× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ನ್ಯಾಯಸ್ಥಾಪಕರು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೫ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧1 1 1 ಕನ್ನಡ ಬೈಬಲ್ (KNCL) 2016 ನ್ಯಾಯಸ್ಥಾಪಕರು ೫ ಟಿಪ್ಪಣಿಗಳನ್ನು ಉಳಿಸಿ ೧ [1]ಆ ದಿನ ದೆಬೋರಳು ಮತ್ತು ಅಬೀನೋವಮನ ಮಗ ಬಾರಾಕನು ಈ ಗೀತೆಯನ್ನು ಹಾಡಿದರು:೨ [2] ಪಣತೊಟ್ಟಿದ್ದರು ಇಸ್ರಯೇಲಿನ ವೀರರು ಸೈನ್ಯಸೇರಿದ್ದಾರೆ ಸ್ವೇಚ್ಛೆಯಿಂದಾ ಜನರು ಮಾಡಿರಿ ನೀವು ಸರ್ವೇಶ್ವರನಾ ಗುಣಗಾನವನು;೩ [3]ಅರಸರೇ, ಕೇಳಿ! ಪ್ರಭುಗಳೇ, ಕಿವಿಗೊಡಿ; ನಾ ಕಟ್ಟುವೆನು ಕವಿತೆಯನು ಸರ್ವೇಶ್ವರನಿಗೆ ನಾ ಭಜಿಸಿ ಹಾಡುವೆನು ಇಸ್ರಯೇಲರಾ ದೇವನಿಗೆ;೪ [4]ಎದೋಮ್ಯರ ಪ್ರಾಂತ್ಯದಿಂದ, ಸೇಯೀರ ಗುಡ್ಡದಿಂದ ಹೇ ಸರ್ವೇಶ್ವರಾ, ನೀ ಹೊರಟು ಬರುವಾಗ ಕಂಪಿಸಿತು ಭೂಮಿ, ಹನಿಗರೆಯಿತು ಆಗಸ ಮಳೆಸುರಿಸಿತು ಮೇಘಮಂಡಲ.೫ [5]ಕರಗಿಹೋದವು ಬೆಟ್ಟಗುಡ್ಡಗಳು ಆ ಸರ್ವೇಶ್ವರನ ಮುಂದೆ ನೀರಾಗಿ ಹೋಯಿತು ಸೀನಾಯಿ ಪರ್ವತವು ಇಸ್ರಯೇಲರ ದೇವನೆದುರಿಗೆ.೬ [6]ಅನಾತನ ಮಗ ಶಮ್ಗರನ ಕಾಲದಲ್ಲಿ, ಯಾಯೇಲನ ದಿನಗಳಲಿ ನಿಂತುಹೋಯಿತು ಸಂಚಾರ ರಾಜಮಾರ್ಗಗಳಲಿ, ನಡೆದರು ಪಯಣಿಗರು ಸೀಳುದಾರಿಗಳಲಿ.೭ [7]ದೆಬೋರಾ, ಇಸ್ರಯೇಲರ ತಾಯಿಯಂತೆ ನೀ ಬರುವ ಮುನ್ನ ಪಾಳುಬಿದ್ದಿದ್ದವು ಇಸ್ರಯೇಲ ಗ್ರಾಮಗಳೆಲ್ಲ.೮ [8]ಆರಿಸಿಕೊಂಡಿದ್ದರು ಜನರು ಅನ್ಯ ದೇವತೆಗಳನು ಊರಬಾಗಿಲವರೆಗೆ ಬಂದಿತು ಕದನಕಾಳಗಗಳು ಇರಲಿಲ್ಲ ಗುರಾಣಿ, ಭರ್ಜಿಗಳಾವು ಓರ್ವರಲ್ಲೂ ಇಸ್ರಯೇಲರಾ ನಾಲ್ವತ್ತು ಸಾವಿರ ಸೈನಿಕರಲ್ಲೂ.