× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಸಮುವೇಲನು ೧ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೮ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫1 1 1 ಕನ್ನಡ ಬೈಬಲ್ (KNCL) 2016 ಸಮುವೇಲನು ೧ ೨೮ ಟಿಪ್ಪಣಿಗಳನ್ನು ಉಳಿಸಿ ೧ [1]ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಯೇಲರೊಡನೆ ಯುದ್ಧಮಾಡುವುದಕ್ಕಾಗಿ ಸೈನ್ಯವನ್ನು ಕೂಡಿಸತೊಡಗಿದರು. ಆಗ ಆಕೀಷನು ದಾವೀದನಿಗೆ, “ನೀನೂ ನಿನ್ನ ಜನರೂ ಯುದ್ಧಕ್ಕೆ ನನ್ನ ಜೊತೆಯಲ್ಲೇ ಬರಬೇಕೆಂಬುದು ನಿನಗೆ ಗೊತ್ತಿದೆಯಲ್ಲವೇ?’ ಎಂದನು.೨ [2]ದಾವೀದನು, “ಹೌದು, ತಮ್ಮ ಸೇವಕನ ಸಾಹಸ ತಮಗೇ ಗೊತ್ತಾಗುವುದು,” ಎಂದನು. ಆಕೀಷನು, “ಹಾಗಾದರೆ ಯುದ್ಧಕಾಲದಲ್ಲೆಲ್ಲಾ ನಿನ್ನನ್ನೇ ನನ್ನ ಮೈಗಾವಲಿಗೆ ನೇಮಿಸಿಕೊಳ್ಳುತ್ತೇನೆ,” ಎಂದನು.೩ [3]ಸಮುವೇಲನು ಮರಣಹೊಂದಿದ್ದನು. ಇಸ್ರಯೇಲರು ಅವನಿಗಾಗಿ ಸಂತಾಪ ಸೂಚಿಸುತ್ತಾ ಅವನ ಶವವನ್ನು ಅವನ ಸ್ವಂತ ಊರಾದ ರಾಮಾದಲ್ಲಿ ಸಮಾಧಿಮಾಡಿದ್ದರು. ಸೌಲನು ಭೂತಪ್ರೇತಗಳನ್ನು ವಿಚಾರಿಸುವವರನ್ನೂ ಬೇತಾಳಿಕರನ್ನೂ ನಾಡಿನಿಂದ ಹೊರಡಿಸಿಬಿಟ್ಟಿದ್ದನು.೪ [4]ಫಿಲಿಷ್ಟಿಯರು ಸೈನ್ಯಕೂಡಿಸಿಕೊಂಡು ಬಂದು ಶೂನೇಮಿನಲ್ಲಿ ಪಾಳೆಯಮಾಡಿಕೊಂಡಿದ್ದರು. ಸೌಲನು ಸಮಸ್ತ ಇಸ್ರಯೇಲರೊಡನೆ ಬಂದು ಗಿಲ್ಬೋವದಲ್ಲಿ ಇಳಿದುಕೊಂಡನು.೫ [5]ಫಿಲಿಷ್ಟಿಯರ ಪಾಳೆಯವನ್ನು ಕಂಡಾಗ ಭಯಭೀತಿಯಿಂದ ಅವನ ಎದೆಯೊಡೆಯಿತು.೬ [6]ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸುವುದರಿಂದಾಗಲಿ, ಕನಸುಗಳಿಂದಾಗಲಿ, ಊರಿಮಿನಿಂದಾಗಲಿ ಪ್ರವಾದಿಗಳಿಂದಾಗಲಿ ಅವನಿಗೆ ಉತ್ತರ ಸಿಗಲಿಲ್ಲ.