× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ನ್ಯಾಯಸ್ಥಾಪಕರು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೬ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧1 1 1 ಕನ್ನಡ ಬೈಬಲ್ (KNCL) 2016 ನ್ಯಾಯಸ್ಥಾಪಕರು ೧೬ ಟಿಪ್ಪಣಿಗಳನ್ನು ಉಳಿಸಿ ೧ [1]ತರುವಾಯ ಸಂಸೋನನು ಗಾಜಾಕ್ಕೆ ಹೋದಾಗ ಅಲ್ಲಿ ಒಬ್ಬ ವೇಶ್ಯೆಯನ್ನು ಕಂಡು ಅವಳ ಬಳಿಗೆ ಹೋದನು.೨ [2]ಸಂಸೋನನು ಬಂದಿರುವುದು ಗಾಜಾದವರಿಗೆ ಗೊತ್ತಾಯಿತು? ಅವರು ಬಂದು ಅವನನ್ನು ಸುತ್ತಿಕೊಂಡರು. ಸೂರ್ಯೋದಯವಾಗುತ್ತಲೇ ಅವನನ್ನು ಕೊಂದು ಹಾಕಬೇಕೆಂದುಕೊಂಡು ರಾತ್ರಿಯೆಲ್ಲಾ ಊರಬಾಗಿಲಲ್ಲೇ ಹೊಂಚುಹಾಕುತ್ತಾ ಸುಮ್ಮನಿದ್ದರು.೩ [3]ಸಂಸೋನನು ಮಲಗಿ ಮಧ್ಯರಾತ್ರಿಯಲ್ಲೆದ್ದು ಊರಬಾಗಿಲುಗಳನ್ನೂ ಕದಗಳನ್ನೂ ಅದರ ಎರಡು ನಿಲುವು ಪಟ್ಟಿಗಳನ್ನೂ ಅಗುಳಿಗಳನ್ನೂ ಕಿತ್ತು ಹೆಗಲ ಮೇಲೆ ಹೊತ್ತುಕೊಂಡು ಹೋಗಿ ಹೆಬ್ರೋನಿನ ಎದುರಿಗಿರುವ ಬೆಟ್ಟದ ತುದಿಯ ಮೇಲೆ ಇಟ್ಟನು.೪ [4]ಅನಂತರ ಸಂಸೋನನು ಸೋರೇಕ್ ತಗ್ಗಿನಲ್ಲಿ ವಾಸವಾಗಿದ್ದ ದೆಲೀಲಾ ಎಂಬ ಮಹಿಳೆಯಿಂದ ಮೋಹಿತನಾದನು.೫ [5]ಫಿಲಿಷ್ಟಿಯರ ಮುಖಂಡರು ಅವಳ ಬಳಿಗೆ ಹೋಗಿ ಅವಳಿಗೆ, “ನೀನು ಅವನನ್ನು ಮರುಳುಗೊಳಿಸಿ ಅವನ ಮಹಾಶಕ್ತಿಯ ಮೂಲ ಯಾವುದೆಂಬುದನ್ನು ತಿಳಿದುಕೋ: ನಾವು ಅವನನ್ನು ಗೆದ್ದು, ಕಟ್ಟಿ, ಅಡಗಿಸುವ ವಿಧಾನವನ್ನೂ ಗೊತ್ತುಮಾಡಿಕೊಂಡು ನಮಗೆ ತಿಳಿಸು, ನಮ್ಮಲ್ಲಿ ಪ್ರತಿಯೊಬ್ಬನೂ ನಿನಗೆ ಸಾವಿರದ ನೂರು ಬೆಳ್ಳಿ ನಾಣ್ಯಗಳನ್ನು ಕೊಡುವೆವು,” ಎಂದು ಹೇಳಿದರು.೬ [6]ದೆಲೀಲಳು ಸಂಸೋನನಿಗೆ, “ನಿಮ್ಮ ಇಂಥ ಮಹಾಶಕ್ತಿ ಹೇಗೆ ಬಂತು? ನಿಮ್ಮನ್ನು ಕಟ್ಟಿ ಅಡಗಿಸುವುದು ಹೇಗೆ ಎಂಬುದನ್ನು ದಯವಿಟ್ಟು ನನಗೆ ತಿಳಿಸಿ,” ಎಂದಳು.