೯ [9]ಇಸ್ರಯೇಲಿನಾ ನಾಯಕರೊಡನೆ ಸೇರಿ ಸ್ವೇಚ್ಛೆಯಿಂದ ಸೈನ್ಯಸೇರಿದಾ ಜನರೊಡಗೂಡಿ ನಾ ನಲಿದು ಹಾಡುವೆನು, ಮಾಡಿರಿ ನೀವು ಸರ್ವೇಶ್ವರನ ಗುಣಗಾನವನು;೧೦ [10]ಬಿಳೀ ಕತ್ತೆಗಳ ಮೇಲೆ ಸವಾರಿ ಮಾಡುವವರೇ, ರತ್ನಗಂಬಳಿಗಳ ಮೇಲೆ ಕುಳಿತಿರುವವರೇ, ಮಾಡಿರಿ ಗಾನ, ಮಾಡಿರಿ ಗುಣಗಾನ, ಓ ಪಯಣಿಗರೇ.೧೧ [11]ಸೇದುವ ಬಾವಿಗಳ ಬಳಿ ಕುಳಿತು ಕೊಳ್ಳೆಹಂಚಿಕೊಳ್ಳುವವರ ಧ್ವನಿಯನಾಲಿಸು! ವರ್ಣಿಸುತಿಹರವರು ಸರ್ವೇಶ್ವರ ಸಾಧಿಸಿದ ನೀತಿಯನು, ತನ್ನ ಪ್ರಜೆ ಇಸ್ರಯೇಲ್ ಊರುಗಳಲ್ಲಾತನು ಸ್ಥಾಪಿಸಿದ ನ್ಯಾಯವನು.೧೨ [12]ಎಚ್ಚರಗೊಳ್ಳು, ಎಚ್ಚರಗೊಳ್ಳು, ದೆಬೋರಾ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಮಾಡು ನೀ ಗುಣಗಾನ, ಬಾರಾಕನೇ, ಏಳು; ಅಬೀನೋವಮನ ಮಗನೇ, ಏಳು, ಸೆರೆಹಿಡಿದವರನು ನೀ ಸಾಗಿಸಿಕೊಂಡು ಹೋಗು.೧೩ [13]ಚದರಿಹೋದವರು ಕೂಡಿಬಂದರು ನಾಯಕರ ಬಳಿಗೆ ಸರ್ವೇಶ್ವರನ ಶೂರಜನರು ವೀರರಂತೆ ನೆರೆದುಬಂದರು ನನ್ನ ಸಹಾಯಕ್ಕೆ.೧೪ [14]ಬಂದರು ಅಮಾಲೇಕ್ಯರ ಪ್ರದೇಶದೊಳು ನೆಲೆಗೊಂಡ ಎಫ್ರಯೀಮ್ಯರು, ಅವರೊಂದಿಗೆ ಬಂದರು ಬೆನ್ಯಾಮೀನ್ಯರು, ಮಾಕೀರನ ಗೋತ್ರದ ಪ್ರಧಾನರು, ಜೆಬುಲೂನ್ ಕುಲದೊಳು ದಂಡಧಾರಿಗಳಾದ ಸೇನಾನಾಯಕರು.೧೫ [15]ಇಸ್ಸಾಕಾರ್ ಕುಲಪ್ರಭುಗಳು ಬಂದರು ದೆಬೋರಳ ಜೊತೆಯಲ್ಲಿ, ಆಗಮಿಸಿದನು ಬಾರಾಕನು ಇಸ್ಸಾಕಾರ್ಯರ ಸಂಗಡದಲಿ, ಇವನ ಹೆಜ್ಜೆಹಿಡಿದು ಬಂದರು ಅವರೆಲ್ಲರು ತವಕದಲಿ.