಿಯುತ್ತೀರಿ.೧೦ [10]ಈ ಜೀವೋದ್ಧಾರವನ್ನು ಕುರಿತೇ ಪ್ರವಾದಿಗಳು ಸೂಕ್ಷ್ಮವಾಗಿ ವಿಚಾರಿಸಿ ಸಂಶೋಧನೆ ನಡೆಸಿದರು. ದೇವರು ನಿಮಗೆ ಕೊಡಲಿದ್ದ ಈ ವರವನ್ನು ಕುರಿತೇ ಅವರು ಪ್ರವಾದಿಸಿದರು.೧೧ [11]ಕ್ರಿಸ್ತಯೇಸು ಅನುಭವಿಸಬೇಕಾಗಿದ್ದ ಮರಣವನ್ನು, ಯಾತನೆಯನ್ನು ಮತ್ತು ಅನಂತರದ ಪುನರುತ್ಥಾನದ ಮಹಿಮೆಯನ್ನು ಈ ಪ್ರವಾದಿಗಳು ಪ್ರವಾದಿಸುವಾಗ, ತಮ್ಮಲ್ಲಿದ್ದ ಕ್ರಿಸ್ತಾತ್ಮವು ಇದಕ್ಕೆ ಯಾವ ಸಮಯ ಸಂದರ್ಭವನ್ನು ಸೂಚಿಸುತ್ತದೆ ಎಂಬುದನ್ನು ಕಂಡುಹಿಡಿಯಲು ಪ್ರಯತ್ನಿಸಿದರು.೧೨ [12]ಈ ಸೇವಾಕಾರ್ಯವನ್ನು ಅವರು ಸ್ವಾರ್ಥಸಾಧನೆಗಾಗಿ ಅಲ್ಲ, ನಿಮಗೋಸ್ಕರವಾಗಿಯೇ ಮಾಡುತ್ತಿರುವುದಾಗಿ ಅವರಿಗೆ ತಿಳಿಸಲಾಗಿತ್ತು. ಅವರು ಪ್ರವಾದಿಸಿದ ಘಟನೆಗಳು ಈಗ ಸಂಭವಿಸಿವೆ ಎಂಬುದನ್ನು ಸ್ವರ್ಗದಿಂದ ಕಳುಹಿಸಲಾದ ಪವಿತ್ರಾತ್ಮರ ಶಕ್ತಿಯಿಂದ, ಶುಭಸಂದೇಶವನ್ನು ಸಾರಿದವರ ಮುಖಾಂತರ ನಿಮಗೆ ಪ್ರಕಟಿಸಲಾಗಿದೆ. ದೇವದೂತರು ಸಹ ವೀಕ್ಷಿಸಲು ಅಪೇಕ್ಷಿಸುವಂಥ ಸಂಗತಿಗಳಿವು.೧೩ [13]ಆದ್ದರಿಂದ ನೀವು ಸ್ವಸ್ಥಚಿತ್ತರಾಗಿರಿ. ನಿಮ್ಮ ಮನಸ್ಸು ಕಾರ್ಯೋನ್ಮುಖವಾಗಿರಲಿ. ಯೇಸುಕ್ರಿಸ್ತರು ಪ್ರತ್ಯಕ್ಷವಾಗುವಾಗ ನಿಮಗೆ ಲಭಿಸಲಿರುವ ಸೌಭಾಗ್ಯದಲ್ಲಿ ಪೂರ್ಣ ನಿರೀಕ್ಷೆ ಉಳ್ಳವರಾಗಿರಿ.೧೪ [14]ವಿಧೇಯರಾದ ಮಕ್ಕಳಂತೆ ನಡೆದುಕೊಳ್ಳಿ. ನೀವು ಅಜ್ಞಾನಿಗಳಾಗಿದ್ದಾಗ ದುರಿಚ್ಛೆಗಳಿಗೆ ಈಡಾಗಿದ್ದಿರಿ; ಈಗ ಅವುಗಳಿಗೆ ಎಡೆಕೊಡಬೇಡಿ.೧೫ [15]ಅದಕ್ಕೆ ಬದಲು ನಿಮ್ಮನ್ನು ಕರೆದ ದೇವರು ಪವಿತ್ರರಾಗಿರುವಂತೆ ನೀವೂ ನಿಮ್ಮ ನಡೆನುಡಿಯಲ್ಲಿ ಪವಿತ್ರರಾಗಿರಿ.೧೬ [16]ಏಕೆಂದರೆ, “ನಾನು ಪವಿತ್ರನಾಗಿರುವುದರಿಂದ ನೀವೂ ಪವಿತ್ರರಾಗಿರಿ,” ಎಂದು ಲಿಖಿತವಾಗಿದೆ.೧೭ [17]ನೀವು ದೇವರಿಗೆ ಪ್ರಾರ್ಥನೆಮಾಡುವಾಗ, ಅವರನ್ನು “ತಂದೆಯೇ” ಎಂದು ಸಂಬೋಧಿಸುತ್ತೀರಿ. ಅವರು ಪಕ್ಷಪಾತಿ ಅಲ್ಲ. ಎಲ್ಲರಿಗೂ ಅವರವರ ಕೃತ್ಯಗಳಿಗೆ ತಕ್ಕಂತೆ ನ್ಯಾಯತೀರ್ಪು ನೀಡುವವರು. ಆದ್ದರಿಂದ ನಿಮ್ಮ ಇಹಲೋಕದ ಯಾತ್ರೆಯನ್ನು ಭಯಭಕ್ತಿಯಿಂದ ಸಾಗಿಸಿರಿ.