× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಸಮುವೇಲನು ೧ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೨ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩1 1 1 ಕನ್ನಡ ಬೈಬಲ್ (KNCL) 2016 ಸಮುವೇಲನು ೧ ೨೨ ಟಿಪ್ಪಣಿಗಳನ್ನು ಉಳಿಸಿ ೧ [1]ದಾವೀದನು ಅಲ್ಲಿಂದ ತಪ್ಪಿಸಿಕೊಂಡು ಅದುಲ್ಲಾಮ್ ಎಂಬ ಗವಿಗೆ ಹೋದನು. ಈ ಸಮಾಚಾರ, ಅವನ ಅಣ್ಣಂದಿರಿಗೂ ಬೇರೆ ಎಲ್ಲಾ ಸಂಬಂಧಿಕರಿಗೂ ಮುಟ್ಟಿತು. ಅವರೂ ಬಂದು ಅವನನ್ನು ಸೇರಿಕೊಂಡರು.೨ [2]ಇದಲ್ಲದೆ ಶೋಷಿತರು, ಸಾಲಗಾರರು ಹಾಗು ಮನನೊಂದವರು ಆಗಿದ್ದ ಜನಸಾಮಾನ್ಯರು ಬಂದು ಅವನನ್ನು ಆಶ್ರಯಿಸಿಕೊಂಡರು. ಹೀಗೆ ಅವನು ಸುಮಾರು ನಾನೂರು ಜನರಿಗೆ ನಾಯಕನಾದನು.೩ [3]ಅನಂತರ ದಾವೀದನು ತನ್ನ ತಂದೆತಾಯಿಗಳನ್ನು ಮೋವಾಬ್ ದೇಶದ ಮಿಚ್ಪೆ ಎಂಬಲ್ಲಿಗೆ ಕರೆದುಕೊಂಡು ಹೋದನು. ಅಲ್ಲಿನ ರಾಜನನ್ನು, “ದೇವರು ನನಗೆ ಮಾರ್ಗತೋರಿಸುವವರೆಗೂ ನನ್ನ ತಂದೆತಾಯಿಗಳು ನಿಮ್ಮ ಬಳಿಯಲ್ಲಿರುವುದಕ್ಕೆ ಅಪ್ಪಣೆಯಾಗಬೇಕು,” ಎಂದು ಬೇಡಿಕೊಂಡನು.೪ [4]ಅವರನ್ನು ಆ ರಾಜನ ಬಳಿಯಲ್ಲಿ ಬಿಟ್ಟನು. ದಾವೀದನು ದುರ್ಗದಲ್ಲಿದ್ದ ಕಾಲವೆಲ್ಲಾ ಅವನ ತಂದೆತಾಯಿಗಳು ಆ ರಾಜನ ಬಳಿಯಲ್ಲೇ ವಾಸವಾಗಿದ್ದರು.೫ [5]ಗಾದ್ ಪ್ರವಾದಿಯು ದಾವೀದನಿಗೆ, “ನೀನು ಈ ದುರ್ಗದಲ್ಲಿರಬಾರದು; ಇದನ್ನು ಬಿಟ್ಟು ಯೆಹೂದ ನಾಡಿಗೆ ಹೋಗು,” ಎಂದು ಹೇಳಿದ್ದರಿಂದ ಅವನು ಹೆರೆತ್ ಮರುಭೂಮಿಗೆ ಹೋದನು.