× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಸಮುವೇಲನು ೧ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೩ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧1 1 1 ಕನ್ನಡ ಬೈಬಲ್ (KNCL) 2016 ಸಮುವೇಲನು ೧ ೩ ಟಿಪ್ಪಣಿಗಳನ್ನು ಉಳಿಸಿ ೧ [1]ಬಾಲಕ ಸಮುವೇಲನು ಏಲಿಯ ನೇತೃತ್ವದಲ್ಲಿ ಸರ್ವೇಶ್ವರನ ಸೇವೆಮಾಡುತ್ತಾ ಬಂದನು. ಆ ಕಾಲದಲ್ಲಿ ದೇವೋಕ್ತಿಗಳು ವಿರಳ ಆಗಿದ್ದವು; ದೇವದರ್ಶನಗಳು ಅಪರೂಪವಾಗಿಬಿಟ್ಟಿದ್ದವು.೨ [2]ಏಲಿಯ ಕಣ್ಣುಗಳು ದಿನದಿನಕ್ಕೂ ಮೊಬ್ಬಾಗುತ್ತಾ ಬಂದು ಕುರುಡನಂಥಾಗಿಬಿಟ್ಟಿದ್ದನು. ಒಂದು ರಾತ್ರಿ ಅವನು ತನ್ನ ಕೋಣೆಯಲ್ಲಿ ಮಲಗಿದ್ದನು.೩ [3]ಸಮುವೇಲನು ಸರ್ವೇಶ್ವರನ ಮಂದಿರದಲ್ಲಿ, ದೇವರ ಮಂಜೂಷವಿದ್ದ ಸ್ಥಳದಲ್ಲಿ ಮಲಗಿದ್ದನು. ದೇವರ ದೀಪ ಇನ್ನೂ ಉರಿಯುತ್ತಿತ್ತು.೪ [4]ಆಗ ಸರ್ವೇಶ್ವರಸ್ವಾಮಿ ಸಮುವೇಲನನ್ನು ಕರೆದರು. ಸಮುವೇಲನು, “ಇಗೋ ಬಂದೇ,” ಎಂದು ಉತ್ತರಕೊಟ್ಟು,೫ [5]ಒಡನೆ ಏಲಿಯ ಬಳಿಗೆ ಹೋಗಿ, “ಇಗೋ ಬಂದಿದ್ದೇನೆ; ನೀವು ನನ್ನನ್ನು ಕರೆದಿರಲ್ಲವೆ?” ಎಂದನು. ಏಲಿ, “ನಾನು ನಿನ್ನನ್ನು ಕರೆಯಲಿಲ್ಲ; ಹೋಗಿ ಮಲಗಿಕೋ,” ಎಂದನು. ಸಮುವೇಲನು ಹೋಗಿ ಮಲಗಿದನು.೬ [6]ಸರ್ವೇಶ್ವರ ಪುನಃ, “ಸಮುವೇಲನೇ,” ಎಂದು ಕರೆದರು. ಸಮುವೇಲನು ಕೂಡಲೆ ಎದ್ದು ಏಲಿಯ ಬಳಿಗೆ ಹೋಗಿ, “ಇಗೋ ಬಂದಿದ್ದೇನೆ; ನೀವು ನನ್ನನ್ನು ಕರೆದಿರಲ್ಲವೆ?” ಎಂದನು. ಅವನು, “ಮಗನೇ, ನಾನು ನಿನ್ನನ್ನು ಕರೆಯಲಿಲ್ಲ; ಹೋಗಿ ಮಲಗಿಕೋ,” ಎಂದನು.