೭ [7]ಅವನು, “ಕರುಳಿನ ಏಳು ಹಸಿ ತಂತಿಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು,” ಎಂದು ಹೇಳಿದನು.೮ [8]ಫಿಲಿಷ್ಟಿಯರ ಮುಖಂಡರು ಅಂಥ ಏಳು ಹಸಿ ತಂತಿಗಳನ್ನು ಅವಳಿಗೆ ತಂದುಕೊಟ್ಟರು.೯ [9]ಅವಳು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿಟ್ಟು ಅವುಗಳಿಂದ ಅವನನ್ನು ಕಟ್ಟಿಸಿ, “ಸಂಸೋನರೇ, ನಿಮ್ಮ ಮೇಲೆ ಫಿಲಿಷ್ಟಿಯರು ಬಂದರು,” ಎಂದು ಕೂಗಿದಳು. ಅವನು ಬೆಂಕಿ ತಗಲಿದ ಸೆಣಬಿನ ದಾರವನ್ನೋ ಎಂಬಂತೆ ಆ ತಂತಿಗಳನ್ನು ಹರಿದುಬಿಟ್ಟನು. ಹೀಗೆ ಅವನ ಶಕ್ತಿಯ ರಹಸ್ಯ ತಿಳಿಯದೆಹೋಯಿತು.೧೦ [10]ದೆಲೀಲಳು ಮತ್ತೊಮ್ಮೆ ಸಂಸೋನನಿಗೆ, “ನೀವು ನನ್ನನ್ನು ವಂಚಿಸಿದಿರಿ; ಸುಳ್ಳಾಡದೆ ನಿಮ್ಮನ್ನು ಯಾವುದರಿಂದ ಕಟ್ಟಬಹುದೆಂಬುದನ್ನು ದಯವಿಟ್ಟು ನನಗೆ ತಿಳಿಸಿ,” ಎಂದಳು.೧೧ [11]ಅವನು ಅವಳಿಗೆ, “ಯಾವುದಕ್ಕೂ ಉಪಯೋಗಿಸದ ಹೊಸ ಹಗ್ಗಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು,” ಎಂದನು.೧೨ [12]ಅವನು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿರಿಸಿ ಹೊಸ ಹಗ್ಗಗಳನ್ನು ತೆಗೆದುಕೊಂಡು ಅವುಗಳಿಂದ ಅವನನ್ನು ಕಟ್ಟಿ, “ಸಂಸೋನರೇ, ಫಿಲಿಷ್ಟಿಯರು ಬಂದಿದ್ದಾರೆ,” ಎಂದು ಕೂಗಲು ಅವನೆದ್ದು ತೋಳುಗಳಿಗೆ ಕಟ್ಟಿದ್ದ ಹಗ್ಗಗಳನ್ನು ದಾರವನ್ನೋ ಎಂಬಂತೆ ಹರಿದುಬಿಟ್ಟನು.೧೩ [13]ಆಗ ದೆಲೀಲಳು ಸಂಸೋನನಿಗೆ, “ನೀವು ತಿರುಗಿ ನನ್ನನ್ನು ವಂಚಿಸಿದಿರಿ, ಸುಳ್ಳಾಡಿದಿರಿ; ನಿಮ್ಮನ್ನು ಯಾವುದರಿಂದ ಕಟ್ಟಬಹುದೆಂದು ತಿಳಿಸಿ,” ಎನ್ನಲು ಅವನು, “ನನ್ನ ತಲೆಗೂದಲಿನ ಏಳು ಜಡೆಗಳನ್ನು ಮಗ್ಗದಲ್ಲಿ ನೇಯ್ದರೆ ಸಾಕು,” ಎಂದು ಹೇಳಿದನು.