೭ [7]ಆದುದರಿಂದ ಅವನು ತನ್ನ ಸೇವಕರಿಗೆ, “ಭೂತಪ್ರೇತಗಳಲ್ಲಿ ವಿಚಾರಿಸಬಲ್ಲ ಒಬ್ಬ ಸ್ತ್ರೀಯನ್ನು ಹುಡುಕಿರಿ; ನಾನು ಆಕೆಯ ಬಳಿಗೇ ಹೋಗಿ ವಿಚಾರಿಸುವೆನು,” ಎಂದು ಹೇಳಿದನು. ಅವರು, “ಅಂಥವಳೊಬ್ಬಳು ಏಂದೋರಿನಲ್ಲಿದ್ದಾಳೆ,” ಎಂದರು.೮ [8]ಆಗ ಸೌಲನು ಉಡಿಗೆತೊಡಿಗೆಗಳಿಂದ ತನ್ನನ್ನು ಮಾರ್ಪಡಿಸಿಕೊಂಡು ಇಬ್ಬರು ಸೇವಕರೊಡನೆ ಹೊರಟು ರಾತ್ರಿಯಲ್ಲಿ ಆಕೆಯ ಮನೆಗೆ ಬಂದನು. “ದಯವಿಟ್ಟು ನನಗಾಗಿ ಭೂತಪ್ರೇತಗಳಲ್ಲಿ ವಿಚಾರಿಸಿ ಶಾಸ್ತ್ರ ಹೇಳು; ನಾನು ಯಾವನ ಹೆಸರು ಹೇಳುತ್ತೇನೋ ಅವನನ್ನು ಇಲ್ಲಿಗೆ ಬರಮಾಡು,” ಎಂದು ಆಕೆಯನ್ನು ಬೇಡಿಕೊಂಡನು.೯ [9]ಆಗ ಆಕೆ ಅವನಿಗೆ, “ಸೌಲನು ಮಾಡಿದ್ದು ನಿನಗೆ ಗೊತ್ತುಂಟು; ಅವನು ಭೂತಪ್ರೇತಗಳನ್ನು ವಿಚಾರಿಸುವವರನ್ನು ಹಾಗು ಬೇತಾಳಿಕರನ್ನು ನಾಡಿನಿಂದ ಹೊರಡಿಸಿಬಿಟ್ಟನಲ್ಲವೇ? ಹೀಗಿದ್ದರೂ ನಾನು ಸಾಯುವಂತೆ ನೀನು ನನ್ನ ಪ್ರಾಣಕ್ಕೆ ಉರಲೊಡ್ಡುವುದೇಕೆ?” ಎಂದಳು.೧೦ [10]ಅದಕ್ಕೆ ಸೌಲನು, ” ಸರ್ವೇಶ್ವರನಾಣೆ, ಈ ವಿಷಯದಲ್ಲಿ ನೀನು ದಂಡನೆಗೆ ಗುರಿಯಾಗುವುದಿಲ್ಲ,” ಎಂದು ಆಕೆಗೆ ಸರ್ವೇಶ್ವರನ ಹೆಸರಿನಲ್ಲಿ ಪ್ರಮಾಣ ಮಾಡಿದನು.೧೧ [11]ಆಗ ಆ ಸ್ತ್ರೀ, “ನಿನಗೆ ಯಾರನ್ನು ಬರಮಾಡಬೇಕು?” ಎಂದಳು. “ಸಮುವೇಲನನ್ನು,” ಎಂದು ಉತ್ತರಕೊಟ್ಟನು.೧೨ [12]ಆ ಸ್ತ್ರೀ ಸಮುವೇಲನನ್ನು ಕಂಡಕೂಡಲೆ ಗಟ್ಟಿಯಾಗಿ ಕೂಗಿ ಸೌಲನಿಗೆ, “ನೀನು ನನ್ನನ್ನು ವಂಚಿಸಿದ್ದೇಕೆ? ನೀನು ಸೌಲನಲ್ಲವೇ?,” ಎಂದಳು.೧೩ [13]ಆಗ ಅರಸನು, “ಹೆದರಬೇಡ, ನಿನಗೇನು ಕಾಣಿಸುತ್ತದೆ?” ಎಂದು ಆಕೆಯನ್ನು ಕೇಳಿದನು. “ಭೂಮಿಯೊಳಗಿಂದ ಪ್ರೇತಾತ್ಮವೊಂದು ಬರುತ್ತಿರುವುದನ್ನು ನೋಡುತ್ತಿದ್ದೇನೆ,” ಎಂದು ಉತ್ತರಕೊಟ್ಟಳು.