೧೬ [16]ರೂಬೇನ್ಯರ ಮಧ್ಯೆ ಕಾಣಿಸಿಕೊಂಡಿತು ವಾದವಿವಾದಗಳು, ಮನೋವೇದನೆಗಳು: ರೂಬೇನ್ಯರೇ, ನೀವೇಕೆ ಕೂತಿರಿ ಕುರಿಹಟ್ಟಿಗಳಲಿ? ಮಂದೆಗಳ ಮಧ್ಯೆಯಲಿ ಕೇಳಬೇಕೆಂದೋ ಅಪಾಯದ ಸಿಳ್ಳು ಸದ್ದನು? ಹೌದು ರೂಬೇನ್ಯರ ಮಧ್ಯೆ ಕಾಣಿಸಿಕೊಂಡಿತು ವಾದವಿವಾದಗಳು, ಮನೋವೇದನೆಗಳು.೧೭ [17]ಗಿಲ್ಯಾದರು ಉಳಿದರು ಜೋರ್ಡನಿನ ಆಚೆಯಲ್ಲೇ ದಾನ್ ಕುಲದವರು ಉಳಿಯರೇಕೆ, ಹಡಗುಗಳಲ್ಲೇ? ಅಶೇರ್ ಕುಲದವರೋ ಅಂಟುಕೊಂಡರು ತಮ್ಮ ರೇವುಗಳಿಗೇ ನೆಮ್ಮದಿಯಾಗಿ ಕೂತುಬಿಟ್ಟರು ಸಮುದ್ರತೀರದಲ್ಲೆ.೧೮ [18]ಅಂಥವರಲ್ಲ ಈ ಜೆಬುಲೂನ್ಯರು, ನಫ್ತಾಲ್ಯರು ಪ್ರಾಣವನ್ನೇ ಮುಡಿಪಾಗಿಟ್ಟರು ರಣಭೂಮಿಯೊಳು.೧೯ [19]ಎದ್ದುಬಂದು ಯುದ್ಧ ಮಾಡಿದರು ಅರಸುಗಳು ಕೂಡಿಬಂದು ಕಾದಾಡಿದರು ಕಾನಾನ್ಯ ರಾಜರುಗಳು ಮೆಗಿದ್ದೋ ನದಿಗಳ ಬಳಿ ತಾನಾಕದೊಳು ಆದರೆ ಗಿಟ್ಟಲಿಲ್ಲ ಅವರಿಗೆ ಬೆಳ್ಳಿದ್ರವ್ಯಗಳೇನು!೨೦ [20]ಕದನವಾಡಿದವು ತಾರೆಗಳು ಆಗಸದಿಂದಲೆ ಯುದ್ಧಮಾಡಿದವು ಸೀಸೆರನ ವಿರುದ್ಧ ತಮ್ಮಾ ಪಥದಿಂದಲೆ.೨೧ [21]ಶತ್ರುಗಳನು ಕೊಚ್ಚಿಕೊಂಡು ಹೋಯಿತು ಪೂರ್ವಪ್ರಸಿದ್ಧವಾದ ಆ ಕೀಷೋನ್ ಹೊಳೆಯು. ನನ್ನ ಮನವೇ, ನೀ ಧೈರ್ಯದಿಂದ ಮುಂದೆ ಸಾಗು.೨೨ [22]ನೆಲ ಕಂಪಿಸಿತು ಕುದುರೆಗಳ ಭರದೌಡಿನಿಂದ ಸುತ್ತಿಗೆಯಂತಹ ಆ ಕಾಲುಗಳ ಪೆಟ್ಟಿನಿಂದ೨೩ [23]‘ಶಾಪಹಾಕಿರಿ ಮೇರೋಜ್ ಊರಿಗೆ, ಅದರ ನಿವಾಸಿಗಳಿಗೆ ಬರಲಿಲ್ಲ ಅವರು ಯುದ್ಧವೀರರ ಜೊತೆಗೆ ಸರ್ವೇಶ್ವರನ ಸಹಾಯಕ್ಕೆ. ಶಪಿಸಿರಿ ಅವರನ್ನು’ ಎಂದು ಕರೆಗೊಟ್ಟನು ಸರ್ವೇಶ್ವರನ ದೂತನೆ.೨೪ [24]ಗುಡಾರಗಳಲಿ ವಾಸಿಸುವ ಸ್ತ್ರೀಯರಲ್ಲಿ ಯಾಯೇಲಳೆ ಭಾಗ್ಯವತಿ, ಹೌದು, ಅವಳೇ ಭಾಗ್ಯವತಿ, ಕೇನ್ಯನಾದ ಹೆಬೆರನ ಆ ಹೆಂಡತಿ.