೧೪ [14]ಅವಳು ಅವನ ತಲೆಗೂದಲಿನ ಏಳು ಜಡೆಗಳನ್ನು ಗೂಟಕ್ಕೆ ಭದ್ರಮಾಡಿ, “ಸಂಸೋನರೇ, ಫಿಲಿಷ್ಟಿಯರು ಬಂದಿದ್ದಾರೆ,” ಎಂದು ಕೂಗಿದಳು. ಅವನು ನಿದ್ರೆಯಿಂದ ಎಚ್ಚೆತ್ತು ಮಗ್ಗವನ್ನೂ ಮಗ್ಗದ ಗೂಟವನ್ನೂ ಕಿತ್ತುಕೊಂಡು ಹೋದನು.೧೫ [15]ಆಕೆ ಇನ್ನೊಮ್ಮೆ ಅವನಿಗೆ, “ನಿನ್ನನ್ನು ಪ್ರೀತಿಸುತ್ತೇನೆ” ಎಂದು ನೀವು ನನಗೆ ಹೇಗೆ ಹೇಳಬಹುದು? ನಿಮ್ಮ ಮನಸ್ಸು ನನ್ನ ಮೇಲೆ ಇಲ್ಲವೇ ಇಲ್ಲ; ಮೂರು ಸಾರಿ ವಂಚಿಸಿದಿರಿ. ನಿಮಗೆ ಇಂಥ ಮಹಾಶಕ್ತಿ ಯಾವುದರಿಂದ ಬಂದಿತೆಂಬುದನ್ನು ನನಗೆ ತಿಳಿಸಲಿಲ್ಲ,” ಎಂದಳು.೧೬ [16]ಇದಲ್ಲದೆ, ಅವಳು ಅವನನ್ನು ದಿನದಿನವೂ ಮಾತಿನಿಂದ ಪೀಡಿಸುತ್ತಿದ್ದುದರಿಂದ ಅವನಿಗೆ ಸಾಯುವುದೇ ಒಳ್ಳೆಯದೆನ್ನುವಷ್ಟು ಬೇಸರ ಆಯಿತು.೧೭ [17]ಕೊನೆಗೆ ಅವನು, “ಕ್ಷೌರಕತ್ತಿ ನನ್ನ ತಲೆಯ ಮೇಲೆ ಬಂದದ್ದಿಲ್ಲ; ನಾನು ಮಾತೃಗರ್ಭ ಬಿಟ್ಟಂದಿನಿಂದಲೇ ದೇವರಿಗೆ ಪ್ರತಿಷ್ಠಿತನಾದವನು. ನನ್ನ ತಲೆಯನ್ನು ಕ್ಷೌರಮಾಡಿದರೆ ನನ್ನ ಶಕ್ತಿ ಹೋಗುವುದು; ಮತ್ತು ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು,” ಎಂದು ತನ್ನ ಗುಟ್ಟನ್ನೆಲ್ಲಾ ಆಕೆಯ ಮುಂದೆ ಬಿಚ್ಚಿ ಹೇಳಿದನು.೧೮ [18]ಅವನು ಇದ್ದದ್ದನ್ನು ಇದ್ದ ಹಾಗೆಯೇ ಹೇಳಿದನೆಂದು ದೆಲೀಲಳು ತಿಳಿದು ಫಿಲಿಷ್ಟಿಯ ಮುಖಂಡರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ಇದೊಂದು ಸಾರಿ ಬನ್ನಿ; ಅವರು ನನಗೆ ತಮ್ಮ ಹೃದಯವನ್ನೆಲ್ಲಾ ಬಿಚ್ಚಿದ್ದಾರೆ,” ಎಂದು ಹೇಳಿ ಕರೆಸಿದಳು. ಅವರು ಹಣವನ್ನು ತೆಗೆದುಕೊಂಡು ಆಕೆಯ ಬಳಿಗೆ ಬಂದರು.೧೯ [19]ಆಕೆ ಸಂಸೋನನನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡು ಅವನಿಗೆ ನಿದ್ರೆಹತ್ತಿದಾಗ ಒಬ್ಬ ಮನುಷ್ಯನಿಂದ ಅವನ ತಲೆಯ ಏಳು ಜಡೆಗಳನ್ನು ಬೋಳಿಸಿ ಅವನನ್ನು ದುರ್ಬಲಪಡಿಸಿದಳು.೨೦ [20]ಅವನ ಶಕ್ತಿ ಇಂಗಿಹೋಯಿತು. ಆಗ ಅವಳು, “ಸಂಸೋನರೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಿದಳು. ಅವನು ಎಚ್ಚೆತ್ತು, “ಮುಂಚಿನಂತೆಯೇ ಈಗಲೂ ಕೊಸರಿಕೊಂಡು ಹೋಗುವೆನು,” ಎಂದುಕೊಂಡನು. ಆದರೆ ಸರ್ವೇಶ್ವರ ತನ್ನನ್ನು ಬಿಟ್ಟುಹೋಗಿ ಇದ್ದಾರೆಂಬುದು ಅವನಿಗೆ ತಿಳಿಯಲಿಲ್ಲ.೨೧ [21]ಫಿಲಿಷ್ಟಿಯರು ಅವನನ್ನು ಹಿಡಿದು, ಕಣ್ಣುಗಳನ್ನು ಕಿತ್ತು, ಗಾಜಾಕ್ಕೆ ಒಯ್ದು, ಕಬ್ಬಿಣದ ಬೇಡಿಗಳನ್ನು ಹಾಕಿ, ಸೆರೆಮನೆಯಲ್ಲಿ ಬೀಸುವುದಕ್ಕೆ ಹಚ್ಚಿದರು.೨೨ [22]ಅಷ್ಟರಲ್ಲಿ ಅವನ ತಲೆಗೂದಲುಗಳು ಬೆಳೆಯತೊಡಗಿದವು.೨೩ [23]ಶತ್ರುವಾದ ಸಂಸೋನನನ್ನು ತಮ್ಮ ಕೈಗೆ ಒಪ್ಪಿಸಿದ ತಮ್ಮ ದೇವರಾದ ದಾಗೋನನಿಗೆ ಮಹಾಬಲಿಯನ್ನು ಸಮರ್ಪಿಸಿ ಸಂತೋಷಪಡಬೇಕೆಂದು ಫಿಲಿಷ್ಟಿಯರ ಮುಖಂಡರು ಕೂಡಿಬಂದರು.೨೪ [24]ಜನರು ಸಂಸೋನನನ್ನು ನೋಡಿ: ‘ನಮ್ಮ ದೇಶವನ್ನು ಹಾಳುಮಾಡಿದ, ನಮ್ಮಲ್ಲಿ ಅನೇಕರನ್ನು ಕೊಂದುಹಾಕಿದ, ಈ ಶತ್ರುವನ್ನು ನಮ್ಮ ದೇವರೇ ನಮ್ಮ ಕೈಗೊಪ್ಪಿಸಿದ,’ ಎಂದು ಗಾನಮಾಡಿದರು.೨೫ [25]ಅವರು ಆನಂದಲಹರಿಯಲ್ಲಿದ್ದಾಗ, “ನಮ್ಮ ಮನೋರಂಜನೆಗಾಗಿ ಸಂಸೋನನನ್ನು ಕರೆದುಕೊಂಡು ಬನ್ನಿ,” ಎಂದರು. ಅದರಂತೆಯೇ ಸಂಸೋನನನ್ನು ಸೆರೆಮನೆಯಿಂದ ಕರೆದುಕೊಂಡು ಬಂದರು. ಅವನು ಎರಡು ಸ್ತಂಭಗಳ ನಡುವೆ ನಿಂತು ಅವರೆಲ್ಲರ ಮನರಂಜಿಸಬೇಕಾಯಿತು.೨೬ [26]ಆಗ ಸಂಸೋನನು ತನ್ನನ್ನು ಕೈಹಿಡಿದು ನಡೆಸುತ್ತಿದ್ದ ಹುಡುಗನಿಗೆ, “ನನ್ನ ಕೈಗಳನ್ನು ಬಿಡು; ನಾನು ಕೈಯಾಡಿಸಿ ಮನೆಗೆ ಆಧಾರವಾಗಿರುವ ಸ್ತಂಭಗಳನ್ನು ಹುಡುಕಿ ಅವುಗಳಿಗೆ ಸ್ವಲ್ಪ ಒರಗಿಕೊಳ್ಳುತ್ತೇನೆ,” ಎಂದನು.೨೭ [27]ಆ ಮನೆ ಸ್ತ್ರೀಪುರುಷರಿಂದ ಕಿಕ್ಕಿರಿದಿತ್ತು. ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಅಲ್ಲಿದ್ದರು. ಸಂಸೋನನು ತೋರಿಸುತ್ತಿದ್ದ ಮನೋರಂಜನಾ ಕಾರ್ಯಗಳನ್ನು ನೋಡುವುದಕ್ಕಾಗಿ ಬಂದವರಲ್ಲಿ ಸುಮಾರು ಮೂರು ಸಾವಿರ ಮಂದಿ ಸ್ತ್ರೀಪುರುಷರು ಮಾಳಿಗೆಯ ಮೇಲಿದ್ದರು.೨೮ [28]ಆಗ ಸಂಸೋನನು ಸರ್ವೇಶ್ವರನಿಗೆ, “ಪ್ರಭು ಸರ್ವೇಶ್ವರಾ, ಫಿಲಿಷ್ಟಿಯರು ಕಿತ್ತುಹಾಕಿದ ನನ್ನ ಎರಡು ಕಣ್ಣುಗಳಲ್ಲಿ ಒಂದಕ್ಕಾದರು ನಾನು ಅವರಿಗೆ ಮುಯ್ಯಿ ತೀರಿಸುವ ಹಾಗೆ ನನ್ನನ್ನು ಈ ಸಾರಿ ಬಲಪಡಿಸಿರಿ,” ಎಂದು ಮೊರೆಯಿಟ್ಟನು.೨೯ [29]ಆ ಮನೆಯ ಆಧಾರ ಸ್ತಂಭಗಳಲ್ಲಿ ಒಂದನ್ನು ಬಲಗೈಯಿಂದಲೂ ಇನ್ನೊಂದನ್ನು ಎಡಗೈಯಿಂದಲೂ ಹಿಡಿದು ಅವುಗಳನ್ನು ಒತ್ತಿ,೩೦ [30]“ನಾನು ಫಿಲಿಷ್ಟಿಯರ ಸಂಗಡ ಸಾಯುವೆನು,” ಎಂದು ಹೇಳಿ ಬಲವಾಗಿ ಬಾಗಿಕೊಂಡನು. ಆ ಮನೆಯು ಅಧಿಪತಿಗಳ ಮೇಲೂ ಅಲ್ಲಿ ಬಂದಿದ್ದ ಎಲ್ಲಾ ಜನರ ಮೇಲೂ ಬಿದ್ದಿತು. ಅವನು ಜೀವದಿಂದಿದ್ದಾಗ ಕೊಂದು ಹಾಕಿದವರಿಗಿಂತ ಸಾಯುವಾಗ ಕೊಂದವರ ಸಂಖ್ಯೆಯೇ ಹೆಚ್ಚಿತ್ತು.೩೧ [31]ಅವನ ಬಂಧುಗಳೂ ತಂದೆಯ ಮನೆಯವರೆಲ್ಲರೂ ಬಂದು ಅವನ ಶವವನ್ನು ಎತ್ತಿಕೊಂಡು ಹೋಗಿ ಚೊರ್ಗಕ್ಕೂ ಎಷ್ಟಾವೋಲಿಗೂ ಮಧ್ಯದಲ್ಲಿದ್ದ ಅವನ ತಂದೆ ಮಾನೋಹನ ಸಮಾಧಿಯಲ್ಲಿ ಸ್ಥಾಪನೆಮಾಡಿದರು. ಅವನು ಇಸ್ರಯೇಲರನ್ನು ಇಪ್ಪತ್ತು ವರ್ಷ ಪಾಲಿಸಿದನುKannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ನ್ಯಾಯಸ್ಥಾಪಕರು ೧೬ 00:00:00 00:00:00 0.5x 2.0x https://beblia.bible:81/BibleAudio/kannadakncl/judges/016.mp3 21 16