೬ [6]ಒಂದು ದಿನ ಸೌಲನು ತನ್ನ ಎಲ್ಲಾ ಪರಿವಾರದವರ ನಡುವೆ ಕೈಯಲ್ಲಿ ಭರ್ಜಿಯನ್ನು ಹಿಡಿದುಕೊಂಡು ಗಿಬೆಯ ಗುಡ್ಡದ ಪಿಚುಲವೃಕ್ಷದ ಕೆಳಗೆ ಕುಳಿತುಕೊಂಡನು. “ದಾವೀದನೂ ಅವನ ಜನರೂ ಅಡಗಿಕೊಂಡಿರುವ ಸ್ಥಳ ಗೊತ್ತಾಗಿದೆ,” ಎಂಬ ಸುದ್ದಿ ಅವನಿಗೆ ಮುಟ್ಟಿತು.೭ [7]ಆಗ ಅವನು ತನ್ನ ಸುತ್ತಲೂ ನಿಂತಿದ್ದ ಪರಿವಾರದವರಿಗೆ, “ಬೆನ್ಯಾಮೀನನ ಕುಲಪುತ್ರರೇ ಕೇಳಿ; ನೀವೆಲ್ಲರೂ ನನಗೆ ವಿರೋಧವಾಗಿ ಒಳಸಂಚು ಮಾಡುವುದೇಕೆ? ಜೆಸ್ಸೆಯನ ಮಗನು ನಿಮ್ಮೆಲ್ಲರಿಗೂ ಹೊಲಗಳನ್ನೂ ದ್ರಾಕ್ಷಿತೋಟಗಳನ್ನೂ ಕೊಡುತ್ತಾನೆಯೇ? ಎಲ್ಲರನ್ನು ಸಹಸ್ರಾಧಿಪತಿಗಳನ್ನಾಗಲಿ, ಶತಾಧಿಪತಿಗಳನ್ನಾಗಲಿ ಮಾಡುತ್ತಾನೆಯೆ?೮ [8]ನನ್ನ ಮಗನು ಜೆಸ್ಸೆಯನ ಮಗನೊಡನೆ ಒಪ್ಪಂದಮಾಡಿಕೊಂಡದ್ದನ್ನು ನಿಮ್ಮಲ್ಲಿ ಒಬ್ಬನಾದರೂ ನನಗೆ ತಿಳಿಸಲಿಲ್ಲ. ನನ್ನ ಸೇವಕನೊಬ್ಬ ನನಗೆ ವಿರೋಧವಾಗಿ ಒಳಸಂಚುಮಾಡುವ ಹಾಗೆ ನನ್ನ ಮಗನೇ ಅವನನ್ನು ಎತ್ತಿಕಟ್ಟಿದ್ದಾನೆಂದು ಒಬ್ಬನಾದರೂ ನನಗೆ ಏಕೆ ತಿಳಿಸಲಿಲ್ಲ? ನನ್ನ ಹಿತಚಿಂತೆ ನಿಮಗೆ ಕಿಂಚಿತ್ತೂ ಇಲ್ಲ,” ಎಂದನು.೯ [9]ಆಗ ಸೌಲನ ಸೇವಕರ ಬಳಿಯಲ್ಲಿ ನಿಂತಿದ್ದ ಎದೋಮ್ಯನಾದ ದೋಯೇಗನು, “ಆ ಜೆಸ್ಸೆಯನ ಮಗ ನೋಬದಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ನಾನು ನೋಡಿದೆ.೧೦ [10]ಆ ಯಾಜಕ ಇವನಿಗೆ ಸರ್ವೇಶ್ವರನ ಚಿತ್ತವನ್ನು ತಿಳಿಸಿ, ಆಹಾರವನ್ನೂ ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನೂ ಕೊಟ್ಟನು,” ಎಂದು ಹೇಳಿದನು.೧೧ [11]ಕೂಡಲೆ ಸೌಲನು ಅಹೀಟೂಬನ ಮಗನೂ ಯಾಜಕನೂ ಆಗಿದ್ದ ಅಹೀಮೆಲೆಕನನ್ನು ಹಾಗು ಅವನ ಕುಟುಂಬಕ್ಕೆ ಸೇರಿದ್ದ ನೋಬದ ಬೇರೆ ಎಲ್ಲಾ ಯಾಜಕರನ್ನೂ ಬರಮಾಡಿದನು. ಅವರೆಲ್ಲರೂ ಅರಸನ ಸನ್ನಿಧಿಗೆ ಬಂದರು.