೧೪ [14]ಅವನು ಮತ್ತೆ, “ಅವನ ರೂಪ ಹೇಗಿದೆ?” ಎಂದು ಕೇಳಿದನು. ಆಕೆ, “ನಿಲುವಂಗಿಯನ್ನು ತೊಟ್ಟುಕೊಂಡ ಒಬ್ಬ ಮುದುಕ ಬರುತ್ತಿದ್ದಾನೆ,” ಎಂದು ಹೇಳಿದಳು. ಅವನು ಸಮುವೇಲನೇ ಎಂದು ಸೌಲನು ತಿಳಿದು ನೆಲದಮಟ್ಟಿಗೂ ಬಾಗಿ ನಮಸ್ಕರಿಸಿದನು.೧೫ [15]ಆಗ ಸಮುವೇಲನು ಸೌಲನನ್ನು, “ನೀನು ನನ್ನ ವಿಶ್ರಾಂತಿಯನ್ನು ಕೆಡಿಸಿದ್ದೇಕೆ? ನನ್ನನ್ನು ಇಲ್ಲಿಗೆ ಏಕೆ ಬರಮಾಡಿದೆ?” ಎಂದು ಕೇಳಿದನು. ಅದಕ್ಕೆ ಸೌಲನು, “ನಾನು ಬಲು ಇಕ್ಕಟ್ಟಿನಲ್ಲಿ ಇದ್ದೇನೆ; ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಕ್ಕೆ ಬಂದಿದ್ದಾರೆ; ದೇವರು ನನ್ನನ್ನು ಕೈಬಿಟ್ಟು ದೂರಹೋಗಿದ್ದಾರೆ; ಅವರು ನನಗೆ ಪ್ರವಾದಿಗಳಿಂದಾಗಲಿ, ಕನಸುಗಳಿಂದಾಗಲಿ ಉತ್ತರಕೊಡಲೊಲ್ಲರು. ಆದುದರಿಂದ ನಾನು ಮಾಡಬೇಕಾದುದನ್ನು ನೀನು ತಿಳಿಸುವೆಯೆಂದು ನಿನ್ನನ್ನು ಇಲ್ಲಿಗೆ ಬರಮಾಡಿದೆನು,” ಎಂದನು.೧೬ [16]ಆಗ ಸಮುವೇಲನು, “ಸರ್ವೇಶ್ವರ ನಿನ್ನನ್ನು ಕೈಬಿಟ್ಟು ನಿನಗೆ ವಿರೋಧಿಯಾದ ಮೇಲೆ ನೀನು ನನ್ನನ್ನು ವಿಚಾರಿಸುವುದೇಕೆ?೧೭ [17]ಅವರು ನನ್ನ ಮುಖಾಂತರ ನಿನಗೆ ಹೇಳಿದ್ದನ್ನು ನೆರವೇರಿಸಿದ್ದಾರೆ; ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ನೆರೆಯವನಾದ ದಾವೀದನಿಗೆ ಕೊಟ್ಟಿದ್ದಾರೆ.೧೮ [18]ನೀನು ಸರ್ವೇಶ್ವರನ ಮಾತನ್ನು ಕೇಳಲಿಲ್ಲ; ಅವರು ಅಮಾಲೇಕ್ಯರ ಮೇಲೆ ಉಗ್ರಕೋಪಗೊಂಡು ಮಾಡಿದ ಕೋಪಾಜ್ಞೆಯನ್ನು ನೀನು ನೆರವೇರಿಸಲಿಲ್ಲ. ಆದುದರಿಂದಲೇ ಸರ್ವೇಶ್ವರ ಈಗ ನಿನಗೆ ಹೀಗೆ ಮಾಡುತ್ತಾರೆ.