೨೫ [25]ನೀರು ಕೇಳಲು ಹಾಲು ಕೊಟ್ಟಳು ಉತ್ತಮ ಪಾತ್ರೆಯಲ್ಲಿ ಮೊಸರು ಕೊಟ್ಟಳು.೨೬ [26]ಗೂಟ ತೆಗೆದುಕೊಂಡಳು ಕೈಚಾಚಿ ಹಿಡಿದಳು ಬಲಗೈಯಲಿ ದೊಡ್ಡಕೊಡತಿ ಜಡಿದಳು ಸೀಸೆರನ ತಲೆಯನು ಬಡಿದಳಾ ಕೊಡತಿಯಿಂದ ಕಣತಲೆಗೇ ತಿವಿದು.೨೭ [27]ಬೊಗ್ಗಿಬಿದ್ದನು, ಉರುಳಿಬಿದ್ದನು, ಮುದುರಿಬಿದ್ದನವನು ಅವಳ ಕಾಲುಗಳ ಬಳಿ ಅಲ್ಲೆ ಸತ್ತುಬಿದ್ದನು.೨೮ [28]ಸೀಸೆರನ ತಾಯಿ ಇಣುಕಿ ನೋಡಿದಳು ಕಿಟಕಿಯಿಂದ ಕೂಗಿದಳು ಆ ಕಿಟಕಿಯ ಜಾಲರಿಗಳಿಂದ; ‘ಇಷ್ಟು ಹೊತ್ತಾಗಬೇಕೆ ರಥ ಬರುವುದಕ್ಕೆ? ಕುದುರೆಗಳ ಕಾಲುಗಳಿಗೆ ಇಷ್ಟು ಸಾವಕಾಶವೇಕೆ?’೨೯ [29]ಸಭ್ಯಸ್ತ್ರೀಯರೊಳು ಬುದ್ಧಿವಂತೆಯರು ಕೊಟ್ಟ ಉತ್ತರವನು ತನ್ನೊಳಗೇ ಮೆಲಕು ಹಾಕಿದ್ದಳು ಇಂತೆಂದುಕೊಂಡು:೩೦ [30]‘ನಿಶ್ಚಯವಾಗಿ ಸಿಕ್ಕಿರಬೇಕು ಅವರಿಗೆ ಕೊಳ್ಳೆ ಹಂಚಿಕೊಳ್ಳುತ್ತಿರಬೇಕು ಅದನು ತಮ್ಮತಮ್ಮಲ್ಲೆ ಪ್ರತಿಯೊಬ್ಬ ಸೈನಿಕನಿಗೆ ಒಬ್ಬೊಬ್ಬ ದಾಸಿಯರು ಸೀಸೆರನಿಗೊ, ಬಣ್ಣಬಣ್ಣವಾದ ಬಟ್ಟೆಬರೆಗಳು ವಿಚಿತ್ರ ಕಸೂತಿಹಾಕಿದ ಒಂದೆರಡು ವಸ್ತ್ರಗಳು, ಕಂಠಮಾಲೆಗಳು’.೩೧ [31]ಸರ್ವೇಶ್ವರನ ಶತ್ರುಗಳೆಲ್ಲರು ನಾಶವಾಗಲಿ ಇವರಂತೆ ಆತನ ಭಕ್ತರು ಬೆಳಗಲಿ ಉದಯಕಾಲದ ಸೂರ್ಯನಂತೆ! ನಾಡಿನಲಿ ನಾಲ್ವತ್ತು ವರ್ಷಕಾಲ ಶಾಂತಿ ನೆಲಸಿತ್ತು!Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ನ್ಯಾಯಸ್ಥಾಪಕರು ೫ 00:00:00 00:00:00 0.5x 2.0x https://beblia.bible:81/BibleAudio/kannadakncl/judges/005.mp3 21 5