೧೨ [12]ಅರಸನು, “ಅಹೀಟೂಬನ ಮಗನೇ, ನಾನು ಕೇಳುವ ಪ್ರಶ್ನೆಗೆ ಉತ್ತರಕೊಡು,” ಎಂದನು. ಅದಕ್ಕೆ ಅವನು, “ಒಡೆಯಾ, ಅಪ್ಪಣೆಯಾಗಲಿ,” ಎಂದನು.೧೩ [13]ಆಗ ಸೌಲನು, “ನೀನು ನನಗೆ ವಿರೋಧವಾಗಿ ಜೆಸ್ಸೆಯನ ಮಗನೊಡನೆ ಒಳಸಂಚುಮಾಡಿದ್ದೇಕೆ? ಅವನು ನನಗೆ ವಿರೋಧವಾಗಿ ಎದ್ದು ನನ್ನ ಜೀವಕ್ಕಾಗಿ ಹೊಂಚುಹಾಕುವಂತೆ ನೀನು ಅವನಿಗೆ ರೊಟ್ಟಿ ಹಾಗು ಕತ್ತಿಯನ್ನು ಕೊಟ್ಟು ದೈವೋತ್ತರವನ್ನು ತಿಳಿಸಿದ್ದೇಕೆ?” ಎಂದು ಕೇಳಿದನು.೧೪ [14]ಅಹೀಮೆಲೆಕನು, “ನಿಮ್ಮ ಎಲ್ಲಾ ಸೇವಕರಲ್ಲಿ, ಅರಸನ ಅಳಿಯನಾಗಿರುವ ದಾವೀದನಂತೆ ನಂಬಿಗಸ್ತನಾದವನು ಯಾರಿದ್ದಾನೆ? ದಾವೀದನು ನಿಮ್ಮ ಆಲೋಚಕರಲ್ಲೊಬ್ಬನೂ ತಮ್ಮ ಮನೆಯವರಲ್ಲಿ ಗೌರವಾನ್ವಿತನೂ ಆಗಿದ್ದಾನಲ್ಲವೇ?೧೫ [15]ನಾನು ಅವರ ಪರವಾಗಿ ದೇವರ ಸನ್ನಿಧಿಯಲ್ಲಿ ವಿಚಾರಮಾಡಿದ್ದು ಇದೇ ಮೊದಲನೆಯ ಸಾರಿಯೇ? ಇಲ್ಲವೇ ಇಲ್ಲ, ಅರಸರು ತಮ್ಮ ಸೇವಕನಾದ ನನ್ನ ಮೇಲೆ ಹಾಗು ನನ್ನ ಮನೆಯವರ ಮೇಲೆ ಇಂಥ ಅಪವಾದವನ್ನು ಹೊರಿಸಬಾರದು. ಈ ವಿಷಯದಲ್ಲಿ ತಮ್ಮ ಸೇವಕನಾದ ನನಗೆ ಸ್ವಲ್ಪವೂ ಗೊತ್ತಿರಲಿಲ್ಲ,” ಎಂದು ಉತ್ತರಕೊಟ್ಟನು.೧೬ [16]ಆಗ ಅರಸನು ಅವನಿಗೆ, “ಅಹೀಮೆಲೆಕನೇ, ನೀನೂ ನಿನ್ನ ಮನೆಯವರೂ ಸಾಯಲೇಬೇಕು,” ಎಂದು ಹೇಳಿದನು.೧೭ [17]ತನ್ನ ಬಳಿಯಲ್ಲಿದ್ದ ಸಿಪಾಯಿಗಳಿಗೆ, “ನೀವು ಹಿಂದಿರುಗಿ ಸರ್ವೇಶ್ವರನ ಈ ಯಾಜಕರನ್ನು ಕೊಲ್ಲಿರಿ; ದಾವೀದನು ಪಲಾಯನ ಆದದ್ದು ಗೊತ್ತಿದ್ದರೂ ನನಗೆ ತಿಳಿಸದೆ ಅವನಿಗೆ ಸಹಾಯಮಾಡಿದ್ದಾರೆ,” ಎಂದು ಆಜ್ಞಾಪಿಸಿದನು. ಆದರೆ ಅರಸನ ಸಿಪಾಯಿಗಳು ಸರ್ವೇಶ್ವರನ ಯಾಜಕರ ಮೇಲೆ ಕೈಹಾಕುವುದಕ್ಕೆ ಮನಸ್ಸುಮಾಡಲಿಲ್ಲ.