೧೯ [19]ನಿನ್ನ ಸಮೇತ ಇಸ್ರಯೇಲರನ್ನು ಫಿಲಿಷ್ಟಿಯರ ಕೈಗೆ ಒಪ್ಪಿಸುವರು. ನಾಳೆ ನೀನೂ ನಿನ್ನ ಮಕ್ಕಳೂ ನಾನಿರುವಲ್ಲಿಗೆ ಬರುವಿರಿ. ಸರ್ವೇಶ್ವರ ಇಸ್ರಯೇಲ್ ಸೈನ್ಯವನ್ನು ಫಿಲಿಷ್ಟಿಯರ ಕೈಗೆ ಒಪ್ಪಿಸುವರು,” ಎಂದು ಹೇಳಿದನು.೨೦ [20]ಸೌಲನು ಸಮುವೇಲನ ಮಾತುಗಳನ್ನು ಕೇಳಿದ ಕೂಡಲೆ ದಿಗ್ಭ್ರಾಂತನಾಗಿ ನೆಲದ ಮೇಲೆ ಕೈಕಾಲು ಚಾಚಿಬಿದ್ದನು. ಅವನು ಇಡೀ ದಿವಸ ಊಟಮಾಡಿರಲಿಲ್ಲ. ಆದುದರಿಂದ ಅವನಲ್ಲಿ ಬಲವೇ ಇರಲಿಲ್ಲ.೨೧ [21]ಆ ಸ್ತ್ರೀ ಸೌಲನ ಹತ್ತಿರಕ್ಕೆ ಬಂದು ಅವನು ಬಹುಭೀತನಾಗಿದ್ದಾನೆಂದು ಕಂಡು, “ನಿಮ್ಮ ದಾಸಿಯಾದ ನಾನು ನಿಮ್ಮ ಮಾತು ಕೇಳಿದೆನು; ಕೈಯಲ್ಲಿ ಜೀವ ಹಿಡಿದವಳಾಗಿ ನಿಮ್ಮ ಅಪ್ಪಣೆಯನ್ನು ನೆರವೇರಿಸಿದೆನು.೨೨ [22]ಆದುದರಿಂದ ಈಗ ನೀವು ದಯವಿಟ್ಟು ನಿಮ್ಮ ದಾಸಿಯ ಮಾತನ್ನು ಕೇಳಬೇಕು. ಸ್ವಲ್ಪ ಆಹಾರ ತರುತ್ತೇನೆ, ಪ್ರಯಾಣಕ್ಕೆ ಬಲಬರುವ ಹಾಗೆ ಅದನ್ನು ಊಟಮಾಡಿ,” ಎಂದು ಹೇಳಿದಳು.೨೩ [23]ಅವನು, “ಒಲ್ಲೆ; ಊಟಮಾಡುವುದಿಲ್ಲ,” ಎಂದನು. ಆದರೆ, ಅವನ ಸೇವಕರೂ ಆ ಸ್ತ್ರೀಯೂ ಬಹಳವಾಗಿ ಬೇಡಿಕೊಂಡಿದ್ದರಿಂದ ಅವನು ಕಡೆಗೆ ಅವರ ಮಾತಿಗೆ ಒಪ್ಪಿ ನೆಲದಿಂದೆದ್ದು ಮಂಚದ ಮೇಲೆ ಕುಳಿತುಕೊಂಡನು.೨೪ [24]ಆ ಸ್ತ್ರೀಗೆ ಮನೆಯಲ್ಲಿ ಒಂದು ಕೊಬ್ಬಿದ ಕರುವಿತ್ತು. ಆಕೆ ಶೀಘ್ರವಾಗಿ ಅದನ್ನು ಕೊಯ್ದು, ಪಕ್ವಮಾಡಿ, ಹಿಟ್ಟನ್ನು ತೆಗೆದುಕೊಂಡು ನಾದಿ, ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು,೨೫ [25]ಸೌಲನಿಗೂ ಅವನ ಸೇವಕರಿಗೂ ಬಡಿಸಿದಳು. ಅವರು ಊಟಮಾಡಿ ಅದೇ ರಾತ್ರಿ ಹೊರಟುಹೋದರು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಸಮುವೇಲನು ೧ ೨೮ 00:00:00 00:00:00 0.5x 2.0x https://beblia.bible:81/BibleAudio/kannadakncl/1samuel/028.mp3 31 28