೧೮ [18]ನಿಮ್ಮ ಪೂರ್ವಜರಿಂದ ಪರಂಪರೆಯಾಗಿ ಬಂದಿರುವ ನಿರರ್ಥಕ ನಡವಳಿಕೆಯಿಂದ ನಿಮ್ಮನ್ನು ಬಿಡುಗಡೆಮಾಡಲು ಕೊಡಲಾದ ಬೆಲೆಯು ಎಂಥದ್ದೆಂದು ನಿಮಗೆ ತಿಳಿದಿದೆ. ಅದು ನಶಿಸಿಹೋಗುವ ಬೆಳ್ಳಿಬಂಗಾರವಲ್ಲ.೧೯ [19]ಬದಲಿಗೆ, ಯಾವ ನ್ಯೂನತೆಯೂ ಇಲ್ಲದ, ಯಾವ ಕಳಂಕವೂ ಇಲ್ಲದ ಬಲಿಯ ಕುರಿಮರಿಯಂಥ ಕ್ರಿಸ್ತಯೇಸುವಿನ ಅಮೂಲ್ಯ ರಕ್ತವೇ ಆ ಬೆಲೆ.೨೦ [20]ವಿಶ್ವಸೃಷ್ಟಿಗೆ ಮೊದಲೇ ಯೇಸುಕ್ರಿಸ್ತರನ್ನು ದೇವರು ಇದಕ್ಕೆಂದು ಗೊತ್ತುಮಾಡಿದ್ದರು. ಈ ಅಂತಿಮ ದಿನಗಳಲ್ಲಿ ನಿಮಗೋಸ್ಕರ ಯೇಸು ಪ್ರತ್ಯಕ್ಷರಾದರು.೨೧ [21]ಮರಣದಿಂದ ಪುನರುತ್ಥಾನಗೊಳಿಸಿ ಮಹಿಮೆಪಡಿಸಿದ ದೇವರಲ್ಲಿ ನೀವು ವಿಶ್ವಾಸವಿಟ್ಟದ್ದು ಇವರ ಮುಖಾಂತರವೇ. ಹೀಗೆ ನಿಮ್ಮ ವಿಶ್ವಾಸವೂ ನಿರೀಕ್ಷೆಯೂ ದೇವರಲ್ಲೇ ನೆಲೆಗೊಂಡಿವೆ.೨೨ [22]ಸತ್ಯಕ್ಕೆ ಶರಣಾಗಿ ಆತ್ಮಶುದ್ಧಿಹೊಂದಿರುವ ನೀವು ಸಹೋದರರನ್ನು ನಿಷ್ಕಪಟದಿಂದ ಪ್ರೀತಿಸಬಲ್ಲಿರಿ. ಎಂದೇ, ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.೨೩ [23]ನೀವು ಸಜೀವವಾದ ಅನಂತ ದೈವವಾಕ್ಯದ ಮೂಲಕ ಹೊಸಜನ್ಮವನ್ನು ಪಡೆದಿದ್ದೀರಿ; ಈ ಜನ್ಮವನ್ನು ನೀವು ಪಡೆದಿರುವುದು ಮರ್ತ್ಯಮಾನವನಿಂದಲ್ಲ, ಅಮರ ದೇವರಿಂದ.೨೪ [24]ಪವಿತ್ರಗ್ರಂಥದಲ್ಲಿ ಬರೆದಿರುವಂತೆ: ನರಮಾನವರೆಲ್ಲರೂ ಗರಿಹುಲ್ಲಿನಂತೆ ಅವರ ವೈಭವವೆಲ್ಲವೂ ಹುಲ್ಲಿನ ಹೂವಿನಂತೆ. ಹುಲ್ಲೊಣಗಿ ಹೂ ಬಾಡಿಬೀಳುವುದು ಪ್ರಭುವಿನ ವಾಕ್ಯವಾದರೋ ಶಾಶ್ವತವಾಗಿ ನಿಲ್ಲುವುದು.೨೫ [25]ಈ ವಾಕ್ಯವೇ ನಿಮಗೆ ಸಾರಲಾದ ಶುಭಸಂದೇಶ.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಪೇತ್ರನು ೧ ೧ 00:00:00 00:00:00 0.5x 2.0x https://beblia.bible:81/BibleAudio/kannadakncl/1peter/001.mp3 5 1