೧೮ [18]ಆದುದರಿಂದ ಸೌಲನು ಎದೋಮ್ಯನಾದ ದೋಯೇಗನಿಗೆ, “ನೀನು ಹೋಗಿ ಅವರನ್ನು ಕೊಲ್ಲು,” ಎಂದು ಆಜ್ಞಾಪಿಸಿದನು. ಅವನು ನಾರುಮಡಿಯ ಏಫೋದನ್ನು ಧರಿಸಿಕೊಂಡಿದ್ದ ಎಂಬತ್ತೈದು ಮಂದಿ ಯಾಜಕರನ್ನು ಆ ದಿವಸ ಕೊಂದುಹಾಕಿದನು.೧೯ [19]ಅನಂತರ ಅವನು ಯಾಜಕರ ಪಟ್ಟಣವಾದ ನೋಬಕ್ಕೆ ಹೋಗಿ ಅಲ್ಲಿನ ಸ್ತ್ರೀಪುರುಷರನ್ನೂ ಶಿಶುಬಾಲಕರನ್ನೂ ದನಕುರಿಕತ್ತೆಗಳನ್ನೂ ಕತ್ತಿಯಿಂದ ಸಂಹರಿಸಿದನು.೨೦ [20]ಅಹೀಟೂಬನ ಮಗನಾದ ಅಹೀಮೆಲೆಕನ ಮಕ್ಕಳಲ್ಲೊಬ್ಬನಾದ ಏಬ್ಯಾತಾರನೆಂಬವನು ತಪ್ಪಿಸಿಕೊಂಡು ದಾವೀದನ ಬಳಿಗೆ ಓಡಿಬಂದನು.೨೧ [21]ಸೌಲನು ಸರ್ವೇಶ್ವರನ ಯಾಜಕರನ್ನು ಕೊಲ್ಲಿಸಿದ ಸಂಗತಿಯನ್ನು ಅವನಿಗೆ ತಿಳಿಸಿದನು.೨೨ [22]ದಾವೀದನು, “ಎದೋಮ್ಯನಾದ ದೋಯೇಗನನ್ನು ನಾನು ಅಲ್ಲಿ ಕಂಡಾಗಲೇ ಇವನು ಸೌಲನಿಗೆ ಹೇಗೂ ಈ ಸಂಗತಿಯನ್ನು ತಿಳಿಸುವನೆಂದು ನೆನೆಸಿಕೊಂಡೆ; ನಿನ್ನ ಸಂಬಂಧಿಕರ ವಧೆಗೆ ನಾನೇ ಕಾರಣನಾದೆನಲ್ಲಾ!೨೩ [23]ನೀನಾದರೋ ಹೆದರದೆ ನನ್ನ ಸಂಗಡ ಇರು; ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವನು ನಿನ್ನ ಪ್ರಾಣವನ್ನೂ ತೆಗೆಯಬೇಕೆಂದಿರುತ್ತಾನೆ. ನೀನು ನನ್ನ ಜೊತೆಯಲ್ಲಿ ಇರುವುದಾದರೆ ಸುರಕ್ಷಿತನಾಗಿರುವೆ,” ಎಂದನು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಸಮುವೇಲನು ೧ ೨೨ 00:00:00 00:00:00 0.5x 2.0x https://beblia.bible:81/BibleAudio/kannadakncl/1samuel/022.mp3 31 22