೭ [7]ಈವರೆಗೂ ಸಮುವೇಲನಿಗೆ ಸರ್ವೇಶ್ವರನ ನೇರ ಅನುಭವ ಆಗಿರಲಿಲ್ಲ. ದೇವರ ವಾಣಿ ಅವನಿಗೆ ಕೇಳಿಸಿರಲಿಲ್ಲ.೮ [8]ಸರ್ವೇಶ್ವರ ಸಮುವೇಲನನ್ನು ಮೂರನೆಯ ಸಾರಿ ಕರೆದರು. ಅವನು ತಟ್ಟನೆ ಏಲಿಯ ಹತ್ತಿರ ಓಡಿ, “ಇಗೋ, ಬಂದಿದ್ದೇನೆ, ನನ್ನನ್ನು ಕರೆದಿರಲ್ಲಾ,” ಎಂದನು. ಹುಡುಗನನ್ನು ಕರೆದವರು ಸರ್ವೇಶ್ವರನೇ ಎಂದು ಏಲಿಗೆ ತಿಳಿಯಿತು.೯ [9]ಅವನು ಸಮುವೇಲನಿಗೆ, “ಹೋಗಿ ಮಲಗಿಕೋ; ಮತ್ತೆ ಅವರು ನಿನ್ನನ್ನು ಕರೆದರೆ, ‘ಸರ್ವೇಶ್ವರಾ, ಅಪ್ಪಣೆಯಾಗಲಿ; ತಮ್ಮ ದಾಸ ಕಾದಿದ್ದಾನೆ,’ ಎಂದು ಹೇಳು,” ಎಂದನು. ಸಮುವೇಲನು ಹಿಂದಿರುಗಿ ಹೋಗಿ ತನ್ನ ಸ್ಥಳದಲ್ಲೇ ಮಲಗಿಕೊಂಡನು.೧೦ [10]ಸರ್ವೇಶ್ವರ ಪ್ರತ್ಯಕ್ಷರಾಗಿ ಹಿಂದಿನಂತೆಯೇ, “ಸಮುವೇಲನೇ, ಸಮುವೇಲನೇ,” ಎಂದರು. ಸಮುವೇಲನು, “ಅಪ್ಪಣೆಯಾಗಲಿ, ತಮ್ಮ ದಾಸನಾದ ನಾನು ಕಾದಿದ್ದೇನೆ,” ಎಂದನು.೧೧ [11]ಆಗ ಸರ್ವೇಶ್ವರ ಸಮುವೇಲನಿಗೆ, “ನಾನು ಇಸ್ರಯೇಲರಲ್ಲಿ ಒಂದು ವಿಶೇಷಕಾರ್ಯವನ್ನು ನಡಿಸುವೆನು. ಈ ವಿಷಯವನ್ನು ಕೇಳುವವರ ಕಿವಿಗಳೆರಡೂ ನಿಮಿರುವುವು!೧೨ [12]ಏಲಿಯ ಮನೆಯನ್ನು ಕುರಿತು ತಿಳಿಸಿದ್ದೆಲ್ಲವನ್ನೂ ಆ ದಿನ ತಪ್ಪದೆ ನೆರವೇರಿಸುವೆನು.೧೩ [13]ತನ್ನ ಮಕ್ಕಳು ದೇವದೂಷಕರು ಎಂದು ಅವನಿಗೆ ತಿಳಿದುಬಂದರೂ ಅವನು ಅವರನ್ನು ತಿದ್ದಲಿಲ್ಲ. ಈ ಪಾಪದ ನಿಮಿತ್ತ ಅವನ ಕುಟುಂಬವನ್ನು ನಿತ್ಯದಂಡನೆಗೆ ಗುರಿಮಾಡಿದ್ದೇನೆಂದು ಅವನಿಗೆ ಮೊದಲೇ ತಿಳಿಸಿದೆನು.೧೪ [14]ಏಲಿಯ ಮನೆಯವರ ಅಪರಾಧವು ಎಂದಿಗೂ ಬಲಿಯಿಂದಾಗಲಿ ನೈವೇದ್ಯಗಳಿಂದಾಗಲಿ ಪರಿಹಾರವಾಗುವುದಿಲ್ಲವೆಂದು ಪ್ರಮಾಣಮಾಡಿದ್ದೇನೆ,” ಎಂದು ಹೇಳಿದರು.೧೫ [15]ಅನಂತರ ಸಮುವೇಲನು ಮಲಗಿ, ಮುಂಜಾನೆಯಲ್ಲೇ ಎದ್ದು, ಸರ್ವೇಶ್ವರನ ಮಂದಿರದ ಬಾಗಿಲುಗಳನ್ನು ತೆರೆದನು. ತಾನು ಕಂಡದ್ದನ್ನು ಏಲಿಗೆ ತಿಳಿಸಲು ಭಯಪಟ್ಟನು.೧೬ [16]ಆದರೆ, ಏಲಿ, “ಮಗನೇ, ಸಮುವೇಲನೇ”, ಎಂದು ಕರೆದಾಗ ಅವನು, “ಇಗೋ, ಇದ್ದೇನೆ,” ಎಂದನು.೧೭ [17]ಏಲಿ ಅವನಿಗೆ, “ಸರ್ವೇಶ್ವರ ನಿನಗೆ ತಿಳಿಸಿದ್ದೇನು? ಅವರ ಮಾತುಗಳಲ್ಲಿ ಒಂದನ್ನಾದರೂ ಮರೆಮಾಡಬೇಡ; ಮಾಡಿದೆಯಾದರೆ ಸರ್ವೇಶ್ವರ ಇಷ್ಟಬಂದ ಹಾಗೆ ನಿನ್ನನ್ನು ದಂಡಿಸಲಿ,” ಎಂದು ಹೇಳಿದನು.೧೮ [18]ಸಮುವೇಲನು ಮುಚ್ಚುಮರೆಯಿಲ್ಲದೆ ಎಲ್ಲವನ್ನೂ ತಿಳಿಸಿದನು. ಏಲಿ ಅದನ್ನು ಕೇಳಿ, “ಅವರೇ ಸರ್ವೇಶ್ವರ. ತಮಗೆ ಸರಿಕಂಡಂತೆ ಮಾಡಲಿ,” ಎಂದನು.೧೯ [19]ಸಮುವೇಲನು ದೊಡ್ಡವನಾಗುತ್ತಾ ಬಂದನು. ಸರ್ವೇಶ್ವರ ಅವನೊಡನೆ ಇದ್ದರು. ಆದುದರಿಂದಲೆ ಅವನು ಪ್ರವಾದನೆ ಮಾಡಿದವುಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ.೨೦ [20]ಸರ್ವೇಶ್ವರ ಅವನನ್ನು ತಮ್ಮ ಪ್ರವಾದಿಯನ್ನಾಗಿ ನೇಮಿಸಿಕೊಂಡರು. ಈ ಸಂಗತಿ ದಾನ್ ಊರಿನಿಂದ ಬೇರ್ಷೆಬದವರೆಗಿದ್ದ ಎಲ್ಲ ಇಸ್ರಯೇಲರಿಗೆ ತಿಳಿಯಿತು.೨೧ [21]ಸರ್ವೇಶ್ವರ, ಶಿಲೋವಿನಲ್ಲಿ ದರ್ಶನಕೊಡುವುದಕ್ಕೆ ಪ್ರಾರಂಭಿಸಿ ದೈವವಾಣಿಯ ಮೂಲಕ ಸಮುವೇಲನಿಗೆ ತಮ್ಮನ್ನೇ ಶೃತಪಡಿಸುತ್ತಾ ಬಂದರು. ಇಸ್ರಯೇಲರೆಲ್ಲರಿಗೆ ಸಮುವೇಲನು ಸರ್ವೇಶ್ವರನ ವಚನಗಳನ್ನು ತಿಳಿಸುತ್ತಾ ಇದ್ದನು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಸಮುವೇಲನು ೧ ೩ 00:00:00 00:00:00 0.5x 2.0x https://beblia.bible:81/BibleAudio/kannadakncl/1samuel/003.mp3 31 3