× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ನ್ಯಾಯಸ್ಥಾಪಕರು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೩ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧1 1 1 ಕನ್ನಡ ಬೈಬಲ್ (KNCL) 2016 ನ್ಯಾಯಸ್ಥಾಪಕರು ೩ ಟಿಪ್ಪಣಿಗಳನ್ನು ಉಳಿಸಿ ೧ [1]ಕಾನಾನ್ಯರೊಡನೆ ನಡೆದ ಯುದ್ಧಗಳಲ್ಲಿ ಒಂದರಲ್ಲೂ ಪಾಲ್ಗೊಳ್ಳದೆ ಇದ್ದ ಇಸ್ರಯೇಲರನ್ನು ಪರೀಕ್ಷಿಸುವುದಕ್ಕೂ೨ [2]ಇಸ್ರಯೇಲ್ ಸಂತತಿಯವರಲ್ಲಿ ಯುದ್ಧವಿದ್ಯೆ ಅರಿಯದವರಿಗೆ ಅದನ್ನು ಕಲಿಸುವುದಕ್ಕೂ ಸರ್ವೇಶ್ವರ ಆ ನಾಡಿನಲ್ಲೇ ಉಳಿಸಿದ ಅನ್ಯಜನಾಂಗದವರು ಇವರು:೩ [3]ಐದುಮಂದಿ ಫಿಲಿಷ್ಟಿಯ ಪ್ರಭುಗಳು, ಸರ್ವಕಾನಾನ್ಯರು, ಸಿದೋನ್ಯರು, ಲೆಬನೋನ್ ಪರ್ವತದಲ್ಲಿ ಬಾಳ್ ಹೆರ್ಮೋನ್ ಬೆಟ್ಟದಿಂದ ಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವ್ವಿಯರು.೪ [4]ತಾವು ಮೋಶೆಯ ಮೂಲಕ ಇವರ ಪೂರ್ವಜರಿಗೆ ವಿಧಿಸಿದ ಆಜ್ಞೆಗಳನ್ನು ಇಸ್ರಯೇಲರು ಕೈಗೊಂಡು ನಡೆಯುವರೋ ಇಲ್ಲವೋ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳುವುದಕ್ಕಾಗಿ ಸರ್ವೇಶ್ವರ ಅವರನ್ನು ಉಳಿಸಿದರು.೫ [5]ಇಸ್ರಯೇಲರು ಕಾನಾನ್ಯ, ಹಿತ್ತಿಯ, ಅಮೋರಿಯ, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ಎಂಬೀ ಜನಾಂಗಗಳ ಮಧ್ಯದಲ್ಲಿ ವಾಸಮಾಡುತ್ತಾ೬ [6]ಅವರ ಕನ್ಯೆಯರನ್ನು ತಾವು ತಂದು ತಮ್ಮ ಕನ್ಯೆಯರನ್ನು ಅವರ ಕುಮಾರರಿಗೆ ಕೊಟ್ಟು ಅವರ ದೇವತೆಗಳನ್ನು ಪೂಜಿಸಿದರು.೭ [7]ಇಸ್ರಯೇಲರು ಬಾಳ್, ಅಶೇರ ಎಂಬ ದೇವತೆಗಳನ್ನು ಪೂಜಿಸಿ ತಮ್ಮ ದೇವರಾದ ಸರ್ವೇಶ್ವರನನ್ನು ಮರೆತುಬಿಟ್ಟರು. ಅವರ ದೃಷ್ಟಿಯಲ್ಲಿ ದ್ರೋಹಿಗಳಾದರು.೮ [8]ಆದುದರಿಂದ ಸರ್ವೇಶ್ವರ ಇಸ್ರಯೇಲರ ಮೇಲೆ ಕೋಪಗೊಂಡು ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸ ಕೂಷನ್ ರಿಷಾತಯಿಮ್ ಎಂಬವನಿಗೆ ಮಾರಿಬಿಟ್ಟರು. ಈ ಕಾರಣ ಇಸ್ರಯೇಲರು ಎಂಟು ವರ್ಷಗಳವರೆಗೆ ಅವನಿಗೆ ಗುಲಾಮರಾಗಿದ್ದರು.೯ [9]ಇಸ್ರಯೇಲರು ಮೊರೆಯಿಟ್ಟಾಗ ಅವರನ್ನು ಬಿಡುಗಡೆ ಮಾಡಲು ಸರ್ವೇಶ್ವರ ಒಬ್ಬ ವ್ಯಕ್ತಿಯನ್ನು ಎಬ್ಬಿಸಿದರು; ಆತನೇ ಕಾಲೇಬನ ತಮ್ಮನೂ ಕೆನಜನ ಮಗನೂ ಆದ ಒತ್ನೀಯೇಲ್.೧೦ [10]ಸರ್ವೇಶ್ವರನ ಆತ್ಮ ಅವನ ಮೇಲೆ ಬಂದುದರಿಂದ ಅವನು ಇಸ್ರಯೇಲರಿಗೆ ನ್ಯಾಯ ದೊರಕಿಸಲು ಯುದ್ಧಕ್ಕೆ ಹೊರಟನು. ಎರಡು ನದಿಗಳ ಮಧ್ಯೆಯಿರುವ ಅರಾಮ್ ರಾಜ್ಯದ ಅರಸ ಕೂಷನ್ ರಿಷಾತಯಿಮನನ್ನು ಸರ್ವೇಶ್ವರ ಆತನ ಕೈಗೊಪ್ಪಿಸಿದ್ದರಿಂದ ಅವನನ್ನು ಸಂಪೂರ್ಣವಾಗಿ ಸೋಲಿಸಿಬಿಟ್ಟನು.೧೧ [11]ನಾಡಿನಲ್ಲಿ ನಾಲ್ವತ್ತು ವರ್ಷಗಳ ಕಾಲ ನೆಮ್ಮದಿ ನೆಲಸಿತ್ತು. ತರುವಾಯ ಕೆನಜನ ಮಗ ಒತ್ನೀಯೇಲನು ಮರಣ ಹೊಂದಿದನು.೧೨ [12]ಇಸ್ರಯೇಲರು ಮತ್ತೆ ಸರ್ವೆಶ್ವರನ ದೃಷ್ಟಿಯಲ್ಲಿ ದ್ರೋಹಿಗಳಾದರು. ಮೋವಾಬ್ಯರ ಅರಸ ಎಗ್ಲೋನನನ್ನು ಇಸ್ರಯೇಲರಿಗೆ ವಿರುದ್ಧ ಸರ್ವೇಶ್ವರ ಬಲಪಡಿಸಿದರು.೧೩ [13]ಎಗ್ಲೋನನು ಅಮ್ಮೋನಿಯರನ್ನೂ ಅಮಾಲೇಕ್ಯರನ್ನೂ ಕೂಡಿಸಿಕೊಂಡು ಬಂದು ಇಸ್ರಯೇಲರನ್ನು ಸೋಲಿಸಿ ಖರ್ಜೂರ ನಗರವನ್ನು ಗೆದ್ದುಕೊಂಡನು.೧೪ [14]ಹದಿನೆಂಟು ವರ್ಷಕಾಲ ಇಸ್ರಯೇಲರು ಅವನಿಗೆ ಗುಲಾಮರಾಗಿದ್ದರು.೧೫ [15]ಆಗ ಇಸ್ರಯೇಲರು ಸರ್ವೇಶ್ವರನಿಗೆ ಮೊರೆಯಿಟ್ಟರು. ಅವರನ್ನು ಬಿಡುಗಡೆ ಮಾಡಲು ಬೆನ್ಯಾಮೀನ್ ಕುಲದ ಗೇರನ ಮಗ ಏಹೂದನನ್ನು ವಿಮೋಚಕನಾಗಿ ಕಳುಹಿಸಲಾಯಿತು. ಅವನೊಬ್ಬ ಎಡಚ. ಇಸ್ರಯೇಲರು ಅವನ ಮುಖಾಂತರ ಮೋವಾಬ್ಯರ ಅರಸ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಕಳುಹಿಸಿದರು.೧೬ [16]ಅವನು ತನಗಾಗಿ ಒಂದುವರೆ ಅಡಿ ಉದ್ದವಾದ ಇಬ್ಬಾಯಿ ಕತ್ತಿಯನ್ನು ಮಾಡಿ ಅದನ್ನು ಬಟ್ಟೆಗಳ ಒಳಗೆ, ಬಲಗಡೆಯ ಸೊಂಟಕ್ಕೆ ಕಟ್ಟಿಕೊಂಡು ಹೋದನು.೧೭ [17]ಮೋವಾಬ್ಯರ ಅರಸ ಎಗ್ಲೋನನಿಗೆ ಕಾಣಿಕೆಯನ್ನು ಒಪ್ಪಿಸಿದನು. ಎಗ್ಲೋನನು ಬಹಳ ದಪ್ಪನಾದ ವ್ಯಕ್ತಿ.೧೮ [18]ಏಹೂದನು ಕಾಣಿಕೆಯನ್ನು ಒಪ್ಪಿಸಿದ ಮೇಲೆ ಅದನ್ನು ಹೊತ್ತು ತಂದ ಆಳುಗಳನ್ನು ಕಳುಹಿಸಿಬಿಟ್ಟನು.೧೯ [19]ತಾನಾದರೋ ಗಿಲ್ಗಾಲಿನಲ್ಲಿರುವ ವಿಗ್ರಹಸ್ಥಳದವರೆಗೆ ಹೋಗಿ, ಹಿಂದಿರುಗಿ ಎಗ್ಲೋನನ ಬಳಿಗೆ ಬಂದನು; “ಅರಸರೇ, ತಮಗೆ ತಿಳಿಸಬೇಕಾದ ಒಂದು ರಹಸ್ಯ ವಿಷಯವಿದೆ,” ಎಂದನು. ಆಗ ಅರಸ, “ನಿಶ್ಯಬ್ದ” ಎಂದನು. ಅವನ ಸೇವಕರೆಲ್ಲರು ಅಲ್ಲಿಂದ ಹೊರಗೆ ಹೋದರು.೨೦ [20]ಅರಸನು ತನ್ನ ತಂಪಾದ ಮೇಲುಪ್ಪರಿಗೆಯಲ್ಲಿ ಒಬ್ಬನೇ ಕುಳಿತುಕೊಂಡಿದ್ದಾಗ ಏಹೂದನು ಅವನ ಬಳಿಗೆ ಬಂದನು; “ನಿಮಗೆ ತಿಳಿಸಬೇಕಾದ ಒಂದು ದೈವೋಕ್ತಿ ಇದೆ,” ಎಂದನು. ಅರಸನು ತನ್ನ ಸಿಂಹಾಸನದಿಂದ ಎದ್ದು ನಿಂತನು.೨೧ [21]ಆಗ ಏಹೂದನು ಎಡಗೈ ಚಾಚಿ, ಬಲಗಡೆಯ ಸೊಂಟಕ್ಕೆ ಕಟ್ಟಿದ್ದ ಕತ್ತಿಯನ್ನು ಹಿರಿದು ಅವನ ಹೊಟ್ಟೆಯನ್ನು ತಿವಿದನು.೨೨ [22]ಆ ಕತ್ತಿ ಹಿಡಿಯ ಸಮೇತ ಹೊಟ್ಟೆಯನ್ನು ಹೊಕ್ಕಿತು. ಏಹೂದನು ಕತ್ತಿಯನ್ನು ಹೊರಗೆ ತೆಗೆಯಲಿಲ್ಲ. ಬೊಜ್ಜು ಅದನ್ನು ಮುಚ್ಚಿಕೊಂಡಿತ್ತು. ಮಲ ಹೊರಗೆ ಬಂದಿತು.೨೩ [23]ಏಹೂದನು ಆ ಮೇಲುಪ್ಪರಿಗೆಯ ಕದವನ್ನು ಮುಚ್ಚಿ, ಅಗುಳಿ ಹಾಕಿ ಪಡಸಾಲೆಯ ಮೂಲಕ ಹೊರಟು ಹೋದನು.೨೪ [24]ತರುವಾಯ ಸೇವಕರು ಅಲ್ಲಿಗೆ ಬಂದು ಬಾಗಿಲಿಗೆ ಅಗುಳಿ ಹಾಕಿರುವುದನ್ನು ಕಂಡು, “ಅರಸ ತಂಪಾದ ಕೊಠಡಿಗೆ ಸೇರಿದ ಪಾಯಖಾನೆಗೆ ಹೋಗಿರಬೇಕೆಂದು,೨೫ [25]ತಮಗೆ ಬೇಸರವಾಗುವ ತನಕ ಕಾಯುತ್ತಾ ಇದ್ದರು. ಆದರೂ ಅರಸ ಕದಗಳನ್ನು ತೆರೆಯದೆ ಇರುವುದನ್ನು ನೋಡಿ ಬೀಗದ ಕೈಯಿಂದ ತಾವೇ ಬಾಗಿಲು ತೆರೆದರು. ಇಗೋ, ಅವರ ಒಡೆಯ ನೆಲದ ಮೇಲೆ ಸತ್ತುಬಿದ್ದಿದ್ದನು!೨೬ [26]ಅವರು ಕಾಯ್ದಿದ್ದ ಸಮಯದಲ್ಲೇ ಏಹೂದನು ತಪ್ಪಿಸಿಕೊಂಡು ವಿಗ್ರಹಗಳಿದ್ದ ಸ್ಥಳದಲ್ಲಿ ನದಿ ದಾಟಿ೨೭ [27]ಸೆಯೀರಾ ಎಂಬಲ್ಲಿಗೆ ಬಂದು ಎಫ್ರಯಿಮ್ ಪರ್ವತಪ್ರದೇಶದಲ್ಲಿ ಕಹಳೆಯನ್ನು ಊದಿದನು. ಕೂಡಲೆ ಇಸ್ರಯೇಲರು ಅವನ ಬಳಿಗೆ ಬಂದು, ಗುಡ್ಡದಿಂದ ಇಳಿದು ಅವನ ಸಂಗಡ ಹೊರಟರು.೨೮ [28]ಏಹೂದನು ಅವರಿಗೆ ನಾಯಕನಾಗಿ, “ನನ್ನನ್ನು ಹಿಂಬಾಲಿಸಿ ಬನ್ನಿ; ಸರ್ವೇಶ್ವರ ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಗೊಪ್ಪಿಸಿದ್ದಾರೆ,” ಎಂದನು. ಅಂತೆಯೇ ಅವರು ಅವನನ್ನು ಹಿಂಬಾಲಿಸಿ ಮೋವಾಬಿಗೆ ಹೋಗುವ ಹಾಯಗಡಗಳನ್ನೆಲ್ಲ ಹಿಡಿದುಕೊಂಡು ಯಾರನ್ನೂ ದಾಟಗೊಡಲಿಲ್ಲ.೨೯ [29]ಅಂದು ಅವರು ಸುಮಾರು ಹತ್ತು ಸಾವಿರಮಂದಿ, ಪುಷ್ಠ ಹಾಗು ಪರಾಕ್ರಮಿಗಳಾದ ಮೋವಾಬ್ಯರನ್ನು ಸದೆಬಡಿದರು. ಒಬ್ಬನೂ ತಪ್ಪಿಸಿಕೊಳ್ಳಲಾಗಲಿಲ್ಲ.೩೦ [30]ಮೋವಾಬ್ಯರು ಇಸ್ರಯೇಲರಿಗೆ ಶರಣಾದರು; ನಾಡಿನಲ್ಲಿ ಎಂಬತ್ತು ವರ್ಷ ನೆಮ್ಮದಿ ಇತ್ತು.೩೧ [31]ಏಹೂದನ ಬಳಿಕ ಅನಾತನ ಮಗ ಶಮ್ಗರನು ಮುಂದೆಬಂದು ಎತ್ತಿನ ಮುಳ್ಳುಗೋಲಿನಿಂದ ಆರುನೂರು ಮಂದಿ ಫಿಲಿಷ್ಟಿಯರನ್ನು ಕೊಂದು ಇಸ್ರಯೇಲರನ್ನು ಕಾಪಾಡಿದನು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ನ್ಯಾಯಸ್ಥಾಪಕರು ೩ 00:00:00 00:00:00 0.5x 2.0x https://beblia.bible:81/BibleAudio/kannadakncl